Headlines

ಉಘೇ ಉಘೇ ಮಾದಪ್ಪ: ಮಾದಪ್ಪನ ಸನ್ನಿಧಿಯಲ್ಲಿ ಕೇವಲ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!

ಚಾಮರಾಜನಗರ, ಮಾರ್ಚ್​ 28: ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಕ್ಷೇತ್ರಕ್ಕೆ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಸರಣಿ ರಜಾ ದಿನಗಳ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ಆರಾಧ್ಯ ದೈವ ಮಾದಪ್ಪನಿಗೆ ಒಟ್ಟು ಕೋಟ್ಯಂತರ ರೂಪಾಯಿ ಕಾಣಿಕೆ ಸಮರ್ಪಣೆಯಾಗಿದೆ. ಕೇವಲ 23 ದಿನಗಳ ಅವಧಿಯಲ್ಲಿ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2.33 ಕೋಟಿ ರೂಪಾಯಿ ನಗದು ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಮಲೆಮಹದೇಶ್ವರ…

Read More

ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ

ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಇದರಲ್ಲಿ ಹರಿಗೆ ಒಂದು ಚಾಲೆಂಜ್ ಇತ್ತು. ಎಲ್ಲರನ್ನೂ ಸಾಲಾಗಿ ಕೂರಿಸಲಾಗಿತ್ತು. ಹರಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಇವರಲ್ಲಿ ಚಂದನಾ ಯಾರು ಅಂತ ಹೇಳಬೇಕಿತ್ತು. ಕೊನೆಗೂ ಹೇಳಿದರು ಹರೀಶ್ ಹೇಳಿಯೇಬಿಟ್ಟರು. ಈ ವಿಡಿಯೋ ಗಮನ ಸೆಳೆದಿದೆ. ಗೌರಿ ಕಲ್ಯಾಣ ಸೀರಿಯಲ್ ಸಂತೆ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರ ಕಾಣಲಿದೆ. ಗಿಲ್ಲಿ ನಟ ಕೂಡ ಇದಕ್ಕೆ ಬರಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಅಭಿಯಾನ ಶುರು ಮಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.8) ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. ಇಲ್ಲಿ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಕಾರಣದಿಂದಾಗಿ…

Read More

Bengaluru Air Quality: ಸುಧಾರಿಸುತ್ತಿಲ್ಲ ಮಂಗಳೂರಿನ ವಾಯು ಗುಣಮಟ್ಟ!

ಬೆಂಗಳೂರು, ಮಾರ್ಚ್​ 28: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ  (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಉಡುಪಿಯ ಏರ್ ಕ್ವಾಲಿಟಿ ನೋಡಿದಾಗ ಆತಂಕ ಸೃಷ್ಟಿಯಾಗುವುದಂತೂ ನಿಜ. 100ರಿಂದ 150ರ ಒಳಗಿದ್ದ ಉಡುಪಿಯ AQI ಇಂದು ಒಮ್ಮೆಲೇ 200ರ ಗಡಿ ದಾಟಿರುವುದು ಆಶ್ಚರ್ಯವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ 150ಕ್ಕೂ ಹೆಚ್ಚಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

Daily Devotional: ನೀವು ಸಿಹಿ ಹೆಚ್ಚು ಇಷ್ಟಪಡುತ್ತೀರಾ? ಹಾಗಿದ್ರೆ ಜ್ಯೋತಿಷ್ಯದ ಪ್ರಕಾರ ನಿಮ್ಮ ವ್ಯಕ್ತಿತ್ವ ತಿಳಿಯಿರಿ

ನಮ್ಮ ದೈನಂದಿನ ಜೀವನದಲ್ಲಿ ಸಿಹಿ ಮತ್ತು ಖಾರವಾದ ಆಹಾರಕ್ಕೆ ವಿಭಿನ್ನ ಪ್ರಾಮುಖ್ಯತೆಯಿದೆ. ಕೆಲವರು ಸಿಹಿ ಆಹಾರವನ್ನು ಹೆಚ್ಚು ಇಷ್ಟಪಟ್ಟರೆ, ಮತ್ತೆ ಕೆಲವರು ಖಾರದ ಆಹಾರಕ್ಕೆ ಆದ್ಯತೆ ನೀಡುತ್ತಾರೆ. ಈ ಆಹಾರದ ಆಯ್ಕೆ ನಮ್ಮ ಜಾತಕದಲ್ಲಿರುವ ಗ್ರಹಗಳ ಸ್ಥಿತಿಗತಿಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸಿಹಿ ಆಹಾರವನ್ನು ಇಷ್ಟಪಡುವ ವ್ಯಕ್ತಿಗಳು: ಸಿಹಿ ಆಹಾರವನ್ನು…

Read More

ಬಿಗ್ ಬಾಸ್ ಮುಗಿದ ಬಳಿಕ ಮೊದಲ ಬಾರಿಗೆ ಸಿನಿಮಾ ಘೋಷಿಸಿದ ಸಂಗೀತಾ ಶೃಂಗೇರಿ

ಸಂಗೀತಾ ಶೃಂಗೇರಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಈ ಸೀಸನ್ ಬಳಿಕ ಅವರು ಸಿಂಹಿಣಿ ಎಂದೇ ಫೇಮಸ್ ಆದರು. ಇದಾದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ ಸೆಟ್ಟೇರಿದೆ. ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ‘ಮಾರಿಗೋಲ್ಡ್​’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಬಿಗ್ ಬಾಸ್​​ಗೂ ಮೊದಲು ಶೂಟ್ ಆಗಿತ್ತು. ಈಗ ಹೊಸ ಸಿನಿಮಾ ಒಪ್ಪಿಕೊಂಡಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಹೆಸರಿನ…

Read More

ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ

ನೆಲಮಂಗಲ, ಮಾರ್ಚ್ 28: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಬಿಕಾ ಎಂಬವರು ಸ್ನೇಹಿತೆಯೊಂದಿಗೆ ಬೇಕರಿ ಮುಂದೆ ನಿಂತು ಮಾತನಾಡುತ್ತಿದ್ದಾಗ, ಅಲ್ಲೇ ಜ್ಯೂಸ್ ಕುಡಿಯುತ್ತಿದ್ದಂತೆ ನಟಿಸಿದ ಇಬ್ಬರು ಖತರ್ನಾಕ್ ಖದೀಮರು ಕ್ಷಣಾರ್ಧದಲ್ಲಿ ಮಹಿಳೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಸರ…

Read More

IPL ನಿಂದ ಇಬ್ಬರು ಆಟಗಾರರಿಗೆ ನಿಷೇಧ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ವೇದಿಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನವೇ ಇಂಗ್ಲೆಂಡ್ ಆಟಗಾರ ಬೆನ್ ಡಕೆಟ್ ಐಪಿಎಲ್​ನಿಂದ ಹಿಂದೆ ಸರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಬೆನ್ ಡಕೆಟ್ ಟೂರ್ನಿ ಆರಂಭಕ್ಕೂ ಮುನ್ನ ತಮ್ಮ ಒಪ್ಪಂದದಿಂದ ಹಿಂದೆ ಸರಿದ ಕಾರಣ ಇದೀಗ ನಿಷೇಧಕ್ಕೆ ಒಳಗಾಗಿದ್ದಾರೆ. ಅಂದರೆ ಬಿಸಿಸಿಐ ನಿಯಮದಂತೆ, ಯಾವುದೇ ವಿದೇಶಿ ಆಟಗಾರ…

Read More

ಮೊನಾಲಿಸಾ ಭೋಸ್ಲೆಗೆ ಸಂಕಷ್ಟ; ವೈರಲ್ ಸುಂದರಿ ಮೇಲೆ ಮಾನನಷ್ಟ ಮೊಕದ್ದಮೆ

ಮೊನಾಲಿಸಾ ಭೋಸ್ಲೆ (Monalisa Bhosle) ಇತ್ತೀಚೆಗೆ ಪ್ರೇಮ ವಿವಾಹವಾದರು. ಆರು ತಿಂಗಳ ಕಾಲ ಫರ್ಮಾನ್ ಖಾನ್ ಎಂಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದ ಮೊನಾಲಿಸಾ ಇತ್ತೀಚೆಗೆ ಕೇರಳ ಪೊಲೀಸರ ಸಮ್ಮುಖದಲ್ಲಿ ವಿವಾಹವಾದರು. ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರಾ ಇವರ ಮದುವೆ ಅಮಾನ್ಯವಾಗಿದೆ ಎಂದು ಆಕ್ಷೇಪಿಸಿದರು. ನಿರ್ದೇಶಕ ಸನೋಜ್ ಮಿಶ್ರಾ ಸಿನಿಮಾದಲ್ಲಿಯೇ ಮೊನಾಲಿಸಾ ನಟಿಸುತ್ತಿದ್ದಾರೆ. ಅವರು ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಮೊನಾಲಿಸಾ ಆರೋಪಿಸಿದ್ದರು. ಇದನ್ನು ಸನೋಜ್ ಅಲ್ಲಗಳೆದಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊನಾಲಿಸಾ, ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ…

Read More

ಕರ್ನಾಟಕ ಹವಾಮಾನ ವರದಿ: ಇಂದೂ ಮುಂದುವರೆದ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 28: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆಯಾಗುವ…

Read More