ಸಿಎಂ ದಳಪತಿ ವಿಜಯ್ ಭೇಟಿಯಾದ ಲೋಕೇಶ್ ಕನಗರಾಜ್: ‘ಲಿಯೋ 2’ ನಿರೀಕ್ಷೆಯಲ್ಲಿ ಅಭಿಮಾನಿಗಳು
ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ಇತ್ತೀಚೆಗೆ ಸಿನಿಮಾ ರಂಗದ ಪ್ರಮುಖರೊಂದಿಗೆ ಸಭೆ ನಡೆಸಿ, ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಅನುಮತಿ ನೀಡುವ ಮೂಲಕ ಕಾಲಿವುಡ್‌ಗೆ ದೊಡ್ಡ ರಿಲೀಫ್ ನೀಡಿದ್ದಾರೆ. ಇದರ ಬೆನ್ನಲ್ಲೇ ತಮಿಳಿನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಅವರು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿಯಾಗಿದ್ದು, ಈ ಕ್ಷಣದ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಕೂಡಲೇ ಅಭಿಮಾನಿಗಳಿಗೆ…