ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು – Kannada News | Thane: Husband Kills Wife with TV During Argument in Kalyan; Arrested for Murder
ಥಾಣೆ, ಮೇ 25: ಗಂಡ-ಹೆಂಡತಿ ನಡುವಿನ ಸಣ್ಣದೊಂದು ವಿವಾದ ಕೊಲೆ(Murder)ಯಲ್ಲಿ ಅಂತ್ಯಗೊಂಡಿದೆ. ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪರಿಣಾಮ ಆಕೆ ಕೂಡಲೇ ಸಾವನ್ನಪ್ಪಿದ್ದಾಳೆ. ಕೊಲೆ ಆರೋಪದ ಮೇಲೆ ಪತಿಯನ್ನು ಬಂಧಿಸಲಾಗಿದೆ. ಆತನಿಗೆ 21 ವರ್ಷ ವಯಸ್ಸು, ಆಕೆಗಿನ್ನು 20 ವರ್ಷ ವಯಸ್ಸಾಗಿತ್ತು. ಥಾಣೆ ಜಿಲ್ಲೆಯ ಕಲ್ಯಾಣ್ ತಾಲೂಕಿನ ಬಲ್ಯಾನಿ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಕಲ್ಯಾಣ್ ತಾಲೂಕು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುಖೇಶ್ ಧಾಗೆ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು…