IND vs WI: ಅತಿ ಹೆಚ್ಚು ಸಿಕ್ಸರ್; ವಿಶ್ವದಾಖಲೆ ಬರೆದ ಶಿಮ್ರಾನ್ ಹೆಟ್ಮೈಯರ್
2026 ರ ಟಿ20 ವಿಶ್ವಕಪ್ನ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡದ ಪರ ಶಿಮ್ರಾನ್ ಹೆಟ್ಮೈಯರ್ ದೊಡ್ಡ ಇನ್ನಿಂಗ್ಸ್ ಆಡಲಿಲ್ಲವಾದರೂ ಅತಿ ಹೆಚ್ಚು ಸಿಕ್ಸರ್‌ಗಳ ವಿಚಾರದಲ್ಲಿ ವಿಶ್ವದಾಖಲೆಯನ್ನು ನಿರ್ಮಿಸಿದರು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿತು. ರೋಸ್ಟನ್ ಚೇಸ್ ಮತ್ತು ನಾಯಕ ಶೈ ಹೋಪ್…