ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ
ರಣದೀಪ್ ಸುರ್ಜೇವಾಲImage Credit source: Tv9 Kannada ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್…