ದಾವೋಸ್ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್ನದ್ದೇ ಸದ್ದು – Kannada News | Karnataka CM Tussle: D.K. Shivakumar Expresses Confidence on Power Sharing at Davos
ದಾವೋಸ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು, ಜನವರಿ 22: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯದಲ್ಲಿ ಪೈಪೋಟಿ ಮುಂದುವರಿದಿದ್ದು, ವಿಷಯವೀಗ ಹೈಕಮಾಂಡ್ ಅಂಗಳದಲ್ಲಿದೆ. ಈ ನಡುವೆ ಸ್ವಿಟ್ಜರ್ಲ್ಯಾಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ತಮ್ಮ ನಾಯಕರು ತಮಗೆ ನಿರಾಸೆ ಮಾಡಲಾರರು ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಆ ಮೂಲಕ ದಾವೋಸ್ನಲ್ಲಿಯೂ ಕರ್ನಾಟಕದಲ್ಲಿನ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾದಂತಾಗಿದೆ. ‘ಮಾಧ್ಯಮಗಳಲ್ಲಿ ಚರ್ಚಿಸಬೇಕಾದ ವಿಷಯ ಅಲ್ಲ’ ಹೌದು, ಎನ್ಡಿಟಿವಿಗೆ…