Headlines

ರಾಷ್ಟ್ರಪತಿಗಳ ಗಮನಸೆಳೆದ ಬೆಂಗಳೂರು ಕರಗ: ಅಧ್ಯಕ್ಷರನ್ನ ಕರೆಯಿಸಿ ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್​ 01: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ಇಂದು ನಡೆಯಲಿದೆ. ಸಕಲ ಸಿದ್ಧತೆ ಮಾಡಲಾಗಿದೆ. ಈ ಮಧ್ಯೆ ಕರಗ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಗ ಸಮಿತಿಯ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿಯನ್ನು ಬೆಂಗಳೂರಿನ ಹೆಚ್​ಎಎಲ್ ಏರ್​ಪೋರ್ಟ್​​ನಲ್ಲಿ ಭೇಟಿ ಮಾಡಿ ಶುಭ ಹಾರೈಸಿದ್ದಾರೆ. ಮುಂದಿನ ದಿನಗಳಲ್ಲಿ ದೇಗುಲಕ್ಕೆ ಭೇಟಿ ನೀಡುವ ಭರವಸೆ ಕೂಡ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮುರ್ಮು ಅವರಿಗೆ ಶ್ರೀಧರ್ಮರಾಯ ಸ್ವಾಮಿ ದೇವಾಲಯದಿಂದ ಕರಗದ ವಸ್ತ್ರವನ್ನು ನೀಡಲಾಗಿದೆ. ಈ ಬಗ್ಗೆ ಅಧ್ಯಕ್ಷ…

Read More

ಕುಡಿದ ಮತ್ತಲ್ಲಿ ಕ್ಷುಲ್ಲಕ ವಿಚಾರಕ್ಕೆ ಸಹೋದರರ ಫೈಟ್​​: ಕಲ್ಲಿಂದ ಜಜ್ಜಿ ತಮ್ಮನನ್ನೇ ಕೊಂದ ಅಣ್ಣ! – Kannada News | Tumakuru Tragedy: Elder Brother Murders Younger Sibling in Drunken Brawl

ತುಮಕೂರು, ಏಪ್ರಿಲ್​​ 28: ಕ್ಷುಲ್ಲಕ ವಿಚಾರಕ್ಕೆ ಒಡಹುಟ್ಟಿದವರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಮಧುಗಿರಿ ತಾಲೂಕಿನ ನಿಟ್ಟರಹಳ್ಳಿ ನಿವಾಸಿ ಗಂಗರಾಜು ಮೃತನಾಗಿದ್ದು, ಕಲ್ಲಿನಿಂದ ಜಜ್ಜಿ ಸಹೋದರನ ಹತ್ಯೆಗೈದ ಆರೋಪಿ ನರಸಿಂಹಮೂರ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕೋಪದ ಕೈಗೆ ಬುದ್ಧಿಕೊಟ್ಟ ಅಣ್ಣ ಜೈಲು ಸೇರಿದ್ದರೆ, ಮದ್ಯಕ್ಕೆ ದಾಸನಾಗಿದ್ದ ತಮ್ಮ ಇಹಲೋಕವನ್ನೇ ತೊರೆದಿದ್ದಾನೆ. ಭೀಕರ ಘಟನೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದು, ಮೃತ ಗಂಗರಾಜು ಅವಿವಾಹಿತ ಎಂಬುದು ಕೂಡ ಗೊತ್ತಾಗಿದೆ. ಇನ್ನು…

Read More

ಕಲ್ಲಿದ್ದಲು ಹಗರಣ; ನಿಧನರಾದ 2 ವರ್ಷದ ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ – Kannada News | After 2 Years After His Death Supreme Court gives clean chit to former PM Manmohan Singh in coal scam case

ನವದೆಹಲಿ, ಜುಲೈ 29: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Dr Manmohan Singh) ನಿಧನರಾದ 2 ವರ್ಷಗಳ ನಂತರ, ಅವರ ಆಡಳಿತಾವಧಿಯ ಮೇಲೆ ಕಪ್ಪುಚುಕ್ಕೆಯಾಗಿದ್ದ ಕಲ್ಲಿದ್ದಲು ಹಗರಣದ ಪ್ರಕರಣವೊಂದಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೆರೆ ಎಳೆದಿದೆ. ಒಡಿಶಾದ ತಲಬಿರಾ-II ಕಲ್ಲಿದ್ದಲು ಬ್ಲಾಕ್ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್(Supreme Court)  ಮನಮೋಹನ್ ಸಿಂಗ್ ಅವರಿಗೆ ಕ್ಲೀನ್ ಚಿಟ್ ನೀಡುವ ಮೂಲಕ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣದ ವಿಚಾರಣೆ ಎದುರಿಸುವಂತೆ ಮನಮೋಹನ್ ಸಿಂಗ್ ಮತ್ತು ಇತರ ಐವರಿಗೆ…

Read More

‘ಹೌದು, ನಾನು ಬಾದ್‌ಶಾ ಪತ್ನಿ’: ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ – Kannada News

ಪ್ರಖ್ಯಾತ ಬಾಲಿವುಡ್ ರ‍್ಯಾಪ್ ಸಿಂಗರ್ ಬಾದ್‌ಶಾ (Badshah) ಮತ್ತು ಪಂಜಾಬಿ ನಟಿ, ಮಾಡೆಲ್ ಇಶಾ ರಿಖಿ (Isha Rikhi) ಮದುವೆಯಾಗಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಮದುವೆಯ (Badshah Wedding) ಊಹಾಪೋಹಗಳಿಗೆ ಇಶಾ ರಿಖಿ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಕುತೂಹಲಗಳಿಗೂ ತೆರೆ ಎಳೆದಿದ್ದಾರೆ. ಬಾದ್‌ಶಾ ಈ ವಿಷಯವಾಗಿ ಯಾವುದೇ ಅಧಿಕೃತ ಹೇಳಿಕೆ ನೀಡದಿದ್ದರೂ, ಇಶಾ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಡೆಸಿದ ‘ಆಸ್ಕ್ ಮಿ…

Read More

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ! – Kannada News | Mysuru Murder: Wife, Lover Arrested for Javarappa’s Death Over Illicit Affair in Kurneegala

ಮೃತ ವ್ಯಕ್ತಿ ಮತ್ತು ಆರೋಪಿಗಳುImage Credit source: Tv9 Kannada ಮೈಸೂರು, ಏಪ್ರಿಲ್​​ 19: ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ವಿಚಾರ ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಜವರಪ್ಪ ಕೊಲೆಯಾದ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಮತ್ತು ಕುರ್ಣೆಗಾಲ ಗ್ರಾಮದ ಅಮೃತಾ(26)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಅಡ್ಡಿಯಾಗುತ್ತಿದ್ದಾನೆ ಎಂಬ…

Read More

ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ; ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಧೀರೇಂದ್ರ ಕೃಷ್ಣ ಶಾಸ್ತ್ರಿ – Kannada News | They feed alcohol to crying babies Dhirendra Krishna Shastri makes controversial comments on women

ನವದೆಹಲಿ, ಏಪ್ರಿಲ್ 30: ಬಾಗೇಶ್ವರ ಧಾಮದ ಪ್ರಧಾನ ಅರ್ಚಕ ಧೀರೇಂದ್ರ ಕುಮಾರ್ ಶಾಸ್ತ್ರಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಮಹಿಳೆಯರು ಅದರಲ್ಲೂ ಶ್ರೀಮಂತ ಕುಟುಂಬದ ಮಹಿಳೆಯರನ್ನು ಟಾರ್ಗೆಟ್ ಮಾಡಿದ್ದಾರೆ. ಉನ್ನತ ವರ್ಗದ ಮಹಿಳೆಯರು ಆಲ್ಕೋಹಾಲ್ ಕುಡಿಯುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶ್ರೀಮಂತ ಕುಟುಂಬಗಳ ಮಹಿಳೆಯರು ಮದ್ಯ ಸೇವಿಸುತ್ತಿದ್ದಾರೆ. ಇದು ಸಮಾಜದ ಮೌಲ್ಯಗಳು ಮತ್ತು ರೂಢಿಗಳ ಮೇಲೆ ಪರಿಣಾಮ ಬೀರುತ್ತಿದೆ. ಮದ್ಯಪಾನ ಮಾಡುವ ಮಹಿಳೆಯರು ಮದುವೆಯಾಗಿ ಮಕ್ಕಳನ್ನು ಹೆತ್ತ ಮೇಲೆ…

Read More

‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್​​ಗೆ ಬರುತ್ತಿದ್ದರು ಅಂಬರೀಶ್’ – Kannada News | Gurudutt said Ambareesh use to come movie shoot after his daily dialysis

ಮಂಜುನಾಥ ಸಿ. | Updated on:Aug 01, 2026 | 4:45 PM Ambareesh movie: ಗುರುದತ್ ಗಾಣಿಗ, ಬಹಳ ಸಣ್ಣ ವಯಸ್ಸಿನಲ್ಲೇ ಸುದೀಪ್, ಅಂಬರೀಶ್ ಅಂಥಹಾ ದೊಡ್ಡ ಸೂಪರ್ ಸ್ಟಾರ್ ನಟರುಗಳಿಗೆ ಆಕ್ಷನ್-ಕಟ್ ಹೇಳಿದ್ದರು. ಇದೀಗ ಅವರೇ ‘ಕರಾವಳಿ’ ಸಿನಿಮಾ ನಿರ್ದೇಶಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಗುರುದತ್, ‘ಅಂಬಿ ನಿಂಗ್ ವಯಸ್ಸಾಯ್ತೊ’ ಶೂಟಿಂಗ್​​ಗೆ ಡಯಾಲಿಸಿಸ್ ಮಾಡಿಸಿಕೊಂಡು ಅಂಬರೀಶ್ ಬರುತ್ತಿದ್ದರು ಎಂದು ಹೇಳಿದ್ದಾರೆ. ವಿಡಿಯೋ ನೋಡಿ… Published on: Aug 01, 2026…

Read More

IPL 2026: ಐಪಿಎಲ್​ನಿಂದ ಹರ್ಷಿತ್ ರಾಣಾ ಔಟ್; ಕೆಕೆಆರ್‌ಗೆ ಹೆಚ್ಚಿದ ಸಂಕಷ್ಟ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡಕ್ಕೆ ಪ್ರಮುಖ ವೇಗದ ಬೌಲರ್ ಹರ್ಷಿತ್ ರಾಣಾ ಅವರನ್ನು 19 ನೇ ಸೀಸನ್ ಐಪಿಎಲ್​ನಿಂದ ಹೊರಗಿಡಲಾಗಿದೆ. ಇಂಜುರಿಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ರಾಣಾರನ್ನು ಐಪಿಎಲ್​ನಿಂದ ಹೊರಗಿಡುವ ತೀರ್ಮಾನಕ್ಕೆ ಬರಲಾಗಿದೆ. ವಾಸ್ತವವಾಗಿ 2026 ರ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯಗಳ ಸಮಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ರಾಣಾಗೆ ಗಾಯವಾಗಿತ್ತು….

Read More

ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ – Kannada News

ಕೊಪ್ಪಳ, ಜೂನ್ 12: ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಪ್ರಮಾಣದಲ್ಲಿ ಕುಸಿದಿದೆ. ಪ್ರಸ್ತುತ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಪ್ರಮಾಣವಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ಜಲಾಶಯದಲ್ಲಿ 24 ಟಿಎಂಸಿ ನೀರಿತ್ತು. ಈ ವರ್ಷ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರೂ, ಮಲೆನಾಡು ಭಾಗದಲ್ಲಿ ಮಳೆಯ ಕೊರತೆಯಿಂದ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದೆ. ಕೇವಲ…

Read More

ಮಾಗಡಿ ಬಳಿಯ ಕಲ್ಲು ಕ್ವಾರಿ ದುರಂತದಲ್ಲಿ 7 ಜನ ಸಾವು: ಪ್ರಧಾನಿ ಮೋದಿ ಸಂತಾಪ – Kannada News | Bengaluru quarry tragedy: At least 7 labourers killed; PM Modi condoles loss of lives

ಬೆಂಗಳೂರು, (ಜುಲೈ 02): ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಅಪಘಡದಲ್ಲಿ (Bengaluru quarry tragedy) ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿ, “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಕರ್ನಾಟಕದ ಬೆಂಗಳೂರು ನಗರ ಜಿಲ್ಲೆಯ ಕಲ್ಲು ಗಣಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವುದು ನೋವು ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ…

Read More