ಮಂಡ್ಯ: ನಾಗಮಂಗಲ ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ – Kannada News | Mandya Nagamangala Land Scam: Upa Lokayukta Justice B Veerappa Confirms Bagar Hukum Fraud Expanded to 1,000 Acres
ಮಂಡ್ಯ, ಮೇ 25: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕು ಕಂದಾಯ ಇಲಾಖೆಯಲ್ಲಿ ನಡೆದಿರುವ ಬಗರ್‌ಹುಕುಂ ಭೂ ಮಂಜೂರಾತಿ ಹಗರಣದ ಲೋಕಾಯುಕ್ತ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಮೀಲಾಗಿ ನಡೆಸಿದ್ದ ಭೂ ಮಾಫಿಯಾದ ಜಾಲವು ಬರೋಬ್ಬರಿ 1,000 ಎಕರೆ ಸರ್ಕಾರಿ ಜಮೀನನ್ನು ನುಂಗಿ ನೀರು ಕುಡಿದಿರುವುದು ತನಿಖೆಯಲ್ಲಿ ಬಯಲಾಗಿದೆ. ಅರ್ಹತೆ ಇಲ್ಲದ ಸ್ಥಳೀಯ ಪ್ರಭಾವಿಗಳಿಗೆ, ಹಣ ಕೊಟ್ಟ ಖದೀಮರಿಗೆ ಹಾಗೂ ಹೊರ ರಾಜ್ಯದ ವ್ಯಕ್ತಿಗಳಿಗೂ ಕಾನೂನು ಬಾಹಿರವಾಗಿ ನಕಲಿ…