Headlines

ಉದ್ಯೋಗ ಭವಿಷ್ಯ: ಈ ವಾರ ಬಾಸ್‌ನಿಂದ ಮೆಚ್ಚುಗೆಯೋ ಅಥವಾ ಕೆಲಸದಲ್ಲಿ ಕಿರಿಕಿರಿಯೋ?: ಕೆರಿಯರ್ ಗ್ರಹಗತಿಯಲ್ಲಿ ಮಹತ್ವದ ಬದಲಾವಣೆ – Kannada News | Career Forecast May 24 30: Astrological Insights for Your Job Future

ಮೇ 24ರಿಂದ ಮೇ 30ರವರೆಗಿನ ಕೊನೆಯ ವಾರವಾಗಿದ್ದು ಗ್ರಹರ ದೃಷ್ಟಿಯಿಂದ ಉದ್ಯೋಗದಲ್ಲಿ ಉನ್ನತಿ, ಅವನತಿಗಳು ಆಗಲಿವೆ. ದೃಷ್ಟಿದೋಷವನ್ನು ಗ್ರಹರ ಸ್ತೋತ್ರದ ಮೂಲಕ ಕಡಿಮೆ ಮಾಡಿಕೊಳ್ಳಬಹುದು. ​​ಮೇಷ ರಾಶಿ : ​ಸ್ವಕ್ಷೇತ್ರದ ಮಂಗಳನ ಪ್ರಭಾವದಿಂದ ಉದ್ಯೋಗದಲ್ಲಿ ಧೈರ್ಯ ಹಾಗೂ ನಾಯಕತ್ವ ಗುಣ ಹೆಚ್ಚಲಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದ್ದು, ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಅಧಿಕಾರದಲ್ಲಿ ಪ್ರಗತಿ ಕಂಡುಬರಲಿದೆ. ​ವೃಷಭ ರಾಶಿ : ​ಸೂರ್ಯನ ಸ್ಥಿತಿಯಿಂದಾಗಿ ಉದ್ಯೋಗ ಬದಲಾವಣೆಗೆ ಯೋಚಿಸುವಿರಿ. ಮೇಲಾಧಿಕಾರಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು, ತಾಳ್ಮೆ ಇರಲಿ….

Read More

ತಮಿಳುನಾಡು ಸರ್ಕಾರದಿಂದಲೇ ಒಟಿಟಿ ಆರಂಭಿಸಲು ಸಿಎಂ ವಿಜಯ್‌ಗೆ ವಿಜಯ್ ಸೇತುಪತಿ ಮನವಿ – Kannada News | Kollywood actor Vijay Sethupathi requests Tamil Nadu CM Vijay to launch Government OTT Platform

ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಇತ್ತೀಚೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Vijay) ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಪ್ರಾದೇಶಿಕ ಸಿನಿಮಾಗಳ ಪ್ರೋತ್ಸಾಹಕ್ಕಾಗಿ ತಮಿಳುನಾಡು ಸರ್ಕಾರವೇ ಸ್ವಂತ ಒಟಿಟಿ (OTT) ಪ್ಲಾಟ್‌ಫಾರ್ಮ್ ಪ್ರಾರಂಭಿಸುವ ಬಗ್ಗೆ ಯೋಚಿಸಬೇಕು ಎಂದು ಅವರು ವಿನಂತಿಸಿದ್ದಾರೆ. ವಿಜಯ್ ಸೇತುಪತಿ (Vijay Sethupathi) ಅವರ ಈ ಹೇಳಿಕೆಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಚಿತ್ರರಂಗದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳ ಬೆಳವಣಿಗೆಯ ಬಗ್ಗೆ ಮಾತನಾಡಿದ…

Read More

ಬಾಂಗ್ಲಾದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿ, 15 ಮಂದಿ ಸಾವು, 10 ಜನರಿಗೆ ಗಾಯ – Kannada News | Bangladesh Truck Crash: 15 Laborers Dead, 10 Injured Traveling for Eid

ಢಾಕಾ, ಮೇ 25: ಬಾಂಗ್ಲಾದೇಶ(Bangladesh)ದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈದ್ ಅಲ್-ಅಧಾ’ ಆಚರಣೆಗಾಗಿ ತಮ್ಮ ಕುಟುಂಬಗಳನ್ನು ಸೇರಲು ತಾಯ್ನಾಡಿಗೆ ಹೊರಟಿದ್ದ ಬಡ ದಿನಗೂಲಿ ಕಾರ್ಮಿಕರಿದ್ದ ಟ್ರಕ್ ಪಲ್ಟಿಯಾಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ವಾಯುವ್ಯಕ್ಕೆ ಸುಮಾರು 83 ಕಿಲೋಮೀಟರ್ ದೂರದಲ್ಲಿರುವ ತಂಗೈಲ್ ಜಿಲ್ಲೆಯ ಸೊರಾಟೊಯಿಲ್ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ನಡೆದಿದ್ದೇನು? ಪೊಲೀಸ್…

Read More

ಮಂಡ್ಯ: ಜಿಂಕೆ ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ! – Kannada News | 10 Foot Long Python Swallows Deer, Rescued Near Water Pipeline

ಮಂಡ್ಯ, ಮೇ 25: ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ…

Read More

ಹೈಕಮಾಂಡ್​ನಿಂದ ಸಿಎಂಗೆ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು

ಬೆಂಗಳೂರು, (ಮೇ 25): ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ನಡುವಿನ ಕುರ್ಚಿ ಕಾಳಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಶೀತಲ ಸಮರ ಕೇವಲ ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿಲ್ಲ. ಇದರ ಪ್ರತಿಧ್ವನಿ ರಾಷ್ಟ್ರ ರಾಜಧಾನಿ ದಿಲ್ಲಿಯವರೆಗೂ ತಲುಪಿದೆ. ರಾಜ್ಯ ಕಾಂಗ್ರೆಸ್‌ನ ಈ ಪವರ್ ಶೇರಿಂಗ್ ಗೊಂದಲದ ನಡುವೆ ಸಿಎಂಗೆ ಹೈಕಮಾಂಡ್ ಬುಲಾವ್‌ ನೀಡಿದೆ. ಹೀಗಾಗಿ ಕಾಂಗ್ರೆಸ್​​ನಲ್ಲಿನ ಕುರ್ಚಿ ಗುದ್ದಾಟಕ್ಕೆ ತೆರೆ ಬೀಳುತ್ತಾ ಎನ್ನುವ ಚರ್ಚೆ ಶುರುವಾಗಿದೆ. ಇನ್ನು ಈ…

Read More

ಭಾರತದಲ್ಲಿ ಆದ ಪೆಟ್ರೋಲ್ ಬೆಲೆ ಏರಿಕೆ ಬಹಳ ದೊಡ್ಡ ಹೆಚ್ಚಳವಾ? ಇಲ್ಲಿದೆ ವಾಸ್ತವ ಸ್ಥಿತಿ – Kannada News | Despite oil crisis, India’s petrol, diesel price hike is the smallest globally

ನವದೆಹಲಿ, ಮೇ 25: ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ (Petrol and Diesel rates) ಮಾಡಿರುವ ಕ್ರಮಕ್ಕೆ ಬಹಳಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಆದರೆ, ಈ ವಿರೋಧಗಳಲ್ಲಿ ಸತ್ಯವೆಷ್ಟು ಮಿಥ್ಯವೆಷ್ಟು? ಅಂಕಿ ಅಂಶಗಳು ಬೇರೆಯೇ ಕಥೆ ಹೇಳುತ್ತವೆ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಂತರ ತೈಲ ಬೆಲೆ ಏರಿಕೆಯಾದರೂ ಭಾರತದಲ್ಲಿ ತಿಂಗಳುಗಟ್ಟಲೆ ಪೆಟ್ರೋಲ್, ಡೀಸಲ್ ಬೆಲೆ ಏರಿಸದೇ ತಡೆಯಲಾಗಿತ್ತು. ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಕೂಡ ಮಾಡಿತು. ತೈಲ ಕಂಪನಿಗಳು ದಿನಕ್ಕೆ ಸಾವಿರಾರು ಕೋಟಿ ರೂ…

Read More

2+3+6 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For GT Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಮೇ 26) ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಹೀಗಾಗಿ ಆರ್​ಸಿಬಿ ತಂಡವು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಲಿದೆ. ಇಲ್ಲಿ ಆರ್​ಸಿಬಿ ತಂಡವು 6+2+3 ಸಂಯೋಜನೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಏಕೆಂದರೆ ಧರ್ಮಶಾಲಾ ಪಿಚ್ ಬ್ಯಾಟಿಂಗ್​ಗೆ…

Read More

ಅಭಿಮಾನವಲ್ಲ, ಇದು ಅಭಿಮಾನಿಗಳ ವಿಕೃತಿ: ಟ್ರಾವಿಸ್ ಹೆಡ್ ಪತ್ನಿಯ ಆಳಲು! – Kannada News | Travis Head’s wife exposes ugly fallout from Virat Kohli IPL spat

“ಕ್ರೀಡೆಯಲ್ಲಿ ಭಾವನೆ ಮತ್ತು ಉದ್ವೇಗ ಇರುವುದು ಸಹಜ. ಆದರೆ ಆಟದ ಹಿಂದೆ ನಿಜವಾದ ಮನುಷ್ಯರು ಮತ್ತು ಅವರ ಕುಟುಂಬಗಳು ಇರುತ್ತವೆ ಎಂಬುದನ್ನು ಮರೆಯಬಾರದು.” ಇದು ಐಪಿಎಲ್ 2026ರ ಆನ್‌ಲೈನ್ ಕಿರುಕುಳಕ್ಕೆ ಬೇಸತ್ತು ಆಸ್ಟ್ರೇಲಿಯಾದ ಕ್ರಿಕೆಟರ್ ಟ್ರಾವಿಸ್ ಹೆಡ್ ಅವರ ಪತ್ನಿ ಜೆಸ್ಸಿಕಾ ಹೆಡ್ (Jessica Head) ಆಸ್ಟ್ರೇಲಿಯಾದ ಮಾಧ್ಯಮವೊಂದಕ್ಕೆ ನೀಡಿರುವ ಹೃದಯವಿದ್ರಾವಕ ಹೇಳಿಕೆ. ಘಟನೆಯ ಹಿನ್ನೆಲೆ ಏನು? ಐಪಿಎಲ್ 2026ರ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಪಂದ್ಯದ ವೇಳೆ ಟ್ರಾವಿಸ್…

Read More

ಪೆಟ್ರೋಲ್ ಡೀಸೆಲ್ ಬೆಲೆ ಇನ್ನೂ ಏರಿಕೆಯಾಗುತ್ತಾ? ಇಂಧನ ದರದಲ್ಲಿ ಕೇಂದ್ರ, ರಾಜ್ಯಕ್ಕೆಷ್ಟು ಪಾಲು ಎಂಬ ಮಾಹಿತಿ ಇಲ್ಲಿದೆ – Kannada News | Petrol Diesel Prices may Keep Rising! Understanding Central Excise Duty and State VAT Share in Total Fuel Tax

ಬೆಂಗಳೂರು, ಮೇ 25: ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 2.83 ರೂಪಾಯಿ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 2.82 ರೂಪಾಯಿ ಹೆಚ್ಚಳವಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ದರ 110.44 ರೂಪಾಯಿ ಮತ್ತು ಡೀಸೆಲ್ ದರ 98.39 ರೂಪಾಯಿಗೆ ತಲುಪಿದೆ. ಭಾರತವು ತನ್ನ ಕಚ್ಚಾ ತೈಲದ ಶೇ 85ಕ್ಕೂ ಹೆಚ್ಚು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ,…

Read More

Bangalore Rain: ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಗುಡುಗು ಸಹಿತ ಭಾರೀ ಮಳೆ – Kannada News | Bangalore Weather Update: Heavy Rain Expected, Temperature Drops, Yellow Alert Issued by IMD

ಬೆಂಗಳೂರು, ಮೇ.25: ತೀವ್ರ ಉಷ್ಣಾಂಶ ಮತ್ತು ಬಿಸಿಲಿನಿಂದ ಕಂಗಾಲಾಗಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಕೂಲ್​ ಸುದ್ದಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ಹೊರಡಿಸಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಮೇ 29 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಇಡೀ ವಾರ ನಗರದಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ (Cyclonic Circulation) ಉಂಟಾಗಿರುವುದರಿಂದ ಹವಾಮಾನ ಪರಿಸ್ಥಿತಿ ಸಂಪೂರ್ಣವಾಗಿ…

Read More