ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು
ನವದೆಹಲಿ, ಮಾರ್ಚ್ 27: ಜನರಿಗೆ ತೈಲ ಬೆಲೆ ಏರಿಕೆಯ ಬಿಸಿ ತಾಗದಿರಲೆಂದು ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು (Excise Duty) ಕಡಿಮೆಗೊಳಿಸಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂ ಇಳಿಸಿದೆ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ಆಗಬಹುದಾಗಿದ್ದ ನಷ್ಟದ ಹೊರೆ ಕಡಿಮೆ ಆಗಲಿದೆ. ಜನಸಾಮಾನ್ಯರಿಗೆ ಪೆಟ್ರೋಲ್, ಡೀಸಲ್ ಬೆಲೆ (Petrol Price) ಏರಿಕೆಯ ಭಾರವೂ ತಪ್ಪಿದಂತಾಗುತ್ತದೆ. ಅಬಕಾರಿ ಸುಂಕ ಇಳಿಕೆಯಿಂದ ಸರಕಾರದ ಆದಾಯಕ್ಕೆ ಸಾಕಷ್ಟು ನಷ್ಟ ಆಗಲಿದೆ. ಕೇಂದ್ರೀಯ ನೇರ…