ಬಿಕ್ಲು ಶಿವ ಕೊಲೆ ಕೇಸ್: ಶಾಸಕ ಬೈರತಿ ಬಸವರಾಜ್ ಫೆ.21ರವರೆಗೆ ಸಿಐಡಿ ಕಸ್ಟಡಿಗೆ – Kannada News | Biklu Shiva Murder Case: MLA Byrathi Basavaraj Remanded to CID Custody Till February 21
ಬೆಂಗಳೂರು, ಫೆಬ್ರವರಿ 15: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ರನ್ನು ಫೆ.21ರವರೆಗೆ ಸಿಐಡಿ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ಕೋರ್ಟ್ ಜಡ್ಜ್ ಆದೇಶಿಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ವಿವಿಧ ಪರೀಕ್ಷೆಗಳ ಬಳಿಕ ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ಕೋರ್ಟ್ ಜಡ್ಜ್ ನಿವಾಸಕ್ಕೆ ಶಾಸಕರನ್ನು ಹಾಜರುಪಡಿಸಲಾಗಿತ್ತು. ಸಿಐಡಿ ಪೊಲೀಸರ ಪರ ಎಸ್ಪಿಪಿ ಅಶೋಕ್ ನಾಯ್ಕ್ ಈ ವೇಳೆ ಹಾಜರಿದ್ದರು. ಶಾಸಕರು ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ…