ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಜೈಲಿನಿಂದ ಹೊರಬರುತ್ತಿದ್ದಂತೆ ಭರ್ಜರಿ ಪಾರ್ಟಿ! ನೋಟಿನ ಹಾರ ಹಾಕಿಕೊಂಡು ಪತ್ನಿಯೊಂದಿಗೆ ಡಾನ್ಸ್
ಪುಣೆ, ಮೇ.27 : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾರಾಷ್ಟ್ರದ ಪುಣೆಯ ಕಲ್ಯಾಣಿನಗರದ ಪೋರ್ಷೆ (Porsche) ಕಾರು ಭೀಕರ ಅಪಘಾತ ಪ್ರಕರಣದ ಪ್ರಮುಖ ಆರೋಪಿ, ಬಿಲ್ಡರ್ ವಿಶಾಲ್ ಅಗರ್ವಾಲ್ (Vishal Agarwal) ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ವಿಶಾಲ್ ಅಗರ್ವಾಲ್, ತಮ್ಮ ಕುಟುಂಬದೊಂದಿಗೆ ಪಾರ್ಟಿ ಮಾಡಿದ್ದಾರೆ. ನೋಟುಗಳ ಹಾರ ಧರಿಸಿ ಅಸಭ್ಯವಾಗಿ ಡಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 2024ರ ಮೇ ತಿಂಗಳಿನಲ್ಲಿ…