ರಣವೀರ್ಗೆ ಹೇರಿದ್ದು ಬ್ಯಾನ್ ಅಲ್ಲ, ಅಸಹಕಾರ ಅಷ್ಟೇ; ಸಿಕ್ತು ಸ್ಪಷ್ಟನೆ – Kannada News | Ranveer Singh’s Don 3 Exit: FWICE Clarifies ‘Non Cooperation’ Order, Not a Ban
ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ‘ಡಾನ್ 3’ ಚಿತ್ರಕ್ಕೆ ರಣವೀರ್ ಸಿಂಗ್ ನಾಯಕ ಎಂದು ಈ ಹಿಂದೆ ಅಧಿಕೃತವಾಗಿ ಘೋಷಿಸಲಾಗಿತ್ತು. ಚಿತ್ರದ ಪೂರ್ವ ಸಿದ್ಧತೆಗಳಿಗಾಗಿ ಚಿತ್ರತಂಡ ಈಗಾಗಲೇ 45 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿತ್ತು. ಆದರೆ, ರಣವೀರ್ ಸಿಂಗ್ ಕೊನೆಯ ಕ್ಷಣದಲ್ಲಿ ಇದ್ದಕ್ಕಿದ್ದಂತೆ ಸಿನಿಮಾದಿಂದ ಹೊರನಡೆದಿದ್ದಾರೆ. ಇದರಿಂದ ಭಾರೀ ನಷ್ಟ ಅನುಭವಿಸಿದ ಫರ್ಹಾನ್ ಅಖ್ತರ್, ಚಿತ್ರರಂಗದ ಪ್ರಮುಖ ಒಕ್ಕೂಟವಾದ ‘ಎಫ್‌ಡಬ್ಲ್ಯೂಐಸಿಇ’ (FWICE) ಸಂಸ್ಥೆಗೆ ದೂರು ನೀಡಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ತಮ್ಮ ವಾದವನ್ನು ಮಂಡಿಸಲು ರಣವೀರ್…