RCB ಫ್ರಾಂಚೈಸಿಗೆ ಗಡುವು ನೀಡಿದ BCCI
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ. ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್…