Headlines

SRH vs RR: ಸಿಕ್ಸರ್​ಗಳಿಂದಲೇ ಅರ್ಧಶತಕ ಚಚ್ಚಿದ ವೈಭವ್ ಸೂರ್ಯವಂಶಿ

ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ ಪರ ಆರಂಭಿಕ ವೈಭವ್ ಸೂರ್ಯವಂಶಿ ಮತ್ತೊಮ್ಮೆ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವೈಭವ್ ತಮ್ಮ ಅರ್ಧಶತಕದ ಇನ್ನಿಂಗ್ಸ್​ನಲ್ಲಿ 8 ಸಿಕ್ಸರ್​ಗಳು ಹಾಗೂ 1 ಬೌಂಡರಿ ಬಾರಿಸಿದರು. ಅಂದರೆ ವೈಭವ್ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ ತಮ್ಮ…

Read More

ರಾಜೀನಾಮೆಗೂ ಮುನ್ನ ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದದರಾಮಯ್ಯ, ಮುಸ್ಲಿಂ ನಂ.1 ಜಾತಿ!

ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದದರಾಮಯ್ಯ ಬೆಂಗಳೂರು, (ಮೇ 27): ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿಯನ್ನು (Karnataka Caste Census Report) ಸಿಎಂ ಸಿದ್ದರಾಮಯ್ಯ  (Siddaramaiah) ಸ್ವೀಕರಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಒಂದು ದಿನ ಮೊದಲೇ ಆಸೆಯದಂತೆ ರಾಜ್ಯ ಹಿಂದುಳಿದ ವರ್ಗಗಳ‌ ಆಯೋಗ ಸಿದ್ದಪಡಿಸಿದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ” ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿರುವುದು ವಿಶೇಷ. ಇದರೊಂದಿಗೆ ತಾವು ಅಧಿಕಾರಿದಲ್ಲಿದ್ದಾಗಲೇ ಜಾತಿಗಣತಿ ಸ್ವೀಕಾರ ಮಾಡಿದ…

Read More

Viral: ಬೆಂಗ್ಳೂರಿನಲ್ಲಿ 3BHK ಅಪಾರ್ಟ್‌ಮೆಂಟ್‌ನ ತಿಂಗಳ ಬಾಡಿಗೆ 1.1 ಲಕ್ಷ ರೂ, ವೈರಲ್ ಆಯ್ತು ಪೋಸ್ಟ್

ಬೆಂಗಳೂರು, ಮೇ 27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬಾಡಿಗೆ ಮನೆಯ ದರಗಳು ಗಗನಕ್ಕೇರುತ್ತಿವೆ. ಹೀಗಾಗಿ ತಿಂಗಳ ಸಂಬಳದ ಮುಕ್ಕಾಲು ಭಾಗ ಹಣವನ್ನು ಮನೆ ಬಾಡಿಗೆಗೆ ಮೀಸಲಿಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ವ್ಯಕ್ತಿಯೊಬ್ಬರು ಇದೇ ಬಾಡಿಗೆ ಮನೆ ವಿಚಾರವಾಗಿ ಪೋಸ್ಟ್ ಮಾಡಿದ್ದಾರೆ. ಹೌದು, ಬೆಂಗಳೂರಿನಲ್ಲಿ 3 ಬಿಹೆಚ್ ಕೆ ಅಪಾರ್ಟ್ಮೆಂಟ್‌ನ ತಿಂಗಳ ಬಾಡಿಗೆ 1.1 ಲಕ್ಷ ರೂ ಹಾಗೂ ಡೆಪಾಸಿಟ್ 4 ಲಕ್ಷ ರೂಪಾಯಿ ಎಂದಿದ್ದಾರೆ. ಈ ಪೋಸ್ಟ್ ನಗರದ ಗಗನಕ್ಕೇರುತ್ತಿರುವ ವಸತಿ ವೆಚ್ಚಗಳ ಬಗ್ಗೆ ಆನ್‌ಲೈನ್‌ನಲ್ಲಿ…

Read More

ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತವಾಗಿ ಆರ್ಭಟಿಸಿದ ಲಕ್ಷ್ಮೀ ಆನೆ

ಕೋಲಾರ, ಮೇ 27: ಅನಾರೋಗ್ಯ ಹಿನ್ನೆಲೆ ವಿಜಯನಗರ ಜಿಲ್ಲೆಯ ಹಂಪಿಯ ವಿರುಪಾಕ್ಷೇಶ್ವರ ದೇವಾಲಯದಿಂದ ಸ್ಥಳಾಂತರಿಸಲಾಗಿರುವ ಲಕ್ಷ್ಮೀ ಆನೆ, ಕೋಲಾರ ತಾಲ್ಲೂಕು ನರಸಾಪುರ ಬಳಿಯ ಆನೆ ಪುನರ್ವಸತಿ ಕೇಂದ್ರಕ್ಕೆ ಆಗಮಿಸಿದ ಕೂಡಲೇ ಸ್ವಲ್ಪ ವಿಚಲಿತಗೊಂಡು ಆರ್ಭಟಿಸಿದೆ. ಅರಣ್ಯ ಇಲಾಖೆಯಿಂದ ನಿರ್ಮಾಣವಾಗಿರುವ ರಾಜ್ಯದ ಏಕೈಕ ಆನೆ ಪುನರ್ವಸತಿ ಕೇಂದ್ರಕ್ಕೆ ಲಕ್ಷ್ಮೀ ಆನೆಯನ್ನು ಬುಧವಾರ ಸ್ಥಳಾಂತರಿಸಲಾಗಿತ್ತು. ಹೊಸ ಜಾಗಕ್ಕೆ ಬಂದಿರುವ ಕಾರಣಕ್ಕೆ ಲಕ್ಷ್ಮೀ ಆನೆ ಕೊಂಚ ವಿಚಲಿತಗೊಂಡು ಆರ್ಭಟಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಷ್ಮೀ ಆನೆಯನ್ನು ಹಂಪಿಯಿಂದ…

Read More

IPL 2026: ಫೈನಲ್​ಗೇರಿರುವ ಆರ್​ಸಿಬಿ ಮೇಲೆ ಕೋಟಿ ಮೊತ್ತದ ಬಹುಮಾನದ ಮಳೆ

2026 ರ ಐಪಿಎಲ್‌ನಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿಗೆ ಫೈನಲ್ ಸ್ಥಾನ ಖಚಿತವಾಗಿದೆ. ಮೇ 26 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳಿಂದ ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದೆ (PC- PTI). ಫೈನಲ್ ಪಂದ್ಯವು ಈಗ ಮೇ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ, ಆರ್​ಸಿಬಿ ಕ್ವಾಲಿಫೈಯರ್ 2 ರ ವಿಜೇತರನ್ನು ಎದುರಿಸಲಿದೆ. ಆದಾಗ್ಯೂ, ಪ್ರಶಸ್ತಿ…

Read More

ರೋಗಿ ಜೊತೆ ಅನೈತಿಕ ಸಂಬಂಧ; ಭಾರತ ಮೂಲದ ಇಂಗ್ಲೆಂಡ್ ವೈದ್ಯನ ಲೈಸೆನ್ಸ್ ರದ್ದು!

ನವದೆಹಲಿ, ಮೇ 27: ಯುನೈಟೆಡ್ ಕಿಂಗ್ಡಮ್ (ಇಂಗ್ಲೆಂಡ್)ನಲ್ಲಿ ಭಾರತೀಯ ಮೂಲದ ವೈದ್ಯರೊಬ್ಬರು ರೋಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಲ್ಲದೆ ಆಕೆಗೆ ಕಾನೂನುಬಾಹಿರವಾಗಿ ಅಫೀಮು ಆಧಾರಿತ ಮಾದಕ ದ್ರವ್ಯಗಳನ್ನು ನೀಡಿದ ಗಂಭೀರ ಆರೋಪದ ಮೇಲೆ ಅವರ ವೈದ್ಯಕೀಯ ಲೈಸೆನ್ಸ್ ಅನ್ನು ರದ್ದುಗೊಳಿಸಲಾಗಿದೆ. ಆರೋಪಿ ವೈದ್ಯರ ಹೆಸರು ಡಾ. ಚಿರಾಗ್ ಪಟೇಲ್. ಇವರು ಕಾರ್ಡಿಫ್‌ನ ‘ಯೂನಿವರ್ಸಿಟಿ ಹಾಸ್ಪಿಟಲ್ ಆಫ್ ವೇಲ್ಸ್’ನಲ್ಲಿ ಕನ್ಸಲ್ಟೆಂಟ್ ನ್ಯೂರೋಸರ್ಜನ್ ಆಗಿ 2018ರಿಂದ ಸೇವೆ ಸಲ್ಲಿಸುತ್ತಿದ್ದರು. ಇಡೀ ವೇಲ್ಸ್ ಭಾಗದಲ್ಲಿ ಈ ನಿರ್ದಿಷ್ಟ ಬೆನ್ನುಮೂಳೆಯ ಕಾಯಿಲೆಗೆ ಚಿಕಿತ್ಸೆ ನೀಡಬಲ್ಲ…

Read More

ಷೇರುಬಜಾರಲ್ಲಿ ಅದಾನಿ ಪವರ್ ಅಬ್ಬರ; ಮಾರುಕಟ್ಟೆ ಮೌಲ್ಯದಲ್ಲಿ ಇನ್ಫೋಸಿಸ್ ಹಿಂದಿಕ್ಕಿದ್ದು ಹೇಗೆ?

ಮುಂಬೈ, ಮೇ 27: ಭಾರತದ ಷೇರು ಮಾರುಕಟ್ಟೆಯಲ್ಲಿ (Stock Market) ಅದಾನಿ ಗ್ರೂಪ್‌ನ ಪ್ರಮುಖ ಕಂಪನಿಯಾದ ‘ಅದಾನಿ ಪವರ್’ (Adani Power) ಐತಿಹಾಸಿಕ ಸಾಧನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಕಂಪನಿಯ ಷೇರುಗಳು ಬರೋಬ್ಬರಿ ಶೇ. 124 ರಷ್ಟು ಭಾರಿ ಜಿಗಿತ ಕಂಡ ಹಿನ್ನೆಲೆಯಲ್ಲಿ, ಅದರ ಷೇರು ಸಂಪತ್ತು ಅಥವಾ ಮಾರುಕಟ್ಟೆ ಮೌಲ್ಯ (Market Capitalization) ಗಣನೀಯವಾಗಿ ಹೆಚ್ಚಿದೆ. ಇದರೊಂದಿಗೆ, ಮಾರುಕಟ್ಟೆ ಮೌಲ್ಯದಲ್ಲಿ ಐಟಿ ದಿಗ್ಗಜ ಇನ್ಫೋಸಿಸ್ (Infosys) ಅನ್ನು ಹಿಂದಿಕ್ಕಿದೆ. ಇದೀಗ ಅದಾನಿ ಪವರ್ ದೇಶದ ಅತ್ಯಂತ…

Read More

ಐಶ್ವರ್ಯಾ ರೈ ಕಾಲಿಗೆ ಬಿದ್ದ ಊರ್ವಶಿ ರೌಟೇಲಾ? ವೈರಲ್ ಆದ ಎಐ ಫೋಟೋ ಕಂಡು ಕಿಡಿಕಾರಿದ ನಟಿ

ಬಾಲಿವುಡ್‌ನ ಗ್ಲಾಮರಸ್ ನಟಿ ಊರ್ವಶಿ ರೌಟೇಲಾ (Urvashi Rautela) ಇತ್ತೀಚೆಗೆ ನಡೆದ ಪ್ರತಿಷ್ಠಿತ ಕಾನ್ ಚಲನಚಿತ್ರೋತ್ಸವದಲ್ಲಿ (Cannes Film Festival 2026) ತಮ್ಮ ವಿಭಿನ್ನ ಹಾಗೂ ಭವ್ಯವಾದ ಗೌನ್‌ಗಳ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಆದರೆ ಪ್ರಸ್ತುತ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಯೊಬ್ಬರು ಹಂಚಿಕೊಂಡಿರುವ ಎಐ ತಂತ್ರಜ್ಞಾನದ (AI-generated) ಚಿತ್ರವೊಂದರ ವಿರುದ್ಧ ಊರ್ವಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಚಿತ್ರದಲ್ಲಿ ಊರ್ವಶಿ ಅವರನ್ನು ಬಾಲಿವುಡ್‌ನ ಇತರೆ ನಟಿಯರಾದ ಐಶ್ವರ್ಯಾ ರೈ, ಪ್ರಿಯಾಂಕಾ ಚೋಪ್ರಾ, ಮಾಧುರಿ ದೀಕ್ಷಿತ್ ಮತ್ತು ದೀಪಿಕಾ…

Read More

‘ಡಾನ್ 3’ ಮಾತ್ರವಲ್ಲ, ನಿಂತು ಹೋದ ರಣ್ವೀರ್ ಸಿಂಗ್ ಸಿನಿಮಾಗಳಿವು

‘ಧುರಂಧರ್’ (Dhurandar) ಮತ್ತು ‘ಧುರಂಧರ್ 2’ ಸಿನಿಮಾಗಳ ಮೂಲಕ ಇಂಡಸ್ಟ್ರಿ ಹಿಟ್ ನೀಡಿರುವ ರಣ್ವೀರ್ ಸಿಂಗ್ ಈಗ ಅದೇ ಇಂಡಸ್ಟ್ರಿಯಿಂದ ನಿಷೇಧಕ್ಕೆ ಒಳಗಾಗಿದ್ದಾರೆ. ರಣ್ವೀರ್ ಸಿಂಗ್ ಒಪ್ಪಿಕೊಂಡಿದ್ದ ‘ಡಾನ್ 3’ ಸಿನಿಮಾದಿಂದ ಹೊರಬಂದಿದ್ದಕ್ಕಾಗಿ ಇದೀಗ ಫೆಡರೇಷನ್ ಆಫ್ ಇಂಡಿಯನ್ ಸಿನಿ ಎಂಪ್ಲಾಯಿಸ್ (ಎಫ್​ಡಬ್ಲುಐಸಿಇ) ರಣ್ವೀರ್ ಸಿಂಗ್ ವಿರುದ್ಧ ಅಸಹಕಾರಕ್ಕೆ ಕರೆ ನೀಡಿದ್ದು, ರಣ್ವೀರ್ ಸಿಂಗ್ ನಟಿಸುವ ಯಾವುದೇ ಸಿನಿಮಾನಲ್ಲಿ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದೆ. ‘ಡಾನ್ 3’ ಸಿನಿಮಾದಿಂದ ರಣ್ವೀರ್ ಸಿಂಗ್ ಅವರು ಹೊರಬಂದಿದ್ದೇ ಇದಕ್ಕೆ ಕಾರಣವಾಗಿದೆ….

Read More

ಮಾಜಿ ಪ್ರೇಯಸಿ ಕರೆದಳೆಂದು ಹೋದ ಪ್ರಿಯಕರ ದುರಂತ ಸಾವು: ಆಗಿದ್ದೇನು?

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಮೇ 27: ಮಾಜಿ ಪ್ರೇಯಸಿಯ (Ex-girlfriend) ಕರೆ ಹಿನ್ನೆಲೆ ಆಕೆಯನ್ನು ಭೇಟಿ ಮಾಡಲು ಮನೆಗೆ ಹೋಗಿದ್ದ ಯುವಕನೋರ್ವ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿರುವಂತಹ (death) ಘಟನೆ ನಗರದ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರದ ಬಿಡಿ ಕಾಲೋನಿ ನಿವಾಸಿ ಮೊಹಮ್ಮದ್ ಖಾಸಿಂ(27) ಕೊಲೆಯಾದ ಯುವಕ. ಕೊಲೆ ಆರೋಪ ಹಿನ್ನೆಲೆ ಮಾಜಿ ಪ್ರೇಯಸಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಬ್ಯಾಟರಯನಪುರ ಪೊಲೀಸ್​ ಠಾಣೆಯಲ್ಲಿ ಕೊಲೆ ಪ್ರಕರಣ…

Read More