Headlines

ಹಾರ್ದಿಕ್ ಪಾಂಡ್ಯ ರಿಎಂಟ್ರಿಗೆ ಒಪ್ಪಿಗೆ, ಷರತ್ತಿಗೆ ನೋ ಎಂದ ಗುಜರಾತ್ ಟೈಟಾನ್ಸ್! – Kannada News | Hardik Pandya’s GT Return Spoiled by Captaincy Demand

ಐಪಿಎಲ್ 2027ರ ಮೆಗಾ ಹರಾಜಿಗೂ ಮುನ್ನ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ‘ಗುಜರಾತ್ ಟೈಟಾನ್ಸ್’ (GT) ವಾಪಸಾತಿ ಆಸೆ ಸದ್ಯಕ್ಕೆ ಕಮರಿಹೋಗಿದೆ. ಹಾರ್ದಿಕ್ ಪಾಂಡ್ಯ ವಿಧಿಸಿದ ಕಠಿಣ ಷರತ್ತೊಂದಕ್ಕೆ ಗುಜರಾತ್ ಫ್ರಾಂಚೈಸಿ ಒಪ್ಪಿಗೆ ನೀಡದ ಕಾರಣ, ಈ ಬಹುದೊಡ್ಡ ಟ್ರೇಡಿಂಗ್ ಡೀಲ್ ಮುರಿದುಬಿದ್ದಿದೆ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ಐಪಿಎಲ್ 2022 ಮತ್ತು 2023ರ ಎರಡು ಸೀಸನ್‌ಗಳಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ನಾಯಕನಾಗಿ ಆಡಿದ್ದರು. 2024ರಲ್ಲಿ…

Read More

ಕೋಲ್ಕತ್ತಾ-ಚೆನ್ನೈ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ರನ್‌ವೇ 25ರಲ್ಲಿ ತುರ್ತು ಭೂಸ್ಪರ್ಶ – Kannada News | Chennai Airport Emergency: IndiGo 6E 723 Engine Failure, Pilot Safely Lands 224 Pax

ಚೆನ್ನೈ, ಆ.12: ಕೋಲ್ಕತ್ತಾದಿಂದ ಚೆನ್ನೈಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನವೊಂದರ ಎಡಭಾಗದ ಎಂಜಿನ್ ದಿಢೀರ್ ವಿಫಲಗೊಂಡ ಕಾರಣ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಆತಂಕ ಎದುರಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅಧಿಕಾರಿಗಳು ತಕ್ಷಣವೇ ‘ಫುಲ್ ಎಮರ್ಜೆನ್ಸಿ’ (Full Emergency) ಘೋಷಿಸಿದ್ದು, ಪೈಲಟ್ ಸಮಯಪ್ರಜ್ಞೆಯಿಂದ 224 ಪ್ರಯಾಣಿಕರಿದ್ದ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಕೋಲ್ಕತ್ತಾದಿಂದ ಚೆನ್ನೈಗೆ ಹೊರಟಿದ್ದ ಇಂಡಿಗೋ 6E-723 ವಿಮಾನದಲ್ಲಿ ಈ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ನಿಯಮಿತ ವೇಳಾಪಟ್ಟಿಯಂತೆ ರಾತ್ರಿ 11:30ಕ್ಕೆ ತಲುಪಬೇಕಿದ್ದ ವಿಮಾನ, ಲ್ಯಾಂಡಿಂಗ್‌ಗೆ ಸಿದ್ಧವಾಗುತ್ತಿದ್ದಾಗ…

Read More

ರಾಜ್ಯದಲ್ಲಿ ಹೆಚ್ಚುತ್ತಿರುವ ಗಾಂಜಾ ದಂಧೆ: ಬೆಳಗಾವಿ, ಆನೇಕಲ್ ಹಾಗೂ ನಂಜನಗೂಡಿನಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲು – Kannada News | Karnataka Drug Crackdown: Ganja Chocolates in Belagavi and 10kg Seized in Anekal

ರಾಜ್ಯದಲ್ಲಿ ಹೆಚ್ಚುತ್ತಿರುವ ಗಾಂಜಾ ದಂಧೆ ಬೆಂಗಳೂರು, ಆಗಸ್ಟ್ 12: ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವ ಸಮೂಹವನ್ನು ಟಾರ್ಗೆಟ್ ಮಾಡಿ ನಡೆಸುತ್ತಿದ್ದ ಗಾಂಜಾ ಜಾಲದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಇತ್ತೀಚೆಗೆ ಬೆಳಗಾವಿ, ಬೆಂಗಳೂರು ಗ್ರಾಮಾಂತರದ ಆನೇಕಲ್ ಹಾಗೂ ಮೈಸೂರಿನ ನಂಜನಗೂಡಿನಲ್ಲಿ ಗಾಂಜಾಗೆ ಸಂಬಂಧಿಸಿದ ಪ್ರಮುಖ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಳಗಾವಿಯಲ್ಲಿ ಚಾಕಲೇಟ್ ಹೆಸರಿನಲ್ಲಿ ಗಾಂಜಾ ದಂಧೆ ಬೆಳಗಾವಿ ನಗರದ ಉದ್ಯಮಬಾಗದಲ್ಲಿರುವ ಖಾಸಗಿ ಕಾಲೇಜು ಎದುರು ಸಿಹಿ…

Read More

Video: ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ – Kannada News | President’s Independence Day Invite: Celebrating India’s Folk Art and Cultural Diversity

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಗೌರವಾನ್ವಿತ ರಾಷ್ಟ್ರಪತಿಯವರಿಂದ ಗಣ್ಯ ಅತಿಥಿಗಳಿಗೆ ಕಳುಹಿಸಲಾಗಿರುವ ಆಹ್ವಾನ ಪತ್ರಿಕೆಯು ಭಾರತದ ಶ್ರೀಮಂತ ಸಾಂಸ್ಕೃತಿಕ ಮತ್ತು ಕಲಾತ್ಮಕ ವೈವಿಧ್ಯತೆಯನ್ನು ಅನಾವರಣಗೊಳಿಸಿದೆ. ಈ ವರ್ಷದ ಆಹ್ವಾನ ಪತ್ರಿಕೆಯ ವಿನ್ಯಾಸವು ಸಮುದಾಯ, ಸೃಜನಶೀಲತೆ ಮತ್ತು ಸಂರಕ್ಷಣೆ ನಡುವಿನ ಪರಸ್ಪರ ಅವಲಂಬನೆಯನ್ನು ಪ್ರತಿಬಿಂಬಿಸುವಂತಿದ್ದು, ಭಾರತದ ವಿವಿಧ ಪ್ರದೇಶಗಳ ವಿಶಿಷ್ಟ ಕಲಾ ಪರಂಪರೆಗಳಿಗೆ ವಿಶೇಷ ಸ್ಥಾನ ನೀಡಲಾಗಿದೆ. ವಿಶೇಷವಾಗಿ ಛತ್ತೀಸ್‌ಗಢ, ಗೋವಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಜೀವಂತ, ವರ್ಣರಂಜಿತ ಹಾಗೂ ವೈವಿಧ್ಯಮಯ ಜನಪದ ಕಲಾ ಪರಂಪರೆಗಳಿಂದ ಈ ವರ್ಷದ…

Read More

ಟ್ಯಾಂಕರ್ -ಆಟೋ ರಿಕ್ಷಾ ಡಿಕ್ಕಿ: ಐವರು ಮಹಿಳೆಯರು ಸೇರಿ ಕರ್ನಾಟಕದ 6 ಮಂದಿ ಸಾವು, 6 ಮಂದಿಗೆ ಗಂಭೀರ ಗಾಯ – Kannada News | Tragic Accident in Telangana’s Sangareddy: Tanker Collides with Auto Rickshaw; 6 Killed, 6 Injured from Karnataka’s Bidar

ಸಂಗಾರೆಡ್ಡಿ (ತೆಲಂಗಾಣ), ಆಗಸ್ಟ್​​ 12: ವೇಗವಾಗಿ ಬಂದ ಟ್ಯಾಂಕರ್​​ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಮಂಡಲದ ಸತ್ವಾರ್ ಗ್ರಾಮದ ಸಮೀಪ ನಡೆದಿದೆ. ಆಟೋ ರಿಕ್ಷಾ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಸಂದರ್ಭದಲ್ಲಿ ಆಟೋದಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು. ಮೃತರು ಹಾಗೂ ಗಾಯಾಳುಗಳು ಕರ್ನಾಟಕದ ಬೀದರ್ ಜಿಲ್ಲೆಯ ರಾಜಗೀರಾ ಗ್ರಾಮದ…

Read More

TV9 Kannada News Live: ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ; ಅಸಿಸ್ಟೆಂಟ್ ಸೂಪರಿಂಡೆಂಟ್ ಸಸ್ಪೆಂಡ್ ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 12 August 2026 Karnataka Bandh, Cabinet Portfolio, Assembly Session Politics Cinema Latest Updates Online

12 Aug 2026 10:59 AM (IST) ಚಾಕಲೇಟ್ ಹೆಸರಿನಲ್ಲಿ ಗಾಂಜಾ ದಂಧೆ, ಯುಪಿ ಮೂಲದ ಆರೋಪಿ ಬಂಧನ ಬೆಳಗಾವಿ ನಗರದ ಉದ್ಯಮಬಾಗದಲ್ಲಿ ಖಾಸಗಿ ಕಾಲೇಜು ಎದುರು ಸಿಹಿ ಚಾಕಲೇಟ್‌ನಲ್ಲಿ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಭೋಲು ಪ್ರಜಾಪತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 5 ಗ್ರಾಂ ಗಾಂಜಾ ಮಿಶ್ರಿತ ಚಾಕಲೇಟ್‌ಗೆ ರೂ. 50ರಂತೆ ಮಾರಲಾಗುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 7 ಕೆಜಿ ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್‌ಗಳು,…

Read More

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್: ಯಾರಿಗೆ ಯಾವ ಇಲಾಖೆಯ ಜವಾಬ್ದಾರಿ? – Kannada News | Karnataka Cabinet Portfolios Allocated: DK Shivakumar Assigns Departments to New Ministers Ahead of Monsoon Session

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು, ಆಗಸ್ಟ್​​ 12: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಆಗಸ್ಟ್​​ 03ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಭಾರಿ ಅಸಮಾಧಾನ ಭುಗೆಲದ್ದಿದ್ದ ಹಿನ್ನೆಲೆ ಕಾಂಗ್ರೆಸ್​​ ಹೈಕಮಾಂಡ್​​, ಅಳೆದು ತೂಗಿ ನೂತನ ಸಚಿವರಿಗೆ ಜವಾಬ್ದಾರಿ ನೀಡಿದೆ. ನಾಳೆಯಿಂದ ಆಗಸ್ಟ್ 27ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ ನಿಗದಿಯಾಗಿದ್ದರೂ ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯದರೋದು ವಿಪಕ್ಷಗಳ ತೀವ್ರ…

Read More

International Youth Day 2026: ಜೀವನವನ್ನು ಹಾಳು ಮಾಡುವ ಈ ಅಭ್ಯಾಸಗಳಿಂದ ಯುವಕರು ದೂರವಿದ್ದಷ್ಟು ಒಳ್ಳೆಯದು – Kannada News | International Youth Day 2026: To be successful in life, youth should avoid these habits

ಅಂತಾರಾಷ್ಟ್ರೀಯ ಯುವ ದಿನImage Credit source: Getty Images ಯುವಶಕ್ತಿ ದೇಶದ ಶಕ್ತಿ. ಹೌದು ಯುವ ಜನತೆಯ (Youth) ಸಾಮಾಜಿಕ, ಆರ್ಥಿಕ, ರಾಜಕೀಯ, ತಾಂತ್ರಿಕ ಜ್ಞಾನವನ್ನು ಬೆಳೆಸಿಕೊಳ್ಳುವುದರಿಂದ ದೇಶ ಪ್ರಗತಿಯತ್ತ ಸಾಗುತ್ತದೆ. ಜೊತೆಗೆ ಯುವಕ ಭವಿಷ್ಯವೂ ಉಜ್ವಲವಾಗಿರುತ್ತದೆ. ಹಾಗಾಗಿ ಸಮಾಜವು ಸುಸ್ಥಿರ ಅಭಿವೃದ್ಧಿಯತ್ತ ಸಾಗಲು ಯುವಕರ ಪಾತ್ರ ಎಷ್ಟು ಮುಖ್ಯ ಎಂದು ಸಾರಲು, ಸಾಮಾಜಿಕ, ಆರ್ಥಿಕ, ರಾಜಕೀಯ  ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು  ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ. ಅಂತಾರಾಷ್ಟ್ರೀಯ ಯುವ ದಿನದ ಈ…

Read More

Nag Panchami 2026: ಆಗಸ್ಟ್ 17 ನಾಗರ ಪಂಚಮಿ; ಈ ದಿನ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ – Kannada News | Nag Panchami 2026: Rituals, Significance and Kaalsarpa Dosha Remedies for Blessings

ಹಿಂದೂ ಧರ್ಮದಲ್ಲಿ ಪ್ರಕೃತಿ ಮತ್ತು ಜೀವರಾಶಿಗಳನ್ನು ದೇವರೆಂದು ಪೂಜಿಸುವ ಶ್ರೇಷ್ಠ ಸಂಪ್ರದಾಯವಿದೆ. ಅದರಲ್ಲಿಯೂ ಶ್ರಾವಣ ಮಾಸದಲ್ಲಿ ಬರುವ ನಾಗ ಪಂಚಮಿ ಹಬ್ಬವು ಸರ್ಪ ದೇವರಿಗೆ ಅರ್ಪಿತವಾದ ಅತ್ಯಂತ ಪವಿತ್ರವಾದ ದಿನವಾಗಿದೆ. ವೈದಿಕ ಪಂಚಾಂಗದ ಪ್ರಕಾರ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ಈ ಹಬ್ಬವನ್ನು ದೇಶಾದ್ಯಂತ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತದೆ. ಈ ದಿನದಂದು ನಾಗ ದೇವತೆಯನ್ನು ಪೂಜಿಸುವುದರಿಂದ ಶಿವ ಮತ್ತು ವಿಷ್ಣುವಿನ ಕೃಪೆ ಲಭಿಸುವುದಲ್ಲದೆ, ಜಾತಕದಲ್ಲಿರುವ ಪ್ರಮುಖ ದೋಷಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆಯಿದೆ. ನಾಗ ಪಂಚಮಿ…

Read More

Independence Day 2026: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಇತಿಹಾಸ ಮತ್ತು ಮಹತ್ವ – Kannada News | Indian Independence Day; Know About Date, Importance and History of Freedom Struggle in Kannada

ಸ್ವಾತಂತ್ರ್ಯ ದಿನಾಚರಣೆImage Credit source: PTI ಭಾರತವು ಪ್ರತಿ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ(Independence Day)ಯನ್ನು ಆಚರಿಸುತ್ತದೆ. 1947ರ ಆಗಸ್ಟ್ 15ರಂದು ಸುಮಾರು ಎರಡು ಶತಮಾನಗಳ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದು ಸಾರ್ವಭೌಮ ರಾಷ್ಟ್ರವಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ಹೋರಾಟಗಾರರ ತ್ಯಾಗ ಮತ್ತು ಹೋರಾಟವನ್ನು ಸ್ಮರಿಸುವ ಈ ದಿನಂದು ದೇಶಾದ್ಯಂತ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ದೇಶಭಕ್ತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಮಂತ್ರಿ ರಾಷ್ಟ್ರಧ್ವಜ ಹಾರಿಸಿ,…

Read More