ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
ಬೌರಿಂಗ್ ಆಸ್ಪತ್ರೆ ದುರಂತImage Credit source: tv9 kannada
ಬೆಂಗಳೂರು, ಮೇ 24: ನಗರದ ಬೌರಿಂಗ್ ಆಸ್ಪತ್ರೆಯ (Bowring Hospital Tragedy) ಕಾಂಪೌಂಡ್ ಕುಸಿದು ಏಳು ಜನ ಅಮಾಯಕರು ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿದ್ದ ಚೆನ್ನೈ ಮೂಲದ ಎಎಸ್‌ಆರ್ ಟ್ರೇಡರ್ಸ್ ಕಂಪನಿ ವಿರುದ್ಧ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರ ದೂರು ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ.
ಮುಖ್ಯಾಂಶಗಳು
ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣ
ಕಮರ್ಷಿಯಲ್ ಸ್ಟ್ರೀಟ್ ಠಾಣೆ ಮೆಟ್ಟಿಲೇರಿದ ಎಕ್ಸಿಕ್ಯೂಟಿವ್ ಇಂಜಿನಿಯರ್
ಚೆನ್ನೈ ಮೂಲದ ಕಂಪನಿ ವಿರುದ್ಧ ಎಫ್‌ಐಆರ್ ದಾಖಲು
ಚೆನ್ನೈ ಮೂಲದ ಎಎಸ್‌ಆರ್ ಟ್ರೇಡರ್ಸ್ ಕಂಪನಿ ಬೌರಿಂಗ್ ಮತ್ತು ಲೇಡಿ ಕರ್ಝನ್ ಮೆಡಿಕಲ್ ಕಾಲೇಜ್ನಿರ್ಮಾಣದ ಗುತ್ತಿಗೆ ಪಡೆದಿತ್ತು. ನೆಲಸಮ ಮಾಡಿದ್ದ ಕಟ್ಟಡದ ಅವಶೇಷ ಹಾಗೂ ಹೆಚ್ಚುವರಿ ತ್ಯಾಜ್ಯಗಳನ್ನು ನಿಯಮಾನುಸಾರ ಸ್ಥಳದಿಂದ ತೆರವುಗೊಳಿಸಿರಲಿಲ್ಲ. ಬದಲಿಗೆ, ಭಾರಿ ಪ್ರಮಾಣದ ತ್ಯಾಜ್ಯವನ್ನು ಕಾಂಪೌಂಡ್ ಪಕ್ಕದಲ್ಲೇ ರಾಶಿ ಹಾಕಲಾಗಿತ್ತು. ಹೀಗಾಗಿ ಭಾರ ತಡೆಯಲಾರದೆ ಗೋಡೆ ಕುಸಿದು ಬಿದ್ದಿದ್ದರಿಂದ ಏಳು ಜನ ಅಮಾಯಕರು ಜೀವ ಕಳೆದುಕೊಂಡಿದ್ದರು.
ನೋಟಿಸ್ಗೆ ಪ್ರತಿಕ್ರಿಯಿಸದ ಗುತ್ತಿಗೆದಾರ ಕಂಪನಿ
ಇನ್ನು ತ್ಯಾಜ್ಯ ತೆರವುಗೊಳಿಸದ ಹಾಗೂ ನಿಯಮ ಉಲ್ಲಂಘಿಸಿದ ಕುರಿತು ಸ್ಪಷ್ಟೀಕರಣ ನೀಡುವಂತೆ ಸರ್ಕಾರದ ವತಿಯಿಂದ ಎಎಸ್‌ಆರ್ ಟ್ರೇಡರ್ಸ್ ಕಂಪನಿಯ ಇಮೇಲ್ ಐಡಿಗೆ ನೋಟಿಸ್ ಕಳುಹಿಸಲಾಗಿತ್ತು. ಮೇ 18ರ ಒಳಗಾಗಿ ಲಿಖಿತ ಸ್ಪಷ್ಟೀಕರಣ ನೀಡಬೇಕೆಂದು ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರು ಗಡುವು ನೀಡಿದ್ದರೂ ಗುತ್ತಿಗೆದಾರ ಕಂಪನಿಯು ಇಮೇಲ್‌ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸರ್ಕಾರದ ನೋಟಿಸ್ ಅನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಇಂಜಿನಿಯರ್ ಚಂದ್ರು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಮೆಟ್ಟಿಲೇರಿದ್ದಾರೆ. ಇತ್ತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಘಟನೆ ಹಿನ್ನೆಲೆ
ಏಪ್ರಿಲ್ 29ರಂದು ವರುಣಾರ್ಭಟಕ್ಕೆ ಬೆಂಗಳೂರಿನಲ್ಲಿ ಘೋರ ದುರಂತವೇ ನಡೆದು ಹೋಗಿತ್ತು. ಆಲಿಕಲ್ಲು, ಬಿರುಗಾಳಿಯೊಂದಿಗೆ ಅಬ್ಬರಿಸಿದ್ದ ಮಳೆ ಬೃಹತ್ ಕಾಂಪೌಂಡನ್ನೇ ಉರುಳಿಸಿತ್ತು. 7 ಜನರನ್ನ ಬಲಿ ಪಡೆದಿತ್ತು. ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದಿತ್ತು. ಕಾಂಪೌಂಡ್ ಬಳಿಯೇ ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಐವರು ಹಾಗೂ ಇಬ್ಬರು ಪಾದಚಾರಿಗಳು ಸೇರಿದಂತೆ 7 ಮಂದಿ ಉಸಿರು ನಿಲ್ಲಿಸಿದ್ದರೆ, ಇತರೆ 7 ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.
ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ (Rakshit Shetty) ಕುರಿತು ಕೆಲ ದಿನಗಳ ಹಿಂದೆ ಟ್ರೋಲ್ ಒಂದು ಹರಿದಾಡುತ್ತಿತ್ತು, ‘ರಕ್ಷಿತ್ ಕಳೆದ ಹೋಗಿದ್ದಾರೆ ಹುಡುಕಿ ಕೊಡಿ’ ಎಂದು ಕೆಲವರು ಪೋಸ್ಟ್ಗಳನ್ನು ಹಂಚಿಕೊಂಡಿದ್ದರು. ರಕ್ಷಿತ್ ಸಹ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ಬಹುತೇಕ ಕಾಣೆ ಆಗಿದ್ದರು. ಹೊರಗೆಲ್ಲೂ ಕಾಣಿಸಿಕೊಂಡಿರಲಿಲ್ಲ. ‘ರಿಚರ್ಡ್ ಆಂಟೊನಿ’ ಸಿನಿಮಾದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಬಿಟ್ಟರೆ ಇನ್ನೇನೂ ಅಪ್ಡೇಟ್ ನೀಡಿರಲಿಲ್ಲ. ಇದೀಗ ರಕ್ಷಿತ್ ಶೆಟ್ಟಿ ಹಠಾತ್ತನೆ ಕಾಣಿಸಿಕೊಂಡಿದ್ದಾರೆ. ಅದೂ ಪಂಚೆ ಮತ್ತು ಶರ್ಟು ಧರಿಸಿ.
ರಕ್ಷಿತ್ ಶೆಟ್ಟಿ ಅವರು ಕುಟುಂಬದೊಟ್ಟಿಗೆ ಇರುವ ಕೆಲ ಚಿತ್ರಗಳು ವೈರಲ್ ಆಗಿವೆ. ಚಿತ್ರಗಳಲ್ಲಿ ನಟ ರಕ್ಷಿತ್ ಶೆಟ್ಟಿ ಅವರು ಬಿಳಿ ಶರ್ಟು, ಪಂಚೆ ತೊಟ್ಟು ಮದುಮಗನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಗಳು ನೋಡಿದವರು ರಕ್ಷಿತ್ ಶೆಟ್ಟಿ ನಿಶ್ಚಿತಾರ್ಥ ಮಾಡಿಕೊಂಡರೇ? ರಕ್ಷಿತ್ ಶೆಟ್ಟಿಯ ನಿಶ್ಚಿತಾರ್ಥದ ಚಿತ್ರಗಳು ಇವು ಇರಬಹುದೇ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ನಿಜ ಕತೆ ಬೇರೆಯೇ ಇದೆ.
ರಕ್ಷಿತ್ ಶೆಟ್ಟಿ ಶರ್ಟು, ಪಂಚೆ ತೊಟ್ಟು ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ಅವರ ಪೋಷಕರ ಕಾರಣಕ್ಕೆ. ರಕ್ಷಿತ್ ಶೆಟ್ಟಿಯ ಪೋಷಕರ 50ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗಿದ್ದು ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ-ಹವನಗಳನ್ನು ಮಾಡಲಾಗಿದೆ. ಆಪ್ತ ಸಂಬಂಧಿಗಳು, ಸ್ನೇಹಿತರನ್ನು ಸಹ ಕಾರ್ಯಕ್ರಮಕ್ಕೆ ಕರೆಯಲಾಗಿತ್ತು. ಈ ವೇಳೆ ನಟ ರಕ್ಷಿತ್ ಶೆಟ್ಟಿ ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಹೋಮ-ಹವನಗಳಲ್ಲಿ ಭಾಗಿ ಆಗಿದ್ದರು. ಅದೇ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ರಕ್ಷಿತ್ ಶೆಟ್ಟಿ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಸಿನಿಮಾದ ಬಳಿಕ ಇನ್ಯಾವುದೇ ಸಿನಿಮಾನಲ್ಲಿ ನಟಿಸಿಲ್ಲ. ಬಹು ವರ್ಷಗಳಿಂದ ಕತೆ ತಿದ್ದುತಿದ್ದ ‘ರಿಚರ್ಟ್ ಆಂಟೊನಿ’ ಸಿನಿಮಾದ ಚಿತ್ರೀಕರಣವನ್ನು ಶೀಘ್ರವೇ ಪ್ರಾರಂಭ ಮಾಡುವುದಾಗಿ ಹೇಳಿದ್ದಾರೆ. ಅದರ ಜೊತೆಗೆ ‘ಪುಣ್ಯಕೋಟಿ’ ಹಾಗೂ ಇನ್ನೂ ಒಂದು ಸಿನಿಮಾದ ಚಿತ್ರಕತೆಯನ್ನೂ ಸಹ ರೆಡಿ ಮಾಡಿಕೊಂಡಿರುವುದಾಗಿ ರಕ್ಷಿತ್ ಶೆಟ್ಟಿ ಹೇಳಿದ್ದಾರೆ. ‘ರಿಚರ್ಡ್ ಆಂಟೊನಿ’ ಸಿನಿಮಾದ ಚಿತ್ರೀಕರಣವನ್ನು ಸದ್ದಿಲ್ಲದೆ ಶುರು ಮಾಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.
ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು ಬೇಗ ಸಿಎಂ ಆಗುತ್ತಾರೆ ಎಂದಿದ್ದಾರೆ.
ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ತುಲಾ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಜೂನ್ 2ರಿಂದ ಪ್ರಾರಂಭವಾಗಿ ತುಲಾ ರಾಶಿಯವರಿಗೆ 10ನೇ ಮತ್ತು 11ನೇ ಮನೆಯಲ್ಲಿ ನಡೆಯಲಿದೆ. 10ನೇ ಮನೆ ಕರ್ಮಸ್ಥಾನವಾಗಿದ್ದು, ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರಗಳ ತುಲಾ ರಾಶಿಯವರಿಗೆ ಈ ಸಂಚಾರ ಮಹತ್ವಪೂರ್ಣವಾಗಿದೆ. ಆರಂಭಿಕ ಹಂತದಲ್ಲಿ ಗುರುಬಲದ ಕೊರತೆ ಕಂಡುಬರಲಿದ್ದು, ಆರ್ಥಿಕ ವಿಷಯಗಳಲ್ಲಿ ದುಂದುವೆಚ್ಚ ಮತ್ತು ಹೆಚ್ಚಿನ ಹೂಡಿಕೆಗೆ ಇದು ಸೂಕ್ತ ಸಮಯವಲ್ಲ. ಹಣಕಾಸು ನಿರ್ವಹಣೆಯಲ್ಲಿ ಎಚ್ಚರಿಕೆ ಅಗತ್ಯ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್ಗೆ ಬಹಳ ಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ಥಾನ್ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಆದರೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ.
ರಾಜಸ್ಥಾನ್ ಈ ಪಂದ್ಯವನ್ನು ಗೆಲ್ಲಬೇಕಾದರೆ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಅವರಿಂದ ಒಂದೊಳ್ಳೆ ಜೊತೆಯಾಟದ ಅವಶ್ಯಕತೆ ಇತ್ತು. ಆದರೆ ಇವರಿಬ್ಬರು ತಂಡಕ್ಕೆ ಅದನ್ನು ನೀಡುವಲ್ಲಿ ವಿಫಲರಾದರು. ಯಶಸ್ವಿ ಜೈಸ್ವಾಲ್ 17 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 27 ರನ್ ಬಾರಿಸಿ ಔಟಾದರೆ, ಸ್ಫೋಟಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ 6 ಎಸೆತಗಳಲ್ಲಿ ಕೇವಲ 4 ರನ್ ಬಾರಿಸಿ ಔಟಾದರು. ಹೀಗಾಗಿ ರಾಜಸ್ಥಾನ್ 33 ರನ್ಗಳಿಗೆ ತನ್ನ ಎರಡು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು.
ಮೋಹನ್ಲಾಲ್ (Mohanlal) ನಟಿಸಿ, ಜೀತು ಜೋಸೆಫ್ ನಿರ್ದೇಶನ ಮಾಡಿರುವ ‘ದೃಶ್ಯಂ’ ಸರಣಿಯ ಮೂರನೇ ಸಿನಿಮಾ ಕೆಲವು ದಿನಗಳ ಹಿಂದೆಯಷ್ಟೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ‘ದೃಶ್ಯಂ’ ಸರಣಿ ಭಾರತೀಯ ಚಿತ್ರರಂಗದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿದೆ. ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾಗಳು ಭಾರಿ ದೊಡ್ಡ ಯಶಸ್ಸು ಗಳಿಸಿದ್ದು, ಇದೀಗ ‘ದೃಶ್ಯಂ 3’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಸಿನಿಮಾದ ಬಗ್ಗೆ ಅಷ್ಟೇನೂ ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿರಲಿಲ್ಲ. ಹಾಗಿದ್ದರೂ ಸಹ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಯಶಸ್ವಿ ಆಗಿದೆ.
‘ದೃಶ್ಯಂ 3’ ಸಿನಿಮಾ ಬಿಡುಗಡೆ ಆಗಿ ಕೇವಲ ಮೂರು ದಿನಗಳಷ್ಟೆ ಆಗಿದ್ದು ಕೇವಲ ಈ ಮೂರು ದಿನಗಳಲ್ಲಿಯೇ ಸಿನಿಮಾ 100 ಕೋಟಿ ಗಳಿಕೆ ಮಾಡಿದೆ. ಸಿನಿಮಾವು ಮಲಯಾಳಂ ಮಾತ್ರವಲ್ಲದೆ ಇನ್ನೂ ಕೆಲವು ಭಾಷೆಗಳಿಗೆ ಡಬ್ ಆಗಿ ಬಿಡುಗಡೆ ಆಗಿದ್ದು, ಇದೇ ಕಾರಣಕ್ಕೆ ಕೇರಳ ಮಾತ್ರವಲ್ಲದೆ ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿಯೂ ಸಿನಿಮಾಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದು ಮಾತ್ರವೇ ಅಲ್ಲದೆ, ದುಬೈ, ಗಲ್ಫ್ ರಾಷ್ಟ್ರಗಳು, ಅಮೆರಿಕ ಇನ್ನೂ ಕೆಲವು ದೇಶಗಳಲ್ಲಿಯೂ ಸಹ ‘ದೃಶ್ಯಂ 3’ ಸಿನಿಮಾಕ್ಕೆ ಭಾರಿ ಗಳಿಕೆ ದೊರೆತಿದೆ.
‘ದೃಶ್ಯಂ 3’ ಸಿನಿಮಾ ಕೇವಲ ಮೂರು ದಿನಗಳಲ್ಲಿ 100 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಮಲಯಾಳಂ ಚಿತ್ರರಂಗದ ಮಟ್ಟಿಗೆ ಇದೊಂದು ದಾಖಲೆಯಾಗಿದೆ. ಇಷ್ಟು ಕಡಿಮೆ ಅವಧಿಯಲ್ಲಿ 100 ಕೋಟಿ ಗಳಿಕೆ ಮಾಡಿದ ಮಲಯಾಳಂ ಸಿನಿಮಾ ಎನಿಸಿಕೊಂಡಿದೆ ‘ದೃಶ್ಯಂ 3’. ಕರ್ನಾಟಕದಲ್ಲಿ ‘ದೃಶ್ಯಂ 3’ ಸಿನಿಮಾದ ಕನ್ನಡ ಆವೃತ್ತಿ ಬಿಡುಗಡೆ ಆಗಿದೆಯಾದರೂ ಹೆಚ್ಚಿನ ಜನ ಮಲಯಾಳಂ ಸಿನಿಮಾವನ್ನೇ ನೋಡಿ ಖುಷಿ ಪಟ್ಟಿದ್ದಾರೆ.
ಕರ್ನಾಟಕದಲ್ಲಿ ಮೂರು ದಿನಕ್ಕೆ ‘ದೃಶ್ಯಂ 3’ ಸಿನಿಮಾ 6 ಕೋಟಿಗೂ ಹೆಚ್ಚು ಮೊತ್ತದ ಗಳಿಕೆ ಮಾಡಿದೆ. ವೀಕೆಂಡ್ನಲ್ಲಿ ಸಿನಿಮಾದ ಗಳಿಕೆ ಹೆಚ್ಚಾಗಿದ್ದು, ಮೂರನೇ ದಿನ 2.50 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಸಿದೆ. ಆ ಮೂಲಕ ಸಿನಿಮಾದ ಮೂರು ದಿನದ ಒಟ್ಟು ಗಳಿಕೆ 6 ಕೋಟಿ ದಾಟಿದೆ ಎನ್ನಲಾಗುತ್ತಿದೆ.
‘ದೃಶ್ಯಂ 3’ ಸಿನಿಮಾದ ಹಿಂದಿ ಆವೃತ್ತಿ ಬಿಡುಗಡೆ ಆಗಿಲ್ಲ. ವಿಶೇಷವಾಗಿ ‘ದೃಶ್ಯಂ 3’ ಸಿನಿಮಾ ಉತ್ತರ ಭಾರತದಲ್ಲಿ ಬಿಡುಗಡೆ ಆಗಿಲ್ಲ. ಹಾಗಾಗಿ ಸಿನಿಮಾದ ಗಳಿಕೆಗೆ ತುಸು ಪೆಟ್ಟು ಬಿದ್ದಿದೆ. ‘ದೃಶ್ಯಂ 3’ ಸಿನಿಮಾವನ್ನು ಹಿಂದಿಗೆ ರೀಮೇಕ್ ಮಾಡಲಾಗುತ್ತಿದ್ದು, ಇದೇ ಕಾರಣಕ್ಕೆ ಸಿನಿಮಾವನ್ನು ಹಿಂದಿಗೆ ಡಬ್ ಮಾಡಿ ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲಾಗಿಲ್ಲ. ಹಾಗಿದ್ದರೂ ಸಹ ಸಿನಿಮಾ ಮೊದಲ ಮೂರು ದಿನಗಳಲ್ಲಿ ಉತ್ತಮ ಗಳಿಕೆಯನ್ನೇ ಮಾಡಿದೆ.
ಭಾರತಕ್ಕೆ ಬರುವ ವಿದೇಶಿಗರ ಸಂಖ್ಯೆ ಹೆಚ್ಚಾಗಿದೆ. ಈ ವಿದೇಶಿಗರು (Foreigners) ಇಲ್ಲಿನ ಪ್ರವಾಸಿ ತಾಣಗಳು ಕಣ್ತುಂಬಿಸಿಕೊಳ್ಳುತ್ತಾರೆ. ಅದಲ್ಲದೇ ಇಲ್ಲಿನ ವಿವಿಧ ಆಹಾರಗಳನ್ನು ಇಷ್ಟ ಪಟ್ಟು ಸವಿಯುತ್ತಾರೆ. ಭಾರತೀಯರ ಆಚಾರ ವಿಚಾರ ಇಷ್ಟ ಪಟ್ಟು ಇಲ್ಲೇ ಸೆಟಲ್ ಆಗುವುದಿದೆ. ಇದೀಗ ವಿದೇಶಿ ಮಹಿಳೆ ಯುರೋಪಿಯನ್ನರು ಭಾರತೀಯರಿಂದ (Indians) ಈ ಐದು ವಿಷಯಗಳನ್ನು ಕಲಿಯಲೇಬೇಕು ಎಂದಿದ್ದಾರೆ. ಇದೇ ವೇಳೆ ಭಾರತೀಯ ಆತಿಥ್ಯ, ಸಮುದಾಯ ಜೀವನವನ್ನು ಈ ಮಹಿಳೆ ಶ್ಲಾಘಿಸಿದ್ದಾರೆ. ವಿದೇಶಿ ಮಹಿಳೆಯ ಈ ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.
ಮೋನಿಕಾ ಕುಂಜೇಶ್ವರಿ ದಾಸಿ (monika_kunjeswari) ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಾರತದಲ್ಲಿದ್ದಾಗ ಗಮನಿಸಿದ ವಿಷಯಗಳನ್ನು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಈ ವಿಡಿಯೋದ ಕ್ಲಿಪ್‌ನ ಶೀರ್ಷಿಕೆಯಲ್ಲಿ, ಯುರೋಪಿಯನ್ನರು ಭಾರತೀಯರಿಂದ ಕಲಿಯಬೇಕಾದ ವಿಷಯಗಳು. ಇದು ವಿವಾದಾತ್ಮಕವಾಗಿರಬಹುದು ಎಂದು ನನಗೆ ತಿಳಿದಿದೆ. ಆದರೆ ಭಾರತದಲ್ಲಿ ವರ್ಷಗಳ ಕಾಲ ನೆಲೆಸಿದ ಬಳಿಕ ಈ ಪಾಶ್ಚಿಮಾತ್ಯ ದೇಶಗಳು ಭಾರತೀಯ ಸಂಸ್ಕೃತಿಯಿಂದ ಕಲಿಯಬಹುದಾದ ಕೆಲವು ವಿಷಯಗಳಿವೆ ಎಂದು ನಾನು ಗಮನಿಸಿದೆ. ಯುರೋಪಿನ ಅನೇಕ ಜನರು ಭಾರತದ ಹಳ್ಳಿಗಳಿಗೆ ಅಥವಾ ಸಣ್ಣ ಪಟ್ಟಣಗಳಿಗೆ ಭೇಟಿ ನೀಡುತ್ತಾರೆ. ಹಾಗೂ ಇಲ್ಲಿನ ಜನರು ‘ಸರಳ’ ಎಂದು ಭಾವಿಸುತ್ತಾರೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಇಲ್ಲಿ ಕಂಡುಕೊಂಡ ಕೆಲವು ಮೌಲ್ಯಗಳು ನಾವು ವಿದೇಶದಲ್ಲಿ ನಿಧಾನವಾಗಿ ಕಳೆದುಕೊಳ್ಳುತ್ತಿರುವ ವಿಷಯಗಳಾಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ
ಭಾರತದಲ್ಲಿ ಅತಿಥಿಗಳನ್ನು ನಡೆಸಿಕೊಳ್ಳುವ ರೀತಿ ಅದ್ಭುತವಾಗಿದೆ. ಯಾರಾದರೂ ನಿಮ್ಮ ಮನೆಗೆ ಬಂದರೆ, ನೀವು ಅವರಿಗೆ ಆಹಾರ, ಚಹಾ ನೀಡುತ್ತೀರಿ. ಹಾಗೂ ಅವರಿಗೆ ಆರಾಮದಾಯಕವಾಗಿಸುತ್ತೀರಿ. ಇದನ್ನು ಮೂಲಭೂತ ನಡವಳಿಕೆ ಎಂದು ಪರಿಗಣಿಸಲಾಗುತ್ತದೆ. ಲಿಥುವೇನಿಯಾದಲ್ಲಿಯೂ ನಮಗೆ ಇದೇ ರೀತಿಯದ್ದೇನೋ ಇದೆ, ಆದರೆ ಭಾರತದಲ್ಲಿ ಅದು ನಿಜವಾಗಿಯೂ ಬೇರೆಯದೇ ಮಟ್ಟದಲ್ಲಿದೆ ಎಂದು ಉಲ್ಲೇಖಿಸಿದ್ದಾರೆ.
ಸ್ನೇಹಿತರು ಸ್ನೇಹಿತರಿಗೆ ಸಹಾಯ ಮಾಡುತ್ತಾರೆ. ನೆರೆಹೊರೆಯವರು ಪರಸ್ಪರ ಈ ಬಗ್ಗೆ ತಿಳಿದಿದ್ದಾರೆ. ಯಾರಿಗಾದರೂ ಏನಾದರೂ ಅಗತ್ಯವಿದ್ದರೆ, ಸಹಾಯ ಮಾಡಲು ಸಿದ್ಧರಿರುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಒಂಟಿತನದಿಂದ ಬಳಲುತ್ತಿದ್ದಾರೆ. ಈ ಸಮುದಾಯದ ಪ್ರಜ್ಞೆಯನ್ನು ಕಳೆದುಕೊಳ್ಳುವುದು ಒಂದು ಕಾರಣ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಭಾರತೀಯ ಮನೆಗಳಲ್ಲಿ ಆಹಾರವು ಭಾವನಾತ್ಮಕ ಮತ್ತು ಸಾಮಾಜಿಕ ಮೌಲ್ಯವನ್ನು ಉಳಿಸಿಕೊಂಡಿದೆ. ಮನೆಯಲ್ಲಿ ಅಡುಗೆ ಮಾಡುವುದು. ಒಟ್ಟಿಗೆ ಕುಳಿತು ತಿನ್ನುವುದು ಸಾಮಾನ್ಯ. ಇದು ಎಲ್ಲವೂ ಅನುಕೂಲಕ್ಕಾಗಿ ಅಲ್ಲ. ಆಹಾರವನ್ನು ವೇಗವಾಗಿ ಸೇವಿಸುವುದನ್ನು ಒಳಗೊಂಡಿಲ್ಲ ಎಂದಿದ್ದಾರೆ.
ಭಾರತೀಯರು ಸ್ವಚ್ಛತೆಯನ್ನು ಗಂಭೀರವಾಗಿ ಪರಿಗಣಿಸುವುದನ್ನು ಗಮನಿಸಿದ್ದೇನೆ. ಸ್ನಾನ ಮಾಡುವುದು, ಬಟ್ಟೆ ಬದಲಾಯಿಸುವುದು, ನಿಮ್ಮನ್ನು ತಾಜಾವಾಗಿರಿಸಿಕೊಳ್ಳುವುದು. ಈ ಅಭ್ಯಾಸವನ್ನು ತುಂಬಾ ಹತ್ತಿರದಿಂದ ನಾನು ನೋಡಿದ್ದೇನೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ಅದು ತುಂಬಾ ಒಳ್ಳೆಯ ಅಭ್ಯಾಸ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿರುವುದನ್ನು ನೀವು ನೋಡಬಹುದು.
ಇನ್ನು ಹಬ್ಬಗಳು, ನೃತ್ಯ, ಹಾಡುಗಾರಿಕೆ, ಒಟ್ಟಿಗೆ ಆಚರಿಸುತ್ತಾರೆ. ಜೀವನವನ್ನು ಆನಂದಿಸಲು ಜನರಿಗೆ ವಿಶೇಷ ಕಾರಣ ಬೇಕಾಗಿಲ್ಲ. ಕೆಲವೊಮ್ಮೆ ಯುರೋಪಿನಲ್ಲಿ ನಾವು ತುಂಬಾ ಗಂಭೀರವಾಗಿರುತ್ತೇವೆ, ವಿಷಯಗಳನ್ನು ಸರಳವಾಗಿ ಆನಂದಿಸುವುದು ಹೇಗೆ ಎಂಬುದನ್ನು ನಾವು ಮರೆತುಬಿಡುತ್ತೇವೆ ಎಂದು ನನಗೆ ಅನಿಸುತ್ತದೆ. ಖಂಡಿತವಾಗಿ ಪ್ರತಿಯೊಂದು ದೇಶವೂ ಒಳ್ಳೆಯ ಮತ್ತು ಕೆಟ್ಟ ಅಂಶಗಳನ್ನು ಹೊಂದಿರುತ್ತದೆ. ಆದರೆ ಇವು ನಾನು ಭಾರತದಿಂದ ವೈಯಕ್ತಿಕವಾಗಿ ಕಲಿತ ಕೆಲವು ವಿಷಯಗಳು ಎಂದಿದ್ದಾರೆ.
ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಇದು ಭಾರತದ ಬಗ್ಗೆ ತುಂಬಾ ಸುಂದರವಾದ ಅವಲೋಕನ ಎಂದಿದ್ದಾರೆ. ಇನ್ನೊಬ್ಬರು, ಒಳ್ಳೆಯದದ್ದನ್ನು ಹುಡುಕುವ ಹಾಗೂ ಅಳವಡಿಸಿಕೊಳ್ಳುವ ನಿಮ್ಮ ಗುಣ ದೊಡ್ಡದು ಎಂದು ಹೊಗಳಿದ್ದಾರೆ. ಮತ್ತೊಬ್ಬರು, ಅತಿಥಿ ದೇವೋ ಭವ ನಿಜವಾಗಿಯೂ ಭಾರತೀಯ ಸಂಸ್ಕೃತಿಯ ಅತ್ಯುತ್ತಮ ಭಾಗಗಳಲ್ಲಿ ಒಂದು ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ದೇಶದ ಅತ್ಯುನ್ನತ ನೇಮಕಾತಿ ಸಂಸ್ಥೆಯಾದ ಕೇಂದ್ರ ಲೋಕಸೇವಾ ಆಯೋಗವು (UPSC) ವಿವಿಧ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 194 ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ವಿವಿಧ ಉನ್ನತ ಹುದ್ದೆಗಳಲ್ಲಿ ಜವಾಬ್ದಾರಿಯುತ ಭವಿಷ್ಯ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಅದ್ಭುತ ಅವಕಾಶವಾಗಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 12 ರ ಸಂಜೆ 6 ಗಂಟೆಯ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ವಿವಿಧ ಕ್ಷೇತ್ರಗಳ ತಜ್ಞರಿಗೆ ಮುಕ್ತ ಅವಕಾಶ:
ಈ ವಿಶೇಷ ನೇಮಕಾತಿ ಅಭಿಯಾನದ ಮೂಲಕ ತಾಂತ್ರಿಕ, ಎಂಜಿನಿಯರಿಂಗ್, ವೈಜ್ಞಾನಿಕ, ಬೋಧನೆ, ವಾಯುಯಾನ (Aviation), ಪುರಾತತ್ತ್ವ ಶಾಸ್ತ್ರ, ಹವಾಮಾನಶಾಸ್ತ್ರ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗಿದೆ. ಎಂಜಿನಿಯರಿಂಗ್, ವಿಜ್ಞಾನ, ವಾತಾವರಣ ಅಧ್ಯಯನ, ವಿವಿಧ ಭಾಷೆಗಳು, ಮೆಕ್ಯಾನಿಕಲ್, ಸಿವಿಲ್, ತೈಲ ತಂತ್ರಜ್ಞಾನ, ರಾಸಾಯನಿಕ ಎಂಜಿನಿಯರಿಂಗ್ ಮತ್ತು ವಾಯುಯಾನ ನಿರ್ವಹಣೆಯಲ್ಲಿ (Aviation Management) ಹಿನ್ನೆಲೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸ್ಪರ್ಧಿಸಬಹುದಾಗಿದೆ.
ಹುದ್ದೆಗಳಿಗೆ ತಕ್ಕಂತೆ ಶೈಕ್ಷಣಿಕ ಅರ್ಹತೆ:
ವಿವಿಧ ಇಲಾಖೆಗಳ ಹುದ್ದೆಗಳಾಗಿರುವುದರಿಂದ, ಎಂಜಿನಿಯರಿಂಗ್ ಪದವಿಯಿಂದ ಹಿಡಿದು ಸ್ನಾತಕೋತ್ತರ ಪದವಿ ಅಥವಾ ಪಿಎಚ್‌ಡಿ (PhD) ವರೆಗಿನ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲಿ ಅವಕಾಶವಿದೆ. ಬಿಎಸ್ಸಿ, ಬಿಟೆಕ್/ಬಿಇ, ಎಂಎ, ಎಂಎಸ್ಸಿ, ಎಂಇ/ಎಂಟೆಕ್ ಮತ್ತು ಪಿಜಿ ಡಿಪ್ಲೊಮಾ ಸೇರಿದಂತೆ ಪ್ರತಿಯೊಂದು ಹುದ್ದೆಗೂ ಇರಬೇಕಾದ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಗಳ ವಿವರವನ್ನು ಅಧಿಕೃತ ವೆಬ್‌ಸೈಟ್‌ನ ವಿವರವಾದ ಅಧಿಸೂಚನೆಯಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ. ಹಾಗಾಗಿ, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ತಮ್ಮ ಅರ್ಹತೆಯನ್ನು ಒಮ್ಮೆ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿದೆ.
ಲಿಖಿತ ಪರೀಕ್ಷೆ ಇಲ್ಲ, ಕೇವಲ ಸಂದರ್ಶನದ ಮೂಲಕ ಆಯ್ಕೆ:
ಈ ನೇಮಕಾತಿಯ ಅತ್ಯಂತ ಆಕರ್ಷಕ ಅಂಶವೆಂದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಬಂದಿರುವ ಅರ್ಜಿಗಳಲ್ಲಿ ಅಭ್ಯರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಪ್ರೊಫೈಲ್‌ನ ಬಲವನ್ನು ಆಧರಿಸಿ ಮೊದಲು ಶಾರ್ಟ್‌ಲಿಸ್ಟ್ (ಕಿರುಪಟ್ಟಿ) ಮಾಡಲಾಗುತ್ತದೆ. ತದನಂತರ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ಈ ಆಯ್ಕೆ ಪ್ರಕ್ರಿಯೆಯು ಕೇವಲ ಪರೀಕ್ಷೆಯ ಅಂಕಗಳಿಗಿಂತ ಹೆಚ್ಚಾಗಿ ಅಭ್ಯರ್ಥಿಯ ವಿಷಯದ ಪರಿಣತಿ (Subject Expertise) ಮತ್ತು ಸಂವಹನ ಕೌಶಲ್ಯಕ್ಕೆ (Communication Skills) ಹೆಚ್ಚಿನ ಆದ್ಯತೆ ನೀಡುತ್ತದೆ.
ಇಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ನಿಯಮಾವಳಿಗಳ ಪ್ರಕಾರ ಅತ್ಯುತ್ತಮ ವೇತನ ಶ್ರೇಣಿ ಸಿಗಲಿದೆ. ಆರಂಭಿಕವಾಗಿ ‘ಪೇ ಲೆವೆಲ್-10’ (Level 10) ರಂತೆ ಮೂಲ ವೇತನ ದೊರೆಯಲಿದ್ದು, ಇದರೊಂದಿಗೆ ನಿಯಮಾನುಸಾರ ತುಟ್ಟಿ ಭತ್ಯೆ (DA), ಮನೆ ಬಾಡಿಗೆ ಭತ್ಯೆ (HRA) ಮತ್ತು ಸಾರಿಗೆ ಭತ್ಯೆಗಳನ್ನು ಒಳಗೊಂಡಂತೆ ಇತರೆ ಸೌಲಭ್ಯಗಳೂ ಸಿಗಲಿವೆ. ಇನ್ನು ಗ್ರೂಪ್ ‘ಎ’ ಹಿರಿಯ ಹುದ್ದೆಗಳಿಗೆ, ಅವರ ನಿರ್ದಿಷ್ಟ ದರ್ಜೆ ಮತ್ತು ಇಲಾಖೆಯನ್ನು ಅವಲಂಬಿಸಿ ವೇತನದ ಮಟ್ಟ ಇನ್ನೂ ಹೆಚ್ಚಿರಲಿದೆ.
ಅರ್ಜಿ ಸಲ್ಲಿಸುವ ವಿಧಾನ ಮತ್ತು ಶುಲ್ಕದ ವಿವರ:
ಈ ನೇಮಕಾತಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಯುಪಿಎಸ್‌ಸಿಯ ಆನ್‌ಲೈನ್ ನೇಮಕಾತಿ ಅರ್ಜಿ (ORA) ಪೋರ್ಟಲ್ ಆದ upsconline.nic.in/ora ಮೂಲಕವೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕೇವಲ 25ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆದರೆ, ಮಹಿಳಾ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ (PwBD) ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ, ಇವರಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದ ಬಾಲಿವುಡ್ ನಟ ವರುಣ್ ಧವನ್ ಅಭಿನಯದ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ (Hai Jawani Toh Ishq Hona Hai) ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಿರ್ದೇಶಕ ಡೇವಿಡ್ ಧವನ್ ನಿರ್ದೇಶನದ ಈ ಸಿನಿಮಾ ಪ್ರೇಕ್ಷಕರಿಗೆ ನಗುವಿನ ಔತಣ ಉಣಬಡಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ ಸಾಬೀತುಪಡಿಸಿದೆ. ವರುಣ್ ಧವನ್ (Varun Dhawan) ಜೊತೆ ಈ ಸಿನಿಮಾದಲ್ಲಿ ಮೃಣಾಲ್ ಠಾಕೂರ್ ಮತ್ತು ಪೂಜಾ ಹೆಗ್ಡೆ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.
3 ನಿಮಿಷ 15 ಸೆಕೆಂಡ್ ಅವಧಿ ಇರುವ ಈ ಟ್ರೇಲರ್‌ನಲ್ಲಿ ವರುಣ್ ಧವನ್ ಪಾತ್ರವು ಇಬ್ಬರು ನಾಯಕಿಯರ ನಡುವೆ ಸಿಲುಕಿ ಹೇಗೆ ತೊಂದರೆ ಅನುಭವಿಸುತ್ತದೆ ಎಂಬುದನ್ನು ಮಜವಾಗಿ ತೋರಿಸಲಾಗಿದೆ. ಚಿತ್ರದಲ್ಲಿ ವರುಣ್ ಧವನ್ ಮುಗ್ಧ ಮತ್ತು ರೊಮ್ಯಾಂಟಿಕ್ ಪ್ರೇಮಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ, ಅವರಿಗೆ ಜೋಡಿಯಾಗಿ ಮೃಣಾಲ್ ಠಾಕೂರ್ ಮತ್ತು ಪೂಜಾ ಹೆಗ್ಡೆ ನಟಿಸಿದ್ದಾರೆ. ಇಬ್ಬರು ಸುಂದರಿಯರಿಂದ ಗ್ಲಾಮರ್ ಹೆಚ್ಚಿದೆ.
‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಟ್ರೇಲರ್:
ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ನೆಟ್ಟಿಗರು ಕಮೆಂಟ್‌ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ‘ಟ್ರೇಲರ್ ನೋಡಿದರೆ ಹಳೇ ಐಕಾನಿಕ್ ಕಾಮಿಡಿ ಸಿನಿಮಾಗಳು ನೆನಪಾಗುತ್ತದೆ. ಆದರೂ ನನ್ನ ನಿರೀಕ್ಷೆಗಿಂತ ತುಂಬಾ ಚೆನ್ನಾಗಿದೆ. ಮೇ ತೇರಾ ಹೀರೋ ಚಿತ್ರದ ನಂತರ ಡೇವಿಡ್ ಮತ್ತು ವರುಣ್ ಧವನ್ ಕಾಂಬಿನೇಷನ್‌ನ ಬೆಸ್ಟ್ ಸಿನಿಮಾ ಇದಾಗಲಿದೆ’ ಎಂದು ಸಿನಿಪ್ರೇಮಿಯೊಬ್ಬರು ಬರೆದುಕೊಂಡಿದ್ದಾರೆ.
‘ವರುಣ್ ಧವನ್ ಮತ್ತೆ ತಮ್ಮ ಹಳೆಯ ಕಾಮಿಡಿ ಅವತಾರಕ್ಕೆ ಮರಳಿದ್ದಾರೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಗೆ ಪಕ್ಕಾ ಎಂಟರ್‌ಟೈನ್‌ಮೆಂಟ್ ಸಿಗುವುದು ಗ್ಯಾರಂಟಿ’ ಎಂಬ ಕಮೆಂಟ್ ಕೂಡ ಬಂದಿದೆ. ‘ಕಾಮಿಡಿ ಮತ್ತು ರೊಮ್ಯಾನ್ಸ್ ಸಿನಿಮಾದ ಕಿಂಗ್ ಡೇವಿಡ್ ಧವನ್ ಈಗ ಕಮ್ಬ್ಯಾಕ್ ಮಾಡಿದ್ದಾರೆ. ವರುಣ್, ಮೃಣಾಲ್ ಮತ್ತು ಪೂಜಾ ಹೆಗ್ಡೆ ಮಸ್ತ್ ಮನರಂಜನೆ ನೀಡುವುದು ಗ್ಯಾರಂಟಿ’ ಎಂಬ ಹೊಗಳಿಕೆ ಕೂಡ ಸಿಕ್ಕಿದೆ.
ಈ ಕಾಮಿಡಿ ಚಿತ್ರದ ಮೂಲಕ ಡೇವಿಡ್ ಧವನ್ ಮತ್ತು ವರುಣ್ ಧವನ್ ಅವರ ಕಾಂಬಿನೇಷನ್ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದೆ. ಚಿತ್ರದಲ್ಲಿ ಮನೀಶ್ ಪೌಲ್, ಚಂಕಿ ಪಾಂಡೆ, ಜಿಮ್ಮಿ ಶೇರ್ಗಿಲ್, ಮೌನಿ ರಾಯ್, ಅಲಿ ಅಸ್ಗರ್ ಮತ್ತು ರಾಕೇಶ್ ಬೇಡಿ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈಗಾಗಲೇ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಚಿತ್ರವು ಜೂನ್ 5ರಂದು ರಿಲೀಸ್ ಆಗಲಿದೆ.