ಕೋವಿಡ್ ಸಮಯದಲ್ಲಿ ಬೇಕಿದ್ವಿ, ಈಗ ಬೇಡವಾದ್ವಾ?; ಹಾಸನದಲ್ಲಿ ಗ್ರೂಪ್ ಡಿ ನೌಕರರ ಕಣ್ಣೀರು: 20 ಸ್ವಚ್ಛತಾ ಸಿಬ್ಬಂದಿ ಏಕಾಏಕಿ ವಜಾ – Kannada News | Hassan: Contract Cleanliness Staff Fired, Protest Erupts at Holenarasipura Hospital

ಹಾಸನ, ಜೂ.23: ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ 20 ಸ್ವಚ್ಛತಾ ಸಿಬ್ಬಂದಿಯನ್ನು ಏಕಾಏಕಿ ವಜಾ ಮಾಡಲಾಗಿದ್ದು, ಇದನ್ನು ಖಂಡಿಸಿ ಉಳಿದ ಗುತ್ತಿಗೆ ಸಿಬ್ಬಂದಿ ಆಸ್ಪತ್ರೆ ಎದುರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸುರಕ್ಷಾ ಏಜೆನ್ಸಿ ಎಂಬ ಸಂಸ್ಥೆಯು 20 ಸಿಬ್ಬಂದಿಯ ಪಟ್ಟಿ ಮಾಡಿ, ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದು ತಿಳಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅಲ್ಲದೆ, ಕೆಲಸಕ್ಕೆ ಬಂದಲ್ಲಿ ಪೊಲೀಸರನ್ನು ಕರೆಸಿ ಓಡಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದೂ ಅವರು ಹೇಳಿಕೊಂಡಿದ್ದಾರೆ. ಸುಮಾರು 50 ಮಂದಿ ಗ್ರೂಪ್ ಡಿ ಸಿಬ್ಬಂದಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರಲ್ಲಿ 20 ಮಂದಿಯನ್ನು ತೆಗೆದುಹಾಕಲಾಗಿದೆ. ನಾಳೆ ಇನ್ನೂ 20 ಮಂದಿಯನ್ನು ವಜಾ ಮಾಡುವುದಿಲ್ಲ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ತೊಡಗಿರುವ ಸಿಬ್ಬಂದಿ, ಬೆಳಿಗ್ಗೆ 11 ಗಂಟೆಯಿಂದ ಊಟ ತಿಂಡಿ ಇಲ್ಲದೆ, ಮಳೆಯನ್ನೂ ಲೆಕ್ಕಿಸದೆ ಧರಣಿ ನಡೆಸುತ್ತಿದ್ದಾರೆ. ತಮ್ಮ ಶಾಸಕರು ಕೂಡ ತಮ್ಮ ನೆರವಿಗೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೋವಿಡ್ ಸಮಯದಲ್ಲಿ ನಮಗೆ ಅಗತ್ಯವಿತ್ತು, ಈಗ ಬೇಡವಾಗಿದ್ದೇವೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ – Kannada News | PM Modi meets President Droupadi Murmu amid speculation over Cabinet reshuffle

ನವದೆಹಲಿ, ಜೂನ್ 23: ಕೇಂದ್ರ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಭಾರಿ ಬದಲಾವಣೆಯಾಗಲಿದೆ ಎಂಬ ವದಂತಿಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಮಂಗಳವಾರ) ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಷ್ಟ್ರಪತಿ ಮತ್ತು ಪ್ರಧಾನಿಯವರ ಈ ದಿಢೀರ್ ಭೇಟಿಯು ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟ ಪುನಾರಚನೆಯ ಸುಳಿವು ನೀಡಿದೆ.

ಕಳೆದ ಕೆಲವು ದಿನಗಳಿಂದ ದೆಹಲಿಯ ರಾಜಕೀಯ ಕಾರಿಡಾರ್‌ಗಳಲ್ಲಿ ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ಬದಲಾವಣೆ ತರಲಾಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಮುಂಬರುವ ಕೆಲವು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಕೆಲವು ಹಿರಿಯ ಸಚಿವರನ್ನು ಪಕ್ಷದ ಸಂಘಟನಾ ಜವಾಬ್ದಾರಿಗೆ ಮುಕ್ತಗೊಳಿಸಿ, ಹೊಸ ಮತ್ತು ಯುವ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿ ಸಚಿವರ ಕಾರ್ಯಕ್ಷಮತೆಯ ವರದಿಯನ್ನು ಆಧರಿಸಿ ಕೆಲವು ಪ್ರಮುಖ ಇಲಾಖೆಗಳ ಜವಾಬ್ದಾರಿಯನ್ನು ಬದಲಾಯಿಸುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ನೆಹರೂ ಅವರಿಂದ ಮೋದಿವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಹಿಳೆಯರ ಪಾತ್ರ ಹೇಗೆಲ್ಲ ಬದಲಾಯ್ತು?

ಸಂಪುಟ ಪುನಾರಚನೆಯ ವದಂತಿಗಳ ಹೊರತಾಗಿ, ಮುಂಬರುವ ಸಂಸತ್ ಜಂಟಿ ಅಧಿವೇಶನ, ದೇಶದ ಪ್ರಸಕ್ತ ಆಂತರಿಕ ಭದ್ರತಾ ಪರಿಸ್ಥಿತಿ ಮತ್ತು ಸರ್ಕಾರದ ಮುಂದಿನ ಪ್ರಮುಖ ಮಸೂದೆಗಳ ಕುರಿತು ಪ್ರಧಾನಿ ಮೋದಿ ಅವರು ರಾಷ್ಟ್ರಪತಿಯವರಿಗೆ ಮಾಹಿತಿ ನೀಡಿರಬಹುದು ಎಂದು ಮೂಲಗಳು ತಿಳಿಸಿವೆ.

ಜೂನ್ 24ರಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಬದಲಾವಣೆಗಳ ಅಧಿಕೃತ ಪ್ರಕಟಣೆ ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆಯಿದೆ. ಇತರ ಪಕ್ಷಗಳನ್ನು ತೊರೆದು ಇತ್ತೀಚೆಗೆ ಎನ್‌ಡಿಎ ಮೈತ್ರಿಕೂಟ ಸೇರಿದ ನಾಯಕರನ್ನು ಸಂಪುಟದಲ್ಲಿ ಸಮಾಧಾನಪಡಿಸುವುದು ಬಿಜೆಪಿಗೆ ಪ್ರಮುಖ ಸವಾಲಾಗಿದೆ.

ಇದನ್ನೂ ಓದಿ: ಮೋದಿ ರಾಜತಾಂತ್ರಿಕತೆ ಯಶಸ್ವಿ; ಬ್ರಿಟನ್, ಕೆನಡಾ ಮತ್ತು ಐರೋಪ್ಯ ಒಕ್ಕೂಟದಿಂದ ಭಾರತಕ್ಕೆ ಭಾರಿ ಆರ್ಥಿಕ ಲಾಭ!

ಏಪ್ರಿಲ್‌ನಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಬಂದು ಬಿಜೆಪಿ ಸೇರಿದ ರಾಘವ್ ಚಡ್ಡಾ ನೇತೃತ್ವದ 7 ರಾಜ್ಯಸಭಾ ಸಂಸದರ ಗುಂಪು ಸಚಿವ ಸ್ಥಾನದ ರೇಸ್‌ನಲ್ಲಿದೆ. ಇದರೊಂದಿಗೆ ತೃಣಮೂಲ ಕಾಂಗ್ರೆಸ್ (TMC) ಬಂಡಾಯ ಬಣದ ಕಾಕೋಲಿ ಘೋಷ್ ದಸ್ತಿದಾರ್ ಗುಂಪು ಮತ್ತು ಉದ್ಧವ್ ಠಾಕ್ರೆ ಬಣದಿಂದ ಹೊರಬಂದು ಏಕನಾಥ್ ಶಿಂಧೆ ಶಿವಸೇನೆಗೆ ಸೇರಿದ ಸಂಸದರಿಗೂ ಸ್ಥಾನ ನೀಡಬೇಕಾಗಬಹುದು.

ಸಂಸತ್ತಿನಲ್ಲಿ ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಮತ್ತು ಸಂವಿಧಾನಿಕ ತಿದ್ದುಪಡಿಗಳಿಗೆ ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಭದ್ರಪಡಿಸಿಕೊಳ್ಳಲು ಸಣ್ಣ ಪುಟ್ಟ ಪಕ್ಷಗಳು ಮತ್ತು ಸ್ವತಂತ್ರ ಸಂಸದರನ್ನು ಸೆಳೆಯುವ ತಂತ್ರ ಇದರ ಹಿಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೆನೋಪಾಸ್ ಎಂದರೇನು? ಈ ಹಂತದ ನಂತರ ಮಹಿಳೆಯರು ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? – Kannada News | Menopause Care Guide: Protecting Bone, Heart And Mental Health

ಮೆನೋಪಾಸ್ (Menopause) ಎನ್ನುವುದು ಮಹಿಳೆಯರಲ್ಲಿ ಮಾಸಿಕ ಋತುಚಕ್ರ ಶಾಶ್ವತವಾಗಿ ನಿಲ್ಲುವ ಸಹಜ ಜೈವಿಕ ಪ್ರಕ್ರಿಯೆಯಾಗಿದೆ. ಸಾಮಾನ್ಯವಾಗಿ 45 ರಿಂದ 55 ವರ್ಷಗಳ ನಡುವೆ ಇದು ಸಂಭವಿಸುತ್ತದೆ. ಸತತ 12 ತಿಂಗಳುಗಳ ಕಾಲ ಮುಟ್ಟು ಕಾಣಿಸಿಕೊಳ್ಳದಿದ್ದರೆ ಆಕೆ ಮೆನೋಪಾಸ್‌ ತಲುಪಿದ್ದಾಳೆ ಎಂದು ಪರಿಗಣಿಸಬಹುದು. ಈ ಹಂತದ ನಂತರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮೆನೋಪಾಸ್ ನಂತರ ಮಹಿಳೆಯ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಮತ್ತು ಯಾವ ರೀತಿ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೆನೋಪಾಸ್ ನಂತರ ಯಾವ ರೀತಿ ಬದಲಾವಣೆಗಳಾಗುತ್ತವೆ?

ಸಾಮಾನ್ಯವಾಗಿ ಮೆನೋಪಾಸ್ ಬಳಿಕ ದೇಹದಲ್ಲಿ ಈಸ್ಟ್ರೋಜನ್ ಹಾರ್ಮೋನ್ ಮಟ್ಟ ಕಡಿಮೆಯಾಗುತ್ತದೆ. ಈ ಹಾರ್ಮೋನ್ ಎಲುಬುಗಳು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಲು ಪ್ರಮುಖ ಪಾತ್ರ ವಹಿಸುತ್ತದೆ. ಇದರ ಕೊರತೆಯಿಂದ ಎಲುಬುಗಳು ದುರ್ಬಲವಾಗುವ ಸಾಧ್ಯತೆ ಹೆಚ್ಚುತ್ತದೆ. ಜೊತೆಗೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವೂ ಹೆಚ್ಚಾಗಬಹುದು. ಹಾಗಾಗಿ ಮೆನೋಪಾಸ್ ಆದ ಬಳಿಕವೂ ವರ್ಷಕ್ಕೊಮ್ಮೆ ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡುವುದು ಉತ್ತಮ. ಎಲುಬಿನ ಸಾಂದ್ರತೆ, ಕ್ಯಾಲ್ಸಿಯಂ, ವಿಟಮಿನ್ ಡಿ, ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಆರೋಗ್ಯ ರಕ್ಷಣೆಗೆ ಸಹಕಾರಿ.

ಹಾರ್ಮೋನ್ ಥೆರಪಿ ಎಲ್ಲರಿಗೂ ಸೂಕ್ತವಲ್ಲ

ಕೆಲವರಿಗೆ ಹಾರ್ಮೋನ್ ರಿಪ್ಲೇಸ್ಮೆಂಟ್ ಥೆರಪಿ (HRT) ನೀಡಲಾಗುತ್ತದೆ. ಆದರೆ ಇದು ಪ್ರತಿಯೊಬ್ಬ ಮಹಿಳೆಗೆ ಸೂಕ್ತವಾಗುವುದಿಲ್ಲ. ವೈದ್ಯರ ಸಲಹೆಯ ಮೇರೆಗೆ ಮಾತ್ರ ಈ ಚಿಕಿತ್ಸೆಯನ್ನು ಪಡೆಯಬೇಕು.

ಇದನ್ನೂ ಓದಿ: ಗರ್ಭದೊಳಗಿರುವ ಶಿಶು ಇಡೀ ದಿನ ಮಲಗಿರುತ್ತೆ ಅಂದುಕೊಂಡಿದ್ದೀರಾ, ಬೆಚ್ಚಗೆ ಮಲಗಿ ಏನು ಮಾಡುತ್ತಿರುತ್ತೆ ಗೊತ್ತಾ?

ಜೀವನಶೈಲಿಯಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಿ

  • ಪ್ರತಿದಿನ ನಿಯಮಿತ ವ್ಯಾಯಾಮ ಮಾಡಿ.
  • ಸರಿಯಾಗಿ ನಿದ್ರೆ ಮಾಡಿ.
  • ಚಹಾ ಮತ್ತು ಕಾಫಿಯ ಸೇವನೆಯನ್ನು ಮಿತಿಗೊಳಿಸಿ.
  • ಸಮತೋಲಿತ ಆಹಾರವನ್ನು ಸೇವಿಸಿ.
  • ಪ್ರತಿದಿನ ಒಂದೇ ಸಮಯಕ್ಕೆ ಮಲಗಿ, ಎದ್ದೇಳುವ ಅಭ್ಯಾಸ ಬೆಳೆಸಿಕೊಳ್ಳಿ.

ಮಾನಸಿಕ ಆರೋಗ್ಯಕ್ಕೂ ಆದ್ಯತೆ ನೀಡಿ

ಮೆನೋಪಾಸ್ ಸಮಯದಲ್ಲಿ ಹಾರ್ಮೋನ್ ಬದಲಾವಣೆಗಳಿಂದ ಮನಸ್ಥಿತಿಯಲ್ಲಿ ಏರುಪೇರುಗಳು ಕಾಣಿಸಬಹುದು. ಕುಟುಂಬದ ಬೆಂಬಲ, ಸ್ನೇಹಪರ ವಾತಾವರಣ ಮತ್ತು ಅಗತ್ಯವಿದ್ದರೆ ತಜ್ಞರ ಸಲಹೆ ಪಡೆಯುವುದು ಬಹಳ ಮುಖ್ಯ. ಮೆನೋಪಾಸ್ ಜೀವನದ ಅಂತ್ಯವಲ್ಲ, ಹೊಸ ಹಂತದ ಆರಂಭ. ಸರಿಯಾದ ಆರೈಕೆ, ಆರೋಗ್ಯಕರ ಜೀವನಶೈಲಿ ಮತ್ತು ನಿಯಮಿತ ತಪಾಸಣೆಯ ಮೂಲಕ ಈ ಹಂತವನ್ನು ಆರೋಗ್ಯಕರವಾಗಿ ಮತ್ತು ಸಂತೋಷದಿಂದ ಕಳೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ‘ಧುರಂಧರ್’ ನಟ ಆರ್. ಮಾಧವನ್: ವಿಡಿಯೋ ನೋಡಿ.. – Kannada News | Dhurandhar actor R Madhavan receives Padma Shri Award from President Droupadi Murmu

ನವದೆಹಲಿ: ಖ್ಯಾತ ನಟ ಆರ್‌. ಮಾಧವನ್ (R. Madhavan) ಅವರಿಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಶ್ರೀ’ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವಿಶೇಷ ಕ್ಷಣಕ್ಕೆ ಮಾಧವನ್ ಅವರ ಪತ್ನಿ ಸರಿತಾ ಹಾಗೂ ಪುತ್ರ ವೇದಾಂತ್ ಸಾಕ್ಷಿಯಾದರು. ಮಾಧವನ್ ಅವರು ಪ್ರಶಸ್ತಿ ಸ್ವೀಕರಿಸಲು ವೇದಿಕೆಯತ್ತ ಹೆಜ್ಜೆ ಹಾಕುತ್ತಿದ್ದಂತೆ, ಪ್ರೇಕ್ಷಕರ ಸಾಲಿನಲ್ಲಿದ್ದ ಪತ್ನಿ ಸರಿತಾ ಮತ್ತು ಮಗ ವೇದಾಂತ್ ಹೆಮ್ಮೆಯಿಂದ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮಿಸಿದರು. ಇತ್ತೀಚೆಗೆ ಬಿಡುಗಡೆಯಾದ ‘ಧುರಂಧರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಅದ್ಭುತ ನಟನೆಯ ಮೂಲಕ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಮಾಧವನ್ ಅವರಿಗೆ ದೇಶಾದ್ಯಂತ ಸಿನಿಪ್ರಿಯರು ಹಾಗೂ ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಕ್ರಮ ಹಣ ವರ್ಗಾವಣೆ; ಬೆಂಗಳೂರು ಮೂಲದ ‘ರಾಜೇಶ್ ಎಕ್ಸ್‌ಪೋರ್ಟ್ಸ್’ ಕಚೇರಿಗಳ ಮೇಲೆ ಇಡಿ ದಾಳಿ – Kannada News | ED raids Rajesh Exports in Bengaluru and Mumbai after SEBI order flags multiple financial transactions

ಬೆಂಗಳೂರು, ಜೂನ್ 23: ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ನೀಡಿರುವ ಆದೇಶದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಂಗಳೂರಿನಲ್ಲಿರುವ ಜಗತ್ತಿನ ಅತಿ ದೊಡ್ಡ ಚಿನ್ನದ ರಿಫೈನರಿ ಸಂಸ್ಥೆಯಾದ ‘ರಾಜೇಶ್ ಎಕ್ಸ್‌ಪೋರ್ಟ್ಸ್’ (Rajesh Exports) ಕಂಪನಿಯ ಪ್ರಧಾನ ಕಚೇರಿ ಮೇಲೆ ಭಾರಿ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರ ಜೊತೆಗೆ ಮುಂಬೈನಲ್ಲಿರುವ ಕಚೇರಿಯ ಮೇಲೂ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ರಾಜೇಶ್ ಎಕ್ಸ್​ಪೋರ್ಟ್ಸ್​ ಕಂಪನಿಯು ತನ್ನ ಆರ್ಥಿಕ ವರದಿಗಳಲ್ಲಿ ಭಾರಿ ಪ್ರಮಾಣದ ತಪ್ಪು ಮಾಹಿತಿ ಹಾಗೂ ಆದಾಯ ವಂಚನೆ ಎಸಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ (FEMA) ಈ ದಾಳಿ ನಡೆದಿದೆ.

ದಾಳಿಗೆ ಪ್ರಮುಖ ಕಾರಣ:

ಇತ್ತೀಚೆಗಷ್ಟೇ ಸೆಬಿ ನೀಡಿದ್ದ ಮಧ್ಯಂತರ ಆದೇಶದಲ್ಲಿ ರಾಜೇಶ್ ಎಕ್ಸ್‌ಪೋರ್ಟ್ಸ್ ಕಂಪನಿಯು ಕಳೆದ ಕೆಲವು ವರ್ಷಗಳಲ್ಲಿ ತನ್ನ ಆದಾಯದ ಲೆಕ್ಕಾಚಾರದಲ್ಲಿ ಬರೋಬ್ಬರಿ 15.15 ಲಕ್ಷ ಕೋಟಿ ರೂ. ಮೊತ್ತದ ತಪ್ಪು ಮಾಹಿತಿಯನ್ನು ಹಾಗೂ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದೆ ಎಂದು ಗಂಭೀರ ಆರೋಪ ಮಾಡಿತ್ತು. ಸ್ವಿಟ್ಜರ್‌ಲ್ಯಾಂಡ್ ಮೂಲದ ತನ್ನದೇ ಆದ ಅಂಗಸಂಸ್ಥೆಯಾದ ‘ವ್ಯಾಲ್ಕಂಬಿ’ (Valcambi SA) ಮೂಲಕ ಸೂಕ್ತ ದಾಖಲೆಗಳಿಲ್ಲದೆಯೇ ಭಾರಿ ಆದಾಯ ಬಂದಿರುವುದಾಗಿ ಕಂಪನಿ ತೋರಿಸಿಕೊಂಡಿದೆ ಎಂದು ಸೆಬಿ ಪತ್ತೆಹಚ್ಚಿತ್ತು. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ: ಬೆಂಗಳೂರಿನ 5 ಕಂಪನಿಗಳಿಗೆ ಇಡಿ ಶಾಕ್, 6 ಕೋಟಿ ರೂ ಜಪ್ತಿ

ಹಣದ ಅಕ್ರಮ ವರ್ಗಾವಣೆ:

ಬೇನಾಮಿ ಷೇರು ವಹಿವಾಟುಗಳ ಮೂಲಕ 20 ಮಿಲಿಯನ್ ಯುಎಸ್ ಡಾಲರ್ (ಸುಮಾರು 165 ಕೋಟಿಗೂ ಹೆಚ್ಚು ರೂ.) ಗೂ ಅಧಿಕ ಹಣವನ್ನು ಅಕ್ರಮವಾಗಿ ವಿದೇಶಕ್ಕೆ ವರ್ಗಾಯಿಸಿರುವುದು ಹಾಗೂ ಯುಎಇ ಮೂಲದ ಸಂಸ್ಥೆಗಳೊಂದಿಗೆ ನಡೆಸಿರುವ 3,000 ಕೋಟಿ ರೂ.ಗಳ ವ್ಯವಹಾರಗಳು ಅನುಮಾನಾಸ್ಪದವಾಗಿವೆ ಎಂದು ತನಿಖಾ ಮೂಲಗಳು ತಿಳಿಸಿವೆ.

ರಾಜೇಶ್ ಎಕ್ಸ್​ಪೋರ್ಟ್ಸ್ ಕಂಪನಿಯ ಖಾತೆ ಪುಸ್ತಕಗಳಲ್ಲಿ ತೋರಿಸಲಾಗಿರುವ ಒಟ್ಟು ಚಿನ್ನದ ಮೌಲ್ಯಕ್ಕಿಂತ, ವಾಸ್ತವದಲ್ಲಿ ಶೇ. 40ರಷ್ಟು ಕಡಿಮೆ ಚಿನ್ನದ ದಾಸ್ತಾನು ಇರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಈ ಹಗರಣದ ತನಿಖೆಯ ಭಾಗವಾಗಿ ಕಂಪನಿಯ ಬಿಲಿಯನೇರ್ ಚೇರ್ಮನ್ ರಾಜೇಶ್ ಮೆಹ್ತಾ ಅವರು ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಸದಂತೆ ಸೆಬಿ ಈಗಾಗಲೇ ನಿಷೇಧ ಹೇರಿದೆ.

ಇದನ್ನೂ ಓದಿ: ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್

ಕಂಪನಿಯ ಸ್ಪಷ್ಟನೆ:

ವಿಶ್ವದ ಅತಿ ದೊಡ್ಡ ಚಿನ್ನದ ರಿಫೈನರಿ ಸಂಸ್ಥೆಗಳಲ್ಲಿ ಒಂದಾದ ರಾಜೇಶ್ ಎಕ್ಸ್‌ಪೋರ್ಟ್ಸ್ ಮೇಲಿನ ಈ ಇಡಿ ದಾಳಿಯು ಭಾರತೀಯ ಕಾರ್ಪೊರೇಟ್ ಮತ್ತು ಆಭರಣ ಉದ್ಯಮ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇದರ ನಡುವೆ, “ನಮ್ಮ ಮತ್ತು ಸೆಬಿ ನಡುವಿನ ಸಂವಹನದ ಸಮಸ್ಯೆಯಿಂದ ಈ ಗೊಂದಲ ಸೃಷ್ಟಿಯಾಗಿದೆ, ನಾವು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ” ಎಂದು ಕಂಪನಿ ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉತ್ತರ ಕನ್ನಡ ಜಿಲ್ಲೆಯ ದಶಕಗಳ ರೈಲು ಕನಸಿಗೆ ರೆಕ್ಕೆ: ಹುಬ್ಬಳ್ಳಿ-ಅಂಕೋಲಾ ಹಳಿ ಜೋಡಣೆಗೆ ಸಿಕ್ತು ಗ್ರೀನ್ ಸಿಗ್ನಲ್ – Kannada News | Uttar Kannada Rail Dream: Hubballi Ankola Project Overcomes Hurdles, Set to Begin Work

ಕಾರವಾರ, ಜೂ.23: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ‘ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ’ ಆದಷ್ಟು ಬೇಗ ಅನುಷ್ಠಾನಕ್ಕೆ ಬರಲಿದೆ ಎಂದು ಕಾರವಾರ-ಅಂಕೋಲಾ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ರೈಲು ಯೋಜನೆಯು ಕೇವಲ ಕರಾವಳಿ ಭಾಗದ ಜನರಿಗಷ್ಟೇ ಸೀಮಿತವಾಗಿರದೆ, ಇಡೀ ಕರ್ನಾಟಕ ರಾಜ್ಯದ ಆರ್ಥಿಕತೆಗೆ (Karnataka Economy) ದೊಡ್ಡ ಮಟ್ಟದ ಬಲ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯು ಒಂದು ಕಡೆ ಪಶ್ಚಿಮ ಘಟ್ಟಗಳ ಸಾಲು, ಇನ್ನೊಂದು ಕಡೆ ಅರಬ್ಬಿ ಸಮುದ್ರದ ಸಮೃದ್ಧವಾದ ಪ್ರಕೃತಿ ಸೌಂದರ್ಯವನ್ನು ಹೊಂದಿದೆ. ಆದರೆ, ಇದೇ ಘಟ್ಟಗಳ ಸಾಲು ಜಿಲ್ಲೆಯ ಸಾರಿಗೆ ಸಂಪರ್ಕದ ಪ್ರಗತಿಗೆ ದೊಡ್ಡ ಸವಾಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದಿದ್ದರೂ, ಇಂದಿಗೂ ಕರಾವಳಿ ಮತ್ತು ಮಲೆನಾಡು-ಬಯಲು ಸೀಮೆಯನ್ನು ನೇರವಾಗಿ ಸಂಪರ್ಕಿಸುವ ಸುಸಜ್ಜಿತ ರೈಲು ಸಂಪರ್ಕ ಜಿಲ್ಲೆಯಲ್ಲಿಲ್ಲ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಹಾಗೂ ವಾಣಿಜ್ಯ ಪ್ರಗತಿಗಾಗಿ ಈ ರೈಲು ಯೋಜನೆ ಅತ್ಯಂತ ಅವಶ್ಯಕವಾಗಿದೆ.

ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಸುಮಾರು 1700 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ, ಪಶ್ಚಿಮ ಘಟ್ಟಗಳ ದಟ್ಟ ಅರಣ್ಯ ಪ್ರದೇಶದಲ್ಲಿ ಸುರಂಗ ಮಾರ್ಗಗಳನ್ನು ನಿರ್ಮಿಸಬೇಕಾದ ಅನಿವಾರ್ಯತೆ ಇರುವುದರಿಂದ, ಪರಿಸರ ಹಾನಿಯ ಆತಂಕ ವ್ಯಕ್ತಪಡಿಸಿ ಹಲವು ಪರಿಸರವಾದಿಗಳು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಯೋಜನೆಗೆ ತಾಂತ್ರಿಕ ಹಾಗೂ ಕಾನೂನು ತೊಡಕುಗಳು ಎದುರಾಗಿದ್ದವು.

ಇದನ್ನೂ ಓದಿ: ಕಾರವಾರ-ಬಳ್ಳಾರಿಯಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಲಾಕ್

ಪ್ರಸ್ತುತ ಈ ಸಮಸ್ಯೆಯ ನಿವಾರಣೆಗಾಗಿ ಡೆಹರಾಡೂನ್‌ನ ಭಾರತೀಯ ವನ್ಯಜೀವಿ ಸಂಸ್ಥೆ ವತಿಯಿಂದ ವಿಶೇಷ ಅಧ್ಯಯನ ನಡೆಸಲು ಸೂಚಿಸಲಾಗಿದೆ. ಯೋಜನೆಗೆ ಎದುರಾಗಿದ್ದ ಪ್ರಮುಖ ಕಾನೂನು ತೊಡಕುಗಳಿಂದ ಈಗ ಮುಕ್ತಿ ಸಿಕ್ಕಿದ್ದು, ಪರಿಸರವಾದಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಜಾರಿಗೆ ತರಲು ಅಂತಿಮ ಹಂತದ ಸಿದ್ಧತೆಗಳು ನಡೆದಿವೆ ಎಂದು ಸಂಸದ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡದ ದಶಕಗಳ ಈ ಕನಸನ್ನು ನನಸು ಮಾಡಲು ಕೇಂದ್ರ ಸಚಿವ ಹಾಗೂ ಹುಬ್ಬಳ್ಳಿ-ಧಾರವಾಡ ಸಂಸದ ಪ್ರಲ್ಹಾದ್ ಜೋಷಿ ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಜಂಟಿಯಾಗಿ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಮಟ್ಟದಲ್ಲಿ ಅಗತ್ಯ ಅನುಮತಿಗಳನ್ನು ತ್ವರಿತವಾಗಿ ಪಡೆದು, ಆದಷ್ಟು ಬೇಗ ಕಾಮಗಾರಿ ಆರಂಭಿಸುವ ಭರವಸೆಯನ್ನು ನಾಯಕರು ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಲೇಬೇಡಿ – Kannada News | Don’t do these things at night; know why?

ಇಂದಿನ ಈ ಬ್ಯುಸಿ ಜೀವನದಲ್ಲಿ ನಿದ್ರಾಹೀನತೆಯು (Insomnia) ಅನೇಕರಿಗೆ ಕಾಡುವ ಸಾಮಾನ್ಯ ಸಮಸ್ಯೆಯಾಗಿದೆ. ಇದಕ್ಕೆ ಒತ್ತಡ, ಕಳಪೆ ಆಹಾರ ಪದ್ಧತಿ, ಖಿನ್ನತೆ, ಕಳಪೆ ಗುಣಮಟ್ಟದ ದೈನಂದಿನ ದಿನಚರಿ ಮತ್ತು ದೈಹಿಕ ಚಟುವಟಿಕೆಯ ಕೊರತೆ ಸೇರಿದಂತೆ ಒಂದಷ್ಟು ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿಯೇ ಕಾರಣ. ಇದರ ಜೊತೆಗೆ ನಾವು ರಾತ್ರಿಯ ವೇಳೆ ತಿಳಿದೋ ತಿಳಿಯದೆಯೋ ಮಾಡುವಂತಹ ತಪ್ಪುಗಳು ನಿದ್ರೆಯ ಗುಣಮಟ್ಟವನ್ನು ಹಾಳು ಮಾಡುವುದು ಮಾತ್ರವಲ್ಲದೆ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ರಾತ್ರಿ ಮಲಗುವ ಮುನ್ನ ಈ ಕೆಲವು ತಪ್ಪುಗಳನ್ನು ಮಾಡಬೇಡಿ.

ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ:

ರಾತ್ರಿಯಲ್ಲಿ ಭಾರವಾದ ಆಹಾರ ಸೇವಿಸುವುದು: ಮಲಗುವ ಮುನ್ನ ಭಾರವಾದ ಮತ್ತು ದೊಡ್ಡ ಪ್ರಮಾಣದ ಊಟವನ್ನು ಸೇವಿಸುವುದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ. ಇದು ಅಜೀರ್ಣ, ಆಮ್ಲೀಯತೆ ಮತ್ತು ಉಬ್ಬರದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು, ಅಲ್ಲದೆ ಇದು ನಿದ್ರೆಗೂ ಅಡ್ಡಿಪಡಿಸುತ್ತದೆ. ಹಾಗಾಗಿ ಮಲಗುವ ಮುನ್ನ ಕನಿಷ್ಠ 2-3 ಗಂಟೆಗಳ ಮೊದಲು ಭೋಜನವನ್ನು ಮಾಡಿ, ಆದಷ್ಟು ಹಗುರವಾದ ಮತ್ತು ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಸೇವನೆ ಮಾಡುವುದು ಉತ್ತಮ.

ಮಲಗುವ ಮುನ್ನ ಫೋನ್‌, ಲ್ಯಾಪ್‌ಟಾಪ್‌ ನೋಡಬೇಡಿ: ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಲಗುವ ಮುನ್ನ ರೀಲ್ಸ್‌, ವಿಡಿಯೋ ಸ್ಕ್ರೋಲ್‌ ಮಾಡುತ್ತಾ ಸೋಷಿಯಲ್‌ ಮೀಡಿಯಾದಲ್ಲಿ ಸಮಯ ಕಳೆಯುತ್ತಾರೆ. ಹೀಗೆ ಮಲಗುವ ಮುನ್ನ ಫೋನ್‌ ನೋಡುವುದು ದೊಡ್ಡ ತಪ್ಪು. ಏಕೆಂದರೆ ಫೋನ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿಂದ ಹೊರಸೂಸುವ ನೀಲಿ ಬೆಳಕು ನಮಗೆ ನಿದ್ರಿಸಲು ಸಹಾಯ ಮಾಡುವ ಹಾರ್ಮೋನ್ ಮೆಲಟೋನಿನ್ ಉತ್ಪಾದನೆಯನ್ನು ಅಡ್ಡಿಪಡಿಸುತ್ತದೆ. ಹಾಗಾಗಿ ಮಲಗುವ ಕನಿಷ್ಠ ಒಂದು ಗಂಟೆ ಮೊದಲೇ ಫೋನ್‌ನಿಂದ ದೂರವಿರಿ. ಫೋನ್‌ ನೋಡುವ ಬದಲು ನೀವು ಪುಸ್ತಕ ಓದಬಹುದು, ಸಂಗೀತ ಕೇಳಬಹುದು ಅಥವಾ ಕುಟುಂಬದೊಂದಿಗೆ ಮಾತನಾಡುತ್ತಾ ಸಮಯ ಕಳೆಯಬಹುದು.

ಇದನ್ನೂ ಓದಿ: ಯಾವ ಸಮಯದಲ್ಲಿ ಕಾಫಿ ಕುಡಿಯುವುದು ಉತ್ತಮ? ಅದರ ಪ್ರಯೋಜನಗಳೇನು?

ಸಂಜೆ ತಡವಾಗಿ ಕೆಫೀನ್ ಸೇವನೆ: ಕಾಫಿ, ಟೀ, ಚಾಕೊಲೇಟ್ ಮಾತ್ರವಲ್ಲ ಅನೇಕ ತಂಪು ಪಾನೀಯಗಳು ಸಹ ಕೆಫೀನ್ ಅನ್ನು ಹೊಂದಿರುತ್ತವೆ. ಸಂಜೆ ತಡವಾಗಿ ಅಥವಾ ರಾತ್ರಿಯಲ್ಲಿ ಕೆಫೀನ್ ಸೇವಿಸುವುದರಿಂದ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು. ಇದಲ್ಲದೆ ಮದ್ಯಪಾನ ಸೇವನೆ ಮಾಡುವುದು ಕೂಡ ಒಳ್ಳೆಯದಲ್ಲ, ಇದು ನೈಸರ್ಗಿಕ ನಿದ್ರೆಯ ಪ್ರಕ್ರಿಯೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ರಾತ್ರಿ ಐಸ್ ಕ್ರೀಮ್ ತಿನ್ನುವುದು: ನಾವು ಸಾಮಾನ್ಯವಾಗಿ ಊಟದ ನಂತರ ಐಸ್ ಕ್ರೀಮ್ ತಿನ್ನಬೇಕೆಂದು ಹಂಬಲಿಸುತ್ತೇವೆ, ಆದರೆ ಹಾಗೆ ಮಾಡುವುದು ಹಾನಿಕಾರಕ. ಆದ್ದರಿಂದ, ಮಲಗುವ ಮುನ್ನ ಐಸ್ ಕ್ರೀಮ್ ತಿನ್ನುವುದನ್ನು ತಪ್ಪಿಸಿ. ಐಸ್ ಕ್ರೀಂನಲ್ಲಿ ಕೊಬ್ಬು ಮತ್ತು ಸಕ್ಕರೆ ಅಧಿಕವಾಗಿದ್ದು, ನಿದ್ರೆಗೆ ಭಂಗ ತರುವ ಸಾಧ್ಯತೆ ಇರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ಜನ್ಮದಿನಕ್ಕೆ ತಡವಾಗಿಯಾದರೂ ಪ್ರೀತಿಯಿಂದ ವಿಶ್ ಮಾಡಿದ ತ್ರಿಶಾ ಕೃಷ್ಣನ್ – Kannada News | Trisha Krishnan belated birthday wish Instagram Post for Thalapathy Vijay amid Unfollow rumours

ಕಾಲಿವುಡ್ ಸ್ಟಾರ್ ನಟ, ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ (Thalapathy Vijay) ಜೂನ್ 22ರಂದು ತಮ್ಮ 52ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ವಿಜಯ್‌ಗೆ ಶುಭಕೋರಿದ್ದರಾದರೂ, ಪ್ರತಿ ವರ್ಷದಂತೆ ಅವರ ಆಪ್ತ ಗೆಳತಿ, ನಟಿ ತ್ರಿಶಾ ಕೃಷ್ಣನ್ (Trisha Krishnan) ಮಾತ್ರ ಯಾವುದೇ ಪೋಸ್ಟ್ ಹಂಚಿಕೊಂಡಿರಲಿಲ್ಲ. ಇದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ, ತ್ರಿಶಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಜಯ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ ಎಂಬ ವದಂತಿ ಕೂಡ ಹಬ್ಬಿತ್ತು. ಆದರೆ, ಈಗ ತಡವಾಗಿಯಾದರೂ ವಿಜಯ್‌ಗೆ ಪ್ರೀತಿಯಿಂದ ಹುಟ್ಟುಹಬ್ಬದ ಶುಭಕೋರುವ ಮೂಲಕ ತ್ರಿಶಾ ಅವರು ಎಲ್ಲಾ ವದಂತಿಗಳಿಗೂ ಬ್ರೇಕ್ ಹಾಕಿದ್ದಾರೆ.

ವಿಜಯ್ ಅವರೊಂದಿಗೆ ಕೇಕ್ ಕತ್ತರಿಸಿ ಬರ್ತ್‌ಡೇ ಸೆಲೆಬ್ರೇಟ್ ಮಾಡುತ್ತಿರುವ ಸುಂದರ ಫೋಟೋವೊಂದನ್ನು ತ್ರಿಶಾ ಕೃಷ್ಣನ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ವಿಜಯ್ ಕೇಕ್ ಕತ್ತರಿಸುತ್ತಿದ್ದರೆ, ತ್ರಿಶಾ ಅವರು ವಿಜಯ್ ಮುಖವನ್ನು ಪ್ರೀತಿಯಿಂದ ದಿಟ್ಟಿಸಿ ನೋಡುತ್ತಿರುವುದನ್ನು ಕಾಣಬಹುದು. ಈ ಫೋಟೋ ವೈರಲ್ ಆಗಿದೆ.

ತ್ರಿಶಾ ಕೃಷ್ಣನ್ ಇನ್‌ಸ್ಟಾಗ್ರಾಮ್‌ ಪೋಸ್ಟ್:

ಈ ಪೋಸ್ಟ್‌ಗೆ, ‘ಎಲ್ಲದಕ್ಕೂ ಒಂದು ಮೌಲ್ಯ ತಂದುಕೊಡುವ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು ’ ಎಂದು ತ್ರಿಶಾ ಕೃಷ್ಣನ್ ಅವರು ಕ್ಯಾಪ್ಷನ್ ನೀಡಿದ್ದಾರೆ. ಈ ಪೋಸ್ಟ್ ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ. ವಿಜಯ್ ಮತ್ತು ತ್ರಿಶಾ ನಡುವೆ ಯಾವುದೇ ಮುನಿಸು ಇಲ್ಲ ಎಂಬುದು ಗೊತ್ತಾಗಿದೆ. ಆದರೂ ತ್ರಿಶಾ ಅವರು ತಡವಾಗಿ ಶುಭಕೋರಿದ್ದು ಯಾಕೆ ಎಂಬುದು ಮಾತ್ರ ಇನ್ನೂ ಸ್ಪಷ್ಟವಾಗಿಲ್ಲ.

ಕಳೆದ ವರ್ಷವೂ ತ್ರಿಶಾ ಅವರು ವಿಜಯ್ ಜೊತೆ ಇರುವ ಫೋಟೋ ಹಾಕಿ ‘ಹ್ಯಾಪಿ ಬರ್ತ್‌ಡೇ ಬೆಸ್ಟೆಸ್ಟ್’ ಎಂದು ಬರೆದುಕೊಂಡಿದ್ದರು. ಇನ್ನು 2024ರಲ್ಲಿ ಲಿಫ್ಟ್ ಸೆಲ್ಫಿ ಹಂಚಿಕೊಂಡು ಶುಭಕೋರಿದ್ದರು. ಇವರಿಬ್ಬರ ಆನ್-ಸ್ಕ್ರೀನ್ ಕೆಮಿಸ್ಟ್ರಿಗೆ ತಮಿಳು ಚಿತ್ರರಂಗದಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ‘ಗಿಲ್ಲಿ’, ‘ತಿರುಪಾಚಿ’, ‘ಆತಿ’, ‘ಕುರುವಿ’, ‘ಲಿಯೋ’ ಮುಂತಾದ ಸಿನಿಮಾಗಳಲ್ಲಿ ಅವರು ಒಟ್ಟಿಗೆ ನಟಿಸಿದ್ದಾರೆ.

ಇದನ್ನೂ ಓದಿ: ವಿಜಯ್ ಜೊತೆಗಿನ ನಂಟಿನಿಂದ ಹೆಚ್ಚಿದ ತ್ರಿಶಾ ಕ್ರೇಜ್; ಗಗನಕ್ಕೇರಿದ ಸಂಭಾವನೆ

ಇತ್ತೀಚಿನ ತಿಂಗಳುಗಳಲ್ಲಿ ತ್ರಿಶಾ ಮತ್ತು ವಿಜಯ್ ಅವರ ವೈಯಕ್ತಿಕ ಸಂಬಂಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡುತ್ತಿದ್ದವು. ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭದಲ್ಲೂ ತ್ರಿಶಾ ಹಾಜರಾಗಿದ್ದರು. ಗಾಸಿಪ್‌ಗಳ ಬಗ್ಗೆ ಇಬ್ಬರೂ ಎಲ್ಲೂ ಅಧಿಕೃತವಾಗಿ ಪ್ರತಿಕ್ರಿಯಿಸದಿದ್ದರೂ, ಇವರಿಬ್ಬರ ಸ್ನೇಹ ಗಟ್ಟಿಯಾಗಿದೆ ಎಂಬುದಕ್ಕೆ ತ್ರಿಶಾ ಅವರ ಈ ಹೊಸ ಪೋಸ್ಟ್ ಸಾಕ್ಷಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿ, ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ! – Kannada News | Booked Rs 17 Crore Jaipur Palace For Wedding Pune man who died while taking photo on fort pushed by fiancée

ಪುಣೆ, ಜೂನ್ 23: ಆತನ ಹೆಸರು ಕೇತನ್ ಅಗರ್​ವಾಲ್. ಪುಣೆಯ ಉದ್ಯಮಿಯ ಮಗಳಾದ ಸಿಯಾ ಗೋಯಲ್ ಜೊತೆ ಆತನ ಮದುವೆ ನಿಶ್ಚಯವಾಗಿತ್ತು. ಎರಡೂ ಕುಟುಂಬದವರು ಉದ್ಯಮಿಗಳಾಗಿದ್ದರಿಂದ ಅದ್ದೂರಿಯಾಗಿಯೇ ಮದುವೆ (Wedding) ಮಾಡಲು ನಿಶ್ಚಯಿಸಿದ್ದರು. ಅದಕ್ಕಾಗಿ 17 ಕೋಟಿ ರೂ. ಹಣ ನೀಡಿ ಜೈಪುರದಲ್ಲಿ ಅರಮನೆಯನ್ನು ಕೂಡ ಬುಕ್ ಮಾಡಿದ್ದರು. ಇದೇ ವರ್ಷ ನವೆಂಬರ್​​ನಲ್ಲಿ ಅವರಿಬ್ಬರ ಮದುವೆ ನಡೆಯಬೇಕಿತ್ತು. ಆದರೆ, ಅಷ್ಟರೊಳಗೆ ವರ ಕೇತನ್ ಅಗರ್​ವಾಲ್ ನಿಗೂಢವಾಗಿ ಸಾವನ್ನಪ್ಪಿದ್ದರು. ತಾನು ಮದುವೆಯಾಗುವ ಹುಡುಗಿ ಸಿಯಾ ಜೊತೆ ಆಕೆಯ ಬರ್ತಡೇ ಸೆಲಬ್ರೇಷನ್​ಗೆ ಟ್ರೆಕಿಂಗ್ ಹೋಗಿದ್ದ ಕೇತನ್ ಅಲ್ಲಿ ಆಕೆಯ ಜೊತೆ ಫೋಟೋಶೂಟ್ ಮಾಡಿಕೊಂಡಿದ್ದರು. ಈ ವೇಳೆ ಫೋಟೋಗೆ ಪೋಸ್ ನೀಡುವಾಗ ಕಾಲುಜಾರಿ ಪ್ರಪಾತದಿಂದ ಬಿದ್ದಿದ್ದರು. ಈ ಕತೆ ಹೇಳಿದ್ದು ಸಿಯಾ ಗೋಯಲ್.

ಮದುವೆ ನಿಶ್ಚಯವಾಗಿದ್ದ ಮಹಾರಾಷ್ಟ್ರದ ಪ್ರಮುಖ ಉದ್ಯಮಿಯೊಬ್ಬರ ಮಗ ಕೇತನ್ ಅಗರ್ವಾಲ್ ಪುಣೆಯ ಪ್ರಸಿದ್ಧ ಲೋಹಗಢ ಕೋಟೆಯಿಂದ ಬಿದ್ದು ಸಾವನ್ನಪ್ಪಿದ ಪ್ರಕರಣ ತೀವ್ರ ದುಃಖವನ್ನು ಉಂಟುಮಾಡಿತ್ತು. ಆದರೆ, ಆ ಆಕಸ್ಮಿಕ ಸಾವು ಇದೀಗ ಭಯ ಹುಟ್ಟಿಸುವ ಕೊಲೆ ಕೇಸ್ ಆಗಿ ಬದಲಾಗಿದೆ. ಫೋಟೋ ಕ್ಲಿಕ್ಕಿಸುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎಂದೇ ಮೊದಲು ಪೊಲೀಸರು ಕೇಸ್ ದಾಖಲಿಸಿದ್ದರು. ಆದರೆ, ಈ ಸಾವಿನ ಹಿಂದೆ ಆತ ಮದುವೆಯಾಗಬೇಕಿದ್ದ ಯುವತಿ ಸಿಯಾ ಮತ್ತು ಆಕೆಯ ಪ್ರಿಯಕರನ ಕೈವಾಡ ಇರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

ಏನಿದು ಘಟನೆ?:

ಮಹಾರಾಷ್ಟ್ರದ ಪಿಂಪ್ರಿ-ಚಿಂಚಾಂವಡ್‌ನ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್ ಅಗರ್ವಾಲ್ ಅವರ ಪುತ್ರ 26 ವರ್ಷದ ಕೇತನ್ ಅಗರ್ವಾಲ್ ಜೂನ್ 18ರಂದು ಲೋಹಗಢ ಕೋಟೆಯಲ್ಲಿ ಸುಮಾರು 400 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದರು. ಅಂದು ಕೇತನ್ ತಾವು ಮದುವೆಯಾಗಬೇಕಿದ್ದ ಹುಡುಗಿ ಸಿಯಾ ಗೋಯಲ್ ಹುಟ್ಟುಹಬ್ಬವನ್ನು ಆಚರಿಸಲು ಅಲ್ಲಿಗೆ ಟ್ರೆಕ್ಕಿಂಗ್ ಹೋಗಿದ್ದರು. ಫೋಟೋಗೆ ಪೋಸ್ ನೀಡುವಾಗ ಕೇತನ್ ಕಾಲು ಜಾರಿ ಬಿದ್ದರು ಎಂದು ಸಿಯಾ ಪೊಲೀಸರಿಗೆ ಕತೆ ಕಟ್ಟಿದ್ದಳು. ಸುಮಾರು ಮೂರು ಗಂಟೆಗಳ ಕಾರ್ಯಾಚರಣೆಯ ಬಳಿಕ ಶವವನ್ನು ಹೊರತೆಗೆಯಲಾಗಿತ್ತು.

ಇದನ್ನೂ ಓದಿ: ಜಿಮ್ ಟ್ರೈನರ್ ವಿಜಯ್ ಕೊಲೆಗೆ ಬಿಗ್​ ಟ್ವಿಸ್ಟ್​​: ಪ್ರಭಾವಿ ಉದ್ಯಮಿಯ ಕೈವಾಡ, ಯಾರದು?

ಬಯಲಾಯ್ತು ಕೊಲೆಯ ರಹಸ್ಯ:

ಮೊದಲಿಗೆ ಅಪಘಾತ ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಲೋನಾವಾಲಾ ಗ್ರಾಮಾಂತರ ಪೊಲೀಸರಿಗೆ ಸಿಯಾ ನೀಡಿದ ಹೇಳಿಕೆಗಳ ಮೇಲೆ ಅನುಮಾನ ಮೂಡಿತು. ಇತ್ತೀಚೆಗೆ ಪ್ರೇಯಸಿ, ಹೆಂಡತಿಯಿಂದ ಕೊಲೆ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿರುವುದರಿಂದ ಕೇತನ್​ನ ಅಪ್ಪನಿಗೆ ಸಿಯಾ ಮೇಲೆ ಸಣ್ಣದೊಂದು ಅನುಮಾನ ಮೂಡಿತ್ತು. ಕೇತನ್ ಪರಿಣಿತ ಟ್ರೆಕ್ಕರ್ ಆಗಿದ್ದರಿಂದ ಆಕಸ್ಮಿಕವಾಗಿ ಬೀಳಲು ಸಾಧ್ಯವಿಲ್ಲ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು.

ಹೀಗಾಗಿ, ಪೊಲೀಸರು ಸಿಯಾಳ ಮೊಬೈಲ್ ಡೇಟಾ, ಕರೆ ದಾಖಲೆಗಳು ಮತ್ತು ಘಟನಾ ಸ್ಥಳದಲ್ಲಿದ್ದ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಅಸಲಿ ಸತ್ಯ ಹೊರಬಂದಿದೆ. ಸಿಯಾ ತನ್ನ ಪ್ರಿಯಕರ ಚೇತನ್ ಚೌಧರಿಯ ಜೊತೆ ಸೇರಿ ಈ ಹತ್ಯೆಗೆ ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ. ಫೋಟೋಶೂಟ್ ನೆಪದಲ್ಲಿ ಕೇತನ್​ನನ್ನು ಕೋಟೆಯ ತುದಿಗೆ ಕರೆದುಕೊಂಡು ಹೋಗಿದ್ದ ಸಿಯಾ ಆತನನ್ನು ಅಲ್ಲಿಂದ ತಳ್ಳಿದ್ದಳು. ಅದಕ್ಕೆ ಚೇತನ್ ಸಾಥ್ ನೀಡಿದ್ದ.

ಇದನ್ನೂ ಓದಿ: ಮಾಜಿ ಲವರ್ ಮನೆಗೆ ಹೋಗಿ ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

ಮದುವೆಗೆ ಬುಕ್ ಆಗಿತ್ತು ಜೈಪುರದ ಅರಮನೆ!:

ಕೇತನ್ ಮತ್ತು ಸಿಯಾ ಅವರ ವಿವಾಹವು ಮುಂಬರುವ ನವೆಂಬರ್‌ನಲ್ಲಿ ರಾಜಸ್ಥಾನದ ಉದಯಪುರ ಅಥವಾ ಜೈಪುರದಲ್ಲಿ ನಡೆಯಬೇಕಿತ್ತು. ಮದುವೆಗಾಗಿ ಎರಡೂ ಕುಟುಂಬಗಳು ಸೇರಿ ಜೈಪುರದಲ್ಲಿ ಬರೋಬ್ಬರಿ 17 ಕೋಟಿ ರೂ. ವೆಚ್ಚದಲ್ಲಿ ಅರಮನೆಯೊಂದನ್ನು ಬುಕ್ ಮಾಡಿದ್ದವು. ಅಷ್ಟೇ ಅಲ್ಲದೆ, ಅತಿಥಿಗಳನ್ನು ಕರೆದೊಯ್ಯಲು ಎರಡು ಖಾಸಗಿ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಮದುವೆಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದಾಗ ಇಡೀ ಕುಟುಂಬಕ್ಕೆ ಈ ಘಟನೆ ಬರಸಿಡಿಲಿನಂತೆ ಎರಗಿದೆ.

ಕೊಲೆಗೆ ಕಾರಣವೇನು?:

ಪೊಲೀಸ್ ತನಿಖೆಯ ಪ್ರಕಾರ, 20 ವರ್ಷದ ಸಿಯಾ ಗೋಯಲ್‌ಗೆ ತನ್ನ ಕುಟುಂಬದವರು ನಿಶ್ಚಯಿಸಿದ್ದ ಕೇತನ್‌ನನ್ನು ಮದುವೆಯಾಗಲು ಇಷ್ಟವಿರಲಿಲ್ಲ. ಆಕೆ ಚೇತನ್ ಚೌಧರಿಯನ್ನು ಪ್ರೀತಿಸುತ್ತಿದ್ದಳು. ತಮ್ಮ ಪ್ರೀತಿಯ ನಡುವೆ ಮುಳ್ಳಾಗಿದ್ದ ಕೇತನ್‌ನನ್ನು ಶಾಶ್ವತವಾಗಿ ಮುಗಿಸಲು ಇಬ್ಬರೂ ಪ್ಲಾನ್ ಮಾಡಿದ್ದರು. ಇದಕ್ಕೂ ಮುನ್ನ ವಿದೇಶಕ್ಕೆ ಹೋಗಬೇಕಿದ್ದ ಟ್ರಿಪ್ ಅನ್ನು ಕೇತನ್‌ನ ಪಾಸ್‌ಪೋರ್ಟ್ ಕದ್ದು ಸಿಯಾ ಹಾಳು ಮಾಡಿದ್ದಳು ಎನ್ನಲಾಗಿದೆ. ನಂತರ ತನ್ನ ಹುಟ್ಟುಹಬ್ಬದ ನೆಪದಲ್ಲಿ ಕೇತನ್‌ನನ್ನು ಲೋಹಗಢ ಕೋಟೆಗೆ ಕರೆದೊಯ್ದಿದ್ದಳು. ಮೊದಲೇ ಅಲ್ಲಿಗೆ ಬಂದು ಹೊಂಚು ಹಾಕಿ ಕುಳಿತಿದ್ದ ಪ್ರಿಯಕರ ಚೇತನ್ ಹಾಗೂ ಸಿಯಾ ಇಬ್ಬರೂ ಸೇರಿ, ಕೇತನ್ ಫೋಟೋಗೆ ಪೋಸ್ ನೀಡುವಾಗ ಹಿಂದಿನಿಂದ ತಳ್ಳಿ ಕೊಂದಿದ್ದರು. ಈ ಪ್ರಕರಣದ ಮಹಾರಾಷ್ಟ್ರದ ಉದ್ಯಮ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಆಗಿದ್ದೇನು? – Kannada News | Niveditha Gowda Kishan Bilagali Peacock Feather Reels Controversy Dinesh Kallahalli Complaint

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಿವೇದಿತಾ ಗೌಡ (Niveditha Gowda) ಮತ್ತು ಕಿಶನ್ ಬಿಳಗಲಿ ಅವರು ಇತ್ತೀಚೆಗೆ ನವಿಲುಗರಿ ಧರಿಸಿ ರೀಲ್ಸ್ ಮಾಡಿದ್ದು ವಿವಾದಕ್ಕೆ ಗುರಿಯಾಗಿದೆ. ಅವರಿಬ್ಬರ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಿವೇದಿತಾ ಗೌಡ, ಕಿಶನ್ ಬಿಳಗಲಿ ಅವರಿಂದ ಗಂಭೀರವಾದ ಕಾನೂನು ಉಲ್ಲಂಘನೆ ಆಗಿದೆ. ಮುಖ್ಯ ವನ್ಯಜೀವಿ ಪರಿಪಾಲಕರ ಕಚೇರಿಗೆ ದೂರು ನೀಡಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ನವಿಲುಗಳನ್ನು ಎಲ್ಲಿ ಕೊಲ್ಲಲಾಗಿದೆ? ಯಾವ ಅಂಗಡಿಯಲ್ಲಿ ಮಾರಾಟ ಮಾಡಲಾಗಿದೆ ಎಂಬ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಬೇಕು ಅಂತ ದೂರು ನೀಡಿದ್ದೇನೆ. ದೂರು ನೀಡಿ ಇಷ್ಟು ದಿನ ಕಳೆದರೂ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ದಿನೇಶ್ ಕಲ್ಲಹಳ್ಳಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version