ಮೂರು ತಿಂಗಳಿಂದ ನಮ್ಮ ಕ್ಲಿನಿಕ್ ಸಿಬ್ಬಂದಿಗಿಲ್ಲ ಸಂಬಳ: ಬಂದ್ ಎಚ್ಚರಿಕೆ ನೀಡಿದ ವೈದ್ಯರು, ನರ್ಸ್‌ಗಳು – Kannada News | Bengaluru Namma Clinic Crisis: Staff Unpaid For 3 Months Due to Centre State Fund Tussle; Warn to Shut Down
ಬೆಂಗಳೂರು, ಜುಲೈ 3: ಬೆಂಗಳೂರಿನ (Bengaluru) ಬಡ ಜನರಿಗೆ ಉಚಿತ ಹಾಗೂ ಗುಣಮಟ್ಟದ ಪ್ರಾಥಮಿಕ ವೈದ್ಯಕೀಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯ ‘ನಮ್ಮ ಕ್ಲಿನಿಕ್ (Namma Clinic)’ ಯೋಜನೆ ಈಗ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಜಿಬಿಎ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕ್ಲಿನಿಕ್‌ಗಳ ವೈದ್ಯರು, ನರ್ಸ್‌ಗಳು ಹಾಗೂ ಲ್ಯಾಬ್ ತಂತ್ರಜ್ಞರು ಕಳೆದ ಮೂರು ತಿಂಗಳಿಂದ ವೇತನವಿಲ್ಲದೆ ಪರದಾಡುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಅನುದಾನ ಹಂಚಿಕೆಯ ಗೊಂದಲದಿಂದಾಗಿ ಸಾರ್ವಜನಿಕ ಆರೋಗ್ಯ ಸೇವೆ ಒದಗಿಸುವ ಸಿಬ್ಬಂದಿ ಈಗ ಬೀದಿಗೆ ಬೀಳುವ…