Video: ಮನೆ ಬಾಗಿಲಿಗೆ ಬರುವ ಪೌರ ಕಾರ್ಮಿಕರಿಗೆ ಚಹಾ ಬಿಸ್ಕೆಟ್ ಕೊಟ್ಟು ಉಪಚರಿಸುವ ಮಹಿಳೆ – Kannada News | Bengaluru: Bengaluru woman gives tea and biscuits to civic workers cleaning the city.

ಬೆಂಗಳೂರು, ಮೇ 25: ಸ್ವಾರ್ಥಿಗಳೇ (selfish) ತುಂಬಿರುವ ಜನರ ನಡುವೆ ಬೇರೆಯವರಿಗೆ ಸಹಾಯ ಮಾಡುವ ಗುಣ, ಒಳ್ಳೆಯ ಮನಸ್ಸು ಕಾಣಸಿಗುವುದು ಕಡಿಮೆಯೇ. ಇದೆಲ್ಲದರ ನಡುವೆ ಒಳ್ಳೆಯ ಮನಸ್ಸಿನ ವ್ಯಕ್ತಿಗಳನ್ನು ಕಂಡಾಗ ಖುಷಿಯಾಗುತ್ತದೆ. ತಾವು ಮಾಡುವ ಸಣ್ಣ ಪುಟ್ಟ ಕೆಲಸಗಳಿಂದಲೇ ಹೀರೋಗಳಾಗುತ್ತಾರೆ. ಇದಕ್ಕೆ ಉದಾಹರಣೆಯಂತಿದ್ದಾರೆ ಬೆಂಗಳೂರಿನ (Bengaluru) ಈ ಮಹಿಳೆ. ನಗರವನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ಚಹಾ ಬಿಸ್ಕೆಟ್ ನೀಡಿ ಉಪಚರಿಸುತ್ತಿದ್ದಾರೆ ಈ ಮಹಿಳೆ. ಅವರ ಈ ಒಳ್ಳೆಯ ಕೆಲಸಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ.

ಜಗದೀಶ್ ನಡನಳ್ಳಿ (Jagadish Nadanalli) ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬೆಂಗಳೂರಿನ ಮಹಿಳೆಯ ಒಳ್ಳೆಯ ಕಾರ್ಯದ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕ್ಲಿಪ್‌ನಲ್ಲಿ ಕಸ ತೆಗೆದುಕೊಂಡು ಹೋಗಲು ಮನೆಬಾಗಿಲಿಗೆ ಬರುವ ಪೌರ ಕಾರ್ಮಿಕರಿಗೆ ಚಹಾ ಬಿಸ್ಕೆಟ್ ಕೊಟ್ಟು ಉಪಚರಿಸುವುದನ್ನು ಕಾಣಬಹುದು. ಈ ವೇಳೆ ಪೌರ ಕಾರ್ಮಿಕರು, ಮಹಿಳೆಯೊಂದಿಗೆ ಪ್ರೀತಿಯಿಂದ ಮಾತನಾಡುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋದೊಂದಿಗೆ ಜಗದೀಶ್ ಅವರು, ಈ ಮಹಿಳೆಯ ಮಾಡುವ ಇನ್ನಷ್ಟು ಒಳ್ಳೆಯ ಕಾರ್ಯಗಳನ್ನು ಉಲ್ಲೇಖಿಸಿದ್ದಾರೆ. ನಾವು ನೀವುಗಳು ಬಡವರು, ವೃದ್ಧ ನಾಗರಿಕರು, ಆಟೋ ಚಾಲಕರು ಮತ್ತು ರಸ್ತೆಬದಿಯ ಮಾರಾಟಗಾರರಿಗೆ ಸಹಾಯ ಮಾಡುವವರ ಬಗ್ಗೆ ಕೇಳಿದ್ದೇವೆ. ಆದರೆ ಇವರು ಮಾತ್ರ ಭಿನ್ನವಾಗಿ ಕಾಣುತ್ತಾರೆ. ಯಾವುದೇ ಪ್ರಚಾರ ಬಯಸದೇ ಅಥವಾ ಹಣ ಗಳಿಸುವ ಉದ್ದೇಶವಿಲ್ಲದೆ ಕಳೆದ ಕೆಲವು ವರ್ಷಗಳಿಂದ ಇತರರಿಗೆ ಸಹಾಯ ಮಾಡುತ್ತಿದ್ದಾರೆ. ಅವರು ಈ ಕೆಲಸವನ್ನು ಕೇವಲ ಅವರ ಆತ್ಮತೃಪ್ತಿಗಾಗಿ ಮಾಡುತ್ತಾರೆ ಎಂದು ಹೇಳಿದ್ದಾರೆ.

ಈ ಪ್ರದೇಶಕ್ಕೆ ಬರುವ ನೈರ್ಮಲ್ಯ ಕಾರ್ಮಿಕರಿಗೆ ಅವರು ನಿಯಮಿತವಾಗಿ ಕಾಫಿ, ಬ್ರೆಡ್, ಬಿಸ್ಕೆಟ್ ಹಾಗೂ ಬಾಳೆಹಣ್ಣುಗಳನ್ನು ನೀಡುತ್ತಾರೆ. ಕೆಲವೊಮ್ಮೆ ಬಗೆಬಗೆಯ ತಿನಿಸುಗಳು, ಅಗತ್ಯ ವಸ್ತುಗಳನ್ನು ಕೂಡ ನೀಡುತ್ತಾರೆ. ಇನ್ನು ಬೀದಿ ನಾಯಿಗಳು ಮತ್ತು ಬೆಕ್ಕುಗಳಿಗಾಗಿ ಹಾಲು, ಅನ್ನ ಹಾಕಿ ಹೊಟ್ಟೆ ತುಂಬಿಸುತ್ತಾರೆ. ಮನೆಯ ಟೆರೇಸ್‌ ಮೇಲೆ ಪಕ್ಷಿಗಳಿಗೆ ಧಾನ್ಯಗಳು, ನೀರನ್ನು ಕೂಡ ಇಡುವುದು ಅವರ ನಿತ್ಯದ ಕಾಯಕಗಳಲ್ಲಿ ಒಂದಾಗಿದೆ ಎಂದು ಮಹಿಳೆಯ ಕೆಲಸವನ್ನು ಶ್ಲಾಘಿಸಿದ್ದಾರೆ.

ಹಸು, ಕರುಗಳೊಂದಿಗೆ ಮನೆ ಬಾಗಿಲಿಗೆ ಬರುವವರನ್ನು ಮಾತನಾಡಿಸುತ್ತಾರೆ. ತರಕಾರಿ, ಹೂವು ಹಾಗೂ ಹಣ್ಣು ಮಾರಾಟಗಾರರನ್ನು ತಮ್ಮ ಕುಟುಂಬ ಸದಸ್ಯರಂತೆ ಭಾವಿಸುತ್ತಾರೆ. ಕೆಲವು ಸಲ ಅವರಿಗೆ ಮಾರಾಟಗಾರರಿಂದ ಖರೀದಿಸಲು ಏನು ಇರಲ್ಲ. ಈ ವ್ಯಾಪಾರಿಗಳೊಂದಿಗೆ ಮಾತನಾಡಲೆಂದೇ ಅವರ ಮನೆಗೆ ಭೇಟಿ ನೀಡುತ್ತಾರೆ. ಪ್ರತಿದಿನ ಇತರರಿಗೆ ಸಹಾಯ ಮಾಡುವ ಇಂತಹ ವ್ಯಕ್ತಿಯನ್ನು ನಾನು ಎಂದಿಗೂ ನೋಡಿಲ್ಲ. ಆಕೆ ಒಬ್ಬ ಮಹಾನ್ ತಾಯಿಯಂತೆ ಕಾಣಿಸುತ್ತಾಳೆ ಎಂದು ಬರೆದಿರುವುದನ್ನು ಕಾಣಬಹುದು.

ಇದನ್ನೂ ಓದಿ: 4 ಕಿ.ಮೀ ಕ್ರಮಿಸಲು 45 ನಿಮಿಷಗಳು ತೆಗೆದುಕೊಂಡೆ; ಟ್ರಾಫಿಕ್‌ ಸಮಸ್ಯೆ ಬಗ್ಗೆ ಅಸಮಾಧಾನ ಹೊರಹಾಕಿದ ಗೂಗಲ್ ಟೆಕ್ಕಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಈ ವಿಡಿಯೋ ಹಂಚಿಕೊಂಡದ್ದಕ್ಕೆ ಧನ್ಯವಾದಗಳು. ಆಕೆಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಮ್ಮ ಸುತ್ತಲೂ ಇಂತಹ ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಈಗಿನ ಕಾಲದಲ್ಲಿ ಇಂತಹ ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಕಾಣಸಿಗುವುದೇ ವಿರಳ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದು ಕ್ಯಾಬ್ ಚಾಲಕನ ಕಿಡ್ನ್ಯಾಪ್, ದರೋಡೆ! – Kannada News | Bengaluru: Gang in Mercedes Benz Kidnaps and Robs Cab Driver Over Women Dispute

ಮರ್ಸಿಡೀಸ್ ಬೆಂಜ್ ಕಾರಿನಲ್ಲಿ ಬಂದು ಕ್ಯಾಬ್ ಚಾಲಕನ ಕಿಡ್ನ್ಯಾಪ್, ದರೋಡೆ!
Image Credit source: nationworldnews.com

ಬೆಂಗಳೂರು, ಮೇ 25: ನಗರದ ಹೊರವಲಯದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ವಿಮಾನ ನಿಲ್ದಾಣಕ್ಕೆ ಹೋಗಿದ್ದ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತನನ್ನು ಮರ್ಸಿಡಿಸ್ ಬೆಂಜ್ (Mercedes-Benz) ಕಾರಿನಲ್ಲಿ ಬಂದ ಗ್ಯಾಂಗ್‌ವೊಂದು ಅಪಹರಿಸಿ, ಚಾಕು ಹಾಗೂ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿದ್ದಲ್ಲದೆ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಮರ್ಸಿಡಿಸ್ ಕಾರಿನಲ್ಲಿ ಬಂದ ಗ್ಯಾಂಗ್‌ನಿಂದ ಕ್ಯಾಬ್ ಚಾಲಕನ ಅಪಹರಣ.
  • ಮಹಿಳೆಯ ವಿಚಾರದ ಜಗಳಕ್ಕಾಗಿ ಚಾಕು ತೋರಿಸಿ ಭೀಕರ ದರೋಡೆ ನಡೆಸಿದ ದುಷ್ಕರ್ಮಿಗಳು.
  • ಗಾಯಗೊಂಡ ಸ್ನೇಹಿತ ಆಸ್ಪತ್ರೆಗೆ ದಾಖಲು, ಬಾಗಲೂರು ಪೊಲೀಸರಿಂದ ಶಂಕಿತರ ತೀವ್ರ ವಿಚಾರಣೆ.

ಏನಿದು ಘಟನೆ?

ಮೊಹಮ್ಮದ್ ರಫೀಕ್ (30) ಮೂಲತಃ ಕೇರಳದವರಾಗಿದ್ದು, ಕಳೆದ ಆರು ತಿಂಗಳಿನಿಂದ ಬೆಂಗಳೂರಿನಲ್ಲಿ ಬಾಡಿಗೆ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮೇ 21ರ ತಡರಾತ್ರಿ 1 ಗಂಟೆ ಸುಮಾರಿಗೆ ರಫೀಕ್ ತಮ್ಮ ಸ್ನೇಹಿತ ದೀಪಕ್‌ನನ್ನು ಪಿಕ್ ಅಪ್ ಮಾಡಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಹೋಗಿದ್ದರು. ದೀಪಕ್‌ನನ್ನು ಕರೆದುಕೊಂಡು ವಾಪಸ್ ಬರುತ್ತಿದ್ದಾಗ, ಬೇಗೂರು ಸಮೀಪ ಬಿಳಿ ಬಣ್ಣದ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದ 5 ರಿಂದ 6 ಜನರ ಗ್ಯಾಂಗ್ ಇವರ ಕ್ಯಾಬ್ ಅನ್ನು ಅಡ್ಡಗಟ್ಟಿದೆ.

ಚಾಕು ತೋರಿಸಿ ಕಿಡ್ನ್ಯಾಪ್, ದರೋಡೆ

ಕಾರಿನಿಂದ ಇಳಿದ ದುಷ್ಕರ್ಮಿಗಳು ಚಾಕು ಮತ್ತು ಮಾರಕಾಸ್ತ್ರಗಳನ್ನು ತೋರಿಸಿ ರಫೀಕ್‌ನನ್ನು ಬಲವಂತವಾಗಿ ಬೆಂಜ್ ಕಾರಿಗೆ ಎಳೆದುಕೊಂಡಿದ್ದಾರೆ. ಅವರ ಬಳಿಯಿದ್ದ 21,000 ರೂ. ನಗದು ಹಾಗೂ ಮೊಬೈಲ್ ಫೋನ್ ಕಸಿದುಕೊಂಡು ನಗರದ ಕಡೆಗೆ ಚಲಿಸಿದ್ದಾರೆ. ಬಳಿಕ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ, ರಫೀಕ್‌ನಿಂದ ಆತನ ಮತ್ತೊಬ್ಬ ಸ್ನೇಹಿತ ಜಾಬಿರ್ ಎಂಬುವವನಿಗೆ ಕರೆ ಮಾಡಿಸಿದ್ದಾರೆ. ತನಗೆ ಅಪಘಾತವಾಗಿದೆ ಎಂದು ಸುಳ್ಳು ಹೇಳಿಸಿ ಜಾಬಿರ್‌ನನ್ನು ಸ್ಥಳಕ್ಕೆ ಬರುವಂತೆ ಪ್ಲಾನ್ ಮಾಡಿದ್ದರು.

ಸ್ನೇಹಿತ ಕರೆ ಮಾಡಿದ್ದಕ್ಕೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಜಾಬಿರ್‌ನನ್ನೂ ಸಹ ಈ ಗ್ಯಾಂಗ್ ಕಬ್ಬಿಣದ ರಾಡ್‌ಗಳಿಂದ ಬೆದರಿಸಿ, ಇಬ್ಬರನ್ನೂ ಖಾಲಿ ಸೈಟ್‌ವೊಂದಕ್ಕೆ ಕರೆದೊಯ್ದು ಮನಬಂದಂತೆ ಥಳಿಸಿದೆ. ಈ ವೇಳೆ ರಫೀಕ್ ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಆಟೋರಿಕ್ಷಾ ಮೂಲಕ ಕೊಠಡಿಗೆ ಬಂದು ತಲುಪಿದ್ದಾರೆ. ನಂತರ ಮುಂಜಾನೆ 5 ಗಂಟೆ ಸುಮಾರಿಗೆ ಮತ್ತೊಬ್ಬ ಸ್ನೇಹಿತನ ಫೋನ್ ಬಳಸಿ ಪೊಲೀಸ್ ಹೆಲ್ಪ್‌ಲೈನ್ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್​: ಇಂದಿನಿಂದ 3 ದಿನ ಇಡೀ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

ಪೊಲೀಸ್ ಕಾರ್ಯಾಚರಣೆ

ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಂಪಿಗೆಹಳ್ಳಿ ಪೊಲೀಸರು ಗಾಯಗೊಂಡಿದ್ದ ಜಾಬಿರ್‌ನನ್ನು ರಕ್ಷಿಸಿ ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆಯಿಂದಾಗಿ ಜಾಬಿರ್ ಕಿಿವಿಗೆ ಬಲವಾದ ಗಾಯಗಳಾಗಿವೆ. ಸದ್ಯ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ಮಾಡಿದವರು ಮತ್ತು ದೂರುದಾರರಿಗೆ ಮುಂಚಿತವಾಗಿ ಪರಿಚಯ ಇರಲಿಲ್ಲ. ಆದರೆ ಮಹಿಳೆಯೊಬ್ಬರ ವಿಚಾರದಲ್ಲಿ ಇವರ ನಡುವೆ ಗಲಾಟೆಯಾಗಿದ್ದು, ಇದೇ ದ್ವೇಷದಲ್ಲಿ ಅಪಹರಣ ಮತ್ತು ದರೋಡೆ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈಗಾಗಲೇ ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:02 pm, Mon, 25 May 26

Source link

Video: ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ – Kannada News | Dog Runs Off With Bag Allegedly Containing Cash in Bijnor

ಬಿಜ್ನೋರ್, ಮೇ 25: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಸಾರ್ವಜನಿಕರನ್ನು ಕಂಗಾಲು ಮಾಡುವಂತಹ ವಿಲಕ್ಷಣ ಮತ್ತು ನಂಬಲಾರದ ಘಟನೆಯೊಂದು ನಡೆದಿದೆ. ಇಲ್ಲಿನ ಬೀದಿನಾಯಿಯೊಂದು ಸಾರ್ವಜನಿಕರ ಕಣ್ಣೆದುರೇ ಬರೋಬ್ಬರಿ 1 ಲಕ್ಷ ರೂಪಾಯಿ ನಗದು ಹಣವಿದ್ದ ಬ್ಯಾಗ್‌ ಅನ್ನು ಹೊತ್ತೊಯ್ದಿದೆ.

ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ಮತ್ತು ಅವುಗಳ ಕಡಿತದಿಂದ ಮನುಷ್ಯರು ಹೇಗೋ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಿದ್ದಾರೆ. ಆದರೆ, ಇದೀಗ ನಾಯಿಗಳನ್ನು ಮುಂದಿಟ್ಟುಕೊಂಡು ಹಗಲು ದರೋಡೆ ಮಾಡುವ ಕೆಲವು ವಿಕೃತ ಮನಸ್ಸಿನ ಗ್ಯಾಂಗ್‌ಗಳು ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಖದೀಮರು ಮನುಷ್ಯರಿಂದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಕದಿಯಲು ಬೀದಿನಾಯಿಗಳಿಗೆ ವಿಶೇಷ ತರಬೇತಿ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಹಣದ ಬ್ಯಾಗ್ ಕಳೆದುಕೊಂಡ ವ್ಯಕ್ತಿ ತಕ್ಷಣವೇ ನಾಯಿಯ ಹಿಂದೆ ಓಡಿದರಾದರೂ, ಚಾಣಾಕ್ಷ ನಾಯಿ ಹಣದೊಂದಿಗೆ ಮರೆಯಾಗಿದೆ. ಸದ್ಯ ಈ ವಿಚಿತ್ರ ಕಳ್ಳತನದ ಘಟನೆ ಸ್ಥಳೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪ್ರಾಣಿಗಳನ್ನು ಈ ರೀತಿ ಅಪರಾಧ ಕೃತ್ಯಗಳಿಗೆ ಬಳಸಿಕೊಳ್ಳುತ್ತಿರುವ ಕಿಡಿಗೇಡಿಗಳ ಪತ್ತೆಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ ಎಂ. ದೀಪನ್ – Kannada News | Bhatkal Murinkatte Row: Police Arrests Six, Files Four Cases Amidst Misinformation

ಕಾರವಾರ, ಮೇ 25: ಭಟ್ಕಳದಲ್ಲಿನ ಮೂರಿನ್ ಕಟ್ಟೆ ಮರುನಿರ್ಮಾಣದ ಕುರಿತ ವಿವಾದದಲ್ಲಿ ಆರು ಜನರನ್ನು ಬಂಧಿಸಿ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕಾರವಾರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎಂ. ದೀಪನ್ ಮಾಹಿತಿ ನೀಡಿದ್ದಾರೆ. ಹೆದ್ದಾರಿ ವಿಸ್ತರಣೆ ಕಾರಣದಿಂದ ಮೂಲ ಮೂರಿನ್ ಕಟ್ಟೆಯನ್ನು ಸ್ಥಳಾಂತರಿಸಬೇಕಾಗಿತ್ತು, ರಸ್ತೆಯ ಪಕ್ಕದಲ್ಲಿ ಮರುನಿರ್ಮಾಣಕ್ಕೆ ಜಾಗ ನೀಡಲಾಗಿತ್ತು. ಆದರೆ, ಈ ನಿರ್ಮಾಣದ ವಿಡಿಯೋ ವೈರಲ್ ಆಗಿ ತಪ್ಪು ಮಾಹಿತಿ ಹರಡಿದ ಪರಿಣಾಮ ಯುವಕರು ಜಮಾಯಿಸಿ ಗೊಂದಲ ಸೃಷ್ಟಿಸಿದ್ದಾರೆ. ಮೂಲ ಮೂರಿನ್ ಕಟ್ಟೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗಿಲ್ಲ, ಅದು ತನ್ನ ಸ್ಥಳದಲ್ಲಿಯೇ ಸುರಕ್ಷಿತವಾಗಿದೆ ಎಂದು ದೀಪನ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರ ಮೇಲೆ ಹಲ್ಲೆ ಹಾಗೂ ಹೆದ್ದಾರಿ ತಡೆಗಟ್ಟಿದ ಸಂಬಂಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸುಳ್ಳು ಸುದ್ದಿಗಳನ್ನು ಹರಡದಂತೆ ಸಾರ್ವಜನಿಕರಿಗೆ ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬದಲಾಗಲಿದ್ದಾರೆ ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಜಡ್ಜ್; ಕಾರಣ ಇಲ್ಲಿದೆ – Kannada News | Renukaswamy Murder Case: Darshan’s Case Trail Court and Judge Changed

ದರ್ಶನ್-ರೇಣುಕಾಸ್ವಾಮಿ Image Credit source: Darshan Instagram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ಗೆ (Darshan) ಸದ್ಯಕ್ಕೆ ಜಾಮೀನು ಸೀಗೋದಿಲ್ಲ ಎಂಬುದು ಖಾತ್ರಿಯಾಗಿದೆ. ಮುಂದಿನ ವರ್ಷ ಮೇ ಒಳಗೆ ಪ್ರಕರಣದ ವಿಚಾರಣೆ ಪೂರ್ಣಗೊಳ್ಳದಿದ್ದರೆ ದರ್ಶನ್ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಹೇಳಿದೆ. ಈ ಬೆನ್ನಲ್ಲೇ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಕೋರ್ಟ್ ಮತ್ತು ಜಡ್ಜ್ ಬದಲಾಗಲಿದ್ದಾರೆ.

ಕೆಲ ಕೋರ್ಟ್​ಗಳ ಪೊಲೀಸ್ ಠಾಣೆ ವ್ಯಾಪ್ತಿ ಮರು ನಿಗದಿ ಆಗಿದೆ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಈ ಕೇಸ್ ಸಿಸಿಹೆಚ್ 57ರನಿಂದ ಸಿಸಿಹೆಚ್ 59ನೇ ಕೋರ್ಟ್‌ಗೆ ವರ್ಗಾವಣೆಯಾಗಲಿದೆ. ಸಿಟಿ ಸಿವಿಲ್ ಕೋರ್ಟ್‌ನ ಡೆಪ್ಯುಟಿ ರಿಜಿಸ್ಟ್ರಾರ್ ಈ ಕುರಿತು ಆದೇಶ ಹೊರಡಿಸಿದ್ದು, ಜೂನ್ 1ರಿಂದ ಅಧಿಕೃತವಾಗಿ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಹೊಸದಾಗಿ ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಈ ಹೈಪ್ರೊಫೈಲ್ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.

ಒಂದು ವರ್ಷದ ಒಳಗಾಗಿ ಈ ಪ್ರಕರಣದ ಎಲ್ಲಾ ಸಾಕ್ಷಿಗಳ ವಿಚಾರಣೆಯನ್ನು ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಕಡಕ್ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶದ ಪ್ರತಿಯನ್ನು ದರ್ಶನ್ ಪರ ವಕೀಲರು ಈಗಾಗಲೇ ಸೆಷನ್ಸ್ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಕೋರ್ಟ್ ವಾರಕ್ಕೆ ಕನಿಷ್ಠ ಎರಡು ಬಾರಿ, ಅಥವಾ ವಾರದಲ್ಲಿ ನಾಲ್ಕು ದಿನಗಳ ಕಾಲ ನಿರಂತರವಾಗಿ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ದರ್ಶನ್​ಗೆ ಸಿಗಲಿಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಸುಪ್ರೀಂ ಕೋರ್ಟ್‌ನಲ್ಲಿ ಈಗಾಗಲೇ ಜಾಮೀನು ಅರ್ಜಿ ವಜಾಗೊಂಡಿರುವುದು ದರ್ಶನ್‌ಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರ ಬೆನ್ನಲ್ಲೇ ಒಂದು ವರ್ಷದವರೆಗೆ ಜಾಮೀನು ಸಿಗುವುದಿಲ್ಲ ಎಂಬುದು ಖಾತ್ರಿಯಾಗಿರುವುದರಂದ ಅವರು ಹಾಗೂ ಅವರ ಕುಟುಂಬ ಆತಂಕದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

PM Modi 3.0 2nd Anniversary: ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ! ಪ್ರಧಾನಿ ಮೋದಿ ಮನವಿ

ದೆಹಲಿ, ಮೇ.25: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಭಾಗದಲ್ಲಿ ಉಂಟಾಗಿರುವ ಜಾಗತಿಕ ರಾಜತಾಂತ್ರಿಕ ಹಾಗೂ ಯುದ್ಧದ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಲ್ಲಿ ಅತ್ಯಂತ ಮಹತ್ವದ ಅಪೀಲು ಮಾಡಿದ್ದಾರೆ. ರಾಷ್ಟ್ರದ ಹಿತದೃಷ್ಟಿಯಿಂದ ಭಾರತೀಯರು ವಿದೇಶಿ ಪ್ರವಾಸಗಳಿಗಿಂತ ಸ್ವದೇಶಿ ಪ್ರವಾಸೋದ್ಯಮಕ್ಕೆ (Domestic Tourism) ಮೊದಲ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ವಿಡಿಯೋವೊಂದನ್ನು ಬಿಜೆಪಿ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತದ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ಪ್ರಧಾನಿ ಕರೆ ನೀಡಿದ್ದಾರೆ. ನಾಗರಿಕರು ಭಾರತದ ಒಳಗೇ ಪ್ರವಾಸ ಮಾಡುವುದರಿಂದ ದೇಶದ ಅಮೂಲ್ಯವಾದ ವಿದೇಶಿ ವಿನಿಮಯ ಉಳಿತಾಯವಾಗುತ್ತದೆ. ಅಷ್ಟೇ ಅಲ್ಲದೆ, ಇದು ನಮ್ಮ ದೇಶದ ಆರ್ಥಿಕತೆಯನ್ನು ಆಂತರಿಕವಾಗಿ ಗಟ್ಟಿಗೊಳಿಸಲು ನೆರವಾಗುತ್ತದೆ ಹಾಗೂ ಪ್ರಧಾನಿಯವರ ಮಹತ್ವಾಕಾಂಕ್ಷೆಯ ‘ಆತ್ಮನಿರ್ಭರ ಭಾರತ’ ಅಭಿಯಾನಕ್ಕೆ ಹೊಸ ವೇಗ ಮತ್ತು ಬಲವನ್ನು ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಪೋಷಕರೆದುರೇ ಜಿಪ್ ಲೈನ್ ರೈಡ್ ವೇಳೆ ಬಿದ್ದು ಪ್ರಾಣಬಿಟ್ಟ ಬಾಲಕ – Kannada News | Teen Dies After Zipline Accident in Agra, Incident Caught on Video

ಆಗ್ರಾ, ಮೇ 25: ಮನರಂಜನೆ ಮತ್ತು ಸಾಹಸದ ಆಟ(Game)ವೊಂದು ಹದಿನೈದು ವರ್ಷದ ಬಾಲಕನ ಪಾಲಿಗೆ ಯಮಪಾಶವಾದ ಅತ್ಯಂತ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ. ತಾಜ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ‘ಆಗ್ರಾ ಚೌಪಟ್ಟಿ’ಯಲ್ಲಿ ಜಿಪ್‌ಲೈನಿಂಗ್ ಸವಾರಿಯ ವೇಳೆ ಬಾಲಕನೊಬ್ಬ ಎತ್ತರದಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾನೆ. ಈ ಹೃದಯವಿದ್ರಾವಕ ಘಟನೆಯ ಲೈವ್ ವೀಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿಬೀಳಿಸಿದೆ.

ನಡೆದಿದ್ದೇನು?
ವರದಿಗಳ ಪ್ರಕಾರ, 15 ವರ್ಷದ ಹದಿಹರೆಯದ ಬಾಲಕನೊಬ್ಬ ತನ್ನ ಪೋಷಕರೊಂದಿಗೆ ಆಗ್ರಾ ಚೌಪಟ್ಟಿಗೆ ಭೇಟಿ ನೀಡಿದ್ದ. ಅಲ್ಲಿ ಅತ್ಯಂತ ಉತ್ಸಾಹದಿಂದ ಜಿಪ್‌ಲೈನಿಂಗ್ ಸಾಹಸಕೆಕಂದು ಹೊರಟಿದ್ದ. ಆದರೆ, ತಾಂತ್ರಿಕ ದೋಷ ಅಥವಾ ಸುರಕ್ಷತಾ ಲೋಪ ಸಂಭವಿಸಿದೆ. ಪರಿಣಾಮವಾಗಿ, ಆತ ಗಾಳಿಯಲ್ಲೇ ನಿಯಂತ್ರಣ ಕಳೆದುಕೊಂಡು ನೇರವಾಗಿ ಕೆಳಗೆ ಬಿದ್ದಿದ್ದಾನೆ. ಅಲ್ಲಿಯೇ ಇದ್ದ ಪ್ರತ್ಯಕ್ಷದರ್ಶಿಯೊಬ್ಬರು ಈ ಇಡೀ ಘಟನೆಯನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾರೆ. ಅತ್ಯಂತ ದುರದೃಷ್ಟಕರ ಸಂಗತಿಯೆಂದರೆ, ಬಾಲಕನ ಪೋಷಕರು ಸ್ಥಳದಲ್ಲೇ ಇದ್ದು, ಅವರ ಕಣ್ಣೆದುರೇ ಮಗ ತಳಮಳಿಸುತ್ತಾ ಪ್ರಾಣ ಬಿಟ್ಟಿದ್ದಾನೆ.

ಸುರಕ್ಷತಾ ಮಾನದಂಡಗಳ ಉಲ್ಲಂಘನೆ: ಸಾರ್ವಜನಿಕರ ಆಕ್ರೋಶ
ಈ ಭೀಕರ ಅಪಘಾತವು ಚೌಪಟ್ಟಿಯಲ್ಲಿ ಜಿಪ್‌ಲೈನಿಂಗ್ ಕಾರ್ಯಕ್ರಮವನ್ನು ನಿರ್ವಹಿಸುತ್ತಿರುವ ಕಂಪನಿ ಮತ್ತು ಅಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿದೆ. ಇಂತಹ ಅಪಾಯಕಾರಿ ಸಾಹಸ ಕ್ರೀಡೆಗಳಿಗೆ ಬೇಕಾದ ಕನಿಷ್ಠ ಸುರಕ್ಷತಾ ಮಾನದಂಡಗಳನ್ನು ಕಂಪನಿಯು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಇಲ್ಲಿದೆ

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ನಿರ್ಲಕ್ಷ್ಯದ ಆರೋಪದ ಮೇಲೆ ಜಿಪ್‌ಲೈನಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ಕಂಪನಿಯ ಮ್ಯಾನೇಜರ್‌ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಜೊತೆಗೆ ಕಂಪನಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ.

ಮತ್ತಷ್ಟು ಓದಿ: Video: ಬಾಲಕಿ ಗೇಮ್ ಆಡುತ್ತಿದ್ದಾಗ ಏಕಾಏಕಿ ಮೊಬೈಲ್ ಸ್ಫೋಟ

ಪೊಲೀಸರು ಬಾಲಕನ ಮೃತದೇಹವನ್ನು ವಶಕ್ಕೆ ಪಡೆದು, ಪಂಚನಾಮ ಪ್ರಕ್ರಿಯೆ ಮುಗಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಈ ಘೋರ ಅಪಘಾತದಿಂದಾಗಿ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಆಗ್ರಾ ಚೌಪಟ್ಟಿಗೆ ಭೇಟಿ ನೀಡುವ ಪ್ರವಾಸಿಗರು ಮತ್ತು ಸ್ಥಳೀಯರಲ್ಲಿ ಭೀತಿ ಆವರಿಸಿದೆ. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಬಾಲಕನ ಸಾವಿಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಪ್ಪೆಚಿಪ್ಪು ಸಂಗ್ರಹದ ವೇಳೆ ಭಟ್ಕಳದಲ್ಲಿ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು – Kannada News | Uttara Kannada Drowning: Heartbreaking Stories Emerge from Bhatkal Tragedy

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಂಗರೆ ಬಳಿ ಸಂಭವಿಸಿದ ಕಪ್ಪೆಚಿಪ್ಪು ಸಂಗ್ರಹ ದುರಂತದಲ್ಲಿ ಒಟ್ಟು 11 ಮಂದಿ ಜಲಸಮಾಧಿಯಾಗಿದ್ದಾರೆ. ಮೃತಪಟ್ಟ 11 ಮಂದಿಯ ಪೈಕಿ ಎಂಟು ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಇಂದು (ಮೇ 24) ನೆರವೇರಿಸಲಾಯಿತು. ನಿನ್ನೆ ಮೂವರ ಅಂತ್ಯಕ್ರಿಯೆಗಳನ್ನು ನಡೆಸಲಾಗಿತ್ತು. ಕಪ್ಪೆಚಿಪ್ಪು ಹೆಕ್ಕಲು ತೆರಳಿದ್ದವರಲ್ಲಿ ಮಹಾದೇವ್ ನಾಯಕ್ ಮತ್ತು ಲಕ್ಷ್ಮಿ ನಾಯಕ್ ದಂಪತಿ ಕೂಡ ಸೇರಿದ್ದರು. ಇವರ ಅಕಾಲಿಕ ನಿಧನದಿಂದ ಮಕ್ಕಳಾದ ದರ್ಶನ್ ಮತ್ತು ಕೀರ್ತನಾ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಇದೇ ದುರಂತದಲ್ಲಿ ತಾಯಿಯನ್ನು ರಕ್ಷಿಸಲು ಹೋಗಿ ಮಗ ಉಮೇಶ್ ನಾಯಕ್ ಸಹ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಇನ್ನೊಂದು ಪ್ರಕರಣದಲ್ಲಿ, ನಾಲ್ಕು ಮಕ್ಕಳ ತಾಯಿ ಲಕ್ಷ್ಮಿ ಕೂಡ ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಹತ್ತು ವರ್ಷಗಳ ಹಿಂದೆ ಲಕ್ಷ್ಮಿಯ ಪತಿ ನಿಧನರಾಗಿದ್ದರು. ಅಂದಿನಿಂದ ನಾಲ್ವರು ಮಕ್ಕಳನ್ನು ಲಕ್ಷ್ಮಿ ಒಬ್ಬರೇ ಪೋಷಿಸುತ್ತಿದ್ದರು. ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಲಕ್ಷ್ಮಿ, ತಮ್ಮ ಮಕ್ಕಳನ್ನು ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ಓದಿಸುತ್ತಿದ್ದರು. ಮಕ್ಕಳನ್ನು ದೊಡ್ಡವರನ್ನಾಗಿ ಮಾಡಬೇಕು, ಅವರಿಗೆ ಉತ್ತಮ ಭವಿಷ್ಯ ನೀಡಬೇಕು ಎಂಬ ಆಶಯದೊಂದಿಗೆ ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದಾಗ ದುರಂತಕ್ಕೀಡಾಗಿದ್ದಾರೆ. ತಾಯಿಯ ಸಾವಿನಿಂದ ನಾಲ್ಕು ಪುಟ್ಟ ಮಕ್ಕಳು ಅನಾಥರಾಗಿ, ಅವರ ಆಕ್ರಂದನ ಮುಗಿಲು ಮುಟ್ಟಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

2 ತಂಡಗಳನ್ನು ಗಂಟು ಮೂಟೆ ಕಟ್ಟುವಂತೆ ಮಾಡಿದ 1 ರನ್, 1 ಅಂಕ..! – Kannada News | IPL 2026 PlayOffs: 1 Run, 1 Point: Two Teams Knocked Out

IPL 2026: ಕ್ರಿಕೆಟ್ ಎಂಬುದು ಮಹಾನ್ ಅನಿಶ್ಚಿತತೆಗಳ ಆಟ. ಇಲ್ಲಿ ಕೇವಲ ಒಂದು ಎಸೆತ, ಒಂದು ರನ್ ಅಥವಾ ಪ್ರಕೃತಿಯ ಒಂದು ಸಣ್ಣ ಮುನಿಸು ಇಡೀ ಟೂರ್ನಿಯ ಚಿತ್ರಣವನ್ನೇ ಬದಲಾಯಿಸಿಬಿಡುತ್ತದೆ. ಇದಕ್ಕೆ ತಾಜಾ ಉದಾಹರಣೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು. ಇಡೀ ಟೂರ್ನಿಯುದ್ದಕ್ಕೂ ಅದ್ಭುತವಾಗಿ ಆಡಿದರೂ, ಅಂತಿಮವಾಗಿ ಪ್ಲೇಆಫ್ ಹಂತ ತಲುಪಲು ಈ ಎರಡೂ ತಂಡಗಳಿಗೆ ಅಡ್ಡಿಯಾಗಿದ್ದು ಕೇವಲ ‘1 ರನ್’ ಮತ್ತು ‘1 ಅಂಕ’ದ ಸಣ್ಣ ವ್ಯತ್ಯಾಸ!

ಡೆಲ್ಲಿ ತಂಡದ ಸ್ಟಾರ್ ಆಟಗಾರ ಡೇವಿಡ್ ಮಿಲ್ಲರ್ ಕ್ರೀಸ್‌ನಲ್ಲಿ ಮಾಡಿದ ಆ ಒಂದು ನಿರ್ಧಾರ ಹಾಗೂ ಪಂಜಾಬ್ ಪಂದ್ಯದ ಮೇಲೆ ಹಿಡಿತ ಸಾಧಿಸುತ್ತಿದ್ದಾಗ ಸುರಿದ ಅಕಾಲಿಕ ಮಳೆ ಹೇಗೆ ಇವೆರಡೂ ತಂಡಗಳನ್ನು ಟೂರ್ನಿಯಿಂದ ಹೊರದಬ್ಬಿದವು ಎಂಬ ರೋಚಕ ವಿವರ ಇಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್- 1 ರನ್​:

ಗುಜರಾತ್ ಟೈಟಾನ್ಸ್ (GT) ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ 1 ರನ್‌ನಿಂದ ರೋಚಕ ಸೋಲು ಕಂಡಿತ್ತು. ಈ ಸೋಲು ಅಂತಿಮವಾಗಿ ತಂಡದ ಪ್ಲೇಆಫ್ ಅವಕಾಶವನ್ನೇ ಕಿತ್ತುಕೊಂಡಿತು ಎಂದರೆ ತಪ್ಪಾಗಲಾರದು.

ಪಂದ್ಯದ ವಿವರ: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್​ನ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೊನೆಯ 2 ಎಸೆತಗಳಲ್ಲಿ 2 ರನ್ ಬೇಕಿತ್ತು. ಕ್ರೀಸ್‌ನಲ್ಲಿದ್ದ ಸ್ಟಾರ್ ಫಿನಿಷರ್ ಡೇವಿಡ್ ಮಿಲ್ಲರ್ 5ನೇ ಎಸೆತವನ್ನು ಸ್ಕ್ವೇರ್ ಲೆಗ್ ಕಡೆಗೆ ಬಾರಿಸಿದರು.

ಆದರೆ ಈ ಒಂದು ರನ್ ಓಡಲು ಡೇವಿಡ್ ಮಿಲ್ಲರ್ ನಿರಾಕರಿಸಿದರು. ನಾನ್‌ಸ್ಟ್ರೈಕರ್‌ನಲ್ಲಿದ್ದ ಕುಲ್ದೀಪ್ ಯಾದವ್ ಅರ್ಧ ಪಿಚ್‌ವರೆಗೂ ಓಡಿ ಬಂದಿದ್ದರೂ ಕೂಡ ಮಿಲ್ಲರ್ ಒಂದು ರನ್ ಓಡಲು ಮನಸ್ಸು ಮಾಡಿರಲಿಲ್ಲ. ಪರಿಣಾಮ ಕೊನೆಯ ಎಸೆತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ 2 ರನ್ ಬೇಕಿದ್ದವು.

ಪ್ರಸಿದ್ಧ್ ಕೃಷ್ಣ ಎಸೆದ ಕೊನೆಯ ಬೌನ್ಸರ್ ಎಸೆತದಲ್ಲಿ ರನ್​ ಗಳಿಸಲು ಮಿಲ್ಲರ್ ವಿಫಲರಾದರು. ಬೈಸ್ ರನ್ ಓಡಲು ಯತ್ನಿಸಿದಾಗ ಕುಲ್ದೀಪ್ ಯಾದವ್ ರನ್ ಔಟ್ ಆದರು.  ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ 1 ರನ್​ನಿಂದ ಸೋಲೊಪ್ಪಿಕೊಂಡಿತು.

ಒಂದು ವೇಳೆ ಆ ಸಿಂಗಲ್ ಪಡೆದಿದ್ದರೆ ಪಂದ್ಯ ಕನಿಷ್ಠ ಸೂಪರ್ ಓವರ್‌ಗೆ ತಲುಪುತ್ತಿತ್ತು. ಅಲ್ಲದೆ ಸೂಪರ್ ಓವರ್​ನಲ್ಲಿ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 2 ಅಂಕಗಳನ್ನು ಪಡೆಯಲು ಅವಕಾಶ ಇರುತ್ತಿತ್ತು. ಒಂದು ವೇಳೆ ಹೀಗೆ 2 ಅಂಕಗಳನ್ನು ಪಡೆದಿದ್ದರೆ 14 ರ ಬದಲಿಗೆ ಒಟ್ಟು 16 ಅಂಕ ಪಡೆದು ಡೆಲ್ಲಿ ಕ್ಯಾಪಿಟಲ್ಸ್​ ಸುಲಭವಾಗಿ ಪ್ಲೇಆಫ್ ತಲುಪಬಹುದಿತ್ತು.

ಪಂಜಾಬ್ ಕಿಂಗ್ಸ್- 1 ಪಾಯಿಂಟ್:

ಐಪಿಎಲ್​ನ ಮೊದಲಾರ್ಧದಲ್ಲಿ  ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡದ ಪ್ರಚಂಡ ಪ್ರದರ್ಶನ ನೀಡಿತ್ತು. ಈ ಪ್ರದರ್ಶನದೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಿದ್ದರು. ಆದರೆ ಈ ಪಂದ್ಯದಲ್ಲಿ ಪಂಜಾಬ್ ಪಾಲಿಗೆ ಅದೃಷ್ಟ ಕೈಕೊಟ್ಟಿತು.

ಪಂದ್ಯದ ವಿವರ: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಪಂಜಾಬ್ ಕಿಂಗ್ಸ್ ಬೌಲರ್​ಗಳು ಯಶಸ್ವಿಯಾಗಿದ್ದರು.

ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 3.4 ಓವರ್‌ಗಳಲ್ಲಿ ಕೇವಲ 25 ರನ್‌ಗಳಿಗೆ 2 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಅತ್ಯುತ್ತಮ ಆರಂಭ ಪಡೆದಿದ್ದರಿಂದ ಈ ಪಂದ್ಯವು ಪಂಜಾಬ್ ಕಿಂಗ್ಸ್ ಪಾಲಾಗಲಿದೆ ಎಂದೇ ಎಲ್ಲರೂ ಭಾವಿಸಿದ್ದರು.

ಆದರೆ ಪಂಜಾಬ್ ಕಿಂಗ್ಸ್​ ಪಂದ್ಯದ ಮೇಲೆ ಹಿಡಿತ ಸಾಧಿಸುತ್ತಿದ್ದಂತೆಯೇ ಮಳೆ ಆರಂಭವಾಯಿತು. ನಿರಂತರ ಮಳೆಯಿಂದಾಗಿ ಪಂದ್ಯವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಯಿತು.

ಪಂದ್ಯ ರದ್ದಾದ ಕಾರಣ ಐಪಿಎಲ್ ನಿಯಮಾವಳಿಗಳ ಪ್ರಕಾರ ಎರಡೂ ತಂಡಗಳಿಗೆ ತಲಾ 1 ಅಂಕವನ್ನು ಹಂಚಲಾಯಿತು. ಈ ಪಂದ್ಯ ನಡೆದಿದ್ದರೆ ಪಂಜಾಬ್ ಕಿಂಗ್ಸ್​ ಗೆದ್ದು 2 ಪೂರ್ಣ ಅಂಕಗಳನ್ನು ಪಡೆಯುವ ಎಲ್ಲಾ ಸಾಧ್ಯತೆಗಳಿದ್ದವು.

ಈ ಎರಡು ಅಂಕಗಳು ಸಿಕ್ಕಿದ್ದರೆ ಪಂಜಾಬ್ ಕಿಂಗ್ಸ್ ತಂಡವು 15 ರ ಬದಲಿಗೆ ಒಟ್ಟು 16 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆಯುತ್ತಿತ್ತು. ಆದರೆ ವರುಣನ ಅವಕೃಪೆಯಿಂದಾಗಿ ಪಂಜಾಬ್ ಕಿಂಗ್ಸ್ ಪಾಲಿಗೆ ಒಂದು ಅಂಕ ಕೈ ತಪ್ಪಿತು. ಈ ಒಂದು ಅಂಕದ ಕಾರಣದಿಂದಲೇ ಇದೀಗ ಪಂಜಾಬ್ ಕಿಂಗ್ಸ್ ಐಪಿಎಲ್​ನಿಂದ ಹೊರಬಿದ್ದಿದೆ.

ಇದನ್ನೂ ಓದಿ: RCB ಅಲ್ಲ, ಬಲಿಷ್ಠ ತಂಡವನ್ನು ಹೆಸರಿಸಿದ ಅಕ್ಷರ್ ಪಟೇಲ್

ಒಟ್ಟಾರೆಯಾಗಿ ಹೇಳುವುದಾದರೆ, ಐಪಿಎಲ್ 2026ರ ಈ ಸೀಸನ್ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಿಗೆ ಅತ್ಯಂತ ಹೃದಯವಿದ್ರಾವಕ ಮತ್ತು ನಿರಾಶಾದಾಯಕವಾಗಿ ಮುಕ್ತಾಯಗೊಂಡಿದೆ.ಕ್ರಿಕೆಟ್ ಮೈದಾನದಲ್ಲಿ ಕೇವಲ ‘ಒಂದು ರನ್’ ಮತ್ತು ‘ಒಂದು ಅಂಕ’ ಇಡೀ ಟೂರ್ನಿಯ ಭವಿಷ್ಯವನ್ನೇ ಹೇಗೆ ಬದಲಾಯಿಸಬಲ್ಲದು ಎಂಬುದಕ್ಕೆ ಈ ಎರಡೂ ತಂಡಗಳ ದುರಾದೃಷ್ಟದ ನಿರ್ಗಮನವೇ ಸಾಕ್ಷಿ

Source link

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್ – Kannada News | Aishwarya Rai’s Cannes 2026 Blue Gown Sparks Debate; Kangana Ranaut Defends Her Look

ಕಂಗನಾ -ಐಶ್ವರ್ಯಾImage Credit source: Cannes Film Festival

ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಕೆಲವು ನೆಟ್ಟಿಗರು ಐಶ್ವರ್ಯಾ ಅವರ ನೀಲಿ ಬಣ್ಣದ ಗೌನ್ ಸೌಂದರ್ಯವನ್ನು ಹೊಗಳುತ್ತಿದ್ದರೆ, ಇನ್ನು ಕೆಲವರು ಅವರ ವಯಸ್ಸು ಮತ್ತು ಸ್ಟೈಲಿಂಗ್ ಅನ್ನು ಆಧರಿಸಿ ನೆಗೆಟಿವ್ ಕಾಮೆಂಟ್ ಮಾಡುತ್ತಿದ್ದಾರೆ. ಈಗ ಈ ಟ್ರೋಲರ್‌ಗಳ ವಿರುದ್ಧ ನಟಿ ಹಾಗೂ ಸಂಸದೆ ಕಂಗನಾ ರನೌತ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಐಶ್ವರ್ಯಾ ಅವರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿರುವ ಕಂಗನಾ ರನೌತ್, ಟ್ರೋಲರ್‌ಗಳಿಗೆ ಬಲವಾದ ಪ್ರತಿಕ್ರಿಯೆ ನೀಡಿದ್ದಾರೆ. ‘ಫ್ಯಾಷನ್ ಮತ್ತು ಶೈಲಿ ಎಂಬುದು ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ಆಯ್ಕೆ ಹಾಗೂ ಅಭಿವ್ಯಕ್ತಿ. ಯಾವುದೇ ಮಹಿಳೆ ಇತರರನ್ನು ಮೆಚ್ಚಿಸಲು ಮಾತ್ರ ಬದುಕುವುದಿಲ್ಲ. ಈ ಲುಕ್‌ನಲ್ಲಿ ಐಶ್ವರ್ಯಾ ಅದ್ಭುತವಾಗಿ ಕಾಣುತ್ತಿದ್ದಾರೆ. ಕೆಲವರು ಅವಳನ್ನು ವಿಭಿನ್ನವಾಗಿ ನೋಡಲು ಬಯಸಿದರೆ, ಅವರು ಮೊದಲು ತಮ್ಮನ್ನು ತಾವು ಕನ್ನಡಿಯಲಿ ನೋಡಿಕೊಳ್ಳಬೇಕು. ಐಶ್ವರ್ಯಾ ಯಾರನ್ನೂ ಇಂಪ್ರೆಸ್ ಮಾಡಲು ರೆಡ್ ಕಾರ್ಪೆಟ್‌ಗೆ ಬರುವುದಿಲ್ಲ, ಅವರು ತಮ್ಮ ಆತ್ಮವಿಶ್ವಾಸ ಮತ್ತು ವಿಶಿಷ್ಟ ಗುರುತಿನಿಂದ ಅಲ್ಲಿ ನಿಲ್ಲುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಲಗುವ ಮುನ್ನ ಐಶ್ವರ್ಯಾಗೆ ಮೂರು ಬಾರಿ ಕ್ಷಮೆ ಕೇಳುತ್ತಾರೆ ಅಭಿಷೇಕ್ ಬಚ್ಚನ್

ವಯಸ್ಸನ್ನು ಮುಂದಿಟ್ಟುಕೊಂಡು ನೆಗೆಟಿವ್ ಕಾಮೆಂಟ್ ಮಾಡಿದವರಿಗೆ ಕಂಗನಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. “ಜನರಿಗೆ ರೆಡ್ ಕಾರ್ಪೆಟ್ ಮೇಲೆ ವಯಸ್ಸಾದ ಮಹಿಳೆಯರನ್ನು ನೋಡಿ ಅಭ್ಯಾಸವಿಲ್ಲದಿದ್ದರೆ, ಅವರು ಈಗಲೇ ಅದಕ್ಕೆ ಒಗ್ಗಿಕೊಳ್ಳುವುದು ಒಳ್ಳೆಯದು. ಐಶ್ವರ್ಯಾ ರೈ ಬಚ್ಚನ್ ಕಳೆದ 20 ವರ್ಷಗಳಿಗೂ ಹೆಚ್ಚು ಕಾಲ ಕಾನ್ ಫೆಸ್ಟ್​ನ ಭಾಗವಾಗಿದ್ದಾರೆ. ಅವರ ರೆಡ್ ಕಾರ್ಪೆಟ್ ಲುಕ್ ಪ್ರತಿ ವರ್ಷವೂ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತದೆ. ಪ್ರಪಂಚದಾದ್ಯಂತದ ಫ್ಯಾಷನಿಸ್ಟರು ಅವರ ಸ್ಟೈಲಿಂಗ್‌ಗಾಗಿ ಕಾಯುತ್ತಿರುತ್ತಾರೆ” ಎಂದು ಹೇಳುವ ಮೂಲಕ ಕಂಗನಾ ಅವರು ಐಶ್ವರ್ಯಾ ಬೆಂಬಲಕ್ಕೆ ನಿಂತಿದ್ದಾರೆ.

ಕಾನ್ 2026ರ ವೇದಿಕೆಯಲ್ಲಿ ಐಶ್ವರ್ಯಾ ರೈ ಬಚ್ಚನ್ ಅವರು ಪ್ರಸಿದ್ಧ ವಿನ್ಯಾಸಕ ಅಮಿತ್ ಅಗರ್ವಾಲ್ ವಿನ್ಯಾಸಗೊಳಿಸಿದ ನೀಲಿ ಬಣ್ಣದ ವಿಶೇಷ ಗೌನ್ ಧರಿಸಿದ್ದರು. ವರದಿಗಳ ಪ್ರಕಾರ, ಈ ರಾಯಲ್ ಉಡುಪನ್ನು ಸಿದ್ಧಪಡಿಸಲು ಬರೋಬ್ಬರಿ 1500 ಗಂಟೆಗಳು ಬೇಕಾಗಿದ್ದವಂತೆ. ಆದರೆ, ಈ ವಿಶಿಷ್ಟ ಲುಕ್ ಹೊರಬರುತ್ತಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:00 am, Mon, 25 May 26

Source link

Exit mobile version