‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ಹೊರ ನಡೆದ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ನಿರ್ದೇಶಕ – Kannada News | Hera Pheri 3 Controversy: Paresh Rawal Exits? Priyadarshan Reacts to Bollywood Rumors
ಬಾಲಿವುಡ್‌ನ ಅತ್ಯಂತ ಜನಪ್ರಿಯ ಕಾಮಿಡಿ ಫ್ರಾಂಚೈಸಿ ‘ಹೇರಾ ಫೇರಿ’ಯಲ್ಲಿ ಮೂರನೇ ಸಿನಿಮಾ ಬರುತ್ತಿದೆ. ಈ ಸಿನಿಮಾ ಆರಂಭದಿಂದಲೂ ಒಂದಲ್ಲಾ ಒಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಚಿತ್ರದ ಹಕ್ಕುಗಳ ವಿಚಾರವಾಗಿ ಕಾನೂನು ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಚಿತ್ರದ ಮುಖ್ಯ ಪಾತ್ರಧಾರಿ, ‘ಬಾಬುರಾವ್’ ಖ್ಯಾತಿಯ ಪರೇಶ್ ರಾವಲ್ ಈ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಬಲವಾದ ವದಂತಿ ಹಬ್ಬಿದೆ. ಅಷ್ಟೇ ಅಲ್ಲದೆ, ಅವರು ಪಡೆದಿದ್ದ 11 ಲಕ್ಷ ರೂ. ಸೈನಿಂಗ್ ಅಮೌಂಟ್ ಅನ್ನು ಶೇ. 15 ರಷ್ಟು ಬಡ್ಡಿಯೊಂದಿಗೆ ವಾಪಸ್ ಮಾಡಿದ್ದಾರೆ ಎನ್ನಲಾಗುತ್ತಿದೆ….