ಇದೀಗ ಬಂದ ಸುದ್ದಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ – Kannada News | Karnataka power tussle: Siddaramaiah Likely Resign to CM Post This Week
ನವದೆಹಲಿ/ಬೆಂಗಳೂರು, (ಮೇ 26): ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್ ನಿವಾಸದಲ್ಲಿದ್ದ ಆಪ್ತ…