ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ: ಚಿಕ್ಕಬಳ್ಳಾಪುರದಲ್ಲಿ 14 ಟನ್ ಗೋಧಿ ವಶಕ್ಕೆ – Kannada News | 14 Tonnes of Anna Bhagya Scheme Wheat Seized in Chikkaballapur During Illegal Transport to Hoskote

ಚಿಕ್ಕಬಳ್ಳಾಪುರ, ಜೂನ್ 27: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ವಿತರಿಸಬೇಕಿದ್ದ 14 ಟನ್ ಗೋಧಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಿಂತಾಮಣಿಯ ಹೆಚ್ ಕ್ರಾಸ್ ಬಳಿ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಚಿಂತಾಮಣಿಯಿಂದ ಹೊಸಕೋಟೆಗೆ ಕ್ಯಾಂಟರ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 250 ಚೀಲ ಗೋಧಿಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಗೋಧಿಯು ಜಿಲ್ಲೆಯ ಸರ್ಕಾರಿ ವಸತಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಮೀಸಲಾಗಿತ್ತು. ಇದರಿಂದ, ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಬೇಕಾಗಿದ್ದ ಪಡಿತರವನ್ನು ಕಾಳದಂಧೆಯಲ್ಲಿ ಸಾಗಾಟ ಮತ್ತು ಮಾರಾಟ ಮಾಡುವ ಜಾಲ ಮತ್ತೊಮ್ಮೆ ಬೆಳಕಿಗೆ ಬಂದಿದೆ.

ಈ ಹಿಂದೆ ಅನ್ನಭಾಗ್ಯ ಯೋಜನೆಯ ಅಕ್ಕಿ, ಸಕ್ಕರೆ ಅಥವಾ ಇಂತಹ ಇತರೆ ಸರ್ಕಾರಿ ದಾಸ್ತಾನುಗಳನ್ನು ಅಕ್ರಮವಾಗಿ ಸಾಗಾಟ ಮಾಡುವುದು, ಕಾಳದಂಧೆಯಲ್ಲಿ ಮಾರಾಟ ಮಾಡುವುದು, ಮತ್ತು ಗೋದಾಮುಗಳಲ್ಲಿ ಸಂಗ್ರಹಿಸಿಟ್ಟುಕೊಳ್ಳುವ ಪ್ರಕರಣಗಳು ಆಗಾಗ ವರದಿಯಾಗುತ್ತಿದ್ದವು. ಈ 14 ಟನ್ ಗೋಧಿಯ ಜಪ್ತಿ ಪ್ರಕರಣವು ಅಂತಹ ಅಕ್ರಮ ಚಟುವಟಿಕೆಗಳ ಸರಣಿಗೆ ಮತ್ತೊಂದು ಸೇರ್ಪಡೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ದಿನ ಭವಿಷ್ಯ: ಇಂದು ಈ ರಾಶಿಯವರ ದ್ವೇಷವನ್ನು ನಿಷ್ಕಾರವಾಗಿ ಮಾಡುವರು.. – Kannada News | Daily Horoscope for June 27, 2026: Satursday Astrology Predictions

ಮೇಷ ರಾಶಿ:

ಉಕ್ಕಿ ಬರುವ ಪ್ರವಾಹವನ್ನು ತಡೆಯಲು ಅಲ್ಪ ಶಕ್ತಿ ಸಾಲದು. ಅಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಇದರಿಂದ ನಿಮ್ಮ ಕೆಳಗಿನವರು ಸಿಟ್ಟಗೊಂಡಾರು.‌ ನಿಮ್ಮ ಕೆಲಸದ ಮೇಲೆ ಇದರ ಪರಿಣಾಮವಿರಲಿದೆ. ನಿಮ್ಮ ನಂಬಿ ಹಣವನ್ನು ಕೊಡಬಹುದು. ಅದನ್ನು ಉಳಿಸಿಕೊಳ್ಳಿ. ಸರಿಯಾಗಿ ಸಮಯವನ್ನು ಬಳಸಿ. ಇನ್ನೊಬ್ಬರ ವಸ್ತುವನ್ನು ಕೇಳಿ ಪಡೆಯಿರಿ. ಆಪ್ತರ ಮಾತಿನಿಂದ ನಿಮ್ಮ ಕೆಲವು ಅಭಿಪ್ರಾಯವು ಬದಲಾಗುವುದು.

ವೃಷಭ ರಾಶಿ:

ತಂದೆಯಿಂದ ಬರಬಹುದಾದ ಧನವು ವಿಳಂಬವಾಗಲಿದೆ. ಎಂದೋ ಆಗಬೇಕಿದ್ದ ಕಾರ್ಯ ಕೊನೆಗೂ ತಾನಾಗಿಯೇ ಘಟಿಸಿದ್ದು, ಖುಷಿ ಇಲ್ಲದೇ ಬೇಸರವೂ ಇಲ್ಲದೇ ಯಥಾಸ್ಥಿತಿಯಲ್ಲಿ ಇರುವಿರಿ. ನಿಮ್ಮ ವಿವಾಹವನ್ನು ಮಾಡಿಸಬೇಕೆಂಬ ಪ್ರಯತ್ನವು ವ್ಯರ್ಥವಾದೀತು. ರಾಜಕಾರಿಣಿಗಳಿಗೆ ಒಳ್ಳೆಯ ಬೆಂಬಲ ಸಿಗಲಿದೆ‌. ಅನ್ಯ ವ್ಯಕ್ತಿಯ ಮೂಲಕ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ. ಸ್ಪರ್ಧಾತ್ಮಕವಾಗಿ ನೀವು ಕ್ರಿಯಾಶೀಲತೆಯನ್ನು ತೋರಿಸುವಿರಿ.

ಮಿಥುನ ರಾಶಿ:

ನಿಮ್ಮ ಬಗ್ಗೆ ಹಿಂದಿನಿಂದ ಮಾತನಾಡಿಕೊಳ್ಳುವರು. ಯಾರಿಗೂ ಕೇಡು ಬಯಸದೇ ನಿಮ್ಮಷ್ಟಕ್ಕೆ ನೀವಿರಿ. ಬಂಧುಗಳು ನಿಮ್ಮನ್ನು ಪ್ರೀತಿಸಬಹುದು. ಇಂದು ಹಣದ ಅವಶ್ಯಕತೆಯಿದ್ದು ಸಹೋದರನನ್ನು ಕೇಳುವಿರಿ. ನೂತನ ವಾಹನವನ್ನು ಖರೀದಿಸುವ ಬಗ್ಗೆ ಯೋಚಿಸುವಿರಿ. ಆಪ್ತರಿಂದ ಹಣದ ವಿಚಾರದಲ್ಲಿ ಮೋಸ ಹೋಗುವಿರಿ. ಕಛೇರಿಯಲ್ಲಿ ಇಂದು ನೀವು ಸ್ವತಂತ್ರರು. ಮನೋರಥವನ್ನು ಈಡೇರಿಸಿಕೊಳ್ಳುವುದು ನಿಮಗೆ ಕಷ್ಟವಾಗುವುದು. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ.

ಕರ್ಕಾಟಕ ರಾಶಿ:

ನಿಮ್ಮ ಮಾತಿನ ಶಕ್ತಿಯನ್ನು ದುರುಪಯೋಗ ಪಡಿಸಿಕೊಳ್ಳಬೇಡಿ. ಆಮೇಲೆ ಅದಕ್ಕೆ ಬೆಲೆಯೇ ಇಲ್ಲದಂತಾದೀತು. ಕೃಷಿಯ ಚಟುವಟಿಕೆಯಲ್ಲಿ ತೊಡಗುವ ಮನಸ್ಸಾದೀತು. ನಿಮ್ಮ ಮೇಲಿರುವ ದೂರನ್ನು ತಳ್ಳಿಹಾಕುವಿರಿ. ಬೇವರಿನ ಹನಿಯ ಮಹತ್ತ್ವ ಗೊತ್ತಾಗುವ ದಿನ ಇಂದು. ಉದ್ಯೋಗದಲ್ಲಿ ಸಿಗುವ ಪದೋನ್ನತಿಯು ಸಿಗುವುದು ತಪ್ಪಲಿದೆ. ಆಪ್ತರ ಜೊತೆ ಈ ಕುರಿತು ಸಮಾಲೋಚನೆ ಮಾಡುವಿರಿ. ನಿಮ್ಮ ಮಾತುಗಳಿಂದ ನೋವಾಗಲಿದೆ. ಹೇಳಬೇಕಾದುದನ್ನು ನೇರವಾಗಿ ಹೇಳಿ.

ಸಿಂಹ ರಾಶಿ:

ಇಂದು ಸ್ನೇಹಿತರ ಜೊತೆ ಹೋಗಬೇಕಿದ್ದ ನಿಮ್ಮ ಪ್ರಯಾಣವು ತುರ್ತು ಕಾರ್ಯದಿಂದ ರದ್ದಾಗಬಹುದು. ಬಹಳ ಆಯಾಸವಾದರೂ ಒತ್ತಡಗಳಿದ್ದರೂ ಇಂದಿನ ಕೆಲಸವನ್ನು ಮಾಡಿ ಮುಗಿಸುವಿರಿ. ಅಪರಿಚಿತ ದೂರವಾಣಿಯ ಕರೆಯಿಂದ ಲಾಭದಾಯಕವಾದ ಕೆಲಸವು ಸಿಗಬಹುದು. ಸರ್ಕಾರಿ ಕೆಲಸಗಳು ನಿಧಾನವಾಗಲಿದೆ. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ವಿದೇಶದವರ ಜೊತೆ ನಿಮ್ಮ ವ್ಯವಹಾರವು ನಡೆಯುವುದು.

ಕನ್ಯಾ ರಾಶಿ:

ಹಣ ಸಂಪಾದನೆಗೆ ದೂರಪ್ರಯಾಣ ಮಾಡಬೇಕಾದೀತು. ಮಾಡಲು ತುಂಬ ಕೆಲಸಗಳಿದ್ದು ಯಾವುದನ್ನು ಮಾಡುವುದು ಎಂಬ ಗೊಂದಲ ಸೃಷ್ಟಿಯಾಗಬಹುದು. ಹಿರಿಯರು ನಿಮ್ಮನ್ನು ಪ್ರಶಂಸಿಸುವರು. ದಾಂಪತ್ಯದಲ್ಲಿ ಸಣ್ಣ ಕಲಹವಾಗಬಹುದು. ಬರಬೇಕಾದ ಹಣಕ್ಕಾಗಿ ಕಾಯುವಿರಿ. ಒಂದನ್ನು ಪಡೆಯಲು ಹೋಗಿ ಎರಡನ್ನು ಕಳೆದುಕೊಳ್ಳಬೇಕಾದೀತು. ಮಾನಸಿಕ ತೊಳಲಾಟವನ್ನು ಪ್ರಯತ್ನಪೂರ್ವಕವಾಗಿ ಕಡಿಮೆ ಮಾಡಿಕೊಳ್ಳಿ.

ತುಲಾ ರಾಶಿ:

ಪ್ರಭಾವಿ ಜನರ ಭೇಟಿಯಿಂದ ಹೊಸ ದಿಕ್ಕು ಲಭಿಸುವುದು. ಆಸ್ತಿ ಖರೀದಿಯ ಬಗ್ಗೆ ಹೆಚ್ಚಿನ ಒಲವಿರಲಿದೆ‌. ಭೂಮಿಯನ್ನು ಪಡೆಯುವ ತವಕದಲ್ಲಿ ವ್ಯವಹಾರವನ್ನು ಸರಿಯಾಗಿ ನೋಡಿಕೊಳ್ಳಿ. ಮನೆ ಅಥವಾ ಭೂಮಿಯನ್ನು ಖರೀದಿ ಮಾಡುವಿರಿ. ಅಮೂಲ್ಯವಾದ ವಸ್ತುವೊಂದು ನಿಮ್ಮ ಸ್ನೇಹಿತರಿಗೆ ಕೊಡುಗೆಯಾಗಿ ನೀಡುವಿರಿ. ವಿದೇಶ ಪ್ರವಾಸದ ಕನಸು ಕಾಣುತ್ತಿರುವವರು ನನಸು ಮಾಡಿಕೊಳ್ಳಬಹುದಾಗಿದೆ. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು.

ವೃಶ್ಚಿಕ ರಾಶಿ:

ನಿಮ್ಮ ನ್ಯಾಯಾಲಯದ ಕಾರ್ಯಗಳು ಮಂದಗತಿಯಲ್ಲಿ ಸಾಗಲಿವೆ. ಅನೇಕ‌ ಅನುಮಾನಗಳಿಗೆ ಕಾರಣವಾಗಬಹುದು. ಸ್ತ್ರೀಯರು ಮಂಗಳ‌ ಕಾರ್ಯಗಳಲ್ಲಿ ತೊಡಗುವರು. ಮನೆ ಬಳಕೆಗೆ ಬೇಕಾದ ವಸ್ತುಗಳನ್ನು ಖರೀದಿಸುವಿರಿ. ಹಣದ ವಿಚಾರದಲ್ಲಿ ನಿಮಗಿಂದು ನಿರಾಸಕ್ತಿ ಬರಬಹುದು. ಕಛೇರಿಯ ಜವಾಬ್ದಾರಿಯಲ್ಲಿ ಮಧ್ಯಪ್ರವೇಶದಿಂದ ಇತರರಿಗೆ ಅಸಹನೆ. ಮೇಲ್ನೋಟಕ್ಕೆ ಯಾವುದನ್ನೂ ತೀರ್ಮಾನ ಮಾಡುವುದು ಬೇಡ. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನಹರಿಸುವರು.

ಧನು ರಾಶಿ:

ಪರರ ಕಷ್ಟಗಳಗೆ ಸ್ಪಂದಿಸಲು ಆಗದೇ ಇರಬಹುದು. ಆಗಿಹೋದ ವಿಷಯವನ್ನು ಮತ್ತೆ ನೆನಪಿಸಿಕೊಂಡು ದಾಂಪತ್ಯದಲ್ಲಿ ಜಗಳವಾಗಬಹುದು. ಶತ್ರುಗಳಿಂದ ಮನೆಯಲ್ಲಿ ಕಿರಿಕಿರಿಯಾಗಲಿದೆ. ಮಕ್ಕಳಿಂದ ನಿಮಗೆ ಅಶುಭವಾರ್ತೆಯು ಬರಲಿದೆ. ಆರ್ಥಿಕಸ್ಥಿತಿಯನ್ನು ಊರ್ಜಿತಗೊಳಿಸಲು ಬಹಳ ಶ್ರಮ ಪಡುವಿರಿ. ಪ್ರೇಮವನ್ನು ಒಪ್ಪಿಕೊಳ್ಳಲಾರಿರಿ. ತಂತ್ರಜ್ಞರಿಗೆ ಉನ್ನತಸ್ಥಾನಕ್ಕೆ ಹೋಗುವ ಸಾಧ್ಯತೆ ಇದೆ. ನೂತನ ವಾಹನದಲ್ಲಿ ಸಂಚರಿಸುವಿರಿ. ಅತಿಯಾಗಿ ಮಾತಾನಾಡಿ ಗುಟ್ಟನ್ನು ರಟ್ಟು ಮಾಡುವಿರಿ.

ಮಕರ ರಾಶಿ:

ವೃತ್ತಿಕ್ಷೇತ್ರದಲ್ಲಿ ಸಹೋದ್ಯೋಗಿಯಿಂದ ತೊಂದರೆ ಬರಬಹುದು. ಮಾತನಾಡಲು ಬಹಳ ಮುಜುಗರವಾದೀತು. ನಿಮಗೆ ಬೇಕಾದುದನ್ನೇ ಮಾಡಿಸಿಕೊಳ್ಳುವ ಹಠದ ಸ್ವಭಾವ ಹೆಚ್ಚಿರುವುದು. ಹೆಚ್ಚಿನ ಜವಾಬ್ದಾರಿಗಳು ಸಿಗಬಹುಸು. ನಿಂತ ಕೆಲಸಕ್ಕೆ ಚಾಲನೆ ಸಿಗಲಿದೆ. ಓಡಾಟದಿಂದ ದೇಹಕ್ಕೆ ಆಯಾಸವಾಗಬಹುದು. ಸಮಯೋಚಿತವಾಗಿ ಕಾರ್ಯವನ್ನು ಮಾಡಿ. ವಿದ್ಯಾರ್ಥಿಗಳಿಗೆ ಅನುಕಂಪ ಬೇಕಾದೀತು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು.

ಕುಂಭ ರಾಶಿ:

ನಿಮ್ಮ ಕಾರ್ಯಕ್ಕೆ ಉತ್ತಮವಾದ ಯಶಸ್ಸು ಸಿಗಲಿದೆ‌. ನಿಮ್ಮನ್ನು ಪರಿಚಿತರು ಮಾತನಾಡಿಸದೇ ಇರಬಹುದು. ಕೃಷಿಕರು ಇಂದು ತಮ್ಮ ಕಾರ್ಯದಲ್ಲಿ ಮಂದಗತಿಯನ್ನು ಕಾಣಬಹುದಾಗಿದೆ. ಮುಕ್ತವಾದ ಮಾತುಗಳು ನಿಮ್ಮನ್ನು ಹಗುರಾಗಿಸುವುದು. ಭೂಮಿಯ ಮೇಲೆ ಹೂಡಿಕೆ ಮಾಡಲು ಸಲಹೆಗಳು ಬರಬಹುದು. ನಿಮ್ಮನ್ನು ನಂಬಿಸಿ ಕೆಲಸ ಮಾಡಿಸಿಕೊಳ್ಳುವರು. ಪರಿಚಿತರ ಮೂಲಕ ನಿಮಗೆ ಅಪರಿಚಿತರ ಸಹಾಯ ದೊರೆಯುವುದು.

ಮೀನ ರಾಶಿ:

ವ್ಯಾಪಾರದಿಂದ ಅಧಿಕ ಹಣವು ಉಳಿತಾಯವಾಗಲು ಚಿಂತನೆ ನಡೆಸುವಿರಿ. ಕೆಲಸವನ್ನು ಮಾಡಿಸಿಕೊಳ್ಳಲು ಜಾಣ್ಮೆಯಿಂದ ಮಾತನಾಡುವಿರಿ. ವಾಹನ ಚಾಲನೆ ಐಚ್ಛಿಕವಾಗಿರಲಿ. ವಿದ್ಯಾರ್ಥಿಗಳು ಮುಂದಿನ ಓದಿಗೆ ಬೇಕಾದ ತಯಾರಿ ನಡೆಸುವರು. ಉದ್ಯೋಗದಲ್ಲಿ ಜವಾಬ್ದಾರಿ ಸ್ಥಾನವವನ್ನು ಪಡೆಯುವಿರಿ. ಯಾವುದನ್ನೇ ಆದರೂ ನಿಷ್ಠೆಯಿಂದ ಕಾರ್ಯ ಮಾಡುವಿರಿ. ಮನೆಯ ಹಿರಿಯರ ಬಗ್ಗೆ ಪ್ರೀತಿ ಹೆಚ್ಚಾಗಬಹುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಸಿದ್ಧ, ಕರಣ : ಬವ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:46 – 12:23, ಯಮಗಂಡ ಕಾಲ 15:35 – 17:12, ಗುಳಿಕ ಕಾಲ 07:33 – 09:10

-ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುಕೇಶ್ ಚಂದ್ರಶೇಖರ್ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ನಟಿ ಜಾಕ್ವೆಲಿನ್ ಫರ್ನಾಂಡಿಸ್ – Kannada News | Jacqueline Fernandez withdraws Supreme Court plea in Sukesh Chandrashekhar Money Laundering Case

200 ಕೋಟಿ ರೂಪಾಯಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯ (ED) ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಜಾಕ್ವೆಲಿನ್ ಗುರುವಾರ ಹಿಂಪಡೆದಿದ್ದಾರೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಜಾಯ್‌ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಅರ್ಜಿ ಹಿಂಪಡೆಯಲು ನಟಿಗೆ ಅನುಮತಿ ನೀಡಿದೆ.

ಇಡಿ ದಾಖಲಿಸಿದ್ದ ದೋಷಾರೋಪ ಪಟ್ಟಿ ಹಾಗೂ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈಗ ಅರ್ಜಿ ಹಿಂಪಡೆದಿರುವುದರಿಂದ ಅವರ ವಿರುದ್ಧದ ಕಾನೂನು ಪ್ರಕ್ರಿಯೆಗಳು ಕೆಳಹಂತದ ವಿಚಾರಣಾ ನ್ಯಾಯಾಲಯದಲ್ಲಿ ಮುಂದುವರಿಯಲಿವೆ.

ಈ ಹಿಂದೆ ಜೂನ್ 11ರಂದು ಈ ಅರ್ಜಿಯು ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಅತುಲ್ ಎಸ್. ಚಂದೂರ್ಕರ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ನ್ಯಾಯಮೂರ್ತಿ ಮಿಶ್ರಾ ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ಕೇಸ್‌ನಲ್ಲಿ ತಮ್ಮ ಮಗ ಸರ್ಕಾರದ ಪರವಾಗಿ ಹಾಜರಾಗಿದ್ದರಿಂದ, ನೈತಿಕತೆಯ ಆಧಾರದ ಮೇಲೆ ತಾವು ವಿಚಾರಣೆ ನಡೆಸುವುದಿಲ್ಲ ಎಂದು ಅವರು ತಿಳಿಸಿದ್ದರು. ಆ ಬಳಿಕ ಪ್ರಕರಣವನ್ನು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಪೀಠಕ್ಕೆ ವರ್ಗಾಯಿಸಲಾಯಿತು.

ಇದೇ ತಿಂಗಳ ಆರಂಭದಲ್ಲಿ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರಾಗಿದ್ದ ಜಾಕ್ವೆಲಿನ್ ಫರ್ನಾಂಡಿಸ್, ಪಿಎಂಎಲ್‌ಎ (PMLA) ಅಡಿ ತಮ್ಮ ವಿರುದ್ಧ ಹೊರಿಸಲಾದ ಆರೋಪಗಳು ಸುಳ್ಳು ಮತ್ತು ತಾವು ನಿರಪರಾಧಿ ಎಂದು ಹೇಳಿದ್ದರು. ಅಲ್ಲದೆ, ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದರು. ಈ ಪ್ರಕರಣದಲ್ಲಿ ಮುಖ್ಯ ಆರೋಪಿ ಸುಕೇಶ್ ಚಂದ್ರಶೇಖರ್, ಆತನ ಪತ್ನಿ ಲೀನಾ ಮರಿಯಾ ಪಾಲ್ ಸೇರಿದಂತೆ 14 ಜನರ ವಿರುದ್ಧ ಆರೋಪ ನಿಗದಿಪಡಿಸಲಾಗಿದ್ದು, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಬಾಡಿಗಾರ್ಡ್ ವರ್ತನೆಗೆ ನೆಟ್ಟಿಗರ ಆಕ್ರೋಶ: ಜಾಕ್ವೆಲಿನ್ ಕೈ ಹಿಡಿದು ಎಳೆದ ಭದ್ರತಾ ಸಿಬ್ಬಂದಿ

ಕೆಲವು ವಾರಗಳ ಹಿಂದಷ್ಟೇ ಜಾಕ್ವೆಲಿನ್ ಈ ಪ್ರಕರಣದಲ್ಲಿ ತಾವು ಅಪ್ರೂವರ್ ಆಗಲು ಸಲ್ಲಿಸಿದ್ದ ಅರ್ಜಿಯನ್ನೂ ಹಿಂಪಡೆದಿದ್ದರು. ಇಡಿ ಅವರ ಮನವಿಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ತನಿಖೆಯ ಸಮಯದಲ್ಲಿ ಜಾಕ್ವೆಲಿನ್ ಅವರ ನಡವಳಿಕೆ ಸರಿಯಾಗಿರಲಿಲ್ಲ ಮತ್ತು ಅವರು ಪೂರ್ಣ ಸತ್ಯವನ್ನು ಮರೆಮಾಚಿದ್ದಾರೆ ಎಂದು ಇಡಿ ಆರೋಪಿಸಿದೆ. ಸುಕೇಶ್ ಚಂದ್ರಶೇಖರ್ ಅಪರಾಧ ಹಿನ್ನೆಲೆ ತಿಳಿದಿದ್ದರೂ ಜಾಕ್ವೆಲಿನ್ ಆತನೊಂದಿಗೆ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಡ್ರೈ ಫ್ರೂಟ್ಸ್ ತಿನ್ನುವುದಕ್ಕೆ ತುಂಬಾ ಇಷ್ಟಾನಾ? ಹಾಗಿದ್ರೆ ಇವುಗಳನ್ನು ತಿನ್ನುವ ಸರಿಯಾದ ವಿಧಾನದ ಬಗ್ಗೆ ತಿಳಿದುಕೊಳ್ಳಿ – Kannada News | Ayurveda Expert Shares The Right Way To Eat Dry Fruits

Ayurveda Expert Shares The Right Way To Eat Dry FruitsImage Credit source: Getty Images

ಡ್ರೈ ಫ್ರೂಟ್ಸ್ (Dry Fruits) ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇವುಗಳನ್ನು ಆರೋಗ್ಯಕರ ಆಹಾರಗಳೆಂದು ಪರಿಗಣಿಸಲಾಗುತ್ತದೆ. ಬಾದಾಮಿ, ಗೋಡಂಬಿ, ಅಖರೋಟ್, ಖರ್ಜೂರ ಮೊದಲಾದವುಗಳಲ್ಲಿ ಪ್ರೋಟೀನ್, ಆರೋಗ್ಯಕರ ಕೊಬ್ಬು, ವಿಟಮಿನ್‌ಗಳು ಮತ್ತು ಖನಿಜಗಳು ಸಮೃದ್ಧವಾಗಿವೆ. ಆದರೆ ಇವುಗಳನ್ನು ಸರಿಯಾದ ರೀತಿಯಲ್ಲಿ ಸೇವಿಸದಿದ್ದರೆ ದೇಹದ ಉಷ್ಣತೆ ಹೆಚ್ಚಾಗಿ ಕೆಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಎಂದು ಆಯುರ್ವೇದ ತಜ್ಞರು ಸಲಹೆ ನೀಡುತ್ತಾರೆ. ಹಾಗದರೆ ಡ್ರೈ ಫ್ರೂಟ್ಸ್ ತಿನ್ನುವುದಕ್ಕೆ ಸರಿಯಾದ ವಿಧಾನ ಯಾವುದು, ಹೆಚ್ಚು ಉಷ್ಣ ಗುಣ ಹೊಂದಿರುವ ಡ್ರೈ ಫ್ರೂಟ್ಸ್ ಯಾವುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಡ್ರೈ ಫ್ರೂಟ್ಸ್ ಹೇಗೆ ತಿನ್ನಬೇಕು?

ಆಯುರ್ವೇದದ ಪ್ರಕಾರ, ಬೇಸಿಗೆಯಲ್ಲಿ ಡ್ರೈ ಫ್ರೂಟ್ಸ್ ಅನ್ನು ನೇರವಾಗಿ ತಿನ್ನುವುದಕ್ಕಿಂತ ರಾತ್ರಿ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಸೇವಿಸುವುದು ಉತ್ತಮ. ಇದರಿಂದ ಫೈಟಿಕ್ ಆಮ್ಲ ಕಡಿಮೆಯಾಗುತ್ತದೆ, ಪೋಷಕಾಂಶಗಳು ಸುಲಭವಾಗಿ ಹೀರಲ್ಪಡುತ್ತವೆ ಮತ್ತು ದೇಹದ ಉಷ್ಣತೆ ಹೆಚ್ಚುವ ಸಾಧ್ಯತೆಯೂ ಕಡಿಮೆಯಾಗುತ್ತದೆ. ದಿನಕ್ಕೆ 20–30 ಗ್ರಾಂ ಮೀರದಂತೆ ಸೇವಿಸುವುದು ಸೂಕ್ತ. ಅದರಲ್ಲಿಯೂ ಬಿಸಿಲು ಹೆಚ್ಚಿದ್ದಾಗ ನೇರವಾಗಿ ತಿನ್ನುವುದು ಒಳ್ಳೆಯದಲ್ಲ.

ಹೆಚ್ಚು ಉಷ್ಣ ಗುಣ ಹೊಂದಿರುವ ಡ್ರೈ ಫ್ರೂಟ್ಸ್:

ಒಣ ಖರ್ಜೂರ, ಅಖರೋಟ್, ನೆನೆಸದ ಬಾದಾಮಿ ಹಾಗೂ ಪಿಸ್ತಾ ದೇಹದಲ್ಲಿ ಉಷ್ಣತೆ ಹೆಚ್ಚಿಸಬಹುದು. ಬೇಸಿಗೆಯಲ್ಲಿ ಇವುಗಳನ್ನು ಮಿತವಾಗಿ ಹಾಗೂ ಸಾಧ್ಯವಾದರೆ ನೆನೆಸಿ ಸೇವಿಸುವುದು ಒಳಿತು. ಅತಿಯಾಗಿ ತಿಂದರೆ ಹೊಟ್ಟೆ ಉರಿ, ಮೊಡವೆ ಅಥವಾ ಅಜೀರ್ಣ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

ನೆನೆಸಿದ ಬಾದಾಮಿ, ಒಣದ್ರಾಕ್ಷಿ, ನೆನೆಸಿದ ಗೋಡಂಬಿ ಹಾಗೂ ಖರ್ಜೂರವನ್ನು ಮಿತ ಪ್ರಮಾಣದಲ್ಲಿ ಸೇವಿಸಬಹುದು. ವಿಶೇಷವಾಗಿ ಮಖಾನಾ (ಫಾಕ್ಸ್ ನಟ್ಸ್) ದೇಹಕ್ಕೆ ತಂಪು ನೀಡುವ ಗುಣ ಹೊಂದಿದ್ದು, ಉತ್ತಮ ಸ್ನ್ಯಾಕ್ ಆಗಿರುತ್ತದೆ.

ಡ್ರೈ ಫ್ರೂಟ್ಸ್ ತಿನ್ನುವುದನ್ನು ಸಂಪೂರ್ಣವಾಗಿ ಬಿಡುವ ಅಗತ್ಯವಿಲ್ಲ. ಆದರೆ ಋತುವಿಗೆ ಅನುಗುಣವಾಗಿ ಸರಿಯಾದ ವಿಧಾನದಲ್ಲಿ ಮತ್ತು ಮಿತ ಪ್ರಮಾಣದಲ್ಲಿ ಸೇವಿಸಿದರೆ ಮಾತ್ರ ಅವುಗಳ ಆರೋಗ್ಯ ಪ್ರಯೋಜನಗಳನ್ನು ಸುರಕ್ಷಿತವಾಗಿ ಪಡೆಯಬಹುದು. ಮಧುಮೇಹ, ಅತಿಯಾದ ತೂಕ ಅಥವಾ ಇತರ ಆರೋಗ್ಯ ಸಮಸ್ಯೆಗಳಿರುವವರು ತಮ್ಮ ವೈದ್ಯರು ಅಥವಾ ಪೌಷ್ಟಿಕ ತಜ್ಞರ ಸಲಹೆಯಂತೆ ಸೇವಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮದುವೆ ಇಷ್ಟವಿಲ್ಲ ಎಂದು ಕುಟುಂಬವನ್ನು ಒಪ್ಪಿಸುವುದಕ್ಕಿಂತ ಕೇತನ್​ನನ್ನು ಕೊಲ್ಲೋದೇ ಸುಲಭವಾಗಿತ್ತು; ಸಿಯಾ ಹೇಳಿಕೆ – Kannada News | Siya Goyal told Pune Police that plotting to kill her Ketan Agarwal was easier than confronting her family

ಪುಣೆ, ಜೂನ್ 26: ಲೋಹಗಢ್ ಕೋಟೆಯ ಕಂದಕಕ್ಕೆ ತಳ್ಳಿ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಅವರನ್ನು ಹತ್ಯೆಗೈದ ಪ್ರಕರಣದ ತನಿಖೆ ನಡೆಸುತ್ತಿರುವ ಪುಣೆ ಗ್ರಾಮಾಂತರ ಪೊಲೀಸರ ಮುಂದೆ ಪ್ರಮುಖ ಆರೋಪಿ ಸಿಯಾ ಗೋಯಲ್ (Siya Goyal) ಅತ್ಯಂತ ಶಾಕಿಂಗ್ ಸತ್ಯಗಳನ್ನು ಬಿಚ್ಚಿಟ್ಟಿದ್ದಾಳೆ. ತನ್ನ ಪ್ರೇಮಿ ಚೇತನ್ ಚೌಧರಿ ಜೊತೆ ಜೀವಿಸಲು ತನ್ನ ಕುಟುಂಬಸ್ಥರನ್ನು ಒಪ್ಪಿಸುವುದಕ್ಕಿಂತ ಅಥವಾ ಅವರನ್ನು ಎದುರಿಸುವುದಕ್ಕಿಂತ ಭಾವಿ ಪತಿ ಕೇತನ್‌ನನ್ನು ಕೊಲೆ ಮಾಡುವುದೇ ತನಗೆ ಸುಲಭದ ಆಯ್ಕೆಯಾಗಿತ್ತು ಎಂದು ಅವಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ತನಿಖೆಯ ಪ್ರಕಾರ, ಮೃತ ಕೇತನ್ ಅಗರ್ವಾಲ್ ಮಹಾರಾಷ್ಟ್ರದ ಪ್ರಮುಖ ಉದ್ಯಮಿಯಾಗಿದ್ದು, ಸಿಯಾ ಗೋಯಲ್ ಕೂಡ ಪುಣೆಯ ಅತ್ಯಂತ ಶ್ರೀಮಂತ ವ್ಯಾಪಾರಿ ಕುಟುಂಬಕ್ಕೆ ಸೇರಿದವಳಾಗಿದ್ದಾಳೆ. ಇವರಿಬ್ಬರ ಕುಟುಂಬಗಳ ಒಪ್ಪಿಗೆಯ ಮೇರೆಗೆ ಫೆಬ್ರವರಿಯಲ್ಲಿ ಅದ್ಧೂರಿ ನಿಶ್ಚಿತಾರ್ಥ ನಡೆದಿತ್ತು. ರಾಜಸ್ಥಾನದ ಉದಯಪುರದಲ್ಲಿ ಅರಮನೆಯೊಂದನ್ನು ಬುಕ್ ಮಾಡಿ, ಅತಿಥಿಗಳಿಗಾಗಿ ಎರಡು ವಿಶೇಷ ಚಾರ್ಟರ್ಡ್ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಮದುವೆಯ ತಯಾರಿಗಳು ಜೋರಾಗಿ ನಡೆಯುತ್ತಿದ್ದವು. ಆದರೆ, ಸಿಯಾ ಕಳೆದ ವರ್ಷದ ಅಕ್ಟೋಬರ್‌ನಿಂದಲೇ ಚೇತನ್ ಚೌಧರಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು.

ಇದನ್ನೂ ಓದಿ: ತಪ್ಪಿತಸ್ಥಳೆಂದು ಸಾಬೀತಾದರೆ ಮಗಳನ್ನು ಕೂಡ ಅದೇ ಕೋಟೆಯಿಂದ ತಳ್ಳಿ, ಸಿಯಾ ಬಗ್ಗೆ ತಂದೆಯ ಭಾವುಕ ಮಾತು

ಕುಟುಂಬಸ್ಥರ ಕಟ್ಟುಪಾಡುಗಳು ಹಾಗೂ ಸಮಾಜದಲ್ಲಿನ ಪ್ರತಿಷ್ಠೆಗೆ ಹೆದರಿ ತನಗೆ ಈ ಮದುವೆ ಇಷ್ಟವಿಲ್ಲ ಎಂದು ಮನೆಯವರಿಗೆ ನೇರವಾಗಿ ಹೇಳಲು ಸಿಯಾಗೆ ಧೈರ್ಯವಿರಲಿಲ್ಲ. ಹಾಗಾಗಿ, ಮದುವೆಯನ್ನು ತಪ್ಪಿಸಲು ಅವಳು ಮತ್ತು ಚೇತನ್ ಸೇರಿ ಕೇತನ್‌ನನ್ನು ಮುಗಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ.

ಜೂನ್ 18ರಂದು ಲೋಹಗಢ್ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದಾಗ ಕೇತನ್ ಆಕಸ್ಮಿಕವಾಗಿ ಕಂದಕಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಸಿಯಾ ಮೊದಲು ಕಥೆ ಕಟ್ಟಿದ್ದಳು. ಫೋಟೋ ತೆಗೆಯುವಾಗ ಅಥವಾ ನೀರಿನ ಬಾಟಲಿ ನೀಡುವಾಗ ಕಾಲು ಜಾರಿ ಬಿದ್ದಿದ್ದಾನೆ ಎಂದು ಅವಳು ಪದೇ ಪದೇ ಹೇಳಿಕೆ ಬದಲಾಯಿಸುತ್ತಿದ್ದಳು. ಆದರೆ ಪೊಲೀಸರು ತನಿಖೆ ಕೈಗೊಂಡಾಗ ಅಸಲಿ ಸತ್ಯ ಹೊರಬಂದಿದೆ: ಕಳೆದ 6 ತಿಂಗಳಲ್ಲಿ ಸಿಯಾ ಮತ್ತು ಪ್ರೇಮಿ ಚೇತನ್ ನಡುವೆ 4,400ಕ್ಕೂ ಹೆಚ್ಚು ಬಾರಿ ಫೋನ್ ಕರೆಗಳು ನಡೆದಿವೆ.

ಇದನ್ನೂ ಓದಿ: ವಿಗ್ ಧರಿಸಿದ್ದರಿಂದಲೇ ಕೇತನ್​ನನ್ನು ಕೊಂದಳಾ ಸಿಯಾ?; ಮಹಾರಾಷ್ಟ್ರ ಸಿಎಂ ಭೇಟಿ ಬಳಿಕ ತಂದೆಯ ಶಾಕಿಂಗ್ ಹೇಳಿಕೆ

ಈ ಕೊಲೆಯ ದಿನ ಲೋಹಗಢ್ ಕೋಟೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ತೀವ್ರ ಬಿಸಿಲಿದ್ದರೂ ಮುಖ ಮುಚ್ಚುವಂತೆ ಹೂಡಿ ಧರಿಸಿದ್ದ ಯುವಕನೊಬ್ಬ ಇವರನ್ನು ಹಿಂಬಾಲಿಸುತ್ತಿರುವುದು ಕಂಡುಬಂದಿತ್ತು. ಆತನೇ ಸಿಯಾ ಪ್ರೇಮಿ ಚೇತನ್ ಚೌಧರಿ ಎಂದು ಪತ್ತೆಯಾಗಿದೆ. ಪ್ರಸ್ತುತ ಜೂನ್ 29 ರವರೆಗೆ ಪೊಲೀಸ್ ಕಸ್ಟಡಿಯಲ್ಲಿರುವ ಇಬ್ಬರು ಆರೋಪಿಗಳು ವಿಚಾರಣೆ ವೇಳೆ ಪರಸ್ಪರ ಒಬ್ಬರ ಮೇಲೊಬ್ಬರು ತಪ್ಪು ಹೊರಿಸುತ್ತಿದ್ದಾರೆ. ಚೇತನ್ “ನಾನು ಸಿಯಾ ಜೊತೆ ಓಡಿಹೋಗಲು ಬಯಸಿದ್ದೆ, ಆದರೆ ಕೊಲೆ ಮಾಡುವ ಐಡಿಯಾ ಸಿಯಾಳದ್ದೇ” ಎನ್ನುತ್ತಿದ್ದರೆ, ಸಿಯಾ “ಇದೆಲ್ಲವನ್ನೂ ಚೇತನ್ ಪ್ಲಾನ್ ಮಾಡಿದ್ದ” ಎಂದು ಹೇಳುತ್ತಿದ್ದಾಳೆ. ಆದರೆ ಸದ್ಯಕ್ಕೆ ಸಂಗ್ರಹಿಸಲಾಗಿರುವ ಎಲ್ಲಾ ಡಿಜಿಟಲ್ ಪುರಾವೆಗಳು ಇಬ್ಬರೂ ಸೇರಿ ಈ ಭೀಕರ ಕೃತ್ಯ ಎಸಗಿರುವುದನ್ನು ಖಚಿತಪಡಿಸುತ್ತಿವೆ ಎಂದು ಪುಣೆ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾವೈಕ್ಯತೆಗೆ ಸಾಕ್ಷಿಯಾದ ಬಾಗಲಕೋಟೆ: ಮೊಹರಂಗೆ ಮೆರಗು ನೀಡಿದ ಹುಲಿಕುಣಿತ, ಡೊಳ್ಳು ಕುಣಿತ

Source link

IND vs IRE: ನಾಯಕನಾಗಿ ಮೊದಲ ಪಂದ್ಯದಲ್ಲೇ ಸೋತ ಶ್ರೇಯಸ್ ಅಯ್ಯರ್

Source link

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ; ಒಂದೇ ವಿಮಾನದಲ್ಲಿ ಪ್ರಯಾಣಿಸಿದ ಫಡ್ನವಿಸ್ – ಉದ್ಧವ್ ಠಾಕ್ರೆ – Kannada News | Devendra Fadnavis and Uddhav Thackeray travelled in same flight to Nagpur shake hands

ನಾಗ್ಪುರ, ಜೂನ್ 26: ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ಮಹಾರಾಷ್ಟ್ರ ರಾಜಕೀಯದಲ್ಲಿ ಇಂದು ಒಂದು ಅಪರೂಪದ ಹಾಗೂ ಅಚ್ಚರಿಯ ಬೆಳವಣಿಗೆ ನಡೆದಿದೆ. ಸದಾ ಪರಸ್ಪರ ಟೀಕೆ ಮಾಡಿಕೊಳ್ಳುವ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಶಿವಸೇನಾ (ಯುಬಿಟಿ) ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಮುಂಬೈನಿಂದ ನಾಗ್ಪುರಕ್ಕೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಅಷ್ಟೇ ಅಲ್ಲದೆ, ವಿಮಾನದಲ್ಲಿ ಮುಖಾಮುಖಿಯಾದಾಗ ಇಬ್ಬರೂ ನಾಯಕರು ಪರಸ್ಪರ ಕೈ ಕುಲುಕಿ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.

ರಾಜಕೀಯ ಕಾರ್ಯಕ್ರಮಗಳ ಕಾರಣಕ್ಕೆ ಉಭಯ ನಾಯಕರು ಮುಂಬೈನಿಂದ ನಾಗ್ಪುರಕ್ಕೆ ತೆರಳುತ್ತಿದ್ದರು. ಕಾಕತಾಳೀಯ ಎಂಬಂತೆ ಇಬ್ಬರಿಗೂ ಒಂದೇ ಕಮರ್ಷಿಯಲ್ ವಿಮಾನದಲ್ಲಿ ಸೀಟು ಕಾಯ್ದಿರಿಸಲಾಗಿತ್ತು. ವಿಮಾನದ ಒಳಗಡೆ ಇಬ್ಬರು ನಾಯಕರು ಎದುರಾದಾಗ, ಹಳೆಯ ರಾಜಕೀಯ ಕಹಿ ನೆನಪುಗಳನ್ನು ಬದಿಗಿಟ್ಟು ಅತ್ಯಂತ ಸೌಜನ್ಯದಿಂದ ಕೈಕುಲುಕಿದ್ದಾರೆ.

ಇದೇ ವಿಮಾನದಲ್ಲಿ ಉದ್ಧವ್ ಠಾಕ್ರೆ ಅವರ ಆಪ್ತ ಹಾಗೂ ಸಂಸದ ಸಂಜಯ್ ರಾವತ್ ಮತ್ತು ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಕೂಡ ಪ್ರಯಾಣಿಸುತ್ತಿದ್ದರು. ಉದ್ಧವ್ ಠಾಕ್ರೆ ಮತ್ತು ದೇವೇಂದ್ರ ಫಡ್ನವಿಸ್ ಇಬ್ಬರೂ ಇದನ್ನು ಕೇವಲ ಕಾಕತಾಳೀಯ ಭೇಟಿ ಎಂದಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪೂರ್ವ ನಿಗದಿತ ಸರ್ಕಾರಿ ಮತ್ತು ರಾಜಕೀಯ ಕಾರ್ಯಕ್ರಮಗಳ ಭಾಗವಾಗಿ ತಮ್ಮ ತವರು ರಾಜ್ಯ ಮತ್ತು ವಿಧಾನಸಭಾ ಕ್ಷೇತ್ರವಾದ ನಾಗ್ಪುರಕ್ಕೆ ಪ್ರಯಾಣಿಸುತ್ತಿದ್ದರು. ಉದ್ಧವ್ ಠಾಕ್ರೆ ಶನಿವಾರದಿಂದ ಮೂರು ದಿನಗಳ ವಿದರ್ಭ ಮತ್ತು ಮರಾಠವಾಡ ಪ್ರವಾಸಕ್ಕಾಗಿ ನಾಗ್ಪುರಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: ಠಾಕ್ರೆಗೆ ಶಾಕ್; ಶಿವಸೇನೆಯ 6 ಬಂಡಾಯ ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ

ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ:

2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಬಳಿಕ ಶಿವಸೇನೆ ಮತ್ತು ಬಿಜೆಪಿ ಮೈತ್ರಿ ಮುರಿದುಬಿದ್ದಿತ್ತು. ಅದಾದ ನಂತರ ಉದ್ಧವ್ ಠಾಕ್ರೆ ಕಾಂಗ್ರೆಸ್-ಎನ್‌ಸಿಪಿ ಜೊತೆ ಸೇರಿ ಸರ್ಕಾರ ರಚಿಸಿದ್ದರು. ತದನಂತರ ಏಕನಾಥ್ ಶಿಂಧೆ ಬಂಡಾಯ ಎದ್ದು ಬಿಜೆಪಿಯೊಂದಿಗೆ ಸರ್ಕಾರ ರಚಿಸಿದಾಗಿನಿಂದ ಫಡ್ನವಿಸ್ ಮತ್ತು ಠಾಕ್ರೆ ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟಿತ್ತು. ಸಾರ್ವಜನಿಕ ವೇದಿಕೆಗಳಲ್ಲಿ ಒಬ್ಬರನ್ನೊಬ್ಬರು ಕಠಿಣ ಪದಗಳಿಂದ ಟೀಕಿಸುತ್ತಿದ್ದ ಇಬ್ಬರು ನಾಯಕರು ಈಗ ಹಸ್ತಲಾಘವ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಈಗ ಉಳಿದಿರುವುದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಾತ್ರ; ಉದ್ಧವ್ ಠಾಕ್ರೆಗೆ ಅಮಿತ್ ಶಾ ಟಾಂಗ್

“ಮಹಾರಾಷ್ಟ್ರದ ರಾಜಕೀಯ ಸಂಸ್ಕೃತಿಯಲ್ಲಿ ವೈಯಕ್ತಿಕ ದ್ವೇಷಕ್ಕೆ ಜಾಗವಿಲ್ಲ. ನಾವು ರಾಜಕೀಯವಾಗಿ ಭಿನ್ನಾಭಿಪ್ರಾಯ ಹೊಂದಿದ್ದರೂ, ಸಾರ್ವಜನಿಕವಾಗಿ ಎದುರಾದಾಗ ಕನಿಷ್ಠ ಸೌಜನ್ಯ ಪ್ರದರ್ಶಿಸುವುದು ನಮ್ಮ ಸಂಪ್ರದಾಯ” ಎಂದು ಉಭಯ ಪಕ್ಷಗಳ ನಾಯಕರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಿಪ್ಪೆ ಜಾಗದ ವಿವಾದಕ್ಕೆ ದಲಿತ ಕುಟುಂಬಗಳಿಗೆ ಬಹಿಷ್ಕಾರ: 3 ದಿನಗಳಿಂದ ಊರ ಒಳಗೆ ಹೋಗಲಾಗದೆ ಪರದಾಟ – Kannada News | Kamanahalli Caste Conflict: Dalit Families Allege Social Boycott and Road Blockade

ಹಾವೇರಿ, ಜೂನ್​ 26: ಜಿಲ್ಲೆಯ ಹಾನಗಲ್ ತಾಲೂಕಿನ ಕಾಮನಹಳ್ಳಿ ಗ್ರಾಮದಲ್ಲಿ ದಲಿತ ಕುಟುಂಬಗಳಿಗೆ (Dalit Families) ಸಾಮಾಜಿಕ ಬಹಿಷ್ಕಾರ (Social Boycott) ಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಿಪ್ಪೆ ಹಾಕುವ ಜಾಗದ ವಿವಾದ, ದಲಿತರು ಮತ್ತು ಸವರ್ಣೀಯರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು, ದಲಿತ ಕುಟುಂಬಗಳು ಓಡಾಡುವ ರಸ್ತೆಗೆ ಬೇಲಿ ಹಾಕಿ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ. ಜಿಲ್ಲೆಯ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ದಲಿತ ಕುಟುಂಬಗಳಿಗೆ ಬಹಿಷ್ಕಾರ 

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಾಮನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಮೂರು ದಲಿತ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಮುಪ್ಪಣ್ಣ ಹರಿಜನ, ಪ್ರಕಾಶ ಹರಿಜನ ಹಾಗೂ ಯಲಪ್ಪ ಹರಿಜನ ಅವರ ಕುಟುಂಬಗಳಿಗೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ತಮ್ಮ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ತಿಪ್ಪೆಯ ಕಸ ಹಾಗೂ ಮುಳ್ಳಿನ ಕಂಟೆಗಳನ್ನು ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಇದರಿಂದ ಓಡಾಟಕ್ಕೆ ತೊಂದರೆಯಾಗಿದ್ದು, ಶಾಲೆಗೆ ತೆರಳುವ ಮಕ್ಕಳು ಸಹ ಪರದಾಡುವಂತಾಗಿದೆ. ಕಳೆದ ಮೂರು ದಿನಗಳಿಂದ ಗ್ರಾಮಕ್ಕೆ ಹೋಗಲು ಹಾಗೂ ಹೊರಬರಲು ಕಷ್ಟವಾಗುತ್ತಿದೆ ಎಂದು ವಸಂತ ಹರಿಜನ ಹೇಳಿದ್ದಾರೆ.

ಇದನ್ನೂ ಓದಿ: ಶಹಾಪುರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ! ಸ್ಥಳೀಯಾಡಳಿತ, ಪೊಲೀಸರೂ ಮೌನ

ಈ ವಿವಾದದಕ್ಕೆ ಕಾರಣ ತಿಪ್ಪೆ ಹಾಕುವ ಜಾಗ. ಕಳೆದ 15 ವರ್ಷಗಳ ಹಿಂದೆ ಜಾಗವನ್ನು ತಿಪ್ಪೆ ಹಾಕಲು ಕೊಟ್ಟಿದ್ದವು. ಈಗ ನಮ್ಮದೆ ಜಾಗೆ ಅಂತಿದ್ದಾರೆ. ಇಡೀ ಗ್ರಾಮದ ಜನರು ಸೇರಿ ರಸ್ತೆ ಬಂದ್ ಮಾಡಿದ್ದಾರೆ. ಸರ್ಕಾರದಿಂದ ದಲಿತ ಕುಟುಂಬಗಳಿಗೆ ನೀಡಲಾಗಿದ್ದ ಜಾಗದಲ್ಲಿ ಸುಮಾರು ಒಂದು ಗುಂಟೆ ಪ್ರದೇಶವನ್ನು ಗ್ರಾಮದಲ್ಲಿನ ಸವರ್ಣೀಯರು ತಿಪ್ಪೆ ಹಾಕಲು ಬಳಸುತ್ತಿದ್ದರು. ಪಕ್ಕೀರೇಶ್ ಹಾವಳಿ ಎಂಬ ವ್ಯಕ್ತಿ ಹಾಗೂ ದಲಿತ ಕುಟುಂಬಗಳ ನಡುವೆ ಈ ವಿಚಾರವಾಗಿ ಮೊದಲಿನಿಂದಲೂ ಭಿನ್ನಾಭಿಪ್ರಾಯ ಇತ್ತು ಎನ್ನಲಾಗಿದೆ.

ಸಾಮಾಜಿಕ ಬಹಿಷ್ಕಾರ ಹೇರಿಲ್ಲ ಎಂದ ಸವರ್ಣೀಯರು

ಈಗ ತಿಪ್ಪೆ ಹಾಕುವ ಜಾಗ ತಮ್ಮದೇ ಎಂದು ಕೆಲವರು ಹೇಳುತ್ತಿದ್ದಾರೆ. ಇದನ್ನು ಪ್ರಶ್ನಿಸಿದ ಕಾರಣಕ್ಕೆ ತಮ್ಮನ್ನು ಊರಿನಿಂದಲೇ ಬಹಿಷ್ಕಾರ ಮಾಡಲಾಗಿದೆ ಎಂದು ದಲಿತ ಕುಟುಂಬಗಳು ಆರೋಪಿಸಿವೆ. ಇಡೀ ಗ್ರಾಮದ ಜನರು ಒಂದಾಗಿ ತಮ್ಮ ವಿರುದ್ಧ ನಿಂತಿದ್ದಾರೆ ಎಂದು ಕುಟುಂಬಗಳು ಅಸಮಾಧಾನ ವ್ಯಕ್ತಪಡಿಸಿವೆ. ಇನ್ನೊಂದೆಡೆ, ದಲಿತ ಕುಟುಂಬಗಳ ವಿರುದ್ಧ ಯಾವುದೇ ರೀತಿಯ ಸಾಮಾಜಿಕ ಬಹಿಷ್ಕಾರ ಹೇರಿಲ್ಲ ಎಂದು ಸವರ್ಣೀಯರ ಸ್ಪಷ್ಟಪಡಿಸಿದ್ದಾರೆ. ನಾವು ಬೇಲಿ ಹಾಕಿಲ್ಲ, ರಸ್ತೆ ಬಂದ್ ಮಾಡಿಲ್ಲ. ನಮ್ಮ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಮಾಲತೇಶ ಆನವಟ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಜಾತ್ರೆಗೆ ಹಣ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ: ಬಾಗಲಕೋಟೆಯಲ್ಲೊಂದು ಅಮಾನವೀಯ ಘಟನೆ

ತಿಪ್ಪೆ ಹಾಕುವ ಜಾಗದ ವಿವಾದ ಇದೀಗ ಸಾಮಾಜಿಕ ಬಹಿಷ್ಕಾರದ ಹಂತಕ್ಕೆ ತಲುಪಿದೆ. ಒಂದು ಕಡೆ ದಲಿತ ಕುಟುಂಬಗಳು ತಮ್ಮನ್ನು ಗ್ರಾಮದಿಂದಲೇ ದೂರ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದರೆ, ಮತ್ತೊಂದೆಡೆ ಗ್ರಾಮಸ್ಥರು ಈ ಆರೋಪ ತಳ್ಳಿಹಾಕಿದ್ದಾರೆ. ಸತ್ಯಾಸತ್ಯತೆ ಏನು ಎಂಬುದು ಪೊಲೀಸ್ ತನಿಖೆಯ ನಂತರವೇ ಸ್ಪಷ್ಟವಾಗಬೇಕಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ ಮಾತ್ರ: ಹೇಗಿದೆ ನೋಡಿ ಕೃಷ್ಣ ಪಥ – Kannada News | Bengaluru SM Krishna road to open on june 27, here Is route Details

ಬೆಂಗಳೂರು, (ಜೂನ್ 26): ಬೆಂಗಳೂರಿನ ಮೈಸೂರು ರಸ್ತೆ ಹಾಗೂ ಮಾಗಡಿ ರಸ್ತೆಯನ್ನು ಬೆಸೆಯುವ ಬಿಡಿಎಯ 10 ಪಥಗಳ ‘ಮೇಜರ್‌ ಆರ್ಟೀರಿಯಲ್‌ ರಸ್ತೆ’ (ಎಂಎಆರ್) ನಾಳೆ ಅಂದರೆ ಜೂನ್‌ 27ರಂದು ಲೋಕಾರ್ಪಣೆಯಾಗಲಿದೆ. ಮಾಜಿ ಸಿಎಂ ‘ಎಸ್.ಎಂ.ಕೃಷ್ಣ ರಸ್ತೆ’ ಎಂದು ನಾಮಕರಣಗೊಂಡಿರುವ ಈ ಟೋಲ್‌-ಮುಕ್ತ ಮಾರ್ಗವು, ಸಂಚಾರ ಸಮಯವನ್ನು ಕೇವಲ 15 ನಿಮಿಷಗಳಿಗೆ ತಗ್ಗಿಸಲಿದೆ. ನೈಸ್ ರಸ್ತೆಗೆ ಪರ್ಯಾಯವಾಗಿರುವ ಈ ರಸ್ತೆಯು ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜೊತೆಗೆ, ಕೆಂಪೇಗೌಡ ಬಡಾವಣೆಯ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ.

ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ಸಂಪರ್ಕಿಸುವ ವಾಹನಗಳು ಪ್ರಸ್ತುತ ನೈಸ್‌ ರಸ್ತೆ ಅಥವಾ ನಾಯಂಡಹಳ್ಳಿ -ಸುಮನಹಳ್ಳಿ ಜಂಕ್ಷನ್‌ ಮುಖಾಂತರ ಚಲಿಸಬೇಕಾಗಿದ್ದು, ಈ ಮಾರ್ಗದ ವಾಹನ ಸಂಚಾರ ಅವಧಿ 60 ನಿಮಿಷಗಳಷ್ಟಿತ್ತು. ಇದೀಗ ಎಸ್‌.ಎಂ.ಕೃಷ್ಣ ರಸ್ತೆ ಸಂಚಾರಮುಕ್ತವಾದ ಬಳಿಕ ಆ ಅವಧಿ 15 ನಿಮಿಷಗಳಿಗೆ ತಗ್ಗಲಿದೆ. ಇನ್ನು ನಾಳೆ ಉದ್ಘಾಟನೆಯಾಗುತ್ತಿರುವುದರಿಂದ ರಸ್ತೆ ಲೈಟಿಂಗ್ಸ್​​ನಿಂದ ಜಗಮಗಿಸುತ್ತಿದೆ.

 

Source link

Exit mobile version