‘ಪೆದ್ದಿ’ ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ – Kannada News | Ram Charan’s ‘Peddi’ Movie Release Date and Shivanna’s Role: Japan Release Delayed?

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಜೂನ್ 4 ರಂದು ಈ ಚಿತ್ರ ವಿಶ್ವಾದ್ಯಂತ ಅತ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದ್ದು, ಚಿತ್ರತಂಡ ಸರಣಿ ಇವೆಂಟ್‌ಗಳು ಹಾಗೂ ಪ್ರೆಸ್ ಮೀಟ್‌ಗಳ ಮೂಲಕ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಮ್ ಚರಣ್ ಅಭಿಮಾನಿಗಳಿಗೆ ಸಣ್ಣದೊಂದು ಬೇಸರದ ಸುದ್ದಿಯೊಂದು ಹೊರಬಿದ್ದಿದೆ.

‘ಪೆದ್ದಿ’ ಚಿತ್ರವನ್ನು ಭಾರತದ ಜೊತೆಜೊತೆಗೆ ಜಪಾನ್‌ನಲ್ಲೂ ಏಕಕಾಲಕ್ಕೆ ತೆರೆಗೆ ತರಲು ಚಿತ್ರತಂಡ ಭರ್ಜರಿ ಯೋಜನೆ ರೂಪಿಸಿತ್ತು. ‘ಆರ್‌ಆರ್‌ಆರ್‌’ ಚಿತ್ರದ ನಂತರ ಜಪಾನ್‌ನಲ್ಲಿ ರಾಮ್ ಚರಣ್‌ಗೆ ದೊಡ್ಡ ಮಟ್ಟದ ಫ್ಯಾನ್ ಬೇಸ್ ಸೃಷ್ಟಿಯಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಕೆಲವು ಅನಿವಾರ್ಯ ಕಾರಣಗಳಿಂದಾಗಿ ಸದ್ಯಕ್ಕೆ ಜಪಾನ್ ರಿಲೀಸ್ ಅನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ಜಪಾನ್ ದೇಶದ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಹೊಸ ಬಿಡುಗಡೆ ದಿನಾಂಕಕ್ಕಾಗಿ ಕಾಯುತ್ತಿದ್ದಾರೆ. ಇತ್ತ ಭಾರತದ ಅಭಿಮಾನಿಗಳು ಕೂಡ ಬೇಸರ ವ್ಯಕ್ತಪಡಿಸಿದ್ದು, ಒಟ್ಟಿಗೆ ರಿಲೀಸ್ ಆಗಿದ್ದರೆ ಬಾಕ್ಸ್ ಆಫೀಸ್‌ನಲ್ಲಿ ಇನ್ನೂ ದೊಡ್ಡ ದಾಖಲೆ ಬರೆಯಬಹುದಿತ್ತು ಎಂಬ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಈ ಚಿತ್ರದ ಮತ್ತೊಂದು ದೊಡ್ಡ ವಿಶೇಷತೆ ಎಂದರೆ ಕನ್ನಡದ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಅಬ್ಬರಿಸಿದ್ದಾರೆ. ಶಿವಣ್ಣ ಅವರ ಖಡಕ್ ಎಂಟ್ರಿ ಮತ್ತು ರಾಮ್ ಚರಣ್ ಜೊತೆಗಿನ ಸ್ಕ್ರೀನ್ ಶೇರಿಂಗ್ ಈ ಸ್ಪೋರ್ಟ್ಸ್ ಆಕ್ಷನ್ ಡ್ರಾಮಾದ ಮುಖ್ಯ ಹೈಲೈಟ್ ಆಗಿರಲಿದ್ದು, ಕನ್ನಡ ಮತ್ತು ತೆಲುಗು ಎರಡೂ ಚಿತ್ರರಂಗದ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು?

ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ಅವರು ಈ ಚಿತ್ರವನ್ನು ಅದ್ಧೂರಿ ಬಜೆಟ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಸೂಪರ್ ಹಿಟ್ ‘ಉಪ್ಪೇನಾ’ ಚಿತ್ರದ ಖ್ಯಾತಿಯ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ರಾಮ್ ಚರಣ್‌ಗೆ ಜೋಡಿಯಾಗಿ ಬಾಲಿವುಡ್ ಸುಂದರಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಚಿತ್ರದಲ್ಲಿ ಕನ್ನಡದ ಶಿವರಾಜ್‌ಕುಮಾರ್ ಜೊತೆಗೆ ಜಗಪತಿ ಬಾಬು, ದಿವ್ಯೇಂದು ಶರ್ಮ ಮತ್ತು ಬೊಮನ್ ಇರಾನಿ ಅವರಂತಹ ಘಟಾನುಘಟಿ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಡಿಕೆ ಶಿವಕುಮಾರ್ ಸಿಎಂ ಹುದ್ದೆಗೆ ಅರ್ಹರು’: ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ! – Kannada News | Next CM of Karnataka: Team DK Launches Massive Online Poster Campaign Demanding DK Shivakumar as Chief Minister

ಬೆಂಗಳೂರು, ಮೇ 27: ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಅಧಿಕಾರ ಹಂಚಿಕೆ ಬಹುತೇಕ ಫೈನಲ್ ಆದಂತಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಮಂಗಳವಾರ ತಡರಾತ್ರಿವರೆಗೂ ಸಭೆ ನಡೆಸಿದ್ದಾರೆ. ಮಧ್ಯರಾತ್ರಿ 2 ಗಂಟೆಯವರೆಗೂ ನಡೆದ ಈ ಸಭೆಯಲ್ಲಿ ಮುಂದಿನ ರಾಜಕೀಯ ನಡೆಗಳು ಹಾಗೂ ಹೈಕಮಾಂಡ್‌ನೊಂದಿಗಿನ ಮಾತುಕತೆಗಳ ಬಗ್ಗೆ ಚರ್ಚಿಸಲಾಗಿದೆ. ಸಿಎಂ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಆಪ್ತರ ಬಳಗದಲ್ಲಿ ಆತಂಕ ಮೂಡಿಸಿದ್ದು, ರಾಜಕೀಯ ಭವಿಷ್ಯದ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ.

ಅನಿರೀಕ್ಷಿತ ಬೆಳವಣಿಗೆಯಾಗಿ ಸಚಿವ ಹೆಚ್.ಕೆ. ಪಾಟೀಲ್ ಗದಗದಲ್ಲಿ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ದಿಢೀರನೆ ಬೆಂಗಳೂರಿಗೆ ಆಗಮಿಸಿದ್ದಾರೆ. ಇತ್ತೀಚಿನ ಈ ಬದಲಾವಣೆಗಳಿಂದ ಸಿಎಂ ಆಪ್ತ ಬಳಗದಲ್ಲಿ ಆಘಾತ ಮೂಡಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಇದರ ಜೊತೆಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರೆಂದು ಬಿಂಬಿಸುವ ಪೋಸ್ಟರ್ ಅಭಿಯಾನವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರಂಭವಾಗಿದೆ. ‘ಟೀಮ್ ಡಿಕೆ’ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ಈ ಅಭಿಯಾನ ನಡೆಯುತ್ತಿದ್ದು, ಡಿ.ಕೆ. ಶಿವಕುಮಾರ್ ಅವರ 45 ವರ್ಷಗಳ ರಾಜಕೀಯ ಅನುಭವ ಮತ್ತು ತಳಮಟ್ಟದಿಂದ ಬೆಳೆದು ಬಂದ ಹಾದಿಯನ್ನು ಉಲ್ಲೇಖಿಸಿ, ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತರೆಂದು ಪ್ರಚಾರ ಮಾಡಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಂಟು ವರ್ಷದಿಂದ ಜೊತೆಯಲ್ಲಿದ್ದ ಅಂಧ ಮಹಿಳೆಯನ್ನೇ ದೋಚಿದ ದಂಪತಿ! – Kannada News | Couple Arrested for Stealing Cash and Gold from Visually Impaired Friend

ವಶಪಡಿಸಿಕೊಂಡ ಚಿನ್ನಾಭರಣImage Credit source: Indian Express

ಬೆಂಗಳೂರು, ಮೇ 27: ಜೊತೆಯಲ್ಲೇ ಇದ್ದು ನಂಬಿಸಿ ದ್ರೋಹ ಬಗೆಯುವ ಕಲಿಗಾಲ ಇದು ಎನ್ನುವುದಕ್ಕೆ ಬೆಂಗಳೂರಿನಲ್ಲೊ ನಡೆದ ಈ ಘಟನೆಯೇ ಸಾಕ್ಷಿ. ಕಳೆದ 8 ವರ್ಷಗಳಿಂದ ಜೊತೆಯಲ್ಲಿ, ಒಂದೇ ಸೂರಿನಡಿ ವಾಸವಿದ್ದ ಅಂಧ ಮಹಿಳೆಯ ಮನೆಯಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ (Gold Jewels) ಹಾಗೂ ನಗದನ್ನು ದೋಚಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಎಂಬಿಎ ಪದವೀಧರೆ ಶರ್ಮಿಳಾ ಶೇಷಾದ್ರಿ (50) ಮತ್ತು ಆಕೆಯ ಪತಿ ಡಿಪ್ಲೊಮಾ ಪದವೀಧರ ಗಣೇಶ್ ಕುಮಾರ್ (52) ಬಂಧಿತ ಆರೋಪಿಗಳು.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಅಂಧ ಗೆಳತಿಯ ಒಡವೆ, ನಗದು ದೋಚಿದ ದಂಪತಿಯನ್ನು ಬಂಧಿಸಲಾಗಿದೆ.
  • ಕಪಾಟಿನ ಬೀಗ ಮುರಿದು ನಲವತ್ತೊಂಬತ್ತು ಲಕ್ಷ ರೂಪಾಯಿ ಲೂಟಿ ಮಾಡಿದ್ದರು.
  • ಪೊಲೀಸರು ಆರೋಪಿಗಳಿಂದ ಮೂವತ್ತೈದು ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಬ್ಯಾಂಕ್ ಲಾಕರ್‌ನಿಂದ ಹಣ ತಂದಿದ್ದೇ ಮುಳುವಾಯ್ತು!

ದೃಷ್ಟಿ ದೋಷವಿರುವ ಸಂತ್ರಸ್ತೆ ಕಳೆದ ಎಂಟು ವರ್ಷಗಳಿಂದ ಬಿಇಎಂಎಲ್ ಲೇಔಟ್ನ ಈ ದಂಪತಿಯ ಮನೆಯಲ್ಲೇ ವಾಸವಿದ್ದರು. ಜೂನ್ 2024 ರಲ್ಲಿ ಸಂತ್ರಸ್ತೆ ತನ್ನ ಚಿನ್ನಾಭರಣಗಳನ್ನು ಒಂದು ಬ್ಯಾಂಕ್ ಲಾಕರ್‌ನಿಂದ ಮತ್ತೊಂದು ಲಾಕರ್‌ಗೆ ವರ್ಗಾಯಿಸುವ ಸಲುವಾಗಿ ಮನೆಗೆ ತಂದಿದ್ದರು. ಒಟ್ಟು ಚಿನ್ನಾಭರಣಗಳ ಜೊತೆಗೆ ಭಾರಿ ಮೊತ್ತದ 49.50 ಲಕ್ಷ ರೂಪಾಯಿ ನಗದನ್ನು ಮನೆಯ ಕಪಾಟಿನಲ್ಲಿ ಸುರಕ್ಷಿತವಾಗಿ ಇಟ್ಟಿದ್ದರು.

ಕೆಲ ದಿನಗಳ ನಂತರ ಸಂತ್ರಸ್ತೆ ತನ್ನ ಒಡವೆಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಮುಂದಾದಾಗ ಕಪಾಟಿನ ಕೀ ಕಾಣೆಯಾಗಿತ್ತು. ಗಾಬರಿಗೊಂಡ ಆಕೆ ಕೀ ತಯಾರಿಸುವವರನ್ನು ಕರೆಯಿಸಲು ದಂಪತಿಗೆ ಕೇಳಿಕೊಂಡಿದ್ದಾರೆ. ಆದರೆ, ದಂಪತಿ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅನುಮಾನಗೊಂಡ ಸಂತ್ರಸ್ತೆ ತಾವೇ ಸ್ವತಃ ಕೀ ತಯಾರಕನನ್ನು ಕರೆಯಿಸಿ ಕಪಾಟು ಓಪನ್ ಮಾಡಿಸಿದಾಗ ಒಳಗಿದ್ದ ನಗದು ಮತ್ತು ಚಿನ್ನಾಭರಣಗಳೆಲ್ಲವೂ ಮಾಯವಾಗಿದ್ದವು.

‘ಹಣ ಕೊಡಲ್ಲ, ಏನ್ ಮಾಡ್ಕೊಳ್ತಿಯೋ ಮಾಡ್ಕೋ’ ಎಂದ ಖದೀಮರು!

ಹಣದ ಬಗ್ಗೆ ಸಂತ್ರಸ್ತೆ ದಂಪತಿಯನ್ನು ಪ್ರಶ್ನಿಸಿದಾಗ, ನಾವು ಆರ್ಥಿಕ ಸಂಕಷ್ಟದಲ್ಲಿದ್ದೆವು, ಹಾಗಾಗಿ ನಿನ್ನ ಹಣವನ್ನು ನಮ್ಮ ಬಿಸಿನೆಸ್‌ಗೆ ಬಳಸಿಕೊಂಡಿದ್ದೇವೆ. ನಿನಗೆ ನಗದು ಅಥವಾ ಚಿನ್ನ ಯಾವುದನ್ನೂ ವಾಪಸ್ ಕೊಡುವುದಿಲ್ಲ ಎಂದು ಉದ್ಧಟತನದ ಉತ್ತರ ನೀಡಿದ್ದಾರೆ. ಇದರಿಂದ ನೊಂದ ಅಂಧ ಮಹಿಳೆ ತಕ್ಷಣ ಪೊಲೀಸರ ಮೊರೆ ಹೋಗಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ ಮಂಡ್ಯ: ಪತ್ನಿಗೆ ಶ್ರೀಮಂತಿಕೆ ತೋರಿಸಲು ಕಳ್ಳತನಕ್ಕಿಳಿದ ಪತಿ! ಕೃತ್ಯ ನಿಲ್ಲಿಸಿದ ವರ್ಷದ ಬಳಿಕ ಮೂವರು ಸಹಚರರೊಂದಿಗೆ ಅಂದರ್

35 ಲಕ್ಷ ರೂ. ಮೌಲ್ಯದ ಚಿನ್ನ ವಶ

ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಕಳವು ಮಾಡಿದ ಚಿನ್ನದ ಒಂದು ಭಾಗವನ್ನು ಹಲಸೂರಿನ ಪರಿಚಯಸ್ಥನಿಗೆ ನೀಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಪೊಲೀಸರು ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 232 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನುಳಿದ ನಗದು ಪತ್ತೆಗಾಗಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತನಿಖೆಯನ್ನು ಚುರುಕುಗೊಳಿಸಲು ಸೂಚಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಡ್ಯ: ಪತ್ನಿಗೆ ಶ್ರೀಮಂತಿಕೆ ತೋರಿಸಲು ಕಳ್ಳತನಕ್ಕಿಳಿದ ಪತಿ! ಕೃತ್ಯ ನಿಲ್ಲಿಸಿದ ವರ್ಷದ ಬಳಿಕ ಮೂವರು ಸಹಚರರೊಂದಿಗೆ ಅಂದರ್ – Kannada News | Mandya Crime News: Husband Turns Chain Snatcher to Show Off Status to Wife; 4 Arrested with Gold Worth Rs 70 Lakhs

ಆರೋಪಿಗಳಾದ ಗುರು, ಮಾದೇಶ, ನಂಜೇಗೌಡ, ರೋಹಿತ್Image Credit source: tv9

ಮಂಡ್ಯ, ಮೇ 27: ಪತ್ನಿಯ ಮುಂದೆ ದೊಡ್ಡ ಶ್ರೀಮಂತನಂತೆ ಬದುಕು ನಡೆಸಬೇಕೆಂಬ ಹಪಾಹಪಿಗೆ ಬಿದ್ದ ವ್ಯಕ್ತಿಯೊಬ್ಬ ಮೂವರು ಸಹಚರರೊಂದಿಗೆ ಸೇರಿ ಸರಗಳ್ಳತನಕ್ಕಿಳಿದು, ಕೊನೆಗೂ ಪೊಲೀಸರ ಅತಿಥಿಯಾಗಿರುವ ವಿಚಿತ್ರ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕಿರುಗಾವಲು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರ್-ಜಿಲ್ಲಾ ಖದೀಮರ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದ ಪ್ರಮುಖ ಆರೋಪಿ ಗುರುಪ್ರಸಾದ್ ಅಲಿಯಾಸ್ ಗುರು (36), ರೋಹಿತ್ ಅಲಿಯಾಸ್ ಗೆದ್ವಾ (20), ನಂಜೇಗೌಡ ಅಲಿಯಾಸ್ ಕಾಶಿ (19) ಹಾಗೂ ಮಣಿಗೆರೆ ಗ್ರಾಮದ ಮಾದೇಶ ಅಲಿಯಾಸ್ ಮಾದ (20) ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಬರೋಬ್ಬರಿ 70 ಲಕ್ಷ ರೂಪಾಯಿ ಮೌಲ್ಯದ 475 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮುಖ್ಯಾಂಶಗಳು

  • ಹೆಂಡತಿಯ ಎದುರು ಶ್ರೀಮಂತನೆಂದು ಪೋಸ್ ಕೊಡಲು ಹಗಲು-ರಾತ್ರಿ ಸರಗಳ್ಳತನ ಮಾಡುತ್ತಿದ್ದ ಕಿಂಗ್‌ಪಿನ್ ಗುರುಪ್ರಸಾದ್.
  • ಒಂದು ವರ್ಷದ ಹಿಂದೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಕಳ್ಳತನದ ದಂಧೆ ಬಿಟ್ಟು ಸೈಲೆಂಟ್ ಆಗಿದ್ದ ಮುಖ್ಯ ಆರೋಪಿ.
  • ಮಾರ್ಚ್ 30ರಂದು ಸಹಚರರು ನಡೆಸಿದ ಒಂಟಿ ಮಹಿಳೆಯ ಸರಗಳ್ಳತನದ ಸಿಸಿಟಿವಿ ಜಾಡು ಹಿಡಿದಾಗ ಹಳೆಯ ರಹಸ್ಯ ಬಯಲು.

ಸಿಸಿಟಿವಿ ದೃಶ್ಯದಿಂದ ಸಿಕ್ಕಿಬಿದ್ದ ಖದೀಮರು

ಮುಖ್ಯ ಆರೋಪಿ ಗುರುಪ್ರಸಾದ್ ಪತ್ನಿಗೆ ತಾನು ಕೋಟ್ಯಧಿಪತಿ ಎಂಬಂತೆ ತೋರಿಸಿಕೊಳ್ಳಲು ಈ ಕಳ್ಳತನದ ಹಾದಿ ಹಿಡಿದಿದ್ದ. ಆದರೆ ಕಳೆದ ಒಂದು ವರ್ಷದ ಹಿಂದೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತನ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಳು. ಪತ್ನಿಯ ಸಾವಿನ ಬಳಿಕ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದ್ದ ಗುರುಪ್ರಸಾದ್, ಕಳ್ಳತನದ ದಂಧೆಯನ್ನು ಸಂಪೂರ್ಣವಾಗಿ ನಿಲ್ಲಿಸಿ ಸುಮ್ಮನಾಗಿದ್ದ.

ಆದರೆ ಆತನ ಗ್ಯಾಂಗ್‌ನಲ್ಲಿದ್ದ ಇನ್ನುಳಿದ ಸಹಚರರು ಮಾತ್ರ ತಮ್ಮ ಹಳೇ ಚಾಳಿಯನ್ನು ಮುಂದುವರಿಸಿದ್ದರು. ಕಳೆದ ಮಾರ್ಚ್ 30ರಂದು ಜಮೀನಿನ ಬಳಿ ಒಂಟಿಯಾಗಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಟಾರ್ಗೆಟ್ ಮಾಡಿ ಈ ಗ್ಯಾಂಗ್ ಚಿನ್ನದ ಸರವನ್ನು ದೋಚಿ ಪರಾರಿಯಾಗಿತ್ತು. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದರು. ಕಾರ್ಯಾಚರಣೆಗೆ ಇಳಿದ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ (CCTV) ದೃಶ್ಯಾವಳಿಗಳ ಜಾಡು ಹಿಡಿದು ಮೊದಲು ರೋಹಿತ್ ಮತ್ತು ನಂಜೇಗೌಡನನ್ನು ವಶಕ್ಕೆ ಪಡೆದರು. ಪೊಲೀಸರ ಚಾರಣೆ ವೇಳೆ ಈ ಇಬ್ಬರು ಆರೋಪಿಗಳು, ಒಂದು ವರ್ಷದ ಹಿಂದೆ ತಾವೆಲ್ಲರೂ ಗುರುಪ್ರಸಾದ್ ನೇತೃತ್ವದಲ್ಲಿ ನಡೆಸಿದ್ದ ಸಾಲು ಸಾಲು ಕಳ್ಳತನಗಳ ಜಾತಕವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಮಂಡ್ಯ: ನಾಗಮಂಗಲ ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ

ಮಂಡ್ಯ ಮತ್ತು ಮೈಸೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇವರು ಸುಮಾರು 16ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ನಾಲ್ಕೂ ಜನ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಪೇಪರ್ ರೋಲ್ ತಯಾರಿಸುವ ಯಂತ್ರದಲ್ಲಿ ಸಿಲುಕಿ ಕಾರ್ಮಿಕ ಸಾವು – Kannada News | Fatal Industrial Accident Claims Worker’s Life After Conveyor Belt Mishap

ಪೇಪರ್ ರೋಲ್ ತಯಾರಿಸುವ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರ್ಮಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಘಟಕದ ಒಳಗಿದ್ದ ಚಲಿಸುವ ಕನ್ವೇಯರ್ ಬೆಲ್ಟ್ ಒಂದಕ್ಕೆ ಕಾರ್ಮಿಕ ಸಿಲುಕಿಕೊಂಡು ಈ ಅವಘಡ ಸಂಭವಿಸಿದೆ. ಅವರ ಬಟ್ಟೆ ಕನ್ವೇಯರ್‌ನ ರೋಲರ್‌ಗಳ ನಡುವೆ ಸಿಲುಕಿಕೊಂಡಿದ್ದರಿಂದ,ಆ ಹಾಳೆಗಳ ಜತೆ ಅವರನ್ನು ಕೂಡ ಯಂತ್ರ ಎಳೆದಿದೆ. ಪರಿಣಾಮವಾಗಿ, ಕಾಗದದ ಹಾಳೆಗಳನ್ನು ಸಂಸ್ಕರಿಸುವ ಭಾರೀ ಯಂತ್ರೋಪಕರಣಗಳ ನಡುವೆ ಸಿಲುಕಿ ಅವರು ನಜ್ಜುಗುಜ್ಜಾಗಿದ್ದಾರೆ.  ಸ್ಥಳದಲ್ಲಿದ್ದ ಇತರ ಸಿಬ್ಬಂದಿ ತಕ್ಷಣವೇ ಧಾವಿಸಿ ಬಂದರಾದರೂ, ಯಂತ್ರದ ತೀವ್ರ ಒತ್ತಡಕ್ಕೆ ಸಿಲುಕಿದ್ದ ಕಾರ್ಮಿಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೈಗಾರಿಕಾ ವಲಯದಲ್ಲಿ ಸುರಕ್ಷತಾ ನಿಯಮಗಳ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದ್ದು, ಸದ್ಯ ತನಿಖೆ ಪ್ರಗತಿಯಲ್ಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೇರಳಂನ ಮಾಜಿ ಸಿಎಂ ಪಿಣರಾಯಿ ನಿವಾಸದ ಮೇಲೆ ಇಡಿ ದಾಳಿ, ಪುತ್ರಿಯ ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖೆ ಬಿಗಿ – Kannada News | Pinarayi Vijayan’s Daughter Veena Under ED Scanner in CMRL Money Laundering Case

ತಿರುವನಂತಪುರ, ಮೇ 27: ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ನಿವಾಸ ಸೇರಿ 10 ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಕೊಚ್ಚಿ ಮಿನರಲ್ಸ್​ ಮತ್ತು ರೂಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಭಾರಿ ಆ್ಯಕ್ಷನ್​ಗೆ ಇಳಿದಿದೆ. ಈ ಪ್ರಕರಣದ ಇಡಿ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಈ ದಾಳಿಗಳು ನಡೆದಿರುವುದು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದೆ.

ದಾಳಿಗೆ ಪ್ರಮುಖ ಕಾರಣವೇನು?
ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಒಡೆತನದ ‘ಎಕ್ಸಲಾಜಿಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು, ಸಿಎಂಆರ್‌ಎಲ್ ಕಂಪನಿಗೆ ಯಾವುದೇ ರೀತಿಯ ಸೇವೆಗಳನ್ನು ನೀಡದಿದ್ದರೂ ಸಹ ಅವರಿಂದ ದೊಡ್ಡ ಮೊತ್ತದ ಹಣವನ್ನು ಪಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಆರ್ಥಿಕ ಅಕ್ರಮಗಳ ಕುರಿತಾಗಿಯೇ ಇಡಿ ಈಗ ತನಿಖೆ ನಡೆಸುತ್ತಿದೆ.

ಇದರ ಭಾಗವಾಗಿ, ಕೋಳಿಕ್ಕೋಡ್‌ನಲ್ಲಿರುವ ಮಾಜಿ ಸಚಿವ ಹಾಗೂ ಪ್ರಸ್ತುತ ಶಾಸಕರಾಗಿರುವ ಪಿ.ಎ. ಮುಹಮ್ಮದ್ ರಿಯಾಸ್ ಅವರ ಮನೆ ಮೇಲೆಯೂ ಇಡಿ ದಾಳಿ ನಡೆಸಿದೆ. ಇವರು ಟಿ. ವೀಣಾ ಅವರ ಪತಿಯಾಗಿದ್ದಾರೆ.

ಕೈಗಾರಿಕಾ ರಾಸಾಯನಿಕಗಳನ್ನು ತಯಾರಿಸುವ ಕೇರಳ ಮೂಲದ CMRL ಕಂಪನಿಯು ಲಂಚ ಮತ್ತು ಮನಿ ಲಾಂಡರಿಂಗ್ ಆರೋಪದಡಿಯಲ್ಲಿ ಸಿಲುಕಿದೆ. 2017 ಮತ್ತು 2020 ರ ನಡುವೆ ವೀಣಾ ಅವರ ಎಕ್ಸಾಲಾಜಿಕ್ ಸಂಸ್ಥೆಯು ಈ ಕಂಪನಿಯಿಂದ ಯಾವುದೇ ಕೆಲಸ ಮಾಡಿಕೊಡದಿದ್ದರೂ 1.72 ಕೋಟಿ ರೂ. ಪಡೆದಿದೆ ಎಂದು 2023 ರ ಆಗಸ್ಟ್‌ನಲ್ಲಿ ಮೊದಲ ಬಾರಿಗೆ ಬಹಿರಂಗವಾಗಿತ್ತು.

ಮತ್ತಷ್ಟು ಓದಿ: ದಶಕದ ಬಳಿಕ ಕೇರಳಂನಲ್ಲಿ ‘ಕೈ’ ಪರ್ವ: ಪಿಣರಾಯಿ ವಿಜಯನ್ ಕೋಟೆ ಧ್ವಂಸ, ಪಟ್ಟಾಭಿಷೇಕಕ್ಕೆ ಕಾಂಗ್ರೆಸ್ ಸಜ್ಜು

ನಂತರ ಕೇಂದ್ರ ಸರ್ಕಾರದ ಗಂಭೀರ ವಂಚನೆ ತನಿಖಾ ಕಚೇರಿ (SFIO) ನಡೆಸಿದ ವಿವರವಾದ ತನಿಖೆಯಲ್ಲಿ, ವೀಣಾ ಅವರ ಸಂಸ್ಥೆಯು ಒಟ್ಟಾರೆಯಾಗಿ 2.70 ಕೋಟಿ ರೂ.ಗಳನ್ನು ಪಡೆದಿರುವುದು ಪತ್ತೆಯಾಗಿದೆ. SFIO ತನ್ನ 160 ಪುಟಗಳ ದೂರಿನಲ್ಲಿ ಟಿ. ವೀಣಾ, ಸಿಎಂಆರ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಶಶಿಧರನ್ ಕರ್ತಾ ಸೇರಿದಂತೆ 25 ಜನರನ್ನು ಪ್ರಮುಖ ಆರೋಪಿಗಳೆಂದು ಹೆಸರಿಸಿದೆ.

ಕಳೆದ ಏಪ್ರಿಲ್ 2025 ರಲ್ಲಿ, ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಅಕ್ರಮ ಪಾವತಿಗಳಿಗೆ ಸಂಬಂಧಿಸಿದಂತೆ ಟಿ. ವೀಣಾ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮೋದನೆ ನೀಡಿತ್ತು. ಪ್ರಸ್ತುತ ವೀಣಾ ಅವರ ಮೇಲೆ ಕಾರ್ಪೊರೇಟ್ ವಂಚನೆಗೆ ಸಂಬಂಧಿಸಿದ ಕಂಪನಿ ಕಾಯ್ದೆ 2013 ರ ಸೆಕ್ಷನ್ 447 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಈ ಅಪರಾಧ ಸಾಬೀತಾದರೆ ಕನಿಷ್ಠ ಆರು ತಿಂಗಳಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ವಂಚನೆಯ ಮೊತ್ತದ ಮೂರು ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಈ ಹಗರಣದಲ್ಲಿ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಹೆಸರನ್ನು ನೇರವಾಗಿ ಆರೋಪಿ ಎಂದು ಉಲ್ಲೇಖಿಸದಿದ್ದರೂ, ಅವರ ಮಗಳು ಮತ್ತು ಅಳಿಯ ಇಡಿ ತನಿಖೆಯ ವ್ಯಾಪ್ತಿಗೆ ಬಂದಿರುವುದು ಕೇರಳ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಿನ ಹೆಸರಾಂತ ಆಸ್ಪತ್ರೆಯಲ್ಲಿ ಗರ್ಭಿಣಿ ಶೌಚಾಲಯದಲ್ಲಿದ್ದಾಗ ವಿಡಿಯೋ ಮಾಡಿದ ಸಿಬ್ಬಂದಿ – Kannada News | Bengaluru Hospital Restroom Incident: Pregnant Woman’s Privacy Violated; Safety Concerns

ಬೆಂಗಳೂರು, ಮೇ.27 : ರೋಗಿಗಳ ಪ್ರಾಣ ರಕ್ಷಿಸಬೇಕಾದ ಆಸ್ಪತ್ರೆಯಲ್ಲೇ ಮಹಿಳೆಯರ ಸುರಕ್ಷತೆಗೆ ಧಕ್ಕೆ ಬಂದಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯೊಂದರ ಶೌಚಾಲಯದಲ್ಲಿ (Restroom) ಗರ್ಭಿಣಿಯೊಬ್ಬರ ವಿಡಿಯೋ ಚಿತ್ರೀಕರಿಸಲು ಆಸ್ಪತ್ರೆ ಸಿಬ್ಬಂದಿಯೊಬ್ಬ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರು ನೀಡಿರುವ 36 ವರ್ಷದ ಮಹಿಳೆಯ ಹೇಳಿರುವ ಪ್ರಕಾರ, ಮೇ 21ರಂದು ಅವರು ಸರ್ಜಾಪುರ ರಸ್ತೆಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಅಲ್ಲಿನ ಶೌಚಾಲಯವನ್ನು ಬಳಸುತ್ತಿದ್ದಾಗ, ಆಸ್ಪತ್ರೆಯ ಸಿಬ್ಬಂದಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುತ್ತಾ ತನ್ನ ಮೊಬೈಲ್ ಫೋನ್ ಬಳಸಿ ಶೌಚಾಲಯದ ಒಳಗಿನ ದೃಶ್ಯಗಳನ್ನು ರಹಸ್ಯವಾಗಿ ವಿಡಿಯೋ ಮಾಡಲು ಯತ್ನಿಸುತ್ತಿರುವುದನ್ನು ಮಹಿಳೆ ಗಮನಿಸಿದ್ದಾರೆ.

ತಮ್ಮ ಖಾಸಗಿ ದೃಶ್ಯಗಳನ್ನು ಆತ ಕ್ಯಾಪ್ಚರ್ ಮಾಡಿರಬಹುದು ಎಂಬ ಅನುಮಾನದಿಂದ ಮಹಿಳೆ ಶೌಚಾಲಯದಿಂದ ಹೊರಬಂದು ಆತನನ್ನು ತಕ್ಷಣವೇ ಪ್ರಶ್ನಿಸಿದ್ದಾರೆ. ತಾನು ಸಿಕ್ಕಿಬಿದ್ದಿರುವುದನ್ನು ಅರಿತ ಆಸ್ಪತ್ರೆಯ ಸಿಬ್ಬಂದಿ ಸ್ಥಳದಿಂದ ತಕ್ಷಣವೇ ಕಾಲ್ಕಿತ್ತಿದ್ದಾನೆ ಎಂದು ಹೇಳಲಾಗಿದೆ. ದೂರಿನಲ್ಲಿ ಮಹಿಳೆ ತಾನು ಗರ್ಭಿಣಿಯಾಗಿದ್ದು, ಈ ಘಟನೆಯಿಂದ ತಮಗೆ ತೀವ್ರ ಮಾನಸಿಕ ಒತ್ತಡ, ಭಯ ಹಾಗೂ ಅಪಮಾನ ಉಂಟಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ಕೃತ್ಯ ಎಸಗಿದ ಆರೋಪಿ ಹಾಗೂ ಈ ಬಗ್ಗೆ ಸೂಕ್ತ ಸುರಕ್ಷತೆ ವಹಿಸದ ಆಸ್ಪತ್ರೆಯ ಮ್ಯಾನೇಜ್‌ಮೆಂಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮಹಿಳೆಯ ದೂರಿನ ಅನ್ವಯ ವರ್ತೂರು ಪೊಲೀಸರು ಆರೋಪಿ ಸಿಬ್ಬಂದಿ ಹಾಗೂ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 77 (Voyeurism – ರಹಸ್ಯವಾಗಿ ವೀಕ್ಷಿಸುವುದು/ಚಿತ್ರೀಕರಿಸುವುದು), ಸೆಕ್ಷನ್ 79 (ಮಹಿಳೆಯ ಘನತೆಗೆ ಧಕ್ಕೆ ತರುವುದು), ಸೆಕ್ಷನ್ 62 (ಅಪರಾಧಕ್ಕೆ ಯತ್ನ) ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪ್ರಾಥಮಿಕ ತನಿಖೆಯ ವೇಳೆ ಆರೋಪಿಯ ಮೊಬೈಲ್‌ನಲ್ಲಿ ಯಾವುದೇ ಫೋಟೋ ಅಥವಾ ವಿಡಿಯೋ ಪತ್ತೆಯಾಗಿಲ್ಲ. ಆದರೆ, ಆತ ದೃಶ್ಯಗಳನ್ನು ಡಿಲೀಟ್ ಮಾಡಿರುವ ಸಾಧ್ಯತೆ ಇರುವುದರಿಂದ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಆರೋಪಿ ಹಾಗೂ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಹಳೆ ಮಾಲೀಕನ ಮನೆಗೆ ನುಗ್ಗಿ ಚಿನ್ನಾಭರಣ ಕದ್ದ ಮಾಜಿ ಕಾರು ಚಾಲಕ: ಸಿನಿಮಾ ಸ್ಟೈಲ್​​ನಲ್ಲಿ ಕಳ್ಳತನ

ಇದೇ ವರ್ಷದ ಫೆಬ್ರವರಿ ತಿಂಗಳಲ್ಲೂ ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನ ಶೌಚಾಲಯದಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ಯಲಹಂಕ ಮೂಲದ ಮಹಿಳೆಯೊಬ್ಬರನ್ನು ರಹಸ್ಯವಾಗಿ ವಿಡಿಯೋ ಮಾಡಲಾಗಿತ್ತು. ನಂತರ ಅಪರಿಚಿತನೊಬ್ಬ ಇನ್‌ಸ್ಟಾಗ್ರಾಮ್ ಮೂಲಕ ಆ ವಿಡಿಯೋಗಳನ್ನು ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಘಟನೆ ನಡೆದಿತ್ತು. ಈ ಪ್ರಕರಣ ಕೂಡ ಸೈಬರ್ ಕ್ರೈಮ್ ಪೊಲೀಸರ ತನಿಖೆಯಲ್ಲಿದೆ. ಆಸ್ಪತ್ರೆ ಹಾಗೂ ಕ್ರೀಡಾಂಗಣಗಳಂತಹ ಸಾರ್ವಜನಿಕ ಸ್ಥಳಗಳಲ್ಲೇ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳ ಮೂಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಮದುವೆ ಆಮಂತ್ರಣದಲ್ಲಿ ವಧು-ವರರ ಫೋಟೋ ಇರಬಹುದಾ? – Kannada News | Is It Auspicious to Put Bride and Groom Photos on Wedding Cards

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಮದುವೆ ಆಮಂತ್ರಣದಲ್ಲಿ ವಧು-ವರರ ಫೋಟೋ ಇರಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ವಧು-ವರರ ಫೋಟೋಗಳನ್ನು ಮುದ್ರಿಸುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಪ್ರವೃತ್ತಿಯಾಗಿದೆ. ಆದರೆ, ಇದು ಶುಭವೋ ಅಶುಭವೋ ಎಂಬ ಪ್ರಶ್ನೆಯ ಕುರಿತು ಒಂದು ವಿಡಿಯೋದಲ್ಲಿ ಚರ್ಚಿಸಲಾಗಿದೆ. ಹಿಂದೂ ಸಂಪ್ರದಾಯದ ಪ್ರಕಾರ, ಲಗ್ನ ಪತ್ರಿಕೆಗೆ ವಿಶೇಷ ಸ್ಥಾನವಿದೆ. ಇದನ್ನು ಪೂಜಿಸಿ ದೇವರಿಗೆ ಅರ್ಪಿಸಿದ ನಂತರವೇ ವಿತರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ, ವಧು-ವರರ ಫೋಟೋಗಳನ್ನು ಆಮಂತ್ರಣ ಪತ್ರಿಕೆಗಳಲ್ಲಿ ಅಳವಡಿಸುವುದು ಸಮಂಜಸವಲ್ಲ ಎಂದು ಹೇಳಲಾಗುತ್ತದೆ.

ಸಾಂಪ್ರದಾಯಿಕವಾಗಿ, ಆಮಂತ್ರಣ ಪತ್ರಿಕೆಗಳಲ್ಲಿ ಕುಲದೇವರು, ಇಷ್ಟದೇವರು ಅಥವಾ ಗಣಪತಿಯ ಫೋಟೋಗಳನ್ನು ಹಾಕುವ ಪದ್ಧತಿ ಇದೆ. ಆದರೆ ಜೀವಂತ ವ್ಯಕ್ತಿಗಳಾದ ವಧು-ವರರ ಫೋಟೋಗಳನ್ನು ಹಾಕುವುದರಿಂದ ದೃಷ್ಟಿ ದೋಷ, ಆರೋಗ್ಯ ಸಮಸ್ಯೆಗಳು, ಹಾಗೂ ವೈವಾಹಿಕ ಜೀವನದಲ್ಲಿ ಮನಸ್ತಾಪಗಳು ಉಂಟಾಗಬಹುದು ಎಂದು ವಿಡಿಯೋದಲ್ಲಿ ವಿವರಿಸಲಾಗಿದೆ. ಅಲ್ಲದೆ, ಡಿಜಿಟಲ್ ಯುಗದ ಪ್ರಚಾರದ ಗೀಳಿಗೆ ಒಳಗಾಗಿ ಇಂತಹ ಬದಲಾವಣೆಗಳನ್ನು ಮಾಡುವುದರಿಂದ ಭವಿಷ್ಯದಲ್ಲಿ ತೊಂದರೆಗಳು ಎದುರಾಗಬಹುದು ಎಂದು ಎಚ್ಚರಿಸಲಾಗಿದೆ. ಮದುವೆಯ ನಂತರ ಆಮಂತ್ರಣ ಪತ್ರಿಕೆಗಳನ್ನು ಸಾಮಾನ್ಯವಾಗಿ ಕಸಕ್ಕೆ ಹಾಕುವ ಅಥವಾ ಸುಡುವ ಸಾಧ್ಯತೆ ಇರುವುದರಿಂದ, ವಧು-ವರರ ಫೋಟೋಗಳನ್ನು ಹಾಕುವುದು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದಂತೆ ಎಂದು ಗುರೂಜಿ ತಿಳಿಸಿದ್ದಾರೆ.

 

 

Source link

ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಕಲೆಕ್ಷನ್ ಮಾಡಿದ ‘ದೃಶ್ಯಂ 3’; ಒಟ್ಟೂ ಗಳಿಕೆ ಎಷ್ಟು? – Kannada News | Drishyam 3 Box Office: Mohanlal’s Thriller Nears 200 Crore Worldwide in 6 Days

ಮಲಯಾಳಂ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸರಣಿ ಎನಿಸಿಕೊಂಡಿರುವ ‘ದೃಶ್ಯಂ’ ಚಿತ್ರದ ಮೂರನೇ ಭಾಗ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮಾಲಿವುಡ್ ಸೂಪರ್‌ಸ್ಟಾರ್ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಬಿಡುಗಡೆಯಾದ ಆರನೇ ದಿನವೂ ತನ್ನ ಪಾರುಪತ್ಯವನ್ನು ಮುಂದುವರಿಸಿದೆ. ವಾರದ ದಿನಗಳಲ್ಲಿ ಸಹಜವಾಗಿ ಕಲೆಕ್ಷನ್‌ನಲ್ಲಿ ಸ್ವಲ್ಪ ಕುಸಿತ ಕಂಡುಬಂದಿದ್ದರೂ, ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭದ್ರವಾದ ಹಿಡಿತ ಸಾಧಿಸಿದೆ.

ಆರನೇ ದಿನವಾದ ಮಂಗಳವಾರ (ಮೇ 26) ಈ ಚಿತ್ರ ಭಾರತದಾದ್ಯಂತ ಒಟ್ಟು 4,668 ಪ್ರದರ್ಶನಗಳನ್ನು ಕಂಡಿದ್ದು, ಬರೋಬ್ಬರಿ 6.45 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರೊಂದಿಗೆ ಆರು ದಿನಗಳಲ್ಲಿ ಚಿತ್ರದ ಒಟ್ಟು ಭಾರತದ ನೆಟ್ ಕಲೆಕ್ಷನ್ 68.60 ಕೋಟಿ ರೂಪಾಯಿ, ಗ್ರಾಸ್ ಕಲೆಕ್ಷನ್ 79.62 ಕೋಟಿ ರೂಪಾಯಿ ಆಗಿದೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾ ವೀಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಜಾಗತಿಕ ಮಟ್ಟದಲ್ಲಿ 170 ಕೋಟಿ ಕ್ಲಬ್‌ಗೆ ಲಗ್ಗೆ

ಕೇವಲ ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಜಾರ್ಜ್‌ಕುಟ್ಟಿ ಮ್ಯಾಜಿಕ್ ಜೋರಾಗಿಯೇ ನಡೆದಿದೆ. 6ನೇ ದಿನ ವಿದೇಶಿ ಮಾರುಕಟ್ಟೆಯಿಂದಲೇ ಚಿತ್ರಕ್ಕೆ 6.00 ಕೋಟಿ ರೂಪಾಯಿ ಹರಿದುಬಂದಿದೆ. ಇದರೊಂದಿಗೆ ಸಿನಿಮಾ ಬಿಡುಗಡೆಯಾದ ಕೇವಲ ಆರೇ ದಿನಕ್ಕೆ ವಿದೇಶಿ ಮಾರುಕಟ್ಟೆಯ ಒಟ್ಟು ಗ್ರಾಸ್ ಗಳಿಕೆ 90.70 ಕೋಟಿ ರೂಪಾಯಿಗೆ ತಲುಪಿದೆ. ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಕಲೆಕ್ಷನ್ ಆಗಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ದೃಶ್ಯಂ ಬಜೆಟ್ ಎಷ್ಟು? ಜಾರ್ಜ್‌ಕುಟ್ಟಿ ಪಾತ್ರಕ್ಕೆ ಮೋಹನ್‌ಲಾಲ್ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ

ಭಾರತ ಹಾಗೂ ವಿದೇಶಿ ಕಲೆಕ್ಷನ್ ಎಲ್ಲವನ್ನೂ ಒಟ್ಟುಗೂಡಿಸಿದರೆ, ‘ದೃಶ್ಯಂ 3’ ಚಿತ್ರದ ವಿಶ್ವಾದ್ಯಂತ ಒಟ್ಟು ಜಾಗತಿಕ ಗ್ರಾಸ್ ಕಲೆಕ್ಷನ್ ಸದ್ಯ 170.32 ಕೋಟಿ ರೂಪಾಯಿ ತಲುಪಿದೆ. ಸಿನಿಮಾ ವಾರದ ದಿನಗಳಲ್ಲೂ ಇಷ್ಟೊಂದು ಭರ್ಜರಿ ಕಲೆಕ್ಷನ್ ಮಾಡುತ್ತಿರುವುದನ್ನು ನೋಡಿದರೆ, ಅತಿ ಶೀಘ್ರದಲ್ಲೇ 200 ಕೋಟಿ ರೂಪಾಯಿ ಕ್ಲಬ್ ಸೇರುವುದು ಗ್ಯಾರಂಟಿ ಎನ್ನುತ್ತಿದ್ದಾರೆ ಬಾಕ್ಸ್ ಆಫೀಸ್ ಪಂಡಿತರು. ಜಾರ್ಜ್‌ಕುಟ್ಟಿ ಈ ಬಾರಿ ಪೊಲೀಸರಿಂದ ಹೇಗೆ ಪಾರಾಗುತ್ತಾನೆ ಎಂಬ ಕುತೂಹಲವೇ ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡಲು ಪ್ರಮುಖ ಕಾರಣವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಪ್ಲೇಆಫ್ ಚರಿತ್ರೆಯನ್ನೇ ಬದಲಿಸಿದ RCB

Source link

Exit mobile version