ಬೀದರ್: ಗಾಳಿ ಸಹಿತ ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು – Kannada News | Bidar Tragedy: 6 Year Old Child Dies After Roof Debris Falls During Hailstorm

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…

Read More

Source link

ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ; ಏನಿದರ ವಿಶೇಷತೆ? – Kannada News | Producer Latha Jayaprakash talks about AI Movie on Kittur Rani Chennamma

ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ನಟಿಯರ ಮುಖ ಬಳಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಆಶಯ ಆಗಿತ್ತು. ಆದರೆ ನಟಿಯರು ಹೆಚ್ಚು ಸಂಭಾವನೆ ಕೇಳಿದ್ದರಿಂದ ಅದು ಸಾಧ್ಯವಾಗಲಿಲ್ಲ. ಚೆನ್ನೈ, ಮುಂಬೈನಿಂದ ಅತ್ಯುತ್ತಮ ಎಐ (AI) ತಂತ್ರಜ್ಞರನ್ನು ಕರೆಸಿ ಈ ಸಿನಿಮಾ ಮಾಡಿಸಲಾಗುತ್ತಿದೆ. ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿ ಈ ಸಿನಿಮಾ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಶ್ವೇತಾ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಇದು ಒಂದು ರೀತಿಯ ಪ್ರಯೋಗಾತ್ಮಕ ಸಿನಿಮಾ. ನಮ್ಮ ಎರಡನೇ ನಿರ್ಮಾಣದ ಸಿನಿಮಾ ಇದು. ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಸಿನಿಮಾ ಮಾಡುತ್ತಿರುವುದು ನಮ್ಮ ಹೆಗ್ಗಳಿಕೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs AFG: ಭಾರತ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ – Kannada News | India vs Afghanistan 2026: Full Squads, Test and ODI Series Schedule Announced

2026 ರ ಐಪಿಎಲ್ ಮುಗಿದ ಬಳಿಕ ಟೀಂ ಇಂಡಿಯಾ ಹಾಗೂ ಅಫ್ಘಾನಿಸ್ತಾನದ ನಡುವೆ ಒಂದು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಭಾರತದ ಆತಿಥ್ಯದಲ್ಲಿ ನಡೆಯಲಿರುವ ಈ ಸರಣಿಗೆ ಬಿಸಿಸಿಐ ಈಗಾಗಲೇ ತಂಡಗಳನ್ನು ಪ್ರಕಟಿಸಿದೆ. ಇದೀಗ ಐಪಿಎಲ್ ಪ್ಲೇಆಫ್‌ ನಡುವೆ ಅಫ್ಘಾನಿಸ್ತಾನ ಕೂಡ ತನ್ನ ತಂಡವನ್ನು ಪ್ರಕಟಿಸಿದೆ. ಹಶ್ಮತುಲ್ಲಾ ಶಾಹಿದಿ ನಾಯಕತ್ವದಲ್ಲಿ ಅಫ್ಘಾನಿಸ್ತಾನದ ಟೆಸ್ಟ್ ಮತ್ತು ಏಕದಿನ ತಂಡಗಳೆರಡನ್ನು ಪ್ರಕಟಿಸಲಾಗಿದೆ. ಟೆಸ್ಟ್ ಪಂದ್ಯಕ್ಕೆ ರಶೀದ್ ಖಾನ್ ಮತ್ತು ಇಬ್ರಾಹಿಂ ಜದ್ರಾನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ರಹಮಾನುಲ್ಲಾ ಜದ್ರಾನ್, ಬಿಲಾಲ್ ಸಮಿ ಮತ್ತು ನೆಂಗಿಯಾಲಿಯಾ ಖರೋಟೆ ಅವರನ್ನು ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಭಾರತ-ಅಫ್ಘಾನಿಸ್ತಾನ ಸರಣಿ ವೇಳಾಪಟ್ಟಿ

  • ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯವು ನ್ಯೂ ಚಂಡೀಗಢದ ನ್ಯೂ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯವು ಜೂನ್ 6 ರಿಂದ ಪ್ರಾರಂಭವಾಗಲಿದೆ.
  • ಮೊದಲ ಏಕದಿನ ಪಂದ್ಯ ಜೂನ್ 13 ರಂದು ಮಧ್ಯಾಹ್ನ 1.30 ಕ್ಕೆ ಧರ್ಮಶಾಲಾದಲ್ಲಿ ನಡೆಯಲಿದೆ.
  • ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
  • ಮೂರನೇ ಏಕದಿನ ಪಂದ್ಯ ಜೂನ್ 20 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಧ್ಯಾಹ್ನ 1.30 ರಿಂದ ಆರಂಭವಾಗಲಿದೆ.

ಮುಖಾಮುಖಿ ದಾಖಲೆ

ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಇಲ್ಲಿಯವರೆಗೆ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ಟೀಂ ಇಂಡಿಯಾ ಮೂರರಲ್ಲಿ ಗೆದ್ದಿದೆ. ಒಂದು ಪಂದ್ಯ ಟೈನಲ್ಲಿ ಕೊನೆಗೊಂಡಿದೆ. ಅಂದರೆ ಅಫ್ಘಾನಿಸ್ತಾನ ಇದುವರೆಗೆ ಭಾರತದ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಒಂದು ಟೆಸ್ಟ್ ಪಂದ್ಯ ನಡೆದಿದ್ದು, ಆ ಪಂದ್ಯವನ್ನು ಭಾರತ ಗೆದ್ದಿದೆ.

ಅಫ್ಘಾನಿಸ್ತಾನ ಟೆಸ್ಟ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಅಬ್ದುಲ್ ಮಲಿಕ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ರಹಮಾನುಲ್ಲಾ ಗುರ್ಬಾಜ್, ರಹಮಾನುಲ್ಲಾ ಝದ್ರಾನ್, ಅಫ್ಸರ್ ಝಜೈ (ವಿಕೆಟ್ ಕೀಪರ್), ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜೈ, ಶರಫುದಿನ್ ಅಶ್ರಫ್, ನಂಗ್ಯಾಲ್ ಖರೋಟೈ, ಖೈಸ್ ಅಹ್ಮದ್, ಬಿಲಾಲ್ ಸಮಿ, ಜಿಯಾ ಶರೀಫಿ, ಸಲೀಮ್ ಸಫಿ

ಅಫ್ಘಾನಿಸ್ತಾನ ಏಕದಿನ ತಂಡ: ಹಸ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ರಹಮತ್ ಷಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ನಂಗ್ಯಾಲ್ ಖರೋಟೈ, ಎಎಮ್ ಗಜನ್ಫರ್, ಜಿಯಾ ಯು ರೆಹಮಾನ್ ಶರೀಫಿ, ಫರೀದ್ ಮಲಿಕ್, ಬಿಲಾಲ್ ಸಾಮಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:29 pm, Tue, 26 May 26

Source link

ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ – Kannada News | Inalienable part of India MEA rips into China and Pakistans reference to Jammu and Kashmir

ನವದೆಹಲಿ, ಮೇ 26: ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಬಿಡುಗಡೆ ಮಾಡಿದ್ದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು (Jammu and Kashmir) ಉಲ್ಲೇಖಿಸಿದ್ದಕ್ಕೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ” ಎಂದು ಪುನರುಚ್ಚರಿಸಿರುವ ಭಾರತ ಚೀನಾ-ಪಾಕಿಸ್ತಾನದ ವಿರುದ್ಧ ಕಿಡಿಕಾರಿದೆ.

ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಚೀನಾ-ಪಾಕಿಸ್ತಾನ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಕುರಿತು ಮಾಡಲಾದ ಅನಗತ್ಯ ಉಲ್ಲೇಖಗಳನ್ನು ಭಾರತವು ಖಡಾಖಂಡಿತವಾಗಿ ಖಂಡಿಸುತ್ತದೆ ಎಂದು ಹೇಳಿದರು. ಭಾರತದ ದೀರ್ಘಾವಧಿಯ ನಿಲುವನ್ನು ಪುನರುಚ್ಚರಿಸಿದ ರಣಧೀರ್ ಜೈಸ್ವಾಲ್, ಭಾರತದ ಅವಿಭಾಜ್ಯ ಅಂಗಗಳಾಗಿರುವ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವ ಯಾವುದೇ ಹಕ್ಕು ಬೇರೆ ಯಾವುದೇ ದೇಶಕ್ಕೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಏನಿದು ಅಬ್ರಹಾಂ ಒಪ್ಪಂದ? ಟ್ರಂಪ್ ಮಾತಿಗೆ ಒಪ್ಪಿದರೆ ಪಾಕಿಸ್ತಾನದ ಪಾಸ್​ಪೋರ್ಟ್ ಏಕೆ ಬದಲಾಗುತ್ತದೆ?

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಕುರಿತಾದ ಉಲ್ಲೇಖಗಳಿಗೂ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುವ ಮೂಲಕ ಈ ಪ್ರದೇಶಗಳ ಮೇಲಿನ ಪಾಕಿಸ್ತಾನದ ಅಕ್ರಮ ಮತ್ತು ಬಲವಂತದ ಆಕ್ರಮಣವನ್ನು ಬಲಪಡಿಸಲು ಅಥವಾ ಕಾನೂನುಬದ್ಧಗೊಳಿಸಲು ಇತರ ದೇಶಗಳು ಮಾಡುವ ಯಾವುದೇ ಪ್ರಯತ್ನಗಳನ್ನು ನಾವು ದೃಢವಾಗಿ ವಿರೋಧಿಸುತ್ತೇವೆ ಮತ್ತು ತಿರಸ್ಕರಿಸುತ್ತೇವೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ

1963ರಲ್ಲಿ ಪಾಕಿಸ್ತಾನ ಮತ್ತು ಚೀನಾ ನಡುವೆ ಸಹಿ ಮಾಡಲಾದ ಗಡಿ ಒಪ್ಪಂದವನ್ನು ಭಾರತ ಎಂದಿಗೂ ಮಾನ್ಯ ಮಾಡಿಲ್ಲ ಎಂಬುದನ್ನು ಭಾರತ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ತಮ್ಮ ಜಂಟಿ ಹೇಳಿಕೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ವಿಶ್ವಸಂಸ್ಥೆಯ ಚಾರ್ಟರ್, ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳ ಪ್ರಕಾರ ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಚೀನಾ ಮತ್ತು ಪಾಕಿಸ್ತಾನ ಉಲ್ಲೇಖಿಸಿದ್ದವು. ಇದರೊಂದಿಗೆ, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಜಮ್ಮು-ಕಾಶ್ಮೀರ ಭಾಗದ “ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್” (CPEC) ಯೋಜನೆಗಳನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆಯೂ ಚರ್ಚಿಸಲಾಗಿತ್ತು. ಇದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕನ್ನ: ಲಾಕರನ್ನೇ ಕದ್ದೊಯ್ದ ಕಳ್ಳರು; ಬಂಧನ – Kannada News | House Robbery During Kashi Pilgrimage: Thieves Who Stole Locker Arrested

ವಶಕ್ಕೆ ಪಡೆದುಕೊಂಡಿರುವ ಚಿನ್ನಾಭರಣಗಳುImage Credit source: tv9 kannada

ಬೆಂಗಳೂರು, ಮೇ 26: ನಗರದಲ್ಲಿ ಕಳ್ಳತನ (Theft) ಕೇಸ್​​ಗಳು ಕಡಿಮೆಯಾಗುತ್ತಿಲ್ಲ. ಭಿನ್ನ ವಿಭಿನ್ನ ರೀಯಿಯಲ್ಲಿ ಖದೀಮರು ದೋಚುತ್ತಿರುತ್ತಾರೆ. ಇತ್ತೀಚೆಗೆ ಒಂದು ತಂಡ ಜ್ಯುವೆಲರಿ ಶಾಪ್​​ಗೆ ಕನ್ನ ಹಾಕಿದ್ದರು. ಇದೀಗ ಮತ್ತೊಂದು ತಂಡ ಕಾಶಿ ಯಾತ್ರೆಗೆ ಹೋಗಿದ್ದವರ ಮನೆ ಟಾರ್ಗೆಟ್ ಮಾಡಿ ನುಗ್ಗಿದ್ದಾರೆ. ಎರಡು ಕೇಸ್​​​ ಭೇದಿಸಿರುವ ಪೊಲೀಸರು ದೋಚಿರುವ ವಸ್ತುಗಳ ಸಮೇತ ಆರೋಪಿಗಳ ಹೆಡೆಮುರಿ (Arrest) ಕಟ್ಟಿದ್ದಾರೆ.

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಂಗಾಧರ, ಬಸವ ಮತ್ತು ಕಿರಣ್ ಬಂಧಿತ ಆರೋಪಿಗಳು. ಸದ್ಯ ಬಂಧಿತರಿಂದ 70 ಲಕ್ಷ ರೂ ಮೌಲ್ಯದ ಅರ್ಧ ಕೆ.ಜಿ ಚಿನ್ನ, 1.43 ಲಕ್ಷ ರೂ. ನಗದು ಹಣ ಮತ್ತು 750 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪಕ್ಕಾ ಪ್ಲ್ಯಾನ್​ ಮಾಡಿ ಲಾಕರ್​​ರನ್ನೇ ಹೊತ್ತೊಯ್ದ ಖದೀಮರು

ಮಾರ್ಚ್ 26ರಂದು ಬ್ಯಾಡರಹಳ್ಳಿ ಸಿಂಡಿಕೇಟ್ ಲೇಔಟ್‌ನಲ್ಲಿ ಮನೆಯೊಂದನ್ನು ಟಾರ್ಗೆಟ್ ಮಾಡಿದ್ದ ಕಳ್ಳರು, ಅದಕ್ಕೂ ಎರಡು ಮೂರು ದಿನ ಏರಿಯಾದಲ್ಲಿ ರೌಂಡ್ಸ್ ಹಾಕಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲ ಅನ್ನೋದು ಗೊತ್ತಾಗಿದೆ. ಇತ್ತ ಮನೆ ಮಾಲೀಕರು ಕುಟುಂಬ ಸಮೇತ ಕಾಶಿಗೆ ತೀರ್ಥಯಾತ್ರೆಗೆ ಹೋಗಿದ್ದರು. ಮೂರ್ನಾಲ್ಕು ದಿನ ಮನೆ ಗಮನಿಸಿದ ಕಳ್ಳರ ತಂಡಕ್ಕೆ ಗೇಟ್ ಬಳಿ ಹಾಲು, ಪೇಪರ್ ಬಿದ್ದಿರುವುದು ನೋಡಿ ಯಾರು ಇಲ್ಲ ಅನ್ನೋದು ಗೊತ್ತಾಗಿತ್ತು.

ಇದನ್ನೂ ಓದಿ: ಹಳೆ ಮಾಲೀಕನ ಮನೆಗೆ ನುಗ್ಗಿ ಚಿನ್ನಾಭರಣ ಕದ್ದ ಮಾಜಿ ಕಾರು ಚಾಲಕ: ಸಿನಿಮಾ ಸ್ಟೈಲ್​​ನಲ್ಲಿ ಕಳ್ಳತನ

ಪ್ಲಾನ್ ಮಾಡಿ ಮನೆಯೊಳಗೆ ನುಗ್ಗಿದ್ದ ಟೀಂ ಒಳಗಿದ್ದ ಲಾಕರ್ ಅನ್ನು ಒಡೆಯಲು ಪ್ರಯತ್ನಿಸಿದ್ದರು. ಆದರೆ ಅದು ಓಪನ್ ಆಗದ ಕಾರಣ ಲಾಕರ್ ಅನ್ನೇ ಹೊತ್ತೊಯ್ದು ಅದರಲ್ಲಿದ್ದ ಚಿನ್ನಾಭರಣ, ಹಣ ಎಲ್ಲವನ್ನೂ ತೆಗೆದುಕೊಂಡಿದ್ದಾರೆ. ಕಾಶಿಯಿಂದ ವಾಪಸ್ ಬಂದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಕೂಡಲೇ ಬ್ಯಾಡರಹಳ್ಳಿ ಠಾಣೆಗೆ ಮನೆ ಮಾಲೀಕರು ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.

ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೆಜಿಗಟ್ಟಲೆ‌ ಬೆಳ್ಳಿ ಕಳ್ಳತನ

ಇನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಖತರ್ನಾಕ್ ಗ್ಯಾಂಗ್​ವೊಂದನ್ನ ಅರೆಸ್ಟ್ ಮಾಡಿದ್ದಾರೆ. ಜ್ಯುವೆಲ್ಲರಿ ಅಂಗಡಿಯ ಗೋಡೆ ಕೊರೆದು ಕೆಜಿಗಟ್ಟಲೇ ಬೆಳ್ಳಿ ವಸ್ತುಗಳನ್ನ ಕದ್ದು ಎಸ್ಕೇಪ್ ಆಗಿದ್ದ ಮೂವರನ್ನ ಬಂಧಿಸಿದ್ದಾರೆ. ಜಾಟ್ ಸುರೇಶ್, ಧನರಾಮ್, ನೇಮಿಚಂದ್​​ ಎಂಬುವವರನ್ನು ಮಾಲ್ ಸಮೇತ ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಹೆಸರಘಟ್ಟ ಮುಖ್ಯ ರಸ್ತೆಯಲ್ಲಿರುವ ಎಂಬಿ ಜ್ಯುವೆಲ್ಲರ್ಸ್ ಶಾಪ್​​ ಟಾರ್ಗೆಟ್ ಮಾಡಿದ್ದ ಆರೋಪಿಗಳು ಏಪ್ರಿಲ್ 27ರ ಬೆಳಗಿನ ಜಾವ ಗೋಡೆ ಕೊರದಿದ್ದರು. ಮಹೇಂದ್ರ ಕುಮಾರ್ ಎಂಬಾತ ತನ್ನ ಟೀಂ ಸಮೇತ ನುಗ್ಗಿದ್ದ. ಶಟರ್ ಮುರಿದು ಮತ್ತು ಗೋಡೆ ಕೊರೆದು ಒಳ ಹೊಕ್ಕಿದ್ದವರು ಸುಮಾರು 70 ಕೆಜಿ ಬೆಳ್ಳಿ ದೋಚಿದ್ದರು. ಜೊತೆಗೆ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್​ಗಳನ್ನು ಎಗರಿಸಿದ್ದಾರೆ.

ಬಂಗಾರ ಮುಟ್ಟದ ಕಳ್ಳರು

ಇಲ್ಲಿ ಮತ್ತೊಂದು ವಿಷಯ ಏನೆಂದರೆ ಜ್ಯುವೆಲ್ಲರಿ ಶಾಪ್​ನಲ್ಲಿ ಎಷ್ಟೇ ಬಂಗಾರ ಇದ್ದರು ಅದನ್ನ ಟಚ್ ಕೂಡ ಮಾಡಿರಲಿಲ್ಲ. ಬೆಳ್ಳಿಯನ್ನ ಮಾತ್ರ ಕೆಜಿಗಟ್ಟಲೇ ಬ್ಯಾಗ್​ಗೆ ತುಂಬಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಮುಂಚೆ ಕೂಡ ಇಂತಹದ್ದೇ ಕೃತ್ಯ ನಡೆಸಿದ್ದರೂ ಬಂಗಾರ ಕಳ್ಳತನ ಮಾಡಿರಲಿಲ್ಲ.

ಇದನ್ನೂ ಓದಿ: ಇದೇ ಕರ್ನಾಟಕ ಪೊಲೀಸ್ ತಾಕತ್ತು: ಇಡೀ ದೇಶದೆಲ್ಲೆಡೆ 100ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಖದೀಮ ಬೆಂಗಳೂರಿನಲ್ಲಿ ಲಾಕ್

ಇನ್ನು ಆರೋಪಿಗಳು ತಾವು ದೋಚಿದ್ದ ಬೆಳ್ಳಿಯ ಅರ್ಧ ಭಾಗವನ್ನು ಹೈದರಾಬಾದ್‌ನಲ್ಲಿ ಮಾರಾಟ ಮಾಡಿ, ನಂತರ ರಾಜಸ್ಥಾನಕ್ಕೆ ಪರಾರಿಯಾಗಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬಾಗಲಗುಂಟೆ ಪೊಲೀಸರು, ಒಂದು ಕೋಟಿ ರೂ ಮೌಲ್ಯದ 36 ಕೆಜಿ ಬೆಳ್ಳಿ ಸಮೇತ ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಗ್ಯಾಂಗ್‌ನ ಕಿಂಗ್‌ಪಿನ್ ಆಗಿರುವ ಮಹೇಂದ್ರ ಎಂಬಾತನಿಗಾಗಿ ಬಾಗಲಗುಂಟೆ ಪೊಲೀಸರು ಬಲೆ ಬೀಸಿದ್ದು, ತನಿಖೆ ನಡೆಸಿದ್ದಾರೆ.

ವರದಿ: ವಿಕಾಸ್ Tv9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇದೀಗ ಬಂದ ಸುದ್ದಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ – Kannada News | Karnataka power tussle: Siddaramaiah Likely Resign to CM Post This Week

ನವದೆಹಲಿ/ಬೆಂಗಳೂರು, (ಮೇ 26): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದು, ಈ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಆಪ್ತರು ಸಿದ್ದರಾಮಯ್ಯಗೆ ಸಲಹೆ ನೀಡಿದ್ದು, ನಿಮ್ಮ ಪರವಾಗಿ ನಾವೇ ರಾಹುಲ್​ ಗಾಂಧಿ ಬಳಿ ಮಾತನಾಡುತ್ತೇವೆ ಎಂದಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ಇಲ್ಲ, ನಾನು ರಾಹುಲ್​ ಗಾಂಧಿಯವರನ್ನ ನಿರಾಕರಿಸಲು ಸಾಧ್ಯವಿಲ್ಲ. ನಾನು ರಾಜೀನಾಮೆ ಕೊಡುತ್ತೇನೆ, ನೀವು ಬೇಕಾದ್ರೆ ಹೋಗಿ ಮಾತಾಡಿ ಎಂದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನಾಯಕತ್ವ ಬದಲಾವಣೆ: ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ?

Source link

ಆರ್ಟ್ ಆಫ್ ಲಿವಿಂಗ್ 45ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಬಾಲಿವುಡ್ ತಾರೆಯರು, ಗಣ್ಯರು – Kannada News | Art Of Living 45 Years Celebration in Bengaluru Vikrant Massey Rajkumar Hirani attend

ಆಧ್ಯಾತ್ಮಿಕ ಮತ್ತು ಮಾನವೀಯ ಆಂದೋಲನದ ಪ್ರಮುಖ ಸಂಸ್ಥೆಯಾದ ‘ಆರ್ಟ್ ಆಫ್ ಲಿವಿಂಗ್’ (Art of Living) ತನ್ನ 45 ವರ್ಷಗಳ ಯಶಸ್ವಿ ಪ್ರಯಾಣವನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಭವ್ಯ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಮೌಲ್ಯಗಳ ಜಾಗೃತಿಯನ್ನು ಗೌರವಿಸಲು ದೇಶದ ಪ್ರಮುಖ ಚಿತ್ರನಿರ್ಮಾಪಕರು, ಬಾಲಿವುಡ್ ತಾರೆಯರು ಹಾಗೂ ರಾಜಕೀಯ ಮುಖಂಡರು ಒಂದೇ ಸೂರಿನಡಿ ಸೇರಿದರು.

ಈ ಕಾರ್ಯಕ್ರಮದಲ್ಲಿ ಕೇರಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಖ್ಯಾತ ಚಲನಚಿತ್ರ ನಿರ್ದೇಶಕ ರಾಜ್ ಕುಮಾರ್ ಹಿರಾನಿ, ಹೆಸರಾಂತ ನಿರ್ಮಾಪಕ ಸಾಜಿದ್ ನಾಡಿಯಾಡ್ವಾಲಾ, ನಟ ವಿಕ್ರಾಂತ್ ಮಾಸ್ಸಿ, ನಟ-ಹಾಸ್ಯ ಕಲಾವಿದ ಸುನಿಲ್ ಗ್ರೋವರ್, ಕವಿ ಹಾಗೂ ನಟ ವಿನೀತ್ ಕುಮಾರ್ ಸಿಂಗ್, ಸೆಲೆಬ್ರಿಟಿ ಫೋಟೋಗ್ರಾಫರ್ ಅವಿನಾಶ್ ಗೋವಾರಿಕರ್ ಮತ್ತು ಚಲನಚಿತ್ರ ನಿರ್ಮಾಪಕ ಮಹಾವೀರ್ ಜೈನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಗುರೂಜಿ ಅವರ ಸನ್ನಿಧಿಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.

‘ವೈಟ್’ ಚಿತ್ರದಲ್ಲಿ ಗುರೂಜಿ ಪಾತ್ರ ಮಾಡಿದ ವಿಕ್ರಾಂತ್ ಮಾಸ್ಸಿ ಭಾವುಕ:

ಕಾರ್ಯಕ್ರಮದ ಅತ್ಯಂತ ಭಾವುಕ ಕ್ಷಣ ಎದುರಾಗಿದ್ದು ನಟ ವಿಕ್ರಾಂತ್ ಮಾಸ್ಸಿ ಅವರು ಮಾತನಾಡಿದಾಗ. ಮುಂಬರುವ ಬಯೋಪಿಕ್ ‘ವೈಟ್’ ಸಿನಿಮಾದಲ್ಲಿ ಗುರೂಜಿ ಶ್ರೀ ಶ್ರೀ ರವಿಶಂಕರ್ ಅವರ ಪಾತ್ರವನ್ನು ತಾವೇ ನಿರ್ವಹಿಸುತ್ತಿರುವುದಾಗಿ ವಿಕ್ರಾಂತ್ ಮಾಸ್ಸಿ ಬಹಿರಂಗಪಡಿಸಿದರು. ನೆರೆದಿದ್ದ ಸಹಸ್ರಾರು ಭಕ್ತರ ಚಪ್ಪಾಳೆಯ ನಡುವೆ ಮಾತನಾಡಿದ ಅವರು, ‘ಈ ಆಶ್ರಮವೇ ನನ್ನ ಮನೆ. ನನ್ನ ಗುರು, ನನ್ನ ಸರ್ವಸ್ವವೂ ಆಗಿರುವವರ ಪಾತ್ರವನ್ನು ತೆರೆಯ ಮೇಲೆ ನಿರ್ವಹಿಸುವ ಸುವರ್ಣಾವಕಾಶ ನನಗೆ ಸಿಕ್ಕಿದೆ. ಆ ಪಾತ್ರಕ್ಕೆ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ನಾನು ಸದಾ ಕೃತಜ್ಞನಾಗಿರುತ್ತೇನೆ’ ಎಂದು ಭಾವುಕರಾದರು.

Vikrant Massey

ಶೂಟಿಂಗ್ ಮುನ್ನ ಇಡೀ ಚಿತ್ರತಂಡಕ್ಕೆ ಸುದರ್ಶನ ಕ್ರಿಯೆ ಕಲಿಸುವ ರಾಜ್ ಕುಮಾರ್ ಹಿರಾನಿ:

ಹೆಸರಾಂತ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಅವರು ಗುರೂಜಿ ಅವರೊಂದಿಗಿನ ತಮ್ಮ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡರು. ‘ನಾನು ಇಲ್ಲಿಗೆ ಬಂದಾಗಲೆಲ್ಲಾ ಒಂದು ವಿಶಿಷ್ಟವಾದ ಸಕಾರಾತ್ಮಕ ಶಕ್ತಿಯನ್ನು ಅನುಭವಿಸುತ್ತೇನೆ. ನಾನು ಯಾವುದೇ ಹೊಸ ಸಿನಿಮಾದ ಶೂಟಿಂಗ್ ಆರಂಭಿಸುವ ಮುನ್ನ, ನನ್ನ ಇಡೀ ಚಿತ್ರತಂಡದ ಸದಸ್ಯರಿಗೆ ಸುದರ್ಶನ ಕ್ರಿಯೆಯನ್ನು ಕಡ್ಡಾಯವಾಗಿ ಕಲಿಸುತ್ತೇನೆ’ ಎಂದು ತಮ್ಮ ಯಶಸ್ಸಿನ ರಹಸ್ಯವನ್ನು ಹಂಚಿಕೊಂಡರು.

Rajkumar Hirani

ಹಾಸ್ಯ ನಟ ಸುನಿಲ್ ಗ್ರೋವರ್ ಅವರು ಈ ಹಿಂದೆ ತಾವು ಭಾಗವಹಿಸಿದ್ದ ಧ್ಯಾನ ಶಿಬಿರದ ನೆನಪುಗಳನ್ನು ಹಾಸ್ಯದ ಶೈಲಿಯಲ್ಲಿ ಹಂಚಿಕೊಂಡು ನೆರೆದಿದ್ದವರನ್ನು ನಗಿಸಿದರು. ನಿರ್ಮಾಪಕ ಮಹಾವೀರ್ ಜೈನ್ ಮಾತನಾಡಿ, ‘70 ವರ್ಷಗಳ ಕಾಲ ಜಗತ್ತಿನಲ್ಲಿ ಒಳಿತನ್ನು ಗಟ್ಟಿಗೊಳಿಸಿದ್ದಕ್ಕಾಗಿ ಮತ್ತು ಕೋಟ್ಯಂತರ ಜನರಿಗೆ ಹೇಗೆ ಬದುಕಬೇಕೆಂದು ಕಲಿಸಿಕೊಟ್ಟಿದ್ದಕ್ಕಾಗಿ ನಾವು ನಿಮಗೆ ಧನ್ಯವಾದ ಅರ್ಪಿಸಲು ಬಂದಿದ್ದೇವೆ’ ಎಂದರು. ಫೋಟೋಗ್ರಾಫರ್ ಅವಿನಾಶ್ ಗೋವಾರಿಕರ್ ಹಾಗೂ ನಟ ವಿನೀತ್ ಕುಮಾರ್ ಸಿಂಗ್ ಕೂಡ ತಮಗೆ ಆಶ್ರಮದಲ್ಲಿ ಉಂಟಾದ ದೈವಿಕ ಅನುಭವವನ್ನು ಹಂಚಿಕೊಂಡರು.

ಇದನ್ನೂ ಓದಿ: ನನ್ನನ್ನು ಯಾರೂ ಕಣ್ಣೆತ್ತಿ ನೋಡಲಿಲ್ಲ: ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಅನುಭವ ಬಿಚ್ಚಿಟ್ಟ ರಜನಿಕಾಂತ್

ಆಧ್ಯಾತ್ಮಿಕ ನಾಯಕರ ಮಾರ್ಗದರ್ಶನ ಜಗತ್ತಿಗೆ ಅಗತ್ಯ ಎಂದ ಕೇರಳ ರಾಜ್ಯಪಾಲರು:

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಭಾರತದ ಆಧ್ಯಾತ್ಮಿಕ ಜ್ಞಾನವನ್ನು ಜಗತ್ತಿನಾದ್ಯಂತ ಪಸರಿಸುತ್ತಿರುವ ಗುರೂಜಿ ಅವರ ಕಾರ್ಯವನ್ನು ಶ್ಲಾಘಿಸಿದರು. ‘ಇಂತಹ ಮಹಾತ್ಮರು ತಮಗಾಗಿ ಬದುಕುವುದಿಲ್ಲ, ಇತರರ ಉದ್ಧಾರಕ್ಕಾಗಿ ಬದುಕುತ್ತಾರೆ. ಇಂದಿನ ಆಧುನಿಕ ಜಗತ್ತಿಗೆ ಮಾರ್ಗದರ್ಶನ ನೀಡಲು ಇಡೀ ವಿಶ್ವಕ್ಕೆ ನಮ್ಮ ಗುರೂಜಿ ಅವರಂತಹ ಅಪರೂಪದ ಆಧ್ಯಾತ್ಮಿಕ ನಾಯಕರ ಅಗತ್ಯವಿದೆ’ ಎಂದರು. ಬಿಹಾರದ ಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಅವರು ವಿಡಿಯೋ ಸಂದೇಶದ ಮೂಲಕ ಸಂಸ್ಥೆಯ ಗ್ರಾಮೀಣಾಭಿವೃದ್ಧಿ ಮತ್ತು ಯುವ ಸಬಲೀಕರಣದ ಕಾರ್ಯಗಳನ್ನು ಪ್ರಶಂಸಿಸಿದರು.

Rajendra Vishwanath Arlekar

‘ಇಂಟ್ಯೂಷನ್ ಫೆಸ್ಟ್’:

ಆಚರಣೆಯ ಪ್ರಮುಖ ಆಕರ್ಷಣೆಯಾಗಿ ‘ಇಂಟ್ಯೂಷನ್ ಫೆಸ್ಟ್’ ಆಯೋಜಿಸಲಾಗಿತ್ತು. ಇದರಲ್ಲಿ 11,000ಕ್ಕೂ ಹೆಚ್ಚು ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು. ಆರ್ಟ್ ಆಫ್ ಲಿವಿಂಗ್‌ನ ವಿಶೇಷ ತರಬೇತಿ ಪಡೆದ ಮಕ್ಕಳು ಕಣ್ಣಿಗೆ ಬಟ್ಟೆ ಕಟ್ಟಿ ಪುಸ್ತಕ ಓದುವುದು, ಆಟ ಆಡುವುದು ಮತ್ತು ಚಿತ್ರ ಬಿಡಿಸುವ ಮೂಲಕ ತಮ್ಮ ತೀಕ್ಷ್ಣ ಬುದ್ಧಿಮತ್ತೆಯನ್ನು ಪ್ರದರ್ಶಿಸಿದರು. ಅತ್ಯಂತ ಆಶ್ಚರ್ಯಕರ ಘಟನೆಯೆಂದರೆ, 50ಕ್ಕೂ ಹೆಚ್ಚು ಮಕ್ಕಳು ಕಣ್ಣಿಗೆ ಸಂಪೂರ್ಣವಾಗಿ ಬಟ್ಟೆ ಕಟ್ಟಿಕೊಂಡು ಆಶ್ರಮದ ತಿರುವು ಮುರುವು ರಸ್ತೆಗಳಲ್ಲಿ ಅತ್ಯಂತ ಸುಲಭವಾಗಿ ಸೈಕಲ್ ಚಲಾಯಿಸಿ ನೆರೆದಿದ್ದವರನ್ನು ಬೆರಗುಗೊಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

5 ರೂ.ಗೆ ತಟ್ಟೆ ತುಂಬ ಮೀನು ಊಟ; ಏನಿದು ಹೊಸ ಯೋಜನೆ? – Kannada News | Fish rice meals for Rs 5 in West Bengal CM Suvendu Adhikari announces new initiatives

ಕೊಲ್ಕತ್ತಾ, ಮೇ 26: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಇಂದು ರಾಜ್ಯದ ಜನರಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಇವುಗಳಲ್ಲಿ 5 ರೂ.ಗೆ ಮೀನು ಊಟ, ಅನ್ನಪೂರ್ಣ ಯೋಜನೆ ಮತ್ತು ರಾಜ್ಯಾದ್ಯಂತ ಮದ್ಯದಂಗಡಿಗಳ ಕುರಿತು ಹೊಸ ನಿಯಮಗಳು ಕೂಡ ಸೇರಿವೆ. ಈ ಮೀನೂಟದಲ್ಲಿ ತಟ್ಟೆಯ ತುಂಬ ಬಿಸಿ ಬಿಸಿ ಅನ್ನ, ದಾಲ್ ಅಥವಾ ಬೇಳೆ ಸಾರು, ಒಂದು ಬಗೆಯ ತರಕಾರಿ ಪಲ್ಯ, ರುಚಿಕರವಾದ ಮೀನಿನ ಸಾರು ಅಥವಾ ಫಿಶ್ ಫ್ರೈ ನೀಡಲಾಗುವುದು. ಬುಧವಾರದಿಂದ ರಾಜ್ಯ ಸರ್ಕಾರವು ಅನ್ನಪೂರ್ಣ ಯೋಜನೆಗೆ ಫಾರ್ಮ್‌ಗಳನ್ನು ನೀಡಲು ಪ್ರಾರಂಭಿಸಲಾಗುತ್ತದೆ. ಇದರ ಅಡಿಯಲ್ಲಿ ಮಹಿಳೆಯರು ಪ್ರತಿ ತಿಂಗಳು 3,000 ಪಡೆಯುತ್ತಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನು, ಮಾಂಸ, ಮೊಟ್ಟೆ ನಿಷೇಧ ಮಾಡುತ್ತದೆ ಎಂದು ಟಿಎಂಸಿ ಆರೋಪಿಸಿತ್ತು. ಆದರೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಸಬ್ಸಿಡಿ ದರದಲ್ಲಿ ಮೀನು ಊಟ ನೀಡಲು ನಿರ್ಧರಿಸಿದೆ. ಈ ಮೂಲಕ ಟಿಎಂಸಿಗೆ ತಿರುಗೇಟು ನೀಡಿದೆ.

ಇದನ್ನೂ ಓದಿ: ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಶಾಲೆಗಳು, ಕಾಲೇಜುಗಳು ಮತ್ತು ಪೂಜಾ ಸ್ಥಳಗಳ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇನ್ನು ಮುಂದೆ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ. ವಾರಕ್ಕೆ 2 ಬಾರಿ 400 ಕ್ಯಾಂಟೀನ್‌ಗಳಲ್ಲಿ 5 ರೂ.ಗೆ ಮೀನು ಮತ್ತು ಅನ್ನ ಊಟವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಕೇವಲ 5 ರೂಪಾಯಿ ಮುಖಬೆಲೆಯ ಈ ಊಟದ ತಟ್ಟೆಯಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡಲಾಗುತ್ತದೆ. ವಾಸ್ತವವಾಗಿ ಈ ಒಂದು ಊಟದ ತಟ್ಟೆಯ ಒಟ್ಟು ವೆಚ್ಚ ಸುಮಾರು 20ರಿಂದ 25 ರೂ.ಗಳಾಗಿರುತ್ತದೆ. ಆದರೆ, ಬಡವರಿಗೆ ಹೊರೆಯಾಗಬಾರದು ಎಂದು ಗ್ರಾಹಕರಿಂದ ಕೇವಲ 5 ರೂ. ಪಡೆಯಲಾಗುತ್ತದೆ. ಉಳಿದ ಹಣವನ್ನು ಪಶ್ಚಿಮ ಬಂಗಾಳ ಸರ್ಕಾರವೇ ಭರಿಸುತ್ತದೆ.

ಇದನ್ನೂ ಓದಿ: ಬಂಗಾಳದಲ್ಲಿ ಮಮತಾ ಕಾಲದ ನಿಯಮಕ್ಕೆ ಬಿಜೆಪಿ ಬ್ರೇಕ್!: ಬಕ್ರೀದ್ ರಜೆ 1 ದಿನಕ್ಕೆ ಕಡಿತ, ಪ್ರಾಣಿ ವಧೆಗೂ ಕಠಿಣ ನಿಯಮ 

ದಿನಗೂಲಿ ಕಾರ್ಮಿಕರು, ರಿಕ್ಷಾ ಚಾಲಕರು, ವಲಸೆ ಕಾರ್ಮಿಕರು ಮತ್ತು ಆರ್ಥಿಕವಾಗಿ ಹಿಂದುಳಿದ ಜನರಿಗೆ ಪ್ರತಿದಿನ ಮಧ್ಯಾಹ್ನ ಅತ್ಯಂತ ಕಡಿಮೆ ದರದಲ್ಲಿ ಗೌರವಯುತವಾದ ಊಟ ನೀಡುವುದು ಇದರ ಗುರಿ. ಅತ್ಯಂತ ಕಡಿಮೆ ಬೆಲೆಯದ್ದಾಗಿದ್ದರೂ ಇಲ್ಲಿ ಗುಣಮಟ್ಟ ಮತ್ತು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದ ಪ್ರಮುಖ ನಗರಗಳ ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು ಮತ್ತು ಆಸ್ಪತ್ರೆಗಳ ಹತ್ತಿರ ಈ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ: ಆಮೇಲೇನಾಯ್ತು? – Kannada News | Smoke Detected on IndiGo Flight Before Takeoff at Kempegowda Airport in Devanahalli

ದೇವನಹಳ್ಳಿ, ಮೇ 26: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್‌ಗಾಗಿ ರನ್‌ವೇಗೆ ಚಲಿಸುತ್ತಿದ್ದ ವೇಳೆ ಇಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ರನ್‌ವೇನಲ್ಲೇ ನಿಲ್ಲಿಸಿದರು. ಸ್ಥಳಕ್ಕೆ ಕೆಐಎಬಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದರು. ಮುಂಜಾಗ್ರತಾ ಕ್ರಮವಾಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಸುರಕ್ಷಿತವಾಗಿ ಇಳಿಸಿ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

9 ಸಿಕ್ಸರ್, 32 ಎಸೆತಗಳಲ್ಲಿ 93 ರನ್..! ರಜತ್ ರೌದ್ರಾವತಾರಕ್ಕೆ ಗುಜರಾತ್ ವಿಲವಿಲ – Kannada News | Rajat Patidar’s IPL 2026 Qualifier 1 Heroics: RCB Captain Smashes 93 vs GT

ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರು. ನಿರ್ಣಾಯಕ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಬಲಿಷ್ಠ ಗುಜರಾತ್ ಬೌಲಿಂಗ್ ವಿಭಾಗವನ್ನು ಹೈರಾಣಾಗಿಸಿದರು. ತಂಡ ಆರಂಭಿಕ ಆಘಾತಕ್ಕೆ ಸಿಲುಕಿಕೊಂಡಿದ್ದರೂ ತಾಳ್ಮೆಯಿಂದ ಇನ್ನಿಂಗ್ಸ್ ಕಟ್ಟಿದ ರಜತ್ ಆ ಬಳಿಕ ರೌದ್ರಾವತಾರ ತಾಳಿದರು ಇದರ ಪರಿಣಾಮವಾಗಿ ರಜತ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕ ಮತ್ತಷ್ಟು ಉಗ್ರರೂಪ ತಾಳಿದ ರಜತ್ 20ನೇ ಓವರ್​ವರೆಗೂ ಅಜೇಯರಾಗಿ ಉಳಿದ ರಜತ್ ಕೇವಲ 32 ಎಸೆತಗಳಲ್ಲಿ 93 ರನ್ ಬಾರಿಸಿದರು. ರಜತ್ ಅವರ ಈ ಅಬ್ಬರದ ಬ್ಯಾಟಿಂಗ್​ನಿಂದಾಗಿ ಆರ್​ಸಿಬಿ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 254 ರನ್ ಕಲೆಹಾಕಿತು.

Published On – 9:26 pm, Tue, 26 May 26

Source link

Exit mobile version