Headlines

ಮತ್ತೊಂದು ಮೃತದೇಹ ಪತ್ತೆ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ – Kannada News | Bhatkal Beach Tragedy: Death Toll Rises to 11 as Missing Man’s Body Recovered in Joint Search Operation

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಅಳ್ವೆಕೋಡಿ ಕಡಲತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 11 ಜನರ ಪೈಕಿ ನಿನ್ನೆ 10 ಜನರ ಮೃತದೇಹಗಳು ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಕೂಡ ಇಂದು ಪತ್ತೆಯಾಗಿದೆ. ಎನ್‌ಡಿಆರ್‌ಎಫ್‌, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆಯಲಾಗಿದೆ. ಆ ಮೂಲಕ ನೀರಿನ ಅಬ್ಬರಕ್ಕೆ 11 ಮಂದಿ ಜಲ ಸಮಾಧಿಯಾಗಿದ್ದರೆ, ಇಬ್ಬರು ಮಹಿಳೆಯರನ್ನು ರಕ್ಷಣೆ…

Read More

ಮುಂಬೈ ಇಂಡಿಯನ್ಸ್​ ತಂಡದ ಸೋಲಿನ ಸೀಕ್ರೆಟ್ ಬಿಚ್ಚಿಟ್ಟ ಹಾರ್ದಿಕ್ ಪಾಂಡ್ಯ! – Kannada News | Hardik pandya Post Match interview after MI vs RR Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ತಂಡ ಮುಗ್ಗರಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್​ಗಳಲ್ಲಿ 205 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 175 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಕೊನೆಯ ಪಂದ್ಯದಲ್ಲಿ ಮುಂಬೈ ಪಡೆ 30 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More

IPL 2026: ಡೆಡ್ ಬಾಲ್​ನಲ್ಲಿ ಔಟ್ ನೀಡಿದ ಅಂಪೈರ್..! – Kannada News | IPL 2026 Drama: Shardul’s Towel Mishap Sparks Outrage as Dubey Rules Out

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ವಿವಾದಗಳಿಂದಲೇ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ವಿವಾದ ಸೃಷ್ಟಿಯಾಗಿರುವುದು ಅಂಪೈರ್ ತೀರ್ಪಿನಿಂದ. ಅದು ಕೂಡ ಡೆಡ್ ಬಾಲ್ ಘೋಷಿಸದೇ ಔಟ್ ನೀಡಿರುವುದರಿಂದ. ಮೇ 24, 2026 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಪರ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ದಾಂಡಿಗ ಶುಭಂ ದುಬೆ…

Read More

‘ದೇವರೇ.. ಇದೆಂತಹ ಭರತನಾಟ್ಯ’; ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಅನನ್ಯಾ ಪಾಂಡೆ – Kannada News | Ananya Panday Bharatanatyam Controversy: ‘Chand Mera Dil’ Sparks Nepotism Debate

ಬಾಲಿವುಡ್ ನಟಿ ಅನನ್ಯಾ ಪಾಂಡೆ ನಟನೆಯ ಹಿಂದಿ ಸಿನಿಮಾ ‘ಚಾಂದ್ ಮೇರಾ ದಿಲ್’ ಚಿತ್ರದ ದೃಶ್ಯವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಸಿನಿಮಾದ ಸ್ಟೇಜ್ ಪರ್ಫಾರ್ಮೆನ್ಸ್ ದೃಶ್ಯವೊಂದರಲ್ಲಿ ಅನನ್ಯಾ ಅವರುಭರತನಾಟ್ಯ ಮಾಡಲು ಪ್ರಯತ್ನಿಸಿದ್ದು, ಅವರ ವಿಚಿತ್ರ ಹಾವಭಾವ ಹಾಗೂ ನೃತ್ಯದ ಶೈಲಿಯನ್ನು ಕಂಡು ನೆಟ್ಟಿಗರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಚಿತ್ರದ ಈ ಕ್ಲಿಪ್ ವೈರಲ್ ಆದಾಗಿನಿಂದಲೂ ನಟಿ ತೀವ್ರ ಟೀಕೆ ಎದುರಿಸುತ್ತಿದ್ದಾರೆ. ಭರನಾಟ್ಯಕ್ಕೆ ಅನನ್ಯಾ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ….

Read More

ರಾಜೇಶ್ ನಟರಂಗ ಅವರನ್ನು ತಂದೆ ಎಂದ ಆನಂದ್​ ಮಗ; ನಡೆಯಿತು ಫನ್ ಘಟನೆ – Kannada News | Master Anand Son Calls Rajesh Nataranga As Father On Jodi No 1 Stage; Viral Video

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್​: ಇಂದಿನಿಂದ 3 ದಿನ ಇಡೀ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ! – Kannada News | Bhatkal Tension: Section 144 Imposed For 2 Days After Moorinakatte Damaged

ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ! ಭಟ್ಕಳ, ಮೇ 25: ತಣ್ಣಗಾಗಿದ್ದ ಕರಾವಳಿಯ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಮುರಿನಕಟ್ಟೆ ವಿವಾದ (Murinakatte Issue) ಮತ್ತೆ ಕಿಚ್ಚು ಹೊತ್ತಿಸಿದೆ. ಭಟ್ಕಳದ ವೆಂಕಟಾಪುರದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದ ಮುರಿನಕಟ್ಟೆಯನ್ನು ಭಾನುವಾರ ರಾತ್ರಿ ಅನ್ಯಕೋಮಿನ ಸಾವಿರಾರು ಯುವಕರು ಸೇರಿ ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಭಟ್ಕಳ ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಭಟ್ಕಳ ಪಟ್ಟಣ ಹಾಗೂ…

Read More

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ – Kannada News | Karnataka Congress to Revise Gruhalakshmi and Gruhajyothi Beneficiary Lists

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆ ಬೆಂಗಳೂರು, ಮೇ 25: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನಿನ್ನೆ (ಮೇ 24) ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ. ಈ ನಿರ್ಧಾರಕ್ಕೆ ಪ್ರಮುಖ ಕಾರಣಗಳೆಂದರೆ, ಯೋಜನೆಯಲ್ಲಿ ಪಾರದರ್ಶಕತೆ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ಮಾಡುವುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಣವು ಮೃತಪಟ್ಟವರ ಹೆಸರಿನಲ್ಲಿಯೂ…

Read More

RCB ಅಲ್ಲ, ಬಲಿಷ್ಠ ತಂಡವನ್ನು ಹೆಸರಿಸಿದ ಅಕ್ಷರ್ ಪಟೇಲ್ – Kannada News | Axar Patel Backs SRH as the Most Dangerous Team Ahead of IPL Playoffs

IPL 2026: ಐಪಿಎಲ್ 2026ರ ಲೀಗ್ ಹಂತದ ರೋಚಕ ಪಂದ್ಯಗಳು ಮುಕ್ತಾಯಗೊಂಡಿದ್ದು, ಪ್ಲೇಆಫ್ ಹಂತದ ಪೈಪೋಟಿಗೆ ವೇದಿಕೆ ಸಿದ್ಧವಾಗಿದೆ. ಈ ಮಹತ್ವದ ಘಟ್ಟಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ನಾಯಕ ಅಕ್ಷರ್ ಪಟೇಲ್ ಅವರು ನೀಡಿರುವ ಒಂದು ಹೇಳಿಕೆ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಮೇ 24 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ  ಪಂದ್ಯದಲ್ಲಿ ಕೆಕೆಆರ್ ವಿರುದ್ಧ 40 ರನ್‌ಗಳ ಭರ್ಜರಿ ಜಯ ಸಾಧಿಸಿದ ನಂತರ ಮಾತನಾಡಿದ ಅಕ್ಷರ್, ಮುಂಬರುವ ಪ್ಲೇಆಫ್‌ನಲ್ಲಿರುವ ಬಲಿಷ್ಠ ತಂಡ…

Read More

Video: ನೆಲದಿಂದ ನೂರಾರು ಅಡಿ ಎತ್ತರದಲ್ಲಿ ನಡುಕ ಹುಟ್ಟಿಸುವ ಅಪಘಾತ, ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ, ಬೆಚ್ಚಿ ಬೀಳಿಸುವ ವಿಡಿಯೋ – Kannada News | Mid Air Collision in Austria Sends Woman Paraglider Crashing in Terrifying Incident

ವಿಯೆನ್ನಾ, ಮೇ 25: ಆಸ್ಟ್ರಿಯಾದ ರಮಣೀಯ ಸ್ಕ್ಮಿಟೆನ್‌ಹೋಹೆ ಪರ್ವತದ ಮೇಲೆ ಮೇ 23 ರಂದು ಸಂಭವಿಸಿದ ಭೀಕರ ವೈಮಾನಿಕ ಅಪಘಾತದಲ್ಲಿ, 44 ವರ್ಷದ ಸಬ್ರಿನಾ ಎಂಬ ಮಹಿಳೆ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಕೆ ಆಕಾಶದಲ್ಲಿ ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದಾಗ, ‘ಸೆಸ್ನಾ 172’ ಎಂಬ ಸಣ್ಣ ವಿಮಾನವೊಂದು ಇದ್ದಕ್ಕಿದ್ದಂತೆ ಬಂದು ಅವರ ಪ್ಯಾರಾಚೂಟ್‌ಗೆ ಡಿಕ್ಕಿ ಹೊಡೆದಿದೆ. ವಿಮಾನದ ರೆಕ್ಕೆ ಮತ್ತು ಪ್ರೊಪೆಲ್ಲರ್ ತಗುಲಿ ಪ್ಯಾರಾಗ್ಲೈಡರ್‌ನ ಮೇಲಿನ ಭಾಗ ಸಂಪೂರ್ಣವಾಗಿ ಚೂರುಚೂರಾಗಿ ಮಹಿಳೆ ಸಾವಿರಾರು ಅಡಿ ಎತ್ತರದಿಂದ ನೇರ ನೆಲಕ್ಕೆ…

Read More

Video: ಹುಳುಕು ಹಲ್ಲಿನ ಬದಲು ಸರಿ ಇದ್ದ ಹಲ್ಲು ಕಿತ್ತ ವೈದ್ಯ – Kannada News | Woman Alleges Wrong Tooth Extraction at JLN Hospital

ಅಜ್ಮೀರ್, ಮೇ 25: ಅಜ್ಮೀರ್​ನ ಜವಾಹರಲಾಲ್ ನೆಹರು ಆಸ್ಪತ್ರೆಯ ದಂತ ವಿಭಾಗದಲ್ಲಿ ಶುಕ್ರವಾರ ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿಯೊಬ್ಬರ ತಪ್ಪು ಹಲ್ಲು ಹೊರತೆಗೆದ ಘಟನೆ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಶಬಾನಾ ಖಾನ್ ಕಳೆದ ಎರಡು ತಿಂಗಳಿನಿಂದ ತೀವ್ರ ಹಲ್ಲು ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಯ ವೈದ್ಯರು ಅವರ ಒಂದು ಹಲ್ಲು ಹುಳುಕಾಗಿದ್ದು, ಅದನ್ನು ತೆಗೆಯಬೇಕೆಂದು ಸಲಹೆ ನೀಡಿದ್ದರು. ಅದರಂತೆ ಶುಕ್ರವಾರ ಶಬಾನಾ ತಮ್ಮ ಪತಿಯೊಂದಿಗೆ ಚಿಕಿತ್ಸೆಗೆ ಬಂದಿದ್ದರು. ಆದರೆ, ವೈದ್ಯರು ನೋವಿದ್ದ ಹಲ್ಲಿನ ಬದಲಿಗೆ ಪಕ್ಕದಲ್ಲಿದ್ದ ಆರೋಗ್ಯಕರ ಹಲ್ಲನ್ನು ಹೊರತೆಗೆದಿದ್ದಾರೆ…

Read More