ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ಆದೇಶಿಸಿದ್ದರಾ ಇಸ್ರೇಲ್ ಪ್ರಧಾನಿ ನೆತನ್ಯಾಹು? – Kannada News | Benjamin netanyahu ordered mossad to kill pak army chief asim munir in switzerland brazilian journalist claims

ಟೆಲ್ ಅವಿವ್, ಜೂನ್ 24: ಅಂತಾರಾಷ್ಟ್ರೀಯ ರಾಜತಾಂತ್ರಿಕ ಮತ್ತು ಗುಪ್ತಚರ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಸ್ಫೋಟಕ ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಸ್ವಿಟ್ಜರ್ಲೆಂಡ್‌ ಪ್ರವಾಸದಲ್ಲಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ (Asim Munir) ಅವರನ್ನು ಹತ್ಯೆ ಮಾಡಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ದೇಶದ ರಹಸ್ಯ ಗುಪ್ತಚರ ಸಂಸ್ಥೆಯಾದ ‘ಮೊಸಾದ್’ಗೆ ಆದೇಶ ನೀಡಿದ್ದರು ಎಂದು ಬ್ರೆಜಿಲ್‌ನ ಖ್ಯಾತ ಪತ್ರಕರ್ತರೊಬ್ಬರು ಆರೋಪ ಮಾಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ನಿಧನದ ಸುತ್ತಲಿನ ಬೆಳವಣಿಗೆಗಳ ಬೆನ್ನಲ್ಲೇ ಈ ವರದಿ ಹೊರಬಿದ್ದಿರುವುದು ಭಾರಿ ಕುತೂಹಲ ಮೂಡಿಸಿದೆ. ವರದಿಗಳ ಪ್ರಕಾರ, ಬ್ರೆಜಿಲ್‌ನ ತನಿಖಾ ಪತ್ರಕರ್ತರೊಬ್ಬರು ಜಾಗತಿಕ ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಈ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ ಎಂದು ‘ಮನಿ ಕಂಟ್ರೋಲ್’ ವರದಿ ಮಾಡಿದೆ.

ಇದನ್ನೂ ಓದಿ: Video: ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು, ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಇರಾನ್ ಖಂಡನೆ

ಸ್ವಿಟ್ಜರ್ಲೆಂಡ್‌ನಲ್ಲಿ ಹತ್ಯೆಗೆ ಸಂಚು:

ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅಧಿಕೃತ ಭೇಟಿಯ ನಿಮಿತ್ತ ಸ್ವಿಟ್ಜರ್ಲೆಂಡ್‌ನಲ್ಲಿದ್ದಾಗ ಅವರನ್ನು ಗುರಿಯಾಗಿಸಿ ಹತ್ಯೆ ಮಾಡಲು ಮೊಸಾದ್‌ನ ಹಿಟ್‌ ಸ್ಕ್ವಾಡ್‌ಗೆ ನೆತನ್ಯಾಹು ಸೂಚನೆ ನೀಡಿದ್ದರು ಎನ್ನಲಾಗಿದೆ. ಇಸ್ರೇಲ್ ಮತ್ತು ಹಮಾಸ್-ಹೆಜ್ಬೊಲ್ಲಾ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನದ ಮಿಲಿಟರಿ ನಾಯಕತ್ವವು ಇರಾನ್ ಮತ್ತು ಇತರ ಇಸ್ಲಾಮಿಕ್ ದೇಶಗಳಿಗೆ ರಹಸ್ಯವಾಗಿ ಶಸ್ತ್ರಾಸ್ತ್ರ ಅಥವಾ ತಾಂತ್ರಿಕ ಬೆಂಬಲ ನೀಡಲು ಮುಂದಾಗಿತ್ತು ಎಂಬ ಹಿನ್ನೆಲೆಯಲ್ಲಿ ಇಸ್ರೇಲ್ ಈ ಕಠಿಣ ನಿರ್ಧಾರಕ್ಕೆ ಮುಂದಾಗಿತ್ತು ಎಂದು ಬ್ರೆಜಿಲ್ ಪತ್ರಕರ್ತ ಹೇಳಿದ್ದಾರೆ.

ಕೊನೆ ಕ್ಷಣದಲ್ಲಿ ಆಗಿದ್ದೇನು?:

ಬ್ರೆಜಿಲಿಯನ್ ಪತ್ರಕರ್ತನ ವರದಿಯ ಪ್ರಕಾರ, ಮೊಸಾದ್ ಬಹಳ ಜಾಣತನದಿಂದಲೇ ಈ ಹತ್ಯಾ ಕಾರ್ಯಾಚರಣೆಯನ್ನು ಯೋಜಿಸಿತ್ತು. ಆದರೆ, ಸ್ವಿಟ್ಜರ್ಲೆಂಡ್‌ನ ಸ್ಥಳೀಯ ಭದ್ರತಾ ಏಜೆನ್ಸಿಗಳು ಅಥವಾ ಇತರ ಮಿತ್ರ ರಾಷ್ಟ್ರಗಳ ಗುಪ್ತಚರ ಇಲಾಖೆಗಳಿಗೆ ಈ ವಿಷಯ ಮುಂಚಿತವಾಗಿಯೇ ತಿಳಿದುಬಂದ ಹಿನ್ನೆಲೆಯಲ್ಲಿ, ರಾಜತಾಂತ್ರಿಕ ಬಿಕ್ಕಟ್ಟನ್ನು ತಪ್ಪಿಸಲು ಕೊನೆಯ ಕ್ಷಣದಲ್ಲಿ ಈ ಕಾರ್ಯಾಚರಣೆಯನ್ನು ಕೈಬಿಡಲಾಯಿತು ಅಥವಾ ಮುಂದೂಡಲಾಯಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಲೆಬನಾನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ಅಧಿಕೃತ ಪ್ರತಿಕ್ರಿಯೆಗಳಿಲ್ಲ:

ಈ ಆಘಾತಕಾರಿ ಆರೋಪದ ಕುರಿತು ಇಸ್ರೇಲ್ ಸರ್ಕಾರದ ಪ್ರಧಾನಿ ಕಚೇರಿಯಾಗಲಿ ಅಥವಾ ಮೊಸಾದ್ ಆಗಲಿ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಸಾಮಾನ್ಯವಾಗಿ ಮೊಸಾದ್ ತನ್ನ ರಹಸ್ಯ ಕಾರ್ಯಾಚರಣೆಗಳ ಬಗ್ಗೆ ಎಂದಿಗೂ ಬಹಿರಂಗವಾಗಿ ಪ್ರತಿಕ್ರಿಯಿಸುವುದಿಲ್ಲ. ಇತ್ತ ಪಾಕಿಸ್ತಾನದ ಸೇನೆಯಾಗಲಿ ಅಥವಾ ಅಲ್ಲಿನ ವಿದೇಶಾಂಗ ಸಚಿವಾಲಯವಾಗಲಿ ಈ ವರದಿಯನ್ನು ಅಧಿಕೃತವಾಗಿ ದೃಢೀಕರಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಪ್ರತಿದಿನ ತಪ್ಪದೆ ಬೀಟ್ರೂಟ್ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ? – Kannada News | Why You Should Add Beetroot Juice To Your Daily Diet

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಜೀವನಶೈಲಿಯತ್ತ ಜನರ ಒಲವು ಹೆಚ್ಚುತ್ತಿದೆ. ಅಂತಹ ಆರೋಗ್ಯಕರ ಆಹಾರಗಳಲ್ಲಿ ಬೀಟ್ರೂಟ್ ಜ್ಯೂಸ್ ಪ್ರಮುಖ ಸ್ಥಾನ ಪಡೆದಿದೆ. ವಿಟಮಿನ್‌ಗಳು, ಖನಿಜಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ನೈಸರ್ಗಿಕ ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಈ ಪಾನೀಯವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಪ್ರತಿನಿತ್ಯ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್‌ ಕುಡಿಯುವುದರಿಂದ ಯಾವ ರೀತಿ ಪ್ರಯೋಜನಗಳು ಸಿಗುತ್ತದೆ, ಯಾವ ರೀತಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ

ಬೀಟ್ರೂಟ್‌ನಲ್ಲಿರುವ ನೈಸರ್ಗಿಕ ನೈಟ್ರೇಟ್‌ಗಳು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಗೊಂಡು ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತವೆ. ಇದರಿಂದ ರಕ್ತಸಂಚಾರ ಸುಧಾರಿಸಿ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತದೆ. ಜೊತೆಗೆ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

ಯಕೃತ್ತಿನ ಆರೋಗ್ಯಕ್ಕೆ ಬಹಳ ಒಳ್ಳೆಯದು

ಬೀಟ್ರೂಟ್‌ನಲ್ಲಿರುವ ಬಿಟಾಲೈನ್ ಎಂಬ ಆಂಟಿಆಕ್ಸಿಡೆಂಟ್ ಯಕೃತ್ತಿನ ಕಾರ್ಯಕ್ಷಮತೆಯನ್ನು ಬೆಂಬಲಿಸುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ಮತ್ತು ಯಕೃತ್ತಿನಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಕ್ಯಾಪ್ಸಿಕಂ ತಿನ್ನಲು ಇಷ್ಟವಿಲ್ಲವೇ? ಇದರ ಆರೋಗ್ಯ ಪ್ರಯೋಜನ ತಿಳಿದ್ರೆ ಪ್ರತಿದಿನ ತಿನ್ನುತ್ತೀರಿ!

ದಣಿವನ್ನು ಕಡಿಮೆ ಮಾಡಲು ಸಹಕಾರಿ

ಬೀಟ್ರೂಟ್ ಜ್ಯೂಸ್ ಕ್ರೀಡಾಪಟುಗಳು ಮತ್ತು ಫಿಟ್ನೆಸ್‌ ಪ್ರಿಯರಿಗೆ ಉತ್ತಮ ಆಯ್ಕೆಯಾಗಿದೆ. ಇದು ಸ್ನಾಯುಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಿ ದೈಹಿಕ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ದಣಿವನ್ನು ಕಡಿಮೆ ಮಾಡಿ ದಿನವಿಡೀ ಚೈತನ್ಯದಿಂದ ಇರಲು ನೆರವಾಗುತ್ತದೆ.

ರಕ್ತಹೀನತೆಯ ಅಪಾಯವನ್ನು ತಡೆಯುತ್ತದೆ

ಬೀಟ್ರೂಟ್‌ನಲ್ಲಿ ಕಬ್ಬಿಣ, ಫೋಲೇಟ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿವೆ. ಇವು ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸಿ ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುತ್ತವೆ. ವಿಶೇಷವಾಗಿ ಮಹಿಳೆಯರು ಮತ್ತು ಯುವತಿಯರಿಗೆ ಇದು ಪ್ರಯೋಜನಕಾರಿ.

ಚರ್ಮದ ಆರೋಗ್ಯಕ್ಕೂ ಒಳ್ಳೆಯದು

ಆಂಟಿಆಕ್ಸಿಡೆಂಟ್‌ಗಳಿರುವುದರಿಂದ ಬೀಟ್ರೂಟ್ ಜ್ಯೂಸ್ ಚರ್ಮದ ಕೋಶಗಳನ್ನು ರಕ್ಷಿಸುತ್ತದೆ. ರಕ್ತ ಶುದ್ಧೀಕರಣಕ್ಕೆ ಸಹಾಯ ಮಾಡುವುದರಿಂದ ಮೊಡವೆ ಮತ್ತು ಕಲೆಗಳನ್ನು ಕಡಿಮೆ ಮಾಡಿ ಚರ್ಮಕ್ಕೆ ನೈಸರ್ಗಿಕ ಕಾಂತಿ ನೀಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಡದಿಗಿಂತ ದೇವನಹಳ್ಳಿ ರೈತರಿಗೆ ಜಾಕ್​​​ ಪಾಟ್: ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ಫಿಕ್ಸ್! – Kannada News | Devanahalli: Panel offers rs 2.70 crore per acre to farmers who voluntarily came forward to offer land

ಬೆಂಗಳೂರು, ಜೂನ್ 24): ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ (Devanahalli) ಕೈಗಾರಿಕೆಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ಜಮೀನಿಗೆ ಎಕರೆಗೆ 2.70 ಕೋಟಿ ಪರಿಹಾರ ನಿಗದಿಪಡಿಸಲಾಗಿದೆ. ದೇವನಹಳ್ಳಿಯಲ್ಲಿ ಭೂಸ್ವಾಧೀನಪಡಿಸಿಕೊಂಡ 120 ಎಕರೆ ಜಮೀನಿಗೆ ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ನೀಡುವಂತೆ ಭೂದರ ನಿರ್ಧಾರಣಾ ಸಲಹಾ ಸಮಿತಿ ಕೆಐಎಡಿಬಿಗೆ (KIADB) ಶಿಫಾರಸು ಮಾಡಿದೆ. ಇದು ದೇವನಹಳ್ಳಿ ಭಾಗದಲ್ಲೇ ಈವರೆಗೆ ನಿಗದಿಪಡಿಸಲಾದ ಅತ್ಯಂತ ಹೆಚ್ಚಿನ ಪರಿಹಾರ ದರವಾಗಿದೆ.

ರೈತರಿಗೆ ಎರಡು ಆಯ್ಕೆಗಳು

ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ ಎ.ಎನ್. ರಘುನಂದನ್ ಅಧ್ಯಕ್ಷತೆಯಲ್ಲಿ ನಡೆದ ಭೂಮಾಲೀಕರ ಜಂಟಿ ಸಭೆಯಲ್ಲಿ ಪರಿಹಾರದ ಬಗ್ಗೆ ಮಹತ್ವದ ಚರ್ಚೆ ನಡೆಸಲಾಯಿತು. ರೈತರಿಗೆ ಇಲ್ಲಿ ಎರಡು ರೀತಿಯ ಆಯ್ಕೆಗಳನ್ನು ನೀಡಲಾಗಿದೆ. ಪ್ರತಿ ಎಕರೆಗೆ 2.70 ಕೋಟಿ ರೂಪಾಯಿ ಹಣವನ್ನು ನೇರವಾಗಿ ಪಡೆಯಬಹುದು. ಅಥವಾ ಹಣದ ರೂಪದಲ್ಲಿ ಪರಿಹಾರ ಬೇಡವೆಂದಾದಲ್ಲಿ, ಪ್ರತಿ ಎಕರೆ ಕೃಷಿ ಜಮೀನಿಗೆ ಪ್ರತಿಯಾಗಿ ಅಭಿವೃದ್ಧಿಪಡಿಸಿದ ಕೈಗಾರಿಕಾ ಬಡಾವಣೆಯಲ್ಲಿ 10,781 ಚದರ ಅಡಿ ಜಾಗವನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಹಣ ಮರುಪಾವತಿಗೆ ಆದೇಶ, ಪ್ರಕ್ರಿಯೆ ಹೇಗೆ?

ಸಭೆ ಬಳಿಕ ಜಿಲ್ಲಾಧಿಕಾರಿ ರಘುನಂದನ್ ಪ್ರತಿಕ್ರಿಯಿಸಿದ್ದು,  ಸಂತ್ರಸ್ತ ರೈತರಿಗೆ ನ್ಯಾಯಯುತ ಮತ್ತು ಆಕರ್ಷಕ ಪರಿಹಾರ ನೀಡಬೇಕು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ದೇವನಹಳ್ಳಿಯ ಈ ಭಾಗದಲ್ಲಿ ಈ ದರವು ಐತಿಹಾಸಿಕವಾಗಿದ್ದು, ರೈತರ ಹಿತಾಸಕ್ತಿಯನ್ನು ಕಾಪಾಡಲಾಗಿದೆ. ಪ್ರಸ್ತುತ ಸಮಿತಿಯು ನೀಡಿರುವ ಈ ಶಿಫಾರಸನ್ನು ಕೆಐಎಡಿಬಿ ಮಂಡಳಿಯ ಅಂತಿಮ ಅನುಮೋದನೆಗೆ ಕಳುಹಿಸಿಕೊಡಲಾಗುವುದು. ಮಂಡಳಿಯ ಒಪ್ಪಿಗೆ ಸಿಕ್ಕ ತಕ್ಷಣ ಪರಿಹಾರ ವಿತರಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಯಾವ ಗ್ರಾಮಗಳಲ್ಲಿ ಜಮೀನು ಸ್ವಾಧೀನ?

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು 120 ಎಕರೆ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ಗುರುತಿಸಲಾಗಿದೆ. ಈ ಜಮೀನನ್ನು ರೈತರು ತಾವಾಗಿಯೇ ಬಿಟ್ಟುಕೊಡಲು ಸಮ್ಮತಿಸಿದ್ದು, ಕೆಐಎಡಿಬಿ ಕಾಯ್ದೆಯನ್ವಯ ಜೂನ್ 16ರಂದೇ ಅಂತಿಮ ಅಧಿಸೂಚನೆ ಹೊರಡಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ – Kannada News | Jayatheertha encourages newcomers at Love Seasons Kannada Movie Trailer launch

‘ಲವ್ ಸೀಸನ್ಸ್’ (Love Seasons) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಮುಕುಂದ ರಾಮಸ್ವಾಮಿ, ದಿವ್ಯಾ ಕೀರ್ತಿ, ಚಂದನಾ ಗೌಡ, ಮಂಡ್ಯ ರಮೇಶ್, ಜಯತೀರ್ಥ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಜಯತೀರ್ಥ ಅವರು ಮಾತನಾಡಿದರು. ಹೊಸಬರ ತಂಡಕ್ಕೆ ಅವರು ಧೈರ್ಯ ತುಂಬಿದರು. ‘ಈ ತಂಡದವರ ಕಣ್ಣಲ್ಲಿ ಆತಂಕ ಕಾಣುತ್ತಿದೆ. ಆದರೆ ಆತಂಕದ ಅವಶ್ಯಕತೆ ಇಲ್ಲ. ನೀವು ಮಾಡುವ ಕೆಲಸ ಆಗಿದೆ. ಸಿನಿಮಾ ಮಾಡಿ ಗೆದ್ದಿದ್ದೀರಿ. ಏನೇ ಬಂದರೂ ಎದುರಿಸಿ. ಈ ಕೂಡಲೇ ಈ ಕೆಲಸದ ಫಲ ನಿಮಗೆ ಸಿಗದೇ ಇರಬಹುದು. ಇನ್ನು ಯಾವತ್ತೋ ಸಿಗುತ್ತದೆ. ಪ್ರಾಮಾಣಿಕತೆ ಮಾತ್ರ ಗೆಲ್ಲುವುದು ಇಲ್ಲಿ. ಒಬ್ಬ ನಿರ್ಮಾಪಕರು ನಿಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಅವರ ಆತ್ಮವಿಶ್ವಾಸ ಕುಗ್ಗದ ರೀತಿಯಲ್ಲಿ ನೋಡಿಕೊಳ್ಳಿ. ನಿಮ್ಮನ್ನು ನೋಡಿದ 10 ಜನರಿಗೆ ಸ್ಫೂರ್ತಿ ಆಗಬಹುದು’ ಎಂದು ಜಯತೀರ್ಥ ಅವರು ಹೇಳಿದರು. ಎನ್ಆರ್ ಮಂಜುನಾಥ (ನೀಲೇರಿ) ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಕೃತ್ವಿಕ್ ಅವರು ನಿರ್ದೇಶನ ಮಾಡಿದ್ದಾರೆ. ಜುಲೈ 3ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs IRE: ರೋಹಿತ್ ಶರ್ಮಾ ದಾಖಲೆ ಮೇಲೆ ಕಣ್ಣಿಟ್ಟ ಸಂಜು ಸ್ಯಾಮ್ಸನ್

Source link

‘ಪ್ರಾಣಿಗಳಿಗೂ ಹಿಂಸೆಯಿಲ್ಲದೆ ಬದುಕುವ ಹಕ್ಕಿದೆ’: ಕ್ರೌರ್ಯ ಮೆರೆದ ಮಾಲೀಕನಿಗೆ ನಾಯಿ ವಾಪಸ್ ನೀಡಲು ಕೋರ್ಟ್ ನಕಾರ – Kannada News | Karnataka High Court Refuses Custody of Allegedly Abused Dogs, Upholds Animal Welfare

ನಾಯಿ, ಕರ್ನಾಟಕ ಹೈಕೋರ್ಟ್ Image Credit source: Getty images

ಬೆಂಗಳೂರು, ಜೂನ್​​ 24: ‘ಪ್ರಾಣಿಗಳಿಗೂ ಹಿಂಸೆಯಿಲ್ಲದೆ ಬದುಕುವ ಹಕ್ಕಿದೆ’ ಎಂದು ಹೇಳಿರುವ ಹೈಕೋರ್ಟ್, 9 ನಾಯಿಗಳಿಗೆ (Dogs) ತೀವ್ರ ಹಿಂಸೆ ನೀಡಿದ ಮಾಲೀಕನಿಗೆ ಆ ನಾಯಿಗಳನ್ನು ಹಿಂತಿರುಗಿಸದಂತೆ ಮಹತ್ವದ ಆದೇಶ ನೀಡಿದೆ. ಆ ಮೂಲಕ ಮ್ಯಾಜಿಸ್ಟ್ರೇಟ್ ಆದೇಶ ಆಘಾತಕಾರಿ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ (Karnataka HC) ಪೀಠ ಅಭಿಪ್ರಾಯಪಟ್ಟಿದೆ.

ಪದೇಪದೆ ಹಲ್ಲೆ ಹಾಗೂ ಲೈಂಗಿಕ ದುರ್ಬಳಕೆ ಆರೋಪ

ಮಾಲೀಕ ತನ್ನ ಬಳಿಯಿಂದ ನಾಯಿಗಳಿಗೆ ಪದೇಪದೆ ಹಲ್ಲೆ ಹಾಗೂ ಲೈಂಗಿಕ ದುರ್ಬಳಕೆ ಎಸಗುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಬಗ್ಗೆ ನೆರೆಹೊರೆಯವರು ಕೆಲ ವಿಡಿಯೋ ಸಾಕ್ಷ್ಯಗಳೊಂದಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ್ದ ಪೆಟಾ (PETA) ಸಂಸ್ಥೆ, ಮಾಲೀಕನಿಂದ ಆ 9 ನಾಯಿಗಳನ್ನು ರಕ್ಷಣೆ ಮಾಡಿತ್ತು.

ಇದನ್ನೂ ಓದಿ: ಫುಟ್ ಪಾತ್ ತೆರವಿಗೆ ಕೃಷ್ಣಭೈರೇಗೌಡ ಪಣ:ಒತ್ತುವರಿದಾರರಿಗೆ ಡೆಡ್​​ಲೈನ್, ರಸ್ತೆ ಬದಿ ನಿಲ್ಲಿಸುವ ಗಾಡಿ ಗುಜರಿಗೆ

ಆದರೆ, ರಕ್ಷಿಸಲ್ಪಟ್ಟ ನಾಯಿಗಳನ್ನು ಮರಳಿ ಅದೇ ಮಾಲೀಕನಿಗೆ ಒಪ್ಪಿಸಲು ಈ ಹಿಂದೆ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ನೀಡಿತ್ತು. ಮ್ಯಾಜಿಸ್ಟ್ರೇಟ್ ಅವರ ಈ ಆದೇಶವನ್ನು ಆಘಾತಕಾರಿ ಎಂದು ಬಣ್ಣಿಸಿರುವ ಹೈಕೋರ್ಟ್, ವಿಡಿಯೋಗಳಲ್ಲಿ ನಾಯಿಗಳಿಗೆ ಕ್ರೂರವಾಗಿ ಹೊಡೆಯುವ ದೃಶ್ಯಗಳು ಸ್ಪಷ್ಟವಾಗಿವೆ. ಹೀಗಿರುವಾಗ ಕ್ರೌರ್ಯ ಮೆರೆದವನಿಗೆ ಮತ್ತೆ ನಾಯಿಗಳ ಕಸ್ಟಡಿ ನೀಡಿದ ಆದೇಶ ಖಂಡಿತ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಪ್ರಾಣಿಗಳನ್ನು ಪ್ರಾಣಿದಯಾ ಸಂಘಟನೆ ವಶದಲ್ಲಿಡಲು ಆದೇಶ

‘ಪ್ರಾಣಿಗಳಿಗೆ ಮಾತು ಬಾರದಿದ್ದರೂ ಅವು ನೋವು ಅನುಭವಿಸುತ್ತವೆ. ಅವುಗಳಿಗೂ ಹಿಂಸೆಯಿಂದ ರಕ್ಷಣೆ ಪಡೆದುಕೊಳ್ಳುವ ಹಕ್ಕಿದೆ. ಕೋರ್ಟ್ ಕದ ತಟ್ಟಲಾಗದವರಿಗೂ ನ್ಯಾಯದಾನ ಸಿಗಬೇಕು’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, ರಕ್ಷಿಸಲ್ಪಟ್ಟಿರುವ ಎಲ್ಲಾ ಪ್ರಾಣಿಗಳನ್ನು ಪ್ರಾಣಿದಯಾ ಸಂಘಟನೆಯ ವಶದಲ್ಲಿಯೇ ಮುಂದುವರಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣ ಹಿನ್ನೆಲೆ 

ಬೆಂಗಳೂರಿನ ನಾಗಸಂದ್ರದ ನಿವಾಸಿ ಕೆ.ಇ. ರಮೇಶ್ ಎಂಬಾತನ ಬಳಿ ಬೇರೆ ಬೇರೆ ತಳಿಯ 9 ನಾಯಿಗಳಿದ್ದವು. ಪದೇಪದೆ ಹಲ್ಲೆ ಮತ್ತು ಲೈಂಗಿಕ ದುರ್ಬಳಕೆಯ ಗಂಭೀರ ಆರೋಪ ಕೇಳಿಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ರಮೇಶ್​ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್​​ 325 ಮತ್ತು 62 ಹಾಗೂ 1960 ಪ್ರಾಣಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್​​ 11(1)ರ ಅಡಿಯಲ್ಲಿ ಎಫ್​​ಐಆರ್​​ ದಾಖಲಿಸಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಮಾಲೀಕ ರಮೇಶ್​ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ಮಾಡಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್​​, ರಕ್ಷಿಸಲ್ಪಟ್ಟ ನಾಯಿಗಳನ್ನು ಮರಳಿ ಮಾಲೀಕನಿಗೆ ಒಪ್ಪಿಸುವಂತೆ ಅನುಮತಿ ನೀಡಿತ್ತು. ಆದರೆ ಕೆಳ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಪ್ರಾಣಿದಯಾ ಸಂಘಟನೆ ಪೆಟಾ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಲೋಪದೋಷಗಳನ್ನು ಸರಿಪಡಿಸಿದ್ದೇವೆ, ನೀಟ್ ಮರುಪರೀಕ್ಷೆ ಯಶಸ್ವಿಯಾಗಿದೆ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ – Kannada News | Union Education Minister Dharmendra Pradhan Says NEET Re Exam Conducted Successfully

ನವದೆಹಲಿ, ಜೂನ್ 24: ದೇಶಾದ್ಯಂತ ಭಾರಿ ಚರ್ಚೆಗೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ನೀಟ್-ಯುಜಿ (NEET-UG) ಪರೀಕ್ಷೆಯ ವಿವಾದಗಳ ನಡುವೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ನೀಟ್ ಮರುಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಂಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ನೀಟ್ ಪರೀಕ್ಷಾ ಪ್ರಕ್ರಿಯೆಯಲ್ಲಿ ಕಂಡುಬಂದಿದ್ದ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಸಂಪೂರ್ಣವಾಗಿ ಸರಿಪಡಿಸಿದ ಬಳಿಕವೇ ಈ ಮರುಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಲೋಪದೋಷಗಳ ತಿದ್ದುಪಡಿ:

ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಹಿಂದಿನ ಪರೀಕ್ಷಾ ಪ್ರಕ್ರಿಯೆಯಲ್ಲಿ ಕಂಡುಬಂದಿದ್ದ ತಾಂತ್ರಿಕ ಹಾಗೂ ಆಡಳಿತಾತ್ಮಕ ಲೋಪದೋಷಗಳನ್ನು ನಾವು ಕೂಲಂಕಷವಾಗಿ ಪರಿಶೀಲಿಸಿ ಸರಿಪಡಿಸಿದ್ದೇವೆ. ವಿದ್ಯಾರ್ಥಿಗಳ ಹಿತರಕ್ಷಣೆ ಮತ್ತು ಪರೀಕ್ಷೆಯ ವಿಶ್ವಾಸಾರ್ಹತೆಯನ್ನು ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಿದೆ” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ನೀಟ್ ಮರುಪರೀಕ್ಷೆ: ಭದ್ರತೆ, ಗುಪ್ತಚರ ಮತ್ತು ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳೊಂದಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಸಭೆ

ಮರುಪರೀಕ್ಷೆ ಯಶಸ್ವಿ:

ಗ್ರೇಸ್ ಮಾರ್ಕ್ಸ್ ಪಡೆದಿದ್ದ ಆಯ್ದ ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ಭದ್ರತೆ ಹಾಗೂ ಆಧುನಿಕ ನಿಗಾ ವ್ಯವಸ್ಥೆಯಡಿ ದೇಶದ ವಿವಿಧ ಕೇಂದ್ರಗಳಲ್ಲಿ ಮರುಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ಅಥವಾ ಗೊಂದಲಗಳಿಗೆ ಆಸ್ಪದ ನೀಡದಂತೆ ಎನ್‌ಟಿಎ ಅತ್ಯಂತ ವ್ಯವಸ್ಥಿತವಾಗಿ ಪರೀಕ್ಷೆಯನ್ನು ನಡೆಸಿದೆ ಎಂದು ಸಚಿವರು ಶ್ಲಾಘಿಸಿದರು.

ಇದನ್ನೂ ಓದಿ: NEET ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿ, ಯಾವುದೇ ರಾಜಿ ಬೇಡ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೂಚನೆ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆದ್ಯತೆ:

ಲಕ್ಷಾಂತರ ವಿದ್ಯಾರ್ಥಿಗಳ ಶ್ರಮ ಮತ್ತು ಭವಿಷ್ಯದೊಂದಿಗೆ ಆಟವಾಡಲು ಸರ್ಕಾರ ಯಾರಿಗೂ ಬಿಡುವುದಿಲ್ಲ. ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಭವಿಷ್ಯದಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ತಡೆಯಲು ಸುಧಾರಣಾ ಸಮಿತಿಯನ್ನು ರಚಿಸಲಾಗಿದ್ದು, ಉನ್ನತ ಮಟ್ಟದ ತನಿಖೆ ಕೂಡ ಪ್ರಗತಿಯಲ್ಲಿದೆ ಎಂದು ಅವರು ಪುನರುಚ್ಚರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:13 pm, Wed, 24 June 26

Source link

ಫುಟ್ ಪಾತ್ ತೆರವಿಗೆ ಕೃಷ್ಣಭೈರೇಗೌಡ ಪಣ:ಒತ್ತುವರಿದಾರರಿಗೆ ಡೆಡ್​​ಲೈನ್, ರಸ್ತೆ ಬದಿ ನಿಲ್ಲಿಸುವ ಗಾಡಿ ಗುಜರಿಗೆ – Kannada News | Minister Krishna Byre Gowda Gives Deadline to footpath In Bengaluru, here Is Meeting highlights

ಬೆಂಗಳೂರು, (ಜೂನ್ 24): ಬೆಂಗಳೂರಿನಲ್ಲಿ ಹುಡುಕಿದರೆ ನೂರು ಮೀಟರ್ ಕೂಡ ಸರಿಯಾಗಿ ಫುಟ್ ಪಾತ್ ಸಿಗಲ್ಲ. ಕೆಲ ಬೀದಿ ಬದಿ ವ್ಯಾಪಾರಿಗಳು ಸೇರಿ ಪಾದಚಾರಿ ಮಾರ್ಗಗಳನ್ನು ಕಬ್ಜಾ ಮಾಡೋರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಫುಟ್ ಪಾತ್ (footpath) ಅತಿಕ್ರಮಣ ತೆರವು ಮಾಡುವ ಸಂಬಂಧ ಬೆಂಗಳೂರು (Bengaluru) ನಗರಾಭಿವೃದ್ದಿ ಸಚಿವ ಕೃಷ್ಣ ಬೈರೇಗೌಡ (Krishna Byre Gowda) GBA ಅಧಿಕಾರಿಗಳ ಜೊತೆಗೆ ಇಂದು (ಜೂನ್ 24) ಮಹತ್ವದ ಸಭೆ ನಡೆಸಿದ್ದು, ಯಾರ್ಯಾರು ಫುಟ್ ಪಾತ್ ಅತಿಕ್ರಮಣ ಮಾಡಿಕೊಂಡವರು ತೆರವುಗೊಳಿಸಲು ಜುಲೈ 1 ಡೆಡ್​​ಲೈನ್ ನೀಡಿದ್ದಾರೆ. ಒಂದು ವೇಳೆ ಅಷ್ಟರೊಳಗೆ ಫುಟ್ ಪಾತ್ ತೆರವು ಮಾಡದಿದ್ದಲ್ಲಿ ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವುದಾಗಿಯೂ ಎಚ್ಚರಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ ಜನ ಉಪಯೋಗಕ್ಕೆ ನೆರವಾಗುವಂತೆ ದುರಸ್ತಿ ಕಾಮಗಾರಿಗಳನ್ನು ನಡೆಸುವ ಕುರಿತ ಜಿಬಿಎ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಭೆಯಲ್ಲಿ GBA ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಸೇರಿ ಎಲ್ಲಾ ನಗರ ಪಾಲಿಕೆಗಳ ಆಯುಕ್ತರು, ಟ್ರಾಫಿಕ್ ಕಮಿಷನರ್ ಸೇರಿ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಇನ್ನು ಸಭೆಯಲ್ಲಿ ಒತ್ತುವರಿಯಾದ ಫುಟ್​​ ಪಾತ್ ತೆರುವುಗೊಳಿಸುವ ಬಗ್ಗೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನಿಡಿದ್ದಾರೆ. ಅಲ್ಲದೇ ಒಂದು ವೇಲೆ ತೊಂದರೆಗಳು ಬಂದರೆ ನಿಮ್ಮ ಬೆನ್ನಿಗೆ ನಿಲ್ಲುವೆ ಎಂದು  ಕೃಷ್ಣಭೈರೇಗೌಡ ಅವರಿಗೆ ಅಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಸಭೆಯ ಹೈಲೈಟ್ಸ್

  • ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಬೃಹತ್ ಫುಟ್ ಪಾತ್ ಅತಿಕ್ರಮಣ ತೆರವು ಅಭಿಯಾನ
  • ಜುಲೈ 1 ರ ಒಳಗಾಗಿ ತಾವೇ ಅತಿಕ್ರಮಣ ತೆರವು ಮಾಡಿಕೊಳ್ಳಿ
  • ಅತಿಕ್ರಮಣ ತೆರವು ಮಾಡದೇ ಇದ್ದರೆ ಕಠಿಣ ಕ್ರಮ, ಭಾರೀ ದಂಡ
  • ರಸ್ತೆ ಬದಿ ನಿಲ್ಲಿಸಿರುವ ತಳ್ಳುವ ಗಾಡಿಗಳನ್ನು ಜುಲೈ 10 ರ ಒಳಗಾಗಿ ತೆರವು ಮಾಡಿ, ಇಲ್ಲವಾದರೆ ಸೀಜ್ ಮಾಡಿ ಹರಾಜು
  •  ನಗರದ ಆರ್ಟಿಯಲ್ ಸಬ್ ಆರ್ಟಿಯಲ್ ನ 2 ಸಾವಿರ ಕಿಲೋ ಮೀಟರ್ ರಸ್ತೆಯಲ್ಲಿ ಶೀಘ್ರ ಸುಗಮ ಫುಟ್ ಪಾತ್
  • ಆದ್ಯತೆಯ ರಸ್ತೆಗಳಲ್ಲಿನ ಫುಟ್ ಪಾತ್ ದುರಸ್ತಿ ಕಾರ್ಯಕ್ಕೆ 70 ಕೋಟಿ ರೂಪಾಯಿ ಮೀಸಲು
  • ಸಿಗ್ನಲ್ ಗಳ 75 ಮೀಟರ್ ಅಂತರದಲ್ಲಿ ಬಸ್ ಸ್ಟಾಪ್ ಇರಬಾರದು, ಇತರೆ ವಾಹನಗಳ ನಿಲುಗಡೆ ನಿಷೇಧ
  •  ಜಂಕ್ಷನ್ ಗಳ ಬಳಿ ಗುಂಡಿ ಮುಚ್ಚಲು ಆದ್ಯತೆ, 77 ಕೋಟಿ ರೂಪಾಯಿ ಮೀಸಲು
  •  ಯಂತ್ರಗಳ ಮೂಲಕ ವೈಜ್ಞಾನಿಕವಾಗಿ ಗುಂಡಿ ಮುಚ್ಚುವ ವ್ಯವಸ್ಥೆ ಶೀಘ್ರ ಅಳವಡಿಕೆ
  •  ಶೀಘ್ರದಲ್ಲೇ ಬೀದಿ ಬದಿ ವ್ಯಾಪಾರಿಗಳ ಜೊತೆ ಅಧಿಕಾರಿಗಳ ಚರ್ಚೆ


ಒಟ್ಟಿನಲ್ಲಿ ಯಾರ ಒತ್ತಡಕ್ಕೂ ಮಣಿಯದೆ ಫುಟ್ ಪಾತ್ ಅತಿಕ್ರಮಣ ಮಾಡುವವರ ವಿರುದ್ಧ ಸಮರ ಸಾರುವುದಾಗಿ ಕೃಷ್ಣ ಬೈರೇಗೌಡ ಘೋಷಣೆ ಮಾಡಿದ್ದಾರೆ. ಸುಗಮ ಫುಟ್ ಪಾತ್, ಗುಂಡಿಗಳ ಮುಚ್ಚುವಿಕೆ ಸೇರಿ ಮೂಲಭೂತ ಸೌಕರ್ಯ ಸುಧಾರಣೆಗೆ ಇವತ್ತಿನ ಮೀಟಿಂಗ್ ಪೂರಕವಾಗಿತ್ತು. ಜುಲೈ 1 ರಿಂದ GBA ಫುಟ್ ಪಾತ್ ಕಬ್ಜಾ ಮಾಡಿದವರ ವಿರುದ್ಧ ಅಭಿಯಾನ ಕೈಗೆತ್ತಿಕೊಳ್ಳಲಿದ್ದು, ಈ ಮೊದಲೇ ಫುಟ್ ಪಾತ್ ಒತ್ತುವರಿ ಮಾಡಿಕೊಂಡವರು ಬುದ್ಧಿ ಕಲಿಯುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪ್ರೆಗ್ನೆಂಟ್ ಆಗಿರುವುದು ನಿಜ; ಎಲ್ಲರ ಎದುರು ಗುಡ್ ನ್ಯೂಸ್ ನೀಡಿದ ಸಮಂತಾ – Kannada News | Samantha Ruth Prabhu confirms Pregnancy Maternity Break after Maa Inti Bangaaram success

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರ ಅಭಿಮಾನಿಗಳಿಗೆ ಇಲ್ಲೊಂದು ದೊಡ್ಡ ಸಿಹಿ ಸುದ್ದಿ ಇದೆ. ನಟಿ ಸಮಂತಾ ಪ್ರಸ್ತುತ ಗರ್ಭಿಣಿ (Pregnant) ಆಗಿದ್ದು, ಶೀಘ್ರದಲ್ಲೇ ತಾಯಿಯಾಗುತ್ತಿರುವುದನ್ನು ಬುಧವಾರ (ಜೂನ್ 24) ಅಧಿಕೃತವಾಗಿ ಖಚಿತಪಡಿಸಿದ್ದಾರೆ. ತಮ್ಮ ಹೊಸ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಮಾತನಾಡಿದ ಅವರು, ವೈಯಕ್ತಿಕ ಜೀವನದ ಈ ಸುಂದರ ಬದಲಾವಣೆಗಾಗಿ ಸಿನಿಮಾಗಳಿಂದ ಸಣ್ಣ ಬ್ರೇಕ್ ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಮಂತಾ, ‘ನನ್ನ ಪ್ರಸ್ತುತ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮಾ ಇಂಟಿ ಬಂಗಾರಂ ಚಿತ್ರದ ಬಳಿಕ ನಾನು ಸಣ್ಣ ವಿರಾಮ ತೆಗೆದುಕೊಳ್ಳಬೇಕಾಗಿದೆ. ನಾನು ಮೆಟರ್ನಿಟಿ ಲೀವ್ ಪಡೆಯುತ್ತಿದ್ದೇನೆ. ಆ ನಂತರ ಮತ್ತೆ ಹೊಸ ಸಿನಿಮಾದೊಂದಿಗೆ ನನ್ನ ಅಭಿಮಾನಿಗಳ ಮುಂದೆ ಬರುತ್ತೇನೆ’ ಎಂದು ಹೇಳಿದ್ದಾರೆ.

ವಿಡಿಯೋ ನೋಡಿ ಲೆಕ್ಕಾಚಾರ ಹಾಕಿದ್ದ ಅಭಿಮಾನಿಗಳು:

ಕಳೆದ ಕೆಲವು ದಿನಗಳಿಂದ ‘ಮಾ ಇಂಟಿ ಬಂಗಾರಂ’ ಚಿತ್ರದ ಪ್ರಚಾರದ ವೇಳೆ ಸಮಂತಾ ಅವರ ಬೇಬಿ ಬಂಪ್ ಕಂಡುಬಂದಿತ್ತು. ಇದನ್ನು ಗಮನಿಸಿದ್ದ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸಮಂತಾ ಗರ್ಭಿಣಿಯಾಗಿದ್ದಾರೆ ಎಂದು ಭಾರಿ ಚರ್ಚೆ ನಡೆಸುತ್ತಿದ್ದರು. ಈಗ ಸಮಂತಾ ಅವರೇ ಅದನ್ನು ಒಪ್ಪಿಕೊಂಡಿದ್ದಾರೆ. ಚಿತ್ರದ ನಿರ್ದೇಶಕಿ ನಂದಿನಿ ರೆಡ್ಡಿ ಕೂಡ ಈ ಬಗ್ಗೆ ಮಾತನಾಡಿ, ‘ನಮ್ಮ ಸಿನಿಮಾ ಸೂಪರ್ ಹಿಟ್ ಆಗಿರುವ ಈ ಸುಂದರ ಸಂದರ್ಭದಲ್ಲೇ ಸಮಂತಾ ಅವರ ಜೀವನದಲ್ಲಿ ಇಂತಹದೊಂದು ಖುಷಿಯ ವಿಷಯ ನಡೆದಿರುವುದು ಸಂತಸ ತಂದಿದೆ’ ಎಂದಿದ್ದಾರೆ.

ಮಗುವಿನ ಆಗಮನದ ನಿರೀಕ್ಷೆಯಲ್ಲಿ ರಾಜ್, ಸಮಂತಾ:

ಸಮಂತಾ ಅವರು ಡಿಸೆಂಬರ್ 2025ರಲ್ಲಿ ಹೆಸರಾಂತ ನಿರ್ದೇಶಕ ರಾಜ್ ನಿಡಿಮೋರು ಅವರನ್ನು ಕೊಯಮತ್ತೂರಿನ ಇಶಾ ಯೋಗ ಕೇಂದ್ರದ ಲಿಂಗ ಭೈರವಿ ದೇವಸ್ಥಾನದಲ್ಲಿ ಅತ್ಯಂತ ಆಪ್ತರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದರು. ‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಇವರಿಬ್ಬರ ನಡುವೆ ಸ್ನೇಹ ಬೆಳೆದು ಅದು ಮದುವೆಯ ಹಂತಕ್ಕೆ ಬಂತು. ಈಗ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: ‘ನಾನು ಬಾಲ್ಯದಲ್ಲಿ ತುಂಬಾ ಕಷ್ಟ ಅನುಭವಿಸಿದ್ದೆ, ನನ್ನ ಮಗುವಿಗೆ ಹಾಗೆ ಆಗಬಾರದು’; ಸಮಂತಾ

ಬಾಕ್ಸ್ ಆಫೀಸ್‌ನಲ್ಲೂ ಸಮಂತಾ ಭರ್ಜರಿ ಕಮ್‌ಬ್ಯಾಕ್:

ಮಯೋಸೈಟಿಸ್ ಎಂಬ ಸ್ನಾಯು ಸಂಬಂಧಿ ಕಾಯಿಲೆಯಿಂದ ಚೇತರಿಸಿಕೊಂಡ ಬಳಿಕ ಸಮಂತಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಮಾ ಇಂಟಿ ಬಂಗಾರಂ’ ಸಿನಿಮಾ ಜಾಗತಿಕವಾಗಿ ಕೇವಲ ಕೆಲವೇ ದಿನಗಳಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಇದು ಸಮಂತಾ ಅವರ ಸ್ವಂತ ಬ್ಯಾನರ್ ‘ಟ್ರಾಲಾಲಾ ಮೂವಿಂಗ್ ಪಿಕ್ಚರ್ಸ್’ ಅಡಿಯಲ್ಲಿ ಮೂಡಿಬಂದ ಮೊದಲ ಚಿತ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು: 67 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಅಪರಾಧಿಯ ಹೆಡೆಮುರಿ ಕಟ್ಟಿದ ಪೊಲೀಸ್ – Kannada News | Bengaluru Police Arrest Syed Abrar, Accused in 67 Criminal Cases

ಬೆಂಗಳೂರು, ಜೂನ್​​ 24: ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗಿ​ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಹಿರಿಯ ಅಧಿಕಾರಿಗಳ ಸಭೆ ಮಾಡಿ ಪ್ರತಿ ಠಾಣೆ ವ್ಯಾಪ್ತಿಯಲ್ಲೂ ಆ್ಯಂಟಿ ರೌಡಿ ಸ್ಕ್ವಾಡ್ ರಚನೆಗೆ ಸೂಚಿಸಿದ್ದರು. ಆ ಮೂಲಕ ರೌಡಿಗಳನ್ನ ಮಟ್ಟಹಾಕಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಹೀಗಾಗಿ 67 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಅಪರಾಧಿ (Notorious criminal) ಸೈಯದ್ ಅಬ್ರಾರ್​ನನ್ನು ಬಾಣಸವಾಡಿ ಠಾಣೆಯ ಪೊಲೀಸರು ಇದೀಗ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ವಿಚಾರಣೆ ವೇಳೆ ಕುಖ್ಯಾತ ಅಪರಾಧಿಯ ಹಿನ್ನೆಲೆ ಬೆಳಕಿಗೆ

ಪೊಲೀಸರು ಮನೆಗಳ್ಳತನ ಪ್ರಕರಣವೊಂದರ ತನಿಖೆ ನಡೆಸಿದ್ದರು. ಆಗ ಆರೋಪಿ ಸೈಯದ್ ಬಂಧಿಸಿ ವಿಚಾರಣೆ ನಡೆಸಿದಾಗ ಆತನ ಕರಾಳ ಹಿನ್ನೆಲೆ ಬೆಳಕಿಗೆ ಬಂದಿದೆ. ಕೊಲೆ, ಕೊಲೆಯತ್ನ, ಡಕಾಯಿತಿ ಕೇಸ್​​ನಲ್ಲಿ ಭಾಗಿಯಾಗಿದ್ದ ಅಬ್ರಾರ್ ವಿರುದ್ಧ 30 ಜಾಮೀನುರಹಿತ ವಾರಂಟ್​ ಜಾರಿಯಾಗಿದ್ದವು.

ಇದನ್ನೂ ಓದಿ: ರೌಡಿ ನಿಗ್ರಹ ಪಡೆ ಮಧ್ಯೆಯೂ 66 ರೌಡಿಗಳಿಗೆ ಮುಕ್ತಿ: ಪೊಲೀಸ್ ಇಲಾಖೆ ಮಾಡಿದ ಎಡವಟ್ಟು ಏನು?

ಬೆಂಗಳೂರು, ಕೋಲಾರ ಹಾಗೂ ಯಾದಗಿರಿಯಲ್ಲೂ ಅಪರಾಧವೆಸಗಿದ್ದ ಸೈಯದ್ ಅಬ್ರಾರ್, 5 ಪ್ರೊಕ್ಲಮೇಷನ್​ಗಳಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಆರೋಪಿಯನ್ನು​​ ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.

ರೌಡಿಶೀಟರ್‌ಗಳಿಗೆ ಸಿಸಿಬಿ ಪೊಲೀಸರು ಶಾಕ್: ಡ್ಡೆಗಳು, ಮನೆಗಳ ಮೇಲೆ ದಾಳಿ

ಇನ್ನು ಬೆಂಗಳೂರು ಸಿಸಿಬಿ ಪೊಲೀಸರಿಂದ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ. ರೌಡಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ​ರೌಡಿಗಳ ಅಡ್ಡೆಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಖಾಕಿ ಸಮರ: ಕಂತೆ ಕಂತೆ ಹಣ, ಚಿನ್ನಾಭರಣ ಕಂಡು ಶಾಕ್​​!

ಬೆಂಗಳೂರಿನ ವಿವಿಧ ಭಾಗದಲ್ಲಿ ಸಕ್ರಿಯರಾಗಿರುವ 30ಕ್ಕೂ ಹೆಚ್ಚು ರೌಡಿಶೀಟರ್‌ಗಳ ತಪಾಸಣೆ ಮಾಡಲಾಗಿದೆ. ರೌಡಿಗಳು ಸಂಚರಿಸುತ್ತಿದ್ದ ವಾಹನ ರಸ್ತೆಯಲ್ಲೇ ತಡೆದು ಪರಿಶೀಲನೆ ಮಾಡಲಾಗಿದೆ ರೌಡಿಶೀಟರ್​​ಗಳಾದ​ ಇಟ್ಟಮಡು ಸಾಗರ್, ಹುಸ್ಕೂರು ಶಿವ, ವಿವೇಕನಗರ ದಿನೇಶ್, ಶೇಷಾದ್ರಿಪುರದ ರೌಡಿಶೀಟರ್​​ ರಂಜಿತ್ ಸೇರಿದಂತೆ ಹಲವು ರೌಡಿಶೀಟರ್​ಗಳ ವಾಹನ ತಡೆದು ಪೊಲೀಸರು ಪರಿಶೀಲಿಸಿದ್ದಾರೆ. ಇನ್ನು ಈ ವೇಳೆ ರೌಡಿಶೀಟರ್ ಪಿ.ಮೂರ್ತಿ ಬಳಿ ಪರವಾನಗಿ ರದ್ದು ಆಗಿದ್ದ ಗನ್ ಪತ್ತೆ ಆಗಿದ್ದು, ಪರವಾನಗಿ ನವೀಕರಣಗೊಳ್ಳುವವರೆಗೆ ಗನ್ ಪೊಲೀಸ್ ಠಾಣೆಯಲ್ಲಿ ಜಮೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version