ಪಟ್ಟದ ಪಗಡೆಯಾಟಕ್ಕೆ ಹೊಸ ಟ್ವಿಸ್ಟ್​​: ರಾಹುಲ್​​ ಬಳಿ ಪರಮೇಶ್ವರ್​​ರನ್ನ ಸಿಎಂ ಮಾಡಿ ಎಂದರಾ ಸಿದ್ದರಾಮಯ್ಯ? – Kannada News | Siddaramaiahs Impending Resignation: Dr. G. Parameshwara Recommended for Karnataka Chief Minister.

ಬೆಂಗಳೂರು, ಮೇ 27: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ತೀವ್ರ ರಾಜಕೀಯ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಮೇ 28) ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ನಡೆದ ಮ್ಯಾರಥಾನ್ ಸಭೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ. ಈ ಸಂದರ್ಭದಲ್ಲಿ, ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮುಂದೆ ತೆರವಾಗುವ ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರಂತೆ. ಪಕ್ಷ ಸಂಘಟನೆಯಲ್ಲಿನ ಅನುಭವ ಮತ್ತು ಆಡಳಿತದಲ್ಲಿನ ಪರಿಣತಿಯನ್ನು ಉಲ್ಲೇಖಿಸಿ, ಡಾ. ಜಿ. ಪರಮೇಶ್ವರ ಅವರು ಸಿಎಂ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ನಾನು ಯಾವ ತಪ್ಪು ಮಾಡಿಲ್ಲ’- 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ್ ಕೋರ್ಟ್ ತೀರ್ಪಿಗೆ ಬೈಜು ಬೇಸರ – Kannada News | Byju Raveendran disappointed with Singapore court judgement sentencing his for 6 month jail

ಸಿಂಗಾಪುರ, ಮೇ 27: ತನ್ನ ವಿರುದ್ಧ 6 ತಿಂಗಳ ಜೈಲು ಶಿಕ್ಷೆ ವಿಧಿಸಿರುವ ಸಿಂಗಾಪುರ ಕೋರ್ಟ್​ನ ತೀರ್ಪಿನ ಬಗ್ಗೆ ಬೈಜು ರವೀಂದ್ರನ್ (Byju Raveendran) ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ಇಡೀ ಪ್ರಕರಣವನ್ನು ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವ ರೀತಿ ನನ್ನ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆಯನ್ನು ಮೂಡಿಸುತ್ತಿದೆ. ನಾವೀಗಾಗಲೇ ಹೂಡಿಕೆದಾರರೊಂದಿಗೆ ಅಂತಿಮ ಹಂತದ ಸಂಧಾನ ಮಾತುಕತೆಯಲ್ಲಿದ್ದೇವೆ (Settlement Talks),” ಎಂದು ಸ್ಪಷ್ಟಪಡಿಸಿದ್ದಾರೆ.

“ಸಾಲಗಾರರು ಹಾಗೂ ಕತಾರ್ ಇನ್ವೆಸ್ಟ್‌ಮೆಂಟ್ ಅಥಾರಿಟಿ (QIA) ಒಳಗೊಂಡಂತೆ ಎಲ್ಲಾ ಪ್ರಮುಖ ಭಾಗಿದಾರರೊಂದಿಗೆ ನಾವು ಒಪ್ಪಂದಕ್ಕೆ ಬಂದಿದ್ದೇವೆ. ಕೇವಲ ಕೆಲವು ಸಣ್ಣ ವಿಷಯಗಳು ಮಾತ್ರ ಬಾಕಿ ಉಳಿದಿವೆ. ಈ ಮಾತುಕತೆಗಳ ಸಮಯದಲ್ಲಿ, ನನ್ನ ಕಡೆಯಿಂದಾಗಲಿ ಅಥವಾ ಇತರ ಸಂಸ್ಥಾಪಕರಿಂದಾಗಲಿ ಯಾವುದೇ ತಪ್ಪು ನಡೆದಿಲ್ಲ ಎಂಬುದನ್ನು ಎಲ್ಲಾ ಕಡೆಯವರು ಒಪ್ಪಿಕೊಂಡಿದ್ದಾರೆ. ಇಂತಹ ಸೂಕ್ಷ್ಮ ಹಂತದಲ್ಲಿ ಕತಾರ್ ಇನ್ವೆಸ್ಟ್‌ಮೆಂಟ್ ಈ ರೀತಿಯ ಕಾನೂನು ಒತ್ತಡದ ತಂತ್ರಗಳನ್ನು ಬಳಸುತ್ತಿರುವುದು ಅತ್ಯಂತ ದುರದೃಷ್ಟಕರ” ಎಂದು ಬೈಜುಸ್ ಸಂಸ್ಥಾಪಕರಾದ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ತಾವು ಯಾವುದೇ ಹಣವನ್ನು ವೈಯಕ್ತಿಕವಾಗಿ ಪಡೆದಿಲ್ಲ ಮತ್ತು ವಿವಾದಿತ ಹಣವನ್ನು ಕೇವಲ ಉದ್ಯಮದ ಕಾನೂನಾತ್ಮಕ ಉದ್ದೇಶಗಳಿಗಾಗಿಯೇ ಬಳಸಲಾಗಿದೆ ಎಂದು ಪ್ರತಿಪಾದಿಸಿದ ಅವರಿ, “ಒಂದು ಕಡೆಯ ಸುಳ್ಳು ವರದಿಗಳನ್ನು ನಾನು ಸುಮ್ಮನೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ,” ಎಂದು ನ್ಯಾಯಾಲಯದ ತೀರ್ಪನ್ನು ಬಲವಾಗಿ ತಿರಸ್ಕರಿಸಿದ್ದಾರೆ.

ಸಿಂಗಾಪುರ ನ್ಯಾಯಾಲಯದ ಆದೇಶವೇನು?

ಬೈಜುಸ್ ಸಂಸ್ಥೆ ಸಾಲಗಾರರಿಗೆ ಹಣ ವಾಪಸ್ ಮಾಡದೇ ಇರುವ ಆರೋಪಕ್ಕೆ ಸಂಬಂಧಿಸಿದ ಕೋರ್ಟ್ ಕೇಸ್ ಇದು. ಕೋರ್ಟ್ ಆದೇಶವನ್ನೂ ಪಾಲಿಸಿಲ್ಲ ಎನ್ನುವ ಆರೋಪವೂ ಬೈಜು ರವೀಂದ್ರನ್ ಮೇಲಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ (Contempt of Court) ಆರೋಪ ಇದ್ದು, ಆ ಪ್ರಕರಣದಲ್ಲಿ ಬೈಜು ರವೀಂದ್ರನ್ ಅವರನ್ನು ದೋಷಿ ಎಂದು ಸಿಂಗಾಪುರ ಕೋರ್ಟ್ ಪರಿಗಣಿಸಿ ತೀರ್ಪು ನೀಡಿದೆ.

ಇದನ್ನೂ ಓದಿ: ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್​ಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್

ಬೈಜು ರವೀಂದ್ರನ್ ಅವರ ಈ ಸ್ಪಷ್ಟನೆಯ ನಡುವೆಯೂ, ಸಿಂಗಾಪುರ ನ್ಯಾಯಾಲಯವು ಅವರನ್ನು **ನ್ಯಾಯಾಂಗ ನಿಂದನೆ (Contempt of Court)** ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ ಈ ಕೆಳಗಿನ ಕಠಿಣ ಆದೇಶಗಳನ್ನು ನೀಡಿದೆ:

6 ತಿಂಗಳ ಜೈಲು ಶಿಕ್ಷೆ

ನ್ಯಾಯಾಲಯದ ಆದೇಶಗಳನ್ನು ಪದೇ ಪದೇ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬೈಜು ಅವರಿಗೆ 6 ತಿಂಗಳ ಸಿವಿಲ್ ಜೈಲು ಶಿಕ್ಷೆ ವಿಧಿಸಲಾಗಿದೆ ಮತ್ತು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಲಾಗಿದೆ. ಸಿಂಗಾಪುರ ಡಾಲರ್ $90,000 (ಸುಮಾರು 67 ಲಕ್ಷ ರೂ) ಕಾನೂನು ವೆಚ್ಚವನ್ನು ನ್ಯಾಯಾಲಯಕ್ಕೆ ಪಾವತಿಸಲು ಆದೇಶಿಸಲಾಗಿದೆ. ‘ಬೀಆರ್ ಇನ್ವೆಸ್ಟ್‌ಕೋ ಪ್ರೈವೇಟ್ ಲಿಮಿಟೆಡ್’ (Beeaar Investco Pte) ಎಂಬ ಕಂಪನಿಯ ಮಾಲೀಕತ್ವದ ನಿಖರ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಏನಿದು ಬೈಜೂಸ್ ವಿರುದ್ಧದ ಪ್ರಕರಣ?

ಈ ಕಾನೂನು ಹೋರಾಟವು ಕತಾರ್‌ನ ಸಾರ್ವಭೌಮ ನಿಧಿ ಸಂಸ್ಥೆಯಾದ ಕತಾರ್ ಇನ್‌ವೆಸ್ಟ್‌ಮೆಂಟ್ ಅಥಾರಿಟಿಯ (QIA) ಅಂಗಸಂಸ್ಥೆಯಾದ ‘ಕತಾರ್ ಹೋಲ್ಡಿಂಗ್ಸ್’ ಸಲ್ಲಿಸಿದ ದೂರಿನಿಂದ ಆರಂಭವಾಗಿದೆ. ಬೈಜೂಸ್ ಸಂಸ್ಥೆಯು ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದ ಮತ್ತು ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದ ಕಠಿಣ ದಿನಗಳಲ್ಲಿ ಈ ಸಂಸ್ಥೆಯು ಬೈಜೂಸ್‌ನಲ್ಲಿ ಭಾರಿ ಹೂಡಿಕೆ ಮಾಡಿತ್ತು.

ಬೈಜು ಆಸ್ತಿ ವಿವರ ಬಹಿರಂಗಪಡಿಸದಿರುವುದು

ಏಪ್ರಿಲ್ 2024 ರಿಂದ ಬೈಜು ರವೀಂದ್ರನ್ ಅವರು ತಮ್ಮ ವೈಯಕ್ತಿಕ ಹಾಗೂ ಕಾರ್ಪೊರೇಟ್ ಆಸ್ತಿಪಾಸ್ತಿಗಳ ವಿವರಗಳನ್ನು ಬಹಿರಂಗಪಡಿಸುವಂತೆ ಸಿಂಗಾಪುರ ನ್ಯಾಯಾಲಯ ನೀಡಿದ್ದ ನಿರ್ದೇಶನಗಳನ್ನು ಪಾಲಿಸಿರಲಿಲ್ಲ. ಕೋರ್ಟ್ ಆದೇಶಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದೇ ಈ ಜೈಲು ಶಿಕ್ಷೆಯ ತೀರ್ಪಿಗೆ ಮುಖ್ಯ ಕಾರಣವಾಗಿದೆ.

ಬೈಜುಸ್ ವಿರುದ್ಧ ಜಾಗತಿಕವಾಗಿ ಮುಂದುವರಿದಿರುವ ಇತರ ಕಾನೂನು ಸಂಕಷ್ಟಗಳು

ಬೈಜು ರವೀಂದ್ರನ್ ಅವರ ಕಾನೂನು ಹೋರಾಟ ಕೇವಲ ಸಿಂಗಾಪುರಕ್ಕೆ ಮಾತ್ರ ಸೀಮಿತವಾಗಿಲ್ಲ. ಬೈಜೂಸ್‌ನ ಅಂತರರಾಷ್ಟ್ರೀಯ ವಿಭಾಗವು ಪಡೆದಿದ್ದ 1.2 ಬಿಲಿಯನ್ ಡಾಲರ್ ಸಾಲದ ಮರುಪಾವತಿಗೆ ಸಂಬಂಧಿಸಿದಂತೆ ಅಮೆರಿಕದ ಸಾಲಗಾರರು ಮತ್ತು ನ್ಯಾಯಾಲಯಗಳು ಈಗಾಗಲೇ ಬೈಜು ವಿರುದ್ಧ ತೀವ್ರ ಕಾನೂನು ಕ್ರಮಗಳನ್ನು ಜರುಗಿಸುತ್ತಿವೆ. ಅಲ್ಲೂ ಕೂಡ ಮಾಹಿತಿ ನೀಡದ ಕಾರಣಕ್ಕೆ ಅವರ ಮೇಲೆ ಈ ಹಿಂದೆ ಸಿವಿಲ್ ನಿಂದನೆ ಆರೋಪ ಹೊರಿಸಲಾಗಿತ್ತು.

ಇದನ್ನೂ ಓದಿ: ಎಐನಿಂದ ಸದ್ಯದಲ್ಲೇ ಮನುಷ್ಯರಿಗೆ ಕೆಲಸ ಇಲ್ಲವಾಗುತ್ತೆ ಎನ್ನುತ್ತಿದ್ದ ಸ್ಯಾಮ್ ಆಲ್ಟ್​ಮ್ಯಾನ್ ಬಾಯಿಂದ ಈಗ ಬೇರೆಯೇ ಮಾತು

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗೆ ನೀಡಬೇಕಾಗಿದ್ದ 159 ಕೋಟಿ ರೂ ಪ್ರಾಯೋಜಕತ್ವದ (Sponsorship) ಬಾಕಿ ಹಣದ ವಿವಾದದಿಂದಾಗಿ, ಬೈಜೂಸ್‌ನ ಪೋಷಕ ಸಂಸ್ಥೆಯಾದ ‘ಥಿಂಕ್ ಅಂಡ್ ಲರ್ನ್ ಪ್ರೈವೇಟ್ ಲಿಮಿಟೆಡ್’ ಸದ್ಯ ಕಾರ್ಪೊರೇಟ್ ದಿವಾಳಿತನ ನಿಯಂತ್ರಣ ಪ್ರಕ್ರಿಯೆಗೆ (CIRP) ಒಳಗಾಗಿದೆ.

ಒಂದು ಕಾಲದಲ್ಲಿ 22 ಬಿಲಿಯನ್ ಡಾಲರ್ ಮೌಲ್ಯದೊಂದಿಗೆ ಜಾಗತಿಕ ಮಟ್ಟದಲ್ಲಿ ಭಾರತದ ಅತ್ಯಂತ ದೊಡ್ಡ ಯಶಸ್ವಿ ಸ್ಟಾರ್ಟ್‌ಅಪ್ ಆಗಿ ಮಿಂಚಿದ್ದ ಬೈಜೂಸ್ ಮತ್ತು ಅದರ ಸಂಸ್ಥಾಪಕ ಬೈಜು ರವೀಂದ್ರನ್, ಸದ್ಯ ಸಾಲದ ಸುಳಿ ಹಾಗೂ ಬಹುರಾಷ್ಟ್ರೀಯ ಕಾನೂನು ಬಿಕ್ಕಟ್ಟಿನ ಮಧ್ಯೆ ಸಿಲುಕಿದ್ದಾರೆ. ಸದ್ಯ ಅವರು ಸಿಂಗಾಪುರದಲ್ಲಿದ್ದಾರೆಯೇ ಅಥವಾ ಬೇರೆ ದೇಶದಲ್ಲಿದ್ದಾರೆಯೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಾಡಿಗೆ ಹೋಗೋ ಮುನ್ನ ಇವ್ರಿಗೆ ‘ನಾಗರಿಕ ಪ್ರಜ್ಞೆ’ ಇರಲಿಲ್ವಾ?: ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು – Kannada News | Bandipur Pollution: Tourists Dump Waste in Tiger Reserve; Urgency for Eco Tourism

ಚಾಮರಾಜನಗರ, ಮೇ,27: ಕಾಡಿನ ನಡುವೆ ಪ್ರಾಣಿಗಳ ವಾಸಸ್ಥಾನಕ್ಕೆ ಭೇಟಿ ನೀಡುವ ಪ್ರವಾಸಿಗರು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬ ಕನಿಷ್ಠ ಜ್ಞಾನವನ್ನೂ ಮರೆತು ವರ್ತಿಸುತ್ತಿರುವ ಆಘಾತಕಾರಿ ಘಟನೆಯೊಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Bandipur Tiger Reserve) ಬೆಳಕಿಗೆ ಬಂದಿದೆ. ಸುಂದರ ಕಾಡಿನ ರಸ್ತೆಯಲ್ಲೇ ಚಲಿಸುತ್ತಿದ್ದ ಬಲೆನೊ ಕಾರೊಂದರಿಂದ ಪ್ರವಾಸಿಗರು ಬಿಯರ್ ಕ್ಯಾನ್‌ಗಳು ಹಾಗೂ ಬಳಸಿದ ಟಿಶ್ಯೂ ಪೇಪರ್‌ಗಳನ್ನು ರಸ್ತೆಗೆ ಎಸೆಯುವ ಮೂಲಕ ಪರಿಸರ ಮಾಲಿನ್ಯ (Littering) ಮಾಡಿದ್ದು, ಈ ಕುರಿತಾದ ಎಕ್ಸ್ (X) ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಪ್ರಮುಖ ರಸ್ತೆಯಲ್ಲಿ ಸಾಗುತ್ತಿದ್ದ ಮಾರುತಿ ಸುಜುಕಿ ಬಲೆನೊ ಕಾರಿನಲ್ಲಿದ್ದ ಪ್ರವಾಸಿಗರು ತಾವು ಕುಡಿದ 2 ಬಿಯರ್ ಕ್ಯಾನ್‌ಗಳು ಹಾಗೂ ಬಳಸಿದ ಟಿಶ್ಯೂ ಪೇಪರ್‌ಗಳನ್ನು ಕಾರಿನ ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಕ್ಷಣವೇ ಈ ಬೇಜವಾಬ್ದಾರಿ ಕೃತ್ಯವನ್ನು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳು ಅಂದು ಆಡಿದ್ದ ಮಾತು: ಡಿಕೆಶಿಗೆ ಸಿಎಂ ಪಟ್ಟದ ಸುದ್ದಿ ಬೆನ್ನಲ್ಲೇ ಸ್ವಾಮೀಜಿ ಭೇಟಿಯಾದ ತಮ್ಮಯ್ಯ

ಚಿಕ್ಕಮಗಳೂರು, ಮೇ 27: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರೆ. ರಾಜ್ಯದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ರಂಭಾಪುರಿ ಶ್ರೀಗಳ ಈ ಹಿಂದಿನ ಹೇಳಿಕೆ ಸತ್ಯವಾಗುತ್ತಿರುವ ಮಾತುಗಳು ಕೇಳಿಬಂದಿವೆ. ರಂಭಾಪುರಿ ಜಗದ್ಗುರುಗಳೊಂದಿಗೆ ಶಾಸಕ ತಮ್ಮಯ್ಯ ಈ ಸಂಬಂಧ ಮಾತುಕತೆ ನಡೆಸಿದ್ದು, ನಿಮ್ಮ ಆಶೀರ್ವಾದದಿಂದ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಿದ್ದಾರೆ. ನೀವು ಏನು ಹೇಳಿದ್ದೀರೋ ಅದರಂತೆಯೇ ಆಗುತ್ತಿದೆ. ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಡಿಕೆಶಿ ಸಿಎಂ ಆಗಲಿ ಎಂದು ಹೇಳಿದವರು ನೀವು ಎಂದು ಚಿಕ್ಕಮಗಳೂರು ನಗರದ ರೇಣುಕಾಸ್ವಾಮಿ ಕಲ್ಯಾಣ ಮಂಟಪದಲ್ಲಿ ತಮ್ಮಯ್ಯ ಶ್ರೀಗಳ ಬಳಿ ಹೇಳಿದ್ದಾರೆ. ಈ ಹಿಂದೆ ರಾಮನಗರದಲ್ಲಿ ಶ್ರೀಗಳು ಡಿಕೆಶಿ ಸಿಎಂ ಆಗುವ ಕುರಿತು ಹೇಳಿಕೆ ನೀಡಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಕೇರಳಂನ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ – Kannada News | Kerala’s Padmanabhaswamy Temple: Gold, Diamond Ornaments Vanish in Breach

ತಿರುವನಂತಪುರಂ, ಮೇ 27: ಅತ್ಯಂತ ಶ್ರೀಮಂತ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೇರಳಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯ(Temple)ದಿಂದ ಚಿನ್ನ ಮತ್ತು ವಜ್ರದ ಅಮೂಲ್ಯ ಆಭರಣಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೇಶಾದ್ಯಂತ ವ್ಯಾಪಕ ಕಳವಳ ಮೂಡಿಸಿದೆ. ಈ ಘಟನೆಯು ಶತಮಾನಗಳಷ್ಟು ಹಳೆಯದಾದ ದೇವಾಲಯದ ಅಪಾರ ಸಂಪತ್ತಿನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಕೇರಳಂ ಪೊಲೀಸ್ ಮಹಾನಿರ್ದೇಶಕರು (DGP) ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ರಹಸ್ಯ ವರದಿಯ ಪ್ರಕಾರ, ದೇವಾಲಯದ ಒಟ್ಟು ದಾಸ್ತಾನು (Inventory) ಪರಿಶೀಲಿಸಿದಾಗ ಸುಮಾರು 78 ಗ್ರಾಂ ಚಿನ್ನದ ಆಭರಣಗಳು ಮತ್ತು ಅತ್ಯಂತ ಬೆಲೆಬಾಳುವ ‘ವೈರಮ್ ನಾಮ’ ಎಂದು ಕರೆಯಲ್ಪಡುವ ವಜ್ರಖಚಿತ ತುಂಡು ಕಾಣೆಯಾಗಿರುವುದು ಪತ್ತೆಯಾಗಿದೆ.

ದೇವಾಲಯದ ಆಡಳಿತ ಮಂಡಳಿಯ ದಾಖಲೆಗಳ ಪ್ರಕಾರ, ಈ ‘ವೈರಮ್ ನಾಮ’ವನ್ನು ದುರಸ್ತಿ ಕಾರ್ಯಕ್ಕಾಗಿ ಹಲವು ತಿಂಗಳ ಹಿಂದೆಯೇ ಹೊರಗೆ ತೆಗೆದುಕೊಂಡು ಹೋಗಲಾಗಿತ್ತು. ಆದರೆ, ಅಂದಿನಿಂದ ಇಂದಿನವರೆಗೂ ಅದನ್ನು ಮರಳಿ ತರಲಾಗಿಲ್ಲ. ಅದೇ ರೀತಿ, ಸುಮಾರು ಆರು ತಿಂಗಳ ಹಿಂದೆ ನಿರ್ವಹಣೆಗಾಗಿ ಕಳುಹಿಸಲಾಗಿದ್ದ ಚಿನ್ನದ ದೀಪವೂ ಸಹ ನಿಗೂಢವಾಗಿ ಕಣ್ಮರೆಯಾಗಿದೆ.

ಮತ್ತಷ್ಟು ಓದಿ: 85 ಕೋಟಿ ರೂ. ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

ಬಿಗಿ ಭದ್ರತೆಗೆ ಡಿಜಿಪಿ ಖಡಕ್ ಶಿಫಾರಸು

ದೇವಾಲಯದ ಅಸ್ತಿತ್ವದಲ್ಲಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆ ಡಿಜಿಪಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೆಲವು ಪ್ರಮುಖ ಶಿಫಾರಸುಗಳನ್ನು ಮಾಡಿದ್ದಾರೆ. ದೇವಾಲಯದ ಎಲ್ಲಾ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಅತ್ಯಂತ ಸುರಕ್ಷಿತ ಕಪಾಟುಗಳಿಗೆ ಸ್ಥಳಾಂತರಿಸಬೇಕು. ಭಕ್ತರು ನೀಡುವ ಕಾಣಿಕೆಗಳನ್ನು ಕಡ್ಡಾಯವಾಗಿ ಮೀಸಲಾದ ಲಾಕರ್‌ಗಳಲ್ಲಿಯೇ ಸಂಗ್ರಹಿಸಬೇಕು.
ದೇವಾಲಯದ ಪ್ರತಿಯೊಂದು ಪ್ರವೇಶ ದ್ವಾರದಲ್ಲೂ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಮತ್ತು ಸರಿಯಾದ ತಪಾಸಣೆ ಇಲ್ಲದೆ ಯಾರನ್ನೂ ಒಳಗಡೆ ಬಿಡಬಾರದು.

ಶ್ರೀ ಪದ್ಮನಾಭಸ್ವಾಮಿ ದೇವಾಲಯದ ಹಿನ್ನೆಲೆ
ಕೇರಳಂನ ತಿರುವನಂತಪುರಂನಲ್ಲಿರುವ ಈ ದೇವಾಲಯವು ಮಹಾವಿಷ್ಣುವಿಗೆ ಅರ್ಪಿತವಾಗಿದೆ. ಸಂಗಮ ಕಾಲದ ಇತಿಹಾಸ ಮತ್ತು ಸಾಹಿತ್ಯದಲ್ಲೂ ಈ ದೇವಾಲಯದ ಅಪಾರ ಸಂಪತ್ತನ್ನು ಉಲ್ಲೇಖಿಸಿ, ಇದನ್ನು ಗೋಲ್ಡನ್ ಟೆಂಪಲ್ (ಚಿನ್ನದ ದೇವಾಲಯ) ಎಂದು ಕರೆಯಲಾಗಿದೆ. ಇಂತಹ ಪೂಜನೀಯ ಸ್ಥಳದಲ್ಲಿ ನಡೆದಿರುವ ಈ ಭದ್ರತಾ ಲೋಪದ ಬಗ್ಗೆ ಈಗ ಉನ್ನತ ಮಟ್ಟದ ತನಿಖೆ ಆರಂಭವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಅಧಿಕಾರ ಹಂಚಿಕೆ: ಕಾಂಗ್ರೆಸ್ ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ – Kannada News | Karnataka Power Tussle: CM Siddaramaiah’s First Reaction After Delhi Congress Meet, Says Will Speak Everything Tomorrow

ಬೆಂಗಳೂರು, ಮೇ 27: ದೆಹಲಿಯಲ್ಲಿ ಕಾಂಗ್ರೆಸ್ (Congress) ಹೈಕಮಾಂಡ್ ನಾಯಕರೊಂದಿಗೆ ಮಂಗಳವಾರ ನಡೆದ 7 ಗಂಟೆಗಳ ದೀರ್ಘಾವಧಿ ಸಭೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು (ಮೇ 27) ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಸಿಎಂ, ಹೈಕಮಾಂಡ್ ಸಭೆಯ ಕುರಿತಾದ ಪ್ರಶ್ನೆ ಎದುರಿಸಬೇಕಾಯಿತು. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ನಾಳೆ (ಗುರುವಾರ) ಎಲ್ಲವನ್ನೂ ಮುಕ್ತವಾಗಿ ಮಾತನಾಡುತ್ತೇನೆ’ ಎಂದು ಹೇಳಿದರು. ಆ ಮೂಲಕ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಮುಖ್ಯಾಂಶಗಳು

  • ದೆಹಲಿ ಹೈಕಮಾಂಡ್ ಸಭೆಯ ನಂತರ ಮೊದಲ ಬಾರಿಗೆ ಮೌನ ಮುರಿದ ಸಿಎಂ.
  • ವಿಧಾನಸೌಧದಲ್ಲಿ ನೆಹರೂ ಪುಣ್ಯಸ್ಮರಣೆ ಮುಗಿಸಿ ನೇರವಾಗಿ ಕಾವೇರಿ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ.
  • ಕೆಪಿಸಿಸಿ ಕಚೇರಿಯಲ್ಲಿನ ಕಾರ್ಯಕ್ರಮಕ್ಕೆ ಗೈರಾದ ಸಿದ್ದರಾಮಯ್ಯ.

ಎಂದಿನಂತಿಲ್ಲದ ಸಿದ್ದರಾಮಯ್ಯ ಬಾಡಿ ಲಾಂಗ್ವೇಜ್!

ದೆಹಲಿಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ನಡೆದ ‘ಒನ್-ಟು-ಒನ್’ ರಹಸ್ಯ ಚರ್ಚೆಯ ಬಳಿಕ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಒಪ್ಪಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ಇಂದು ಬೆಂಗಳೂರಿನಲ್ಲಿ ಸಿಎಂ ಅವರ ಬಾಡಿ ಲ್ಯಾಂಗ್ವೇಜ್ ವಿಭಿನ್ನವಾಗಿ ಕಂಡುಬಂದಿದ್ದು, ಎಂದಿನ ವೇಗ ಕಾಣಿಸಲಿಲ್ಲ. ನಿಧಾನಗತಿಯಲ್ಲೇ ಕಾರಿಳಿದು ಬಂದು ನೆಹರೂ ಪ್ರತಿಮೆಗೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಸಮ್ಮುಖದಲ್ಲಿ ಪುಷ್ಪಾರ್ಚನೆ ಮಾಡಿದರು. ತದನಂತರ ಕೆಪಿಸಿಸಿ ಕಚೇರಿಯ ಕಾರ್ಯಕ್ರಮಕ್ಕೆ ತೆರಳದ ಅವರು ನೇರವಾಗಿ ತಮ್ಮ ‘ಕಾವೇರಿ’ ನಿವಾಸಕ್ಕೆ ಮರಳಿದರು.

ಸಿದ್ದರಾಮಯ್ಯ ಮಾತಿನ ವಿಡಿಯೋ


ಸಿದ್ದರಾಮಯ್ಯ ನಿವಾಸಕ್ಕೆ ನಾಯಕರ ದೌಡು

ಏತನ್ಮಧ್ಯೆ, ಸಿಎಂ ನಿವಾಸಕ್ಕೆ ಸಚಿವರಾದ ಸಂತೋಷ್ ಲಾಡ್, ಎಂ.ಸಿ. ಸುಧಾಕರ್, ಹಿರಿಯ ನಾಯಕ ಆರ್.ವಿ. ದೇಶಪಾಂಡೆ, ಶಾಸಕರುಗಳಾದ ಯಶವಂತರಾಯ ಪಾಟೀಲ್, ಶಿವಲಿಂಗೇಗೌಡ, ನಾಗೇಂದ್ರ, ಕೆ.ವೈ. ನಂಜೇಗೌಡ ಹಾಗೂ ಎಂಎಲ್‌ಸಿ ರಾಜೇಂದ್ರ ಭೇಟಿ ನೀಡಿ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಹೈಕಮಾಂಡ್ ಮುಂದೆ ನಡೆದ ಚರ್ಚೆಗಳು ಹಾಗೂ ತಾವು ರಾಜೀನಾಮೆ ನಿಲುವು ತಳೆಯಲು ಕಾರಣವಾದ ಸಂದರ್ಭಗಳನ್ನು ಸಿಎಂ ತಮ್ಮ ಆಪ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ

ಇದೇ ವೇಳೆ ಸಿಎಂ ಭೇಟಿಯಾದ ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಪ್ರತಿಕ್ರಿಯಿಸಿ, ‘ಮಾನವೀಯತೆ ಕಾರಣಕ್ಕೆ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೇನೆ. ಅವರು ಸುದೀರ್ಘ ರಾಜಕಾರಣ ಮಾಡಿದವರು, ಅವರಿಗೆ ಏನು ಮಾಡಬೇಕು ಎಂದು ಗೊತ್ತಿರುತ್ತದೆ, ಅವರ ನಿರ್ಧಾರಕ್ಕೆ ಒಳ್ಳೆಯದಾಗಲಿ’ ಎಂದಿದ್ದಾರೆ. ಒಟ್ಟಾರೆಯಾಗಿ ನಾಳೆ ಸಿಎಂ ನೀಡಲಿರುವ ಅಧಿಕೃತ ಹೇಳಿಕೆಯ ಮೇಲೆಯೇ ಇಡೀ ರಾಜ್ಯದ ದೃಷ್ಟಿ ನೆಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:31 pm, Wed, 27 May 26

Source link

ಹೀಗೆ ಔಟಾಗಿ, ಹೀಗೊಂದು ದಾಖಲೆ ಬರೆದ ಸಾಯಿ ಸುದರ್ಶನ್ – Kannada News | IPL 2026: Sai Sudharsan Scripts Unwanted History With Bizarre Hit Wicket

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 20 ಆಟಗಾರರು ಹಿಟ್​ ವಿಕೆಟ್ ಆಗಿ ಔಟಾಗಿದ್ದಾರೆ. ಈ ಇಪ್ಪತ್ತು ಆಟಗಾರರಲ್ಲಿ ಎರಡು ಬಾರಿ ಹಿಟ್ ವಿಕೆಟ್ ಆದ ಬ್ಯಾಟರ್ ಸಾಯಿ ಸುದರ್ಶನ್. ಹೀಗೆ ಎರಡು ಬಾರಿ ಹಿಟ್ ವಿಕೆಟ್ ಮೂಲಕ ಇನಿಂಗ್ಸ್ ಅಂತ್ಯಗೊಳಿಸಿ ಸಾಯಿ ಸುದರ್ಶನ್ ಅನಗತ್ಯ ದಾಖಲೆ ಬರೆದಿದ್ದಾರೆ.

ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೀರನ್ ಪೊಲಾರ್ಡ್ ಎಸೆದ ಬೌನ್ಸರ್ ಎಸೆತವನ್ನು ಪುಲ್ ಮಾಡುವ ಯತ್ನದಲ್ಲಿ ಸಾಯಿ ಸುದರ್ಶನ್ ಅವರ ಕೈಯಿಂದ ಬ್ಯಾಟ್ ಜಾರಿ ವಿಕೆಟ್‌ಗೆ ಬಡಿದಿತ್ತು.

ಇದೀಗ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಜೇಕಬ್ ಡಫಿ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬ್ಯಾಟ್ ಕೈ ಚೆಲ್ಲುವ ಮೂಲಕ ವಿಕೆಟ್ ಆಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ಹಿಟ್​ ವಿಕೆಟ್ ಆದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಹಿಟ್​ ವಿಕೆಟ್​ನೊಂದಿಗೆ ಸಾಯಿ ಸುದರ್ಶನ್ 14 ರನ್​ಗಳ ತಮ್ಮ ಇನಿಂಗ್ಸ್ ಅಂತ್ಯಗೊಳಿಸಿದ್ದಾರೆ. ಆ ಬಳಿಕ ಬಂದ ಜೋಸ್ ಬಟ್ಲರ್ 29 ರನ್​ ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ನಡುವೆ ಶುಭ್​​ಮನ್ ಗಿಲ್ (2) ಕ್ಲೀನ್ ಬೌಲ್ಡ್ ಆಗಿದ್ದರು. ಪರಿಣಾಮ ಆರ್​ಸಿಬಿ ನೀಡಿದ 255 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ ಗಳಿಸಿ ಆಲೌಟ್ ಆಗಿದೆ.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 92 ರನ್​ಗಳ ಅಮೋಘ ಜಯ ಸಾಧಿಸಿದೆ. ಈ ಜಯದೊಂದಿಗೆ ಆರ್​ಸಿಬಿ ತಂಡವು ಐಪಿಎಲ್ 2026 ರಲ್ಲಿ ಫೈನಲ್​ಗೇರಿದೆ.

ಮೇ 31 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ಅಥವಾ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

 

 

Source link

ರಣವೀರ್​​ಗೆ ಹೇರಿದ್ದು ಬ್ಯಾನ್ ಅಲ್ಲ, ಅಸಹಕಾರ ಅಷ್ಟೇ; ಸಿಕ್ತು ಸ್ಪಷ್ಟನೆ – Kannada News | Ranveer Singh’s Don 3 Exit: FWICE Clarifies ‘Non Cooperation’ Order, Not a Ban

ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ‘ಡಾನ್ 3’ ಚಿತ್ರಕ್ಕೆ ರಣವೀರ್ ಸಿಂಗ್ ನಾಯಕ ಎಂದು ಈ ಹಿಂದೆ ಅಧಿಕೃತವಾಗಿ ಘೋಷಿಸಲಾಗಿತ್ತು. ಚಿತ್ರದ ಪೂರ್ವ ಸಿದ್ಧತೆಗಳಿಗಾಗಿ ಚಿತ್ರತಂಡ ಈಗಾಗಲೇ 45 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿತ್ತು. ಆದರೆ, ರಣವೀರ್ ಸಿಂಗ್ ಕೊನೆಯ ಕ್ಷಣದಲ್ಲಿ ಇದ್ದಕ್ಕಿದ್ದಂತೆ ಸಿನಿಮಾದಿಂದ ಹೊರನಡೆದಿದ್ದಾರೆ. ಇದರಿಂದ ಭಾರೀ ನಷ್ಟ ಅನುಭವಿಸಿದ ಫರ್ಹಾನ್ ಅಖ್ತರ್, ಚಿತ್ರರಂಗದ ಪ್ರಮುಖ ಒಕ್ಕೂಟವಾದ ‘ಎಫ್‌ಡಬ್ಲ್ಯೂಐಸಿಇ’ (FWICE) ಸಂಸ್ಥೆಗೆ ದೂರು ನೀಡಿದ್ದಾರೆ.

ಈ ದೂರಿನ ಹಿನ್ನೆಲೆಯಲ್ಲಿ ತಮ್ಮ ವಾದವನ್ನು ಮಂಡಿಸಲು ರಣವೀರ್ ಸಿಂಗ್ ಅವರಿಗೆ FWICE ಒಕ್ಕೂಟವು ಮೂರು ಬಾರಿ ನೋಟಿಸ್ ನೀಡಿ ಕರೆಸಿತ್ತು. ಆದರೆ, ರಣವೀರ್ ಒಮ್ಮೆಯೂ ಹಾಜರಾಗಲಿಲ್ಲ. ಇದರಿಂದ ಬೇಸತ್ತ ಸಂಸ್ಥೆಯು ತನ್ನ ವ್ಯಾಪ್ತಿಗೆ ಬರುವ ನಿರ್ದೇಶಕರು, ಕ್ಯಾಮೆರಾಮನ್ ಮತ್ತು ತಾಂತ್ರಿಕ ಸಿಬ್ಬಂದಿಗೆ ರಣವೀರ್ ಸಿಂಗ್ ಜೊತೆ ಕೆಲಸ ಮಾಡದಂತೆ ‘ಅಸಹಕಾರ ಆದೇಶ’ ಹೊರಡಿಸಿತು. ಇದರಿಂದಾಗಿ ರಣವೀರ್ ಅವರನ್ನು ಚಿತ್ರರಂಗದಿಂದ ನಿಷೇಧಿಸಲಾಗಿದೆ ಎಂಬ ವದಂತಿ ಹಬ್ಬಿತ್ತು.

ನಿಷೇಧಿಸಿಲ್ಲ, ಇದು ಅಸಹಕಾರ ಆದೇಶ: ಸ್ಪಷ್ಟನೆ

ಈ ಗೊಂದಲಕ್ಕೆ ತೆರೆ ಎಳೆದಿರುವ FWICE ಮುಖ್ಯ ಸಲಹೆಗಾರ ಹಾಗೂ ಚಿತ್ರ ನಿರ್ಮಾಪಕ ಅಶೋಕ್ ಪಂಡಿತ್, “ನಾವು ಯಾವುದೇ ನಟನನ್ನು ನಿಷೇಧಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. “ಯಾರನ್ನೂ ನಿಷೇಧಿಸಲು ನಾವು ನ್ಯಾಯಾಲಯವಲ್ಲ. ಆದರೆ, ನಮ್ಮ ಒಕ್ಕೂಟದ ಅಡಿಯಲ್ಲಿ ಬರುವ 30 ಕ್ಕೂ ಹೆಚ್ಚು ವಿಭಾಗದವರಿಗೆ ಈ ವಿವಾದ ಬಗೆಹರಿಯುವವರೆಗೆ ರಣವೀರ್ ಜೊತೆ ಕೆಲಸ ಮಾಡದಂತೆ ಸೂಚಿಸಿದ್ದೇವೆ. ಅವರೊಂದಿಗೆ ಕೆಲಸ ಮಾಡಬೇಕೋ ಬೇಡವೋ ಎಂಬುದು ನಮ್ಮ ಸದಸ್ಯರ ನಿರ್ಧಾರ” ಎಂದು ಅವರು ವಿವರಿಸಿದ್ದಾರೆ.

ಕೊನೆಯ ಕ್ಷಣದಲ್ಲಿ ಸಿನಿಮಾದಿಂದ ಹಿಂದೆ ಸರಿಯುವ ಇಂತಹ ಧೋರಣೆಗಳು ಚಿತ್ರರಂಗದಲ್ಲಿ ತಪ್ಪು ಪ್ರವೃತ್ತಿಯನ್ನು ಹುಟ್ಟುಹಾಕುತ್ತವೆ ಎಂದು ಅಶೋಕ್ ಪಂಡಿತ್ ಕಳವಳ ವ್ಯಕ್ತಪಡಿಸಿದ್ದಾರೆ. ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್‌ನಂತಹ ದೊಡ್ಡ ಸಂಸ್ಥೆಗಳು ಕೋಟ್ಯಂತರ ರೂಪಾಯಿ ನಷ್ಟವನ್ನು ತಡೆದುಕೊಳ್ಳಬಲ್ಲವು. ಆದರೆ ಸಣ್ಣ ನಿರ್ಮಾಪಕರಿಗೆ ಇಂತಹ ಪರಿಸ್ಥಿತಿ ಎದುರಾದರೆ ಅವರು ಬರ್ಬಾದ್ ಆಗುತ್ತಾರೆ, ಕೆಲವೊಮ್ಮೆ ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೂ ತಲುಪುತ್ತಾರೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಡಾನ್ 3’ ವಿವಾದ: ಚಿತ್ರರಂಗದಿಂದ ಬ್ಯಾನ್ ಆದ ಬಳಿಕ ಮೌನ ಮುರಿದ ರಣವೀರ್ ಸಿಂಗ್‌

ಇಷ್ಟೆಲ್ಲಾ ಉದ್ವಿಗ್ನತೆಯ ನಡುವೆಯೂ ಈ ಸಮಸ್ಯೆಯನ್ನು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಬಹುದು ಎಂದು FWICE ನಂಬಿದೆ. ಪತ್ರಿಕಾಗೋಷ್ಠಿ ನಡೆಸುವ ಮುನ್ನ ರಣವೀರ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಲಾಗಿತ್ತು ಎಂದು ತಿಳಿಸಿರುವ ಅಶೋಕ್ ಪಂಡಿತ್, “ರಣವೀರ್ ಸಿಂಗ್ ಮತ್ತು ಫರ್ಹಾನ್ ಅಖ್ತರ್ ಒಟ್ಟಿಗೆ ಕುಳಿತು ಚರ್ಚಿಸಿದರೆ ಈ ವಿವಾದ ಸುಲಭವಾಗಿ ಇತ್ಯರ್ಥವಾಗುತ್ತದೆ, ಅದಕ್ಕಾಗಿ ಒಂದು ಸಭೆ ನಡೆಯಬೇಕಿದೆ” ಎಂದು ಆಶಾವಾದ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್ – Kannada News | Davanagere Cyber Crime: Navabit Crypto App Scam Mastermind Arrested From Tamil Nadu

ದಾವಣಗೆರೆ, ಮೇ 27: ಕಡಿಮೆ ಹಣ ಹೂಡಿಕೆ ಮಾಡಿ, ದಿನ ಬೆಳಗಾಗುವುದರೊಳಗೆ ಶ್ರೀಮಂತರಾಗಿ ಎಂಬ ಸೈಬರ್ ವಂಚಕರ ಆಮಿಷಕ್ಕೆ ದಾವಣಗೆರೆಯ ಬರೋಬ್ಬರಿ 13 ಸಾವಿರ ಜನ ಮೋಸಹೋಗಿದ್ದಾರೆ. ಕ್ರಿಪ್ಟೋ ಕರೆನ್ಸಿ (Crypto currency) ಹೆಸರಿನಲ್ಲಿ ನಕಲಿ ಆ್ಯಪ್ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಅಂತರರಾಜ್ಯ ಸೈಬರ್ ವಂಚಕರ ಜಾಲದ ಪ್ರಮುಖ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ಮಧುರೈ ನಿವಾಸಿ ಚೆಲ್ಲಪಂಡಿ ಸುಬ್ರಹ್ಮಣಿ (42) ಎಂದು ಗುರುತಿಸಲಾಗಿದೆ. ಈತನೊಂದಿಗೆ ಹರಿಯಾಣ, ಮಹಾರಾಷ್ಟ್ರ ಸೇರಿದಂತೆ ದೇಶದ ಹಲವೆಡೆ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಮುಖ್ಯಾಂಶಗಳು

  • ದಾವಣಗೆರೆಯಲ್ಲಿ ನಕಲಿ ಕ್ರಿಪ್ಟೋ ಆ್ಯಪ್ ವಂಚನೆ ಜಾಲದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
  • ಹತ್ತು ಸಾವಿರ ಹೂಡಿಕೆಗೆ ನಿತ್ಯ ನಾಲ್ಕುನೂರು ರೂಪಾಯಿ ಲಾಭದ ಆಮಿಷ ಒಡ್ಡಿದ್ದರು.
  • ಜಿಲ್ಲೆಯ ಹದಿಮೂರು ಸಾವಿರ ಬಡ ಜನರು ಕೋಟ್ಯಂತರ ರೂಪಾಯಿ ಕಳೆದುಕೊಂಡಿದ್ದಾರೆ.

ವಂಚನೆ ನೆಟ್‌ವರ್ಕ್ ಕೆಲಸ ಮಾಡಿದ್ದು ಹೇಗೆ?

ಖದೀಮರ ಗ್ಯಾಂಗ್ ನಾವಾಬಿಟ್‌.ಇನ್‌ (Navabit.in) ಎಂಬ ನಕಲಿ ಜಾಲತಾಣ ಹಾಗೂ ಆ್ಯಪ್ ರೂಪಿಸಿತ್ತು. ಇದರಲ್ಲಿ ಕನಿಷ್ಠ 10,000 ರೂಪಾಯಿ ಹೂಡಿಕೆ ಮಾಡಿದರೆ, ಅದನ್ನು ಕ್ರಿಪ್ಟೋ ಕರೆನ್ಸಿಯಾಗಿ ಪರಿವರ್ತಿಸಿ ದಿನಕ್ಕೆ 300 ರಿಂದ 400 ರೂಪಾಯಿ ಲಾಭಾಂಶ ನೀಡುವುದಾಗಿ ನಂಬಿಸಲಾಗಿತ್ತು. ಆರಂಭದಲ್ಲಿ ಜನರ ಬ್ಯಾಂಕ್ ಖಾತೆಗಳಿಗೆ ನಿಯಮಿತವಾಗಿ ಹಣವನ್ನು ಜಮೆ ಮಾಡಿ ನಂಬಿಕೆ ಗಳಿಸುತ್ತಿದ್ದರು. ಈ ಜಾಲಕ್ಕೆ ಸ್ಥಳೀಯರನ್ನೇ ದಾಳವಾಗಿ ಬಳಸಿಕೊಳ್ಳಲಾಗಿತ್ತು.

ಒತ್ತಡ ಹೇರಿ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದ ಗ್ಯಾಂಗ್

ಈ ವಂಚನೆ ಜಾಲದ ಆಳ ಎಷ್ಟು ಭೀಕರವಾಗಿದೆ ಎಂದರೆ, ಸ್ಥಳೀಯ ಶಾಲೆಯೊಂದರ ಮುಖ್ಯೋಪಾಧ್ಯಾಯಿನಿಯೇ ಈ ದಂಧೆಯಲ್ಲಿ ಭಾಗಿಯಾಗಿ ಜನರನ್ನು ಸೆಳೆಯುತ್ತಿದ್ದರು. ವಂಚನೆಗೆ ಒಳಗಾದ ಸಾದಿಕ್ ಎಂಬುವವರು ಮಾತನಾಡಿ, ಮುಖ್ಯೋಪಾಧ್ಯಾಯಿನಿ ಒತ್ತಡ ಹೇರಿ ನನ್ನಿಂದ ಮೊದಲು 10,000 ರೂ. ಹೂಡಿಕೆ ಮಾಡಿಸಿದ್ದರು. ಒಂದು ತಿಂಗಳು ದಿನಾಲೂ 300 ರೂ. ಬಂತು. ಆಮೇಲೆ ದೊಡ್ಡ ಆಫರ್ ಇದೆ ಎಂದು ನಂಬಿಸಿ 50 ಸಾವಿರದಿಂದ 5 ಲಕ್ಷದವರೆಗೆ ಹೂಡಿಕೆ ಮಾಡಿಸಿಕೊಂಡರು. ಸಾಲ ಮಾಡಿ ಹಣ ಹಾಕಿದ್ದೆವು, ಆದರೆ ರಂಜಾನ್ ಹಬ್ಬದ ವೇಳೆ ಹಣ ಡ್ರಾ ಮಾಡಲು ಹೋದಾಗ ಖಾತೆ ಬ್ಲಾಕ್ ಆಗಿತ್ತು ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ ಕರ್ನಾಟಕದಲ್ಲಿ ‘ಹೌಸ್ ಪಾರ್ಟಿ’ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

ಬಡ ಮಹಿಳೆಯರು, ಕೂಲಿ ಕಾರ್ಮಿಕರೇ ಇವರ ಟಾರ್ಗೆಟ್!

ಈ ಸೈಬರ್ ಖದೀಮರು ಪ್ರಮುಖವಾಗಿ ಅಮಾಯಕ ಬಡ ಮಹಿಳೆಯರು, ದಿನಗೂಲಿ ನೌಕರರು ಮತ್ತು ಸಣ್ಣಪುಟ್ಟ ವ್ಯಾಪಾರಿಗಳನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದರು. ದಾವಣಗೆರೆ ಜಿಲ್ಲೆಯೊಂದರಲ್ಲೇ ಸುಮಾರು 13,000 ಜನ ಈ ಆ್ಯಪ್ ನಂಬಿ ಹಣ ಕಳೆದುಕೊಂಡಿದ್ದಾರೆ. ಈ ಕುರಿತು ಏಪ್ರಿಲ್ 4 ರಂದೇ ದಾವಣಗೆರೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಚುರುಕುಗೊಳಿಸಿರುವ ಪೊಲೀಸರು ತಮಿಳುನಾಡಿನಲ್ಲಿ ಮುಖ್ಯ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದು, ಸ್ಥಳೀಯ ದಾವಣಗೆರೆಯ ಮೂವರು ಆರೋಪಿಗಳು ಸೇರಿದಂತೆ ಉಳಿದ ಖದೀಮರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ಎಂದ ವಿಜಯೇಂದ್ರ – Kannada News | Vijayendra Predicts Early Karnataka Elections Amidst CM Resignation Speculation

ಶಿವಮೊಗ್ಗ, ಮೇ 27: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ರಾಜ್ಯ ರಾಜಕೀಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಶಿವಮೊಗ್ಗದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅದು ಕೇವಲ ತಾತ್ಕಾಲಿಕವಾಗಿದ್ದು, ಅವಧಿ ಪೂರ್ವ ಚುನಾವಣೆ ನಿಶ್ಚಿತ ಎಂದು ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಮತ್ತು ಅಸಮಾಧಾನದಿಂದ ರಾಜ್ಯದ ಆಡಳಿತ ಕುಸಿದಿದ್ದು, ಇದು ಬಿಜೆಪಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಸಿದ್ದರಾಮಯ್ಯನವರು ಇಷ್ಟು ಸುಲಭವಾಗಿ ರಾಜೀನಾಮೆ ನೀಡುತ್ತಾರೆ ಎಂದು ಭಾವಿಸಿರಲಿಲ್ಲ ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version