ಸ್ವಲ್ಪ ಎಚ್ಚರ ತಪ್ಪಿದ್ರೂ ಬೆಂಗಳೂರಿನಲ್ಲಿ ನಡೆಯುತ್ತಿತ್ತು ದೊಡ್ಡ ವಿಮಾನ ದುರಂತ! ಪ್ರಾಣಭಯದಲ್ಲಿ ವಿಮಾನದ ರೆಕ್ಕೆ ಮೇಲೆಯೇ ಓಡಿದ ಪ್ರಯಾಣಿಕರು! – Kannada News | KIA IndiGo Flight Evacuation: Slide Fails, Passengers Walked on Wing Amid Smoke
ಬೆಂಗಳೂರು, ಮೇ.27: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ನಿನ್ನೆ (ಮೇ 26) ಸಂಜೆ ಭಾರಿ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಂಗಳೂರಿನಿಂದ ಚೆನ್ನೈಗೆ ಹೊರಡಬೇಕಾಗಿದ್ದ ಇಂಡಿಗೋ ವಿಮಾನದಲ್ಲಿ ಹಠಾತ್ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬರೋಬ್ಬರಿ 230 ಕ್ಕೂ ಹೆಚ್ಚು ಪ್ರಯಾಣಿಕರನ್ನು ತುರ್ತಾಗಿ ಸ್ಥಳಾಂತರಿಸಲಾಯಿತು. ಆದರೆ, ಈ ವೇಳೆ ವಿಮಾನದ ಸುರಕ್ಷತಾ ತುರ್ತು ದಾರಿಯ ಇನ್ಫ್ಲೇಟಬಲ್ ಸ್ಲೈಡ್ (Inflatable Slide) ಸರಿಯಾಗಿ ತೆರೆದುಕೊಳ್ಳದ ಕಾರಣ, ಪ್ರಯಾಣಿಕರು ಪ್ರಾಣಭಯದಿಂದ ವಿಮಾನದ ಬಲಗಡೆಯ ರೆಕ್ಕೆಯ ಮೇಲೆಯೇ ನಡೆದು ಬಂದಿರುವ…