Headlines

ಸ್ವಲ್ಪ ಎಚ್ಚರ ತಪ್ಪಿದ್ರೂ ಬೆಂಗಳೂರಿನಲ್ಲಿ ನಡೆಯುತ್ತಿತ್ತು ದೊಡ್ಡ ವಿಮಾನ ದುರಂತ! ಪ್ರಾಣಭಯದಲ್ಲಿ ವಿಮಾನದ ರೆಕ್ಕೆ ಮೇಲೆಯೇ ಓಡಿದ ಪ್ರಯಾಣಿಕರು! – Kannada News | KIA IndiGo Flight Evacuation: Slide Fails, Passengers Walked on Wing Amid Smoke

ಬೆಂಗಳೂರು, ಮೇ.27: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ನಿನ್ನೆ (ಮೇ 26) ಸಂಜೆ ಭಾರಿ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಂಗಳೂರಿನಿಂದ ಚೆನ್ನೈಗೆ ಹೊರಡಬೇಕಾಗಿದ್ದ ಇಂಡಿಗೋ ವಿಮಾನದಲ್ಲಿ ಹಠಾತ್ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬರೋಬ್ಬರಿ 230 ಕ್ಕೂ ಹೆಚ್ಚು ಪ್ರಯಾಣಿಕರನ್ನು ತುರ್ತಾಗಿ ಸ್ಥಳಾಂತರಿಸಲಾಯಿತು. ಆದರೆ, ಈ ವೇಳೆ ವಿಮಾನದ ಸುರಕ್ಷತಾ ತುರ್ತು ದಾರಿಯ ಇನ್‌ಫ್ಲೇಟಬಲ್ ಸ್ಲೈಡ್ (Inflatable Slide) ಸರಿಯಾಗಿ ತೆರೆದುಕೊಳ್ಳದ ಕಾರಣ, ಪ್ರಯಾಣಿಕರು ಪ್ರಾಣಭಯದಿಂದ ವಿಮಾನದ ಬಲಗಡೆಯ ರೆಕ್ಕೆಯ ಮೇಲೆಯೇ ನಡೆದು ಬಂದಿರುವ…

Read More

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ – Kannada News | Siddaramaiah Agrees to Step Down as Karnataka CM: Inside Story of how Congress High Command Convinced Him

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ?Image Credit source: new indian express ಬೆಂಗಳೂರು, ಮೇ 27: ರಾಜ್ಯ ರಾಜಕಾರಣದಲ್ಲಿ ಬಹುದಿನಗಳಿಂದ ಸದ್ದು ಮಾಡುತ್ತಿದ್ದ ಕಾಂಗ್ರೆಸ್​​ ನಾಯಕತ್ವ ಬದಲಾವಣೆ ಸಮರ ಕೊನೆಗೂ ಕ್ಲೈಮಾಕ್ಸ್​​ ಹಂತಕ್ಕೆ ತಲುಪಿದೆ. ಸಿಎಂ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಅವರನ್ನು ಮನವೊಲಿಸುವಲ್ಲಿ ಹೈಕಮಾಂಡ್​​ ನಾಯಕರು ಯಶಸ್ವಿಯಾಗಿದ್ದು, ನಾಳೆ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರ ಭೇಟಿಗೂ ಅವರು ಸಮಯ ಕೇಳಿರುವ ಮಾಹಿತಿ ಇದೆ. ಅಷ್ಟಕ್ಕೂ ಮುಖ್ಯಮಂತ್ರಿ ಸ್ಥಾನ ಬಿಡಲು ಸಿದ್ದರಾಮಯ್ಯ ಅವರನ್ನು…

Read More

ಕರ್ನಾಟಕ, ಬಿಹಾರ ಸೇರಿ ಹಲವು ರಾಜ್ಯಗಳ ವಿರೋಧದ ನಡುವೆ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು – Kannada News | Supreme Court Says SIR Strengthens Democratic Framework and Constitutional Values

ನವದೆಹಲಿ, ಮೇ 27: ಕರ್ನಾಟಕ, ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕುರಿತು ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್​ ನೀಡಿರುವ ತೀರ್ಪು ಅಚ್ಚರಿ ಮೂಡಿಸಿದೆ. ಬಿಹಾರದಲ್ಲಿ ಭಾರತೀಯ ಚುನಾವಣಾ ಆಯೋಗ (ECI) ನಡೆಸಿದ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಸಾಂವಿಧಾನಿಕ ಮತ್ತು ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷ ಪರಿಷ್ಕರಣೆ ನಡೆಸುವ ಸಂಪೂರ್ಣ ಅಧಿಕಾರ…

Read More

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮತ್ತೊಂದು ವಿವಾದ: ಮಾಜಿ ರೌಡಿಶೀಟರ್‌ಗೆ ಆಶೀರ್ವದಿಸಿದ ವಿಡಿಯೋ ವೈರಲ್! – Kannada News | Nagalakshmi Chowdhari Controversy: Karnataka Women’s Commission Chief Caught on Camera Blessing Ex Rowdy Sheeter in Udupi

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿImage Credit source: tv9 ಉಡುಪಿ, ಮೇ 27: ಕರ್ನಾಟಕ (Karnataka) ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮತ್ತೊಂದು ಹೊಸ ವಿವಾದದ ಸುಳಿಗೆ ಸಿಲುಕಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಅವರು ಮಾಜಿ ರೌಡಿಶೀಟರ್ ಸೋನು ಸುಧೀರ್ ಎಂಬಾತನಿಗೆ ಕಾರಿನಲ್ಲಿ ಕುಳಿತು ತಲೆ ಮುಟ್ಟಿ ಆಶೀರ್ವದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಂವಿಧಾನಿಕ ಮತ್ತು ಜವಾಬ್ದಾರಿಯುತ ಹುದ್ದೆಯಲ್ಲಿರುವ ಮಹಿಳಾ…

Read More

Video: ಕೂದಲೆಳೆ ಅಂತರದಲ್ಲಿ ತಪ್ಪಿದ ಅಪಘಾತ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Viral CCTV: Bus Driver’s Quick Reflexes Avert Horrific Pedestrian Accident

ಕೇರಳ: ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಭಾರೀ ವೈರಲ್ ಆಗುತ್ತಿರುವ ಈ ಸಿಸಿಟಿವಿ ದೃಶ್ಯಾವಳಿಯು, ಮುಂಜಾನೆ ಸುಮಾರು 6:15ರ ವೇಳೆಗೆ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಭೀಕರ ಘಟನೆಯನ್ನು ತೋರಿಸುತ್ತದೆ. ವಿಡಿಯೋದಲ್ಲಿ, ಎಂದಿನಂತೆ ಕಚೇರಿಗೆ ಹೊರಟ ವ್ಯಕ್ತಿಯೊಬ್ಬರು ಹಾಗೂ ಇಬ್ಬರು ಪಾದಚಾರಿಗಳು ರಸ್ತೆ ಬದಿಯಲ್ಲಿ ನಿಂತಿರುವುದನ್ನು ಕಾಣಬಹುದು. ಅಷ್ಟರಲ್ಲೇ ಅತ್ಯಂತ ವೇಗವಾಗಿ ಬಂದ ಹಳದಿ ಮತ್ತು ನೀಲಿ ಬಣ್ಣದ ಖಾಸಗಿ ಬಸ್, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಿದ್ದ ಜನರ ಮೇಲೆಯೇ ನುಗ್ಗುವಂತೆ ಆತಂಕ ಸೃಷ್ಟಿಸಿದೆ….

Read More

ಬೆಂಗಳೂರಿನಲ್ಲಿ ಮತ್ತೆ ಹಣಕ್ಕಾಗಿ ಸಂಚು ರೂಪಿಸಿದ ‘ಪಂಕ್ಚರ್ ಮಾಫಿಯಾ’! ಮಾಗಡಿ ರಸ್ತೆಯುದ್ದಕ್ಕೂ ಮೊಳೆಗಳ ರಾಶಿ – Kannada News | Bengaluru Road Safety Alert: Puncture Mafia Scatters Nails, Drivers Beware!

ಬೆಂಗಳೂರು, ಮೇ27: ಬೆಂಗಳೂರಿನಲ್ಲಿ ಜನರಿಗೆ ಒಂದಲ್ಲ ಒಂದು ಸಮಸ್ಯೆಗಳು ಕಾಡುತ್ತಲೇ ಇರುತ್ತವೆ. ರಸ್ತೆ ಗುಂಡಿಮ ಟ್ರಾಫಿಕ್​​​​​, ದರೋಡೆ, ಕಳ್ಳತನ ಹೀಗೆ ಅನೇಕ ಸಮಸ್ಯೆಗಳು ಇದೆ. ಇದೀಗ ಸಂಚಾರ ದಟ್ಟಣೆ, ಗುಂಡಿ ಬಿದ್ದ ರಸ್ತೆಗಳ ನಡುವೆ ಈಗ ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಮತ್ತೊಂದು ಘೋರ ಗಂಡಾಂತರ ಎದುರಾಗಿದೆ. ಹೌದು, ನಗರದಲ್ಲಿ ಸದ್ದಡಗಿದ್ದ ಕುಖ್ಯಾತ ‘ಪಂಕ್ಚರ್ ಮಾಫಿಯಾ’ (Nails Puncture Mafia) ಮತ್ತೊಮ್ಮೆ ತನ್ನ ಕೃತ್ಯ ಆರಂಭಿಸಿದೆ. ಈ ಗ್ಯಾಂಗ್ ಸವಾರರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ. ಇತ್ತೀಚೆಗೆ ಮಾಗಡಿ…

Read More

ಮತ್ತೆ ನಿರ್ದೇಶಕನ ಕುರ್ಚಿಯಲ್ಲಿ ಕೂರಲು ಸಜ್ಜಾದ ಕಿಚ್ಚ ಸುದೀಪ್ – Kannada News | Kichcha Sudeep planning to direct a new movie

ಸುದೀಪ್ (Sudeep) ಅದ್ಭುತ ನಟರಾಗಿರುವ ಜೊತೆಗೆ ಬಹಳ ಒಳ್ಳೆಯ ನಿರ್ದೇಶಕರೂ ಹೌದು. ಅವರ ನಟನೆಗೆ ಇರುವಂತೆ ಅವರ ನಿರ್ದೇಶನಕ್ಕೂ ಪ್ರತ್ಯೇಕ ಅಭಿಮಾನಿ ವರ್ಗವಿದೆ. ಈ ವರೆಗೆ ಆರು ಸಿನಿಮಾಗಳನ್ನು ಸುದೀಪ್ ನಿರ್ದೇಶಿಸಿದ್ದು, ಆರೂ ಸಿನಿಮಾಗಳು ಹಿಟ್ ಎನಿಸಿಕೊಂಡಿವೆ ಜೊತೆಗೆ ಗುಣಮಟ್ಟದ ಸಿನಿಮಾ ಎಂಬ ವಿಮರ್ಶೆಯನ್ನೂ ಪಡೆದುಕೊಂಡಿವೆ. ಆದರೆ ನಟನೆಯಲ್ಲಿ ಬ್ಯುಸಿ ಆಗಿದ್ದ ಸುದೀಪ್ ಕಳೆದ 12 ವರ್ಷಗಳಿಂದ ಸಿನಿಮಾ ನಿರ್ದೇಶನ ಮಾಡಿಲ್ಲ. ಆದರೆ ಇದೀಗ ಸುದೀಪ್ ಮತ್ತೆ ನಿರ್ದೇಶಕನ ಕುರ್ಚಿಯಲ್ಲಿ ಕೂರಲು ಸಜ್ಜಾಗಿದ್ದಾರೆ. ಸುದೀಪ್ ಅವರು ಹೊಸ…

Read More

ಬೆಂಗಳೂರಿನಲ್ಲಿ ಕುರಿಗಳಿಗೂ ಪೊಲೀಸರಿಂದ ಟೈಟ್ ಸೆಕ್ಯೂರಿಟಿ!

ಬೆಂಗಳೂರು, ಮೇ 27: ಬೆಂಗಳೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕುರಿಗಳನ್ನು ಕಾಯಲು ಪೊಲೀಸರನ್ನು ನಿಯೋಜಿಸಿರುವ ಘಟನೆ ಆರ್.ಟಿ. ನಗರದಲ್ಲಿ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆ ನಗರದ ರಾಧಾಕೃಷ್ಣ ಥಿಯೇಟರ್ ಮುಂಭಾಗದಲ್ಲಿರುವ ಕುರಿ ಮಾರುಕಟ್ಟೆಗೆ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಾರುಕಟ್ಟೆಯ ಸುರಕ್ಷತೆಗಾಗಿ ಶಿಫ್ಟ್ ಆಧಾರದ ಮೇಲೆ ಒಬ್ಬ ಪಿಎಸ್ಐ ಸೇರಿದಂತೆ ಹತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಒಂದು ಕೆಎಸ್ಆರ್‌ಪಿ (KSRP) ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಇಷ್ಟು ವರ್ಷ…

Read More

ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ – Kannada News | Karnataka Power Tussle Ends: CM Siddaramaiah to Resign Tomorrow; Seeks Governor Appointment at 10:30 AM

ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಗುರುವಾರ) ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲು ಸಿಎಂ ಕಚೇರಿಯಿಂದ ಸಮಯ ಕೋರಲಾಗಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ ಹೈಕಮಾಂಡ್ ನಡೆಸಿದ ಸುದೀರ್ಘ 7 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ, ರಾಹುಲ್ ಗಾಂಧಿ ಅವರೊಂದಿಗಿನ ಒನ್-ಟು-ಒನ್ ಮಾತುಕತೆ ಬಳಿಕ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ…

Read More

Video: ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿದ್ದ ಯುವಕನ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿದ ಬಾಲಕ – Kannada News | Security Footage From Mexico Shows Child Setting Teen’s Hair on Fire Inside Store

ಮೆಕ್ಸಿಕೋ, ಮೇ 27: ಯಾವುದೇ ಕಾರಣವಿಲ್ಲದಿದ್ದರೂ ಬಾಲಕನೊಬ್ಬ ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಯುವಕನ ಗುಂಗುರು ಕೂದಲಿಗೆ ಬೆಂಕಿ ಹಚ್ಚಿದ ದೃಶ್ಯವೊಂದು ಅಂಗಡಿಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುವಕ ಏನೋ ಆಲೋಚಿಸುತ್ತಾ ನಿಂತಿದ್ದಾಗ, ಹಿಂದಿನಿಂದ ಬಂದ ಬಾಲಕ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.ಅದೃಷ್ಟವಶಾತ್, ಯುವಕ ತಕ್ಷಣವೇ ಎಚ್ಚೆತ್ತುಕೊಂಡು, ಅತ್ಯಂತ ಸಮಯಪ್ರಜ್ಞೆಯಿಂದ ಕೆಲವೇ ಸೆಕೆಂಡುಗಳಲ್ಲಿ ತನ್ನ ಕೂದಲಿಗೆ…

Read More