ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್ಗೆ ಎಚ್ಚರಿಕೆ
ಬೆಂಗಳೂರು, ಮೇ 27: ಸದ್ಯ ರಾಜ್ಯ ರಾಜಕಾರಣದಲ್ಲಿ ಪಟ್ಟದಾಟ ಕ್ಲೈಮ್ಯಾಕ್ಸ್ಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇತ್ತ ಅಧಿಕೃತ ನಿವಾಸ ಕಾವೇರಿ ಎದುರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ‘ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಪಕ್ಷ ಉಳಿಯುವುದಿಲ್ಲ,…