ಸ್ನಾನದ ನೀರಿಗೆ ಚಿಟಿಕೆ ಅರಶಿನ ಸೇರಿಸುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | Know the benefits of bathing in water mixed with a pinch of turmeric
ಅರಶಿನವನ್ನು (turmeric) ಬಹಳ ಹಿಂದಿನ ಕಾಲದಿಂದಲೂ ಅಡುಗೆಯಲ್ಲಿ ಬಳಸಲಾಗುತ್ತದೆ. ಇದಲ್ಲದೆ ತ್ವಚೆಯ ಆರೈಕೆಯಲ್ಲೂ ಅರಶಿನವನ್ನು ಬಳಸಲಾಗುತ್ತದೆ. ಇದರ ಅಂತರ್ಗತ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರನಾಶಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಚರ್ಮವನ್ನು ಸ್ವಚ್ಛವಾಗಿಡಲು ಮತ್ತು ತುರಿಕೆ, ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದಲ್ಲದೆ ಅರಿಶಿನ ನೀರಿನಿಂದ ಸ್ನಾನ ಮಾಡುವುದರಿಂದಲೂ ಹಲವು ಪ್ರಯೋಜನಗಳಿವೆ. ಆಯುರ್ವೇದದಲ್ಲಿ, ಅರಶಿನ ಬೆರೆಸಿದ ನೀರಿನಿಂದ ಸ್ನಾನ ಮಾಡುವುದರಿಂದ ದೇಹ ಮತ್ತು ಚರ್ಮ ಎರಡಕ್ಕೂ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅರಿಶಿನದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರನಾಶಕ ಮತ್ತು ಉತ್ಕರ್ಷಣ…