IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ: ಗುಂಡಿ, ಟ್ರಾಫಿಕ್ ನಿಂದ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್

ಬೆಂಗಳೂರು, (ಮೇ 24): ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು….ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ಆರು ವಿದ್ಯಾರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ.

ಇದನ್ನೂ ಓದಿ: ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು?

Source link

MI vs RR IPL 2026 Live Score: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ – Kannada News | IPL, IPL 2026, Mumbai Indians vs Rajasthan Royals score updates, Mumbai Indians vs Rajasthan Royals score, Mumbai Indians vs Rajasthan Royals score now, Mumbai Indians vs Rajasthan Royals today, IPL score today, IPL score now, live cricket score, cricket score online, today match score

ಐಪಿಎಲ್ 2026 ಈಗ ಅಂತಿಮ ಹಂತವನ್ನು ತಲುಪುತ್ತಿದೆ. ಲೀಗ್ ಹಂತವು ಮೇ 24 ರ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಈ ಸುತ್ತಿನ ಕೊನೆಯ ಎರಡು ಪಂದ್ಯಗಳು ಡಬಲ್ ಹೆಡರ್‌ಗಳಾಗಿ ನಡೆಯಲಿವೆ. ದಿನದ ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ. ಮುಂಬೈ ತಂಡವು ಕಳೆದುಕೊಳ್ಳಲು ಏನೂ ಇಲ್ಲ, ಆದರೆ ರಾಜಸ್ಥಾನವು ಗೆಲುವಿನೊಂದಿಗೆ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಳ್ಳವ ಇರಾದೆಯಲ್ಲಿದೆ.

Source link

‘ಜನ ನಾಯಗನ್’ ಸಿನಿಮಾ ಬಿಡುಗಡೆ ಯಾವಾಗ: ಅಪ್​​ಡೇಟ್ ಹಂಚಿಕೊಂಡ ನಿರ್ಮಾಪಕ – Kannada News | Jana Nayagan movie producer Venkat K Narayan talks about movie’s release

ನಟ ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಯನ್ನು ರಾಜಕೀಯ ಪ್ರಭಾವ ಬಳಸಿ ತಡೆ ಹಿಡಿಯಲಾಗಿತ್ತು. ಆದರೆ ಈಗ ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿದ್ದಾರೆ. ‘ಜನ ನಾಯಗನ್’ ಸಿನಿಮಾ ಈಗ ಯಾವುದೇ ಅಡೆ-ತಡೆ ಇಲ್ಲದೆ ಬಿಡುಗಡೆ ಆಗಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಅಧಿಕೃತ ಸುದ್ದಿಗಳು ಹೊರಬಿದ್ದಿರಲಿಲ್ಲ. ಇದೀಗ ಸಿನಿಮಾದ ನಿರ್ಮಾಪಕ ಕೆವಿಎನ್ ಪ್ರೊಡಕ್ಷನ್​​ನ ಮಾಲೀಕ ವೆಂಕಟ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ‘ಜನ ನಾಯಗನ್’ ಸಿನಿಮಾದ ಸೆನ್ಸಾರ್ ಪ್ರಮಾಣ ಪತ್ರ ಮತ್ತು ಸಿನಿಮಾದ ಬಿಡುಗಡೆ ಕುರಿತಾಗಿ ಮಾತನಾಡಿದ್ದಾರೆ. ಸಿನಿಮಾ ಬಿಡುಗಡೆ ಬಗ್ಗೆ ಪ್ರಮುಖ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

ತಿರುಚೆಂದೂರಿನ ಅರುಲ್ಮಿಗು ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಿರ್ಮಾಪಕ ವೆಂಕಟ್ ಅವರು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮಾಧ್ಯಮಗಳೊಟ್ಟಿಗೆ ಮಾತನಾಡಿ ಚಿತ್ರದ ಬಿಡುಗಡೆಯ ಕುರಿತು ಮಾತನಾಡಿದರು. ‘ನಾನು ಇಲ್ಲಿಗೆ ಶಾಂತಿ ಮತ್ತು ದೇವರ ಆಶೀರ್ವಾದ ಪಡೆಯಲು ಬಂದಿದ್ದೇನೆ. ‘ಜನ ನಾಯಗನ್’ ಚಿತ್ರಕ್ಕೆ ಇನ್ನೂ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ, ಆದರೆ ಅದು ಯಾವುದೇ ಕ್ಷಣದಲ್ಲಾದರೂ ಸಿಗಬಹುದು. ಸೆನ್ಸಾರ್ ಪ್ರಮಾಣಪತ್ರ ಕೈ ಸೇರಿದ ತಕ್ಷಣ, ನಾವು ಅಧಿಕೃತವಾಗಿ ಬಿಡುಗಡೆ ದಿನಾಂಕವನ್ನು ಪ್ರಕಟಿಸುತ್ತೇವೆ. ಇದು ಶೀಘ್ರದಲ್ಲೇ ನಡೆಯಲಿದೆ’ ಎಂದು ತಿಳಿಸಿದ್ದಾರೆ. ಇದೇ ವೇಳೆ ವಿಜಯ್ ಅವರು ಮುಖ್ಯಮಂತ್ರಿಯಾಗಿರುವುದಕ್ಕೆ ತಮ್ಮ ಸಂತೋಷವನ್ನು ಹಂಚಿಕೊಂಡ ಅವರು, ಚಿತ್ರದ ಸುತ್ತಲಿನ ವಿವಾದಗಳಿಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಮಾತನಾಡಲು ನಿರಾಕರಿಸಿದರು.

ವಿಜಯ್ ಅವರು ರಾಜಕೀಯಕ್ಕೆ ಪ್ರವೇಶಿಸಿದ ನಂತರ, ಸಿನಿಮಾ ರಂಗದಿಂದ ದೂರ ಸರಿಯುವ ಮುನ್ನ ‘ಜನ ನಾಯಕನ್’ ತಮ್ಮ ಕೊನೆಯ ಚಿತ್ರವಾಗಲಿದೆ ಎಂದು ಘೋಷಿಸಿದ್ದರು. ಆ ಭಾವನಾತ್ಮಕ ಕಾರಣದಿಂದಾಗಿ, ಅಭಿಮಾನಿಗಳು ಈ ಚಿತ್ರಕ್ಕೆ ಸಂಬಂಧಿಸಿದ ಪ್ರತಿಯೊಂದು ಅಪ್‌ಡೇಟ್‌ ಅನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಚಿತ್ರತಂಡವು ಈ ಚಿತ್ರವನ್ನು ಜನವರಿಯಲ್ಲಿ ಬಿಡುಗಡೆ ಮಾಡಲು ಯೋಜಿಸಿತ್ತು ಮತ್ತು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿತ್ತು ಎನ್ನಲಾಗಿದೆ. ಆದರೆ, ಸೆನ್ಸಾರ್ ಮಂಡಳಿಯು ಪ್ರಮಾಣಪತ್ರ ನೀಡದ ಕಾರಣ, ನಿರ್ಮಾಣ ಸಂಸ್ಥೆಯು ನ್ಯಾಯಾಲಯದ ಮೊರೆ ಹೋಗಬೇಕಾಯಿತು. ಕಾನೂನು ಹೋರಾಟದ ನಂತರವೂ ಯಾವುದೇ ಸಕಾರಾತ್ಮಕ ಫಲಿತಾಂಶ ಸಿಗಲಿಲ್ಲ. ಈ ವಿಳಂಬದಿಂದಾಗಿ, ಸಿನಿಮಾ ಚಿತ್ರಮಂದಿರಗಳಲ್ಲಿ ಎಂದಿಗೂ ಬಿಡುಗಡೆಯಾಗದೇ ಇರಬಹುದು ಎಂದು ಅನೇಕ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:‘ಟಾಕ್ಸಿಕ್ ಸಿನಿಮಾದ ಮಹಿಳಾ ಪಾತ್ರಗಳು ಸಖತ್ ಬೋಲ್ಡ್’: ಕೌತುಕ ಹೆಚ್ಚಿಸಿದ ಯಶ್

ಕೆಲವು ತಿಂಗಳುಗಳ ಹಿಂದೆ ಇಡೀ ಸಿನಿಮಾ ಆನ್‌ಲೈನ್‌ನಲ್ಲಿ ಸೋರಿಕೆಯಾಯ್ತು. ಚಿತ್ರಕ್ಕೆ ಇನ್ನೂ ಸೆನ್ಸಾರ್ ಮಂಡಳಿಯ ಅನುಮತಿಯೇ ಸಿಗದ ಹಂತದಲ್ಲಿ ಈ ಘಟನೆ ನಡೆದಿದ್ದು, ಅಭಿಮಾನಿಗಳಿಗೆ ಮತ್ತು ಚಿತ್ರರಂಗಕ್ಕೆ ದೊಡ್ಡ ಆಘಾತವನ್ನು ಉಂಟುಮಾಡಿತ್ತು. ಈ ಸೋರಿಕೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದೆ. ಇತ್ತೀಚೆಗೆ ತಾನೆ ಅವರಿಗೆ ಜಾಮೀನನ್ನು ಸಹ ನ್ಯಾಯಾಲಯ ತಿರಸ್ಕರಿಸಿದೆ. ‘ಜನ ನಾಯಗನ್’ ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದರೆ, ಬಾಬಿ ಡಿಯೋಲ್ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟಿ ಮಮಿತಾ ಬೈಜು ಕೂಡ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ವರದಿಗಳ ಪ್ರಕಾರ, ಸಿನಿಮಾದ ಟೈಟಲ್ ಕಾರ್ಡ್‌ನಲ್ಲಿ ‘ಮುಖ್ಯಮಂತ್ರಿ’ ವಿಜಯ್ ಎಂಬ ಪದವನ್ನು ಬಳಸಲು ಚಿತ್ರತಂಡ ಯೋಜಿಸಿದೆಯಂತೆ ಆದರೆ ಅದನ್ನು ವಿರೋಧಿಸಿರುವ ಸಿಎಂ ವಿಜಯ್, ‘ಮುಖ್ಯಮಂತ್ರಿ’ ಬದಲಾಗಿ ಈ ಹಿಂದಿನಂತೆ ‘ದಳಪತಿ’ ಎಂಬ ಬಿರುದನ್ನೇ ಮುಂದುವರಿಸುವಂತೆ ವಿಜಯ್ ಚಿತ್ರತಂಡಕ್ಕೆ ವಿನಂತಿಸಿದ್ದಾರೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕದ ವೀಸಾ ಸಮಸ್ಯೆ ಬಗ್ಗೆ ಸಚಿವ ಜೈಶಂಕರ್ ಕಳವಳ; ಭಾರತವನ್ನು ಟಾರ್ಗೆಟ್ ಮಾಡಿಲ್ಲ ಎಂದ ರೂಬಿಯೊ – Kannada News | Minister S Jaishankar Points US visa troubles in Joint Press Conference Marco Rubio says not targeted at India

ನವದೆಹಲಿ, ಮೇ 24: ಭಾರತಕ್ಕೆ 4 ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ (Marco Rubio) ಅವರು ಇಂದು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ (S Jaishankar) ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮಟ್ಟದ ಮಾತುಕತೆ ನಡೆಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸುಂಕದ ನೀತಿಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಭಾರತ ಮತ್ತು ಅಮೆರಿಕ ನಡುವೆ ಉಂಟಾಗಿದ್ದ ರಾಜತಾಂತ್ರಿಕ ಹಾಗೂ ವ್ಯಾಪಾರ ಉದ್ವಿಗ್ನತೆಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಈ ಭೇಟಿ ಅತ್ಯಂತ ಮಹತ್ವದ್ದಾಗಿದೆ.

ನವದೆಹಲಿಯಲ್ಲಿ ಇಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಜೊತೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ಎಸ್. ಜೈಶಂಕರ್ ಅಮೆರಿಕದ ವೀಸಾ ಪಡೆಯುವಲ್ಲಿ ಭಾರತೀಯ ಪ್ರಯಾಣಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಕ್ರಮ ವಲಸೆಯ ವಿರುದ್ಧ ಕ್ರಮ ಕೈಗೊಳ್ಳುವುದರಿಂದ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ತೊಂದರೆ ಅನುಭವಿಸಬಾರದು ಎಂದು ಭಾರತ ನಿರೀಕ್ಷಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ

ವೀಸಾ ಪ್ರಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಎರಡೂ ದೇಶಗಳ ನಡುವಿನ ವ್ಯವಹಾರ, ತಂತ್ರಜ್ಞಾನ ಮತ್ತು ಸಂಶೋಧನಾ ಸಹಕಾರದ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಅಕ್ರಮ ಮತ್ತು ಅನಿಯಮಿತ ವಲಸೆಯನ್ನು ನಿಭಾಯಿಸುವಲ್ಲಿ ಭಾರತ ಅಮೆರಿಕದೊಂದಿಗೆ ಸಹಕರಿಸುವುದನ್ನು ಮುಂದುವರೆಸಿದೆ. ಆದರೆ, ನಿಜವಾದ ಪ್ರಯಾಣಿಕರು ಅನಗತ್ಯ ಅಡೆತಡೆಗಳನ್ನು ಎದುರಿಸಬಾರದು ಎಂದು ಸಚಿವ ಜೈಶಂಕರ್ ಒತ್ತಿ ಹೇಳಿದರು.

ವೀಸಾ ವಿಳಂಬ ಮತ್ತು ಕಠಿಣ ಕಾರ್ಯವಿಧಾನಗಳ ಬಗ್ಗೆ ಅನೇಕ ಭಾರತೀಯ ವಿದ್ಯಾರ್ಥಿಗಳು, ವೃತ್ತಿಪರರು ಮತ್ತು ಪ್ರಯಾಣಿಕರು ಕಳವಳ ವ್ಯಕ್ತಪಡಿಸಿರುವ ಸಮಯದಲ್ಲಿ ಅವರ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ: ಸಂಸ್ಕರಿತ ಯುರೇನಿಯಂ ಬಿಟ್ಟುಕೊಡಲು ಇರಾನ್ ಒಪ್ಪಿಗೆ; ಅಮೆರಿಕದ ಹೊಸ ಒಪ್ಪಂದದಲ್ಲೇನಿದೆ?

ಇದಕ್ಕೆ ಪ್ರತಿಕ್ರಿಯಿಸಿದ ಯುಎಸ್ ವಿದೇಶಾಂಗ ಕಾರ್ಯದರ್ಶಿ ರೂಬಿಯೊ, ಅಮೆರಿಕ ಮಾಡಿರುವ ಈ ಬದಲಾವಣೆಗಳು ಭಾರತವನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. “ಇದು ಭಾರತವನ್ನು ಗುರಿಯಾಗಿಸಿಕೊಂಡ ವ್ಯವಸ್ಥೆಯಲ್ಲ. ಇದನ್ನು ಜಾಗತಿಕವಾಗಿ ಅನ್ವಯಿಸಲಾಗುತ್ತಿದೆ. ನೀವು ಯಾವುದಾದರೂ ಹೊಸ ಸುಧಾರಣೆಗಳನ್ನು ಕೈಗೊಂಡಾಗ, ಪರಿವರ್ತನೆ ಮತ್ತು ಘರ್ಷಣೆಗಳೆರಡೂ ಇರುತ್ತವೆ. ಆದರೆ, ಭವಿಷ್ಯಕ್ಕಾಗಿ ತನ್ನ ವಲಸೆ ವ್ಯವಸ್ಥೆಯನ್ನು ಆಧುನೀಕರಿಸಲು ಮತ್ತು ಅದನ್ನು ಹೆಚ್ಚು ಪರಿಣಾಮಕಾರಿಯಾಗಿಸಲು ಅಮೆರಿಕ ಹೆಚ್ಚು ಆದ್ಯತೆ ನೀಡುತ್ತಿದೆ. ನಾವು 21ನೇ ಶತಮಾನಕ್ಕಾಗಿ ಯುಎಸ್ ವಲಸೆ ವ್ಯವಸ್ಥೆಯನ್ನು ಆಧುನೀಕರಿಸುತ್ತಿದ್ದೇವೆ” ಎಂದು ರುಬಿಯೊ ಹೇಳಿದರು.

ಅಕ್ರಮ ವಲಸೆಯ ಬಗ್ಗೆ ಮಾತನಾಡಿದ ರುಬಿಯೊ, “ಇತ್ತೀಚಿನ ವರ್ಷಗಳಲ್ಲಿ ಅಮೆರಿಕವು ಪ್ರಮುಖ ಸವಾಲುಗಳನ್ನು ಎದುರಿಸಿದೆ. 20 ಮಿಲಿಯನ್ ಜನರನ್ನು ಅಕ್ರಮವಾಗಿ ಅಮೆರಿಕಕ್ಕೆ ಪ್ರವೇಶಿಸಿದ್ದಾರೆ. ಹೀಗಾಗಿ, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿತ್ತು” ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ – Kannada News | Bengaluru: Karnataka Bank Defrauded of Rs 16 Lakh by Gold Appraiser

ಬೆಂಗಳೂರು, ಮೇ 24: ನಗರದ ವರ್ತೂರಿನಲ್ಲಿರುವ ಕರ್ನಾಟಕ ಬ್ಯಾಂಕ್‌ನಲ್ಲಿ 16.53 ಲಕ್ಷ ರೂ ಮೊತ್ತದ ನಕಲಿ ಚಿನ್ನ ಅಡಮಾನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್‌ನ ಚಿನ್ನ ಮೌಲ್ಯಮಾಪಕ ರವಿಕುಮಾರ್ ಈ ವಂಚನೆಯ ಸೂತ್ರಧಾರಿಯಾಗಿದ್ದು, ನಾಲ್ವರ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಕುಮಾರ್ ಹಲವು ನಕಲಿ ಗ್ರಾಹಕರೊಂದಿಗೆ ಸೇರಿಕೊಂಡು ನಕಲಿ ಚಿನ್ನವನ್ನು ಅಸಲಿ ಚಿನ್ನ ಎಂದು ಹೇಳಿ ಬ್ಯಾಂಕ್‌ಗೆ ವಂಚಿಸಿದ್ದಾನೆ. ಚಿನ್ನ ಮೌಲ್ಯಮಾಪಕ ರವಿಕುಮಾರ್ ಬ್ಯಾಂಕ್‌ಗೆ ಸಲ್ಲಿಸಿದ ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು, ನಕಲಿ ಗ್ರಾಹಕರಿಗೆ ಸಾಲ ನೀಡುವಂತೆ ಮಾಡಿದ್ದಾನೆ. ಈ ಮೂಲಕ ಬ್ಯಾಂಕ್‌ಗೆ ಮೋಸ ಮಾಡಿದ್ದಾನೆ. ಈತನ ಮೇಲೆ ಅನುಮಾನ ಬಂದು ಪರಿಶೀಲಿಸಿದಾಗ ನಕಲಿ ಚಿನ್ನದ ಕಳ್ಳಾಟ ಬಯಲಾಗಿದೆ. ಸದ್ಯ ಪೊಲೀಸರು ರವಿಕುಮಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವರದಿ: ವಿಕಾಸ್​​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ: ಕೋಚ್ ಎಂಟ್ರಿಗೆ ಅವಕಾಶ! – Kannada News | ICC New Rules: Head Coaches May Soon Enter Field During ODI Drinks

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಏಕದಿನ ಕ್ರಿಕೆಟ್ (ODI) ಇತಿಹಾಸದಲ್ಲೇ ಅತ್ಯಂತ ಪ್ರಮುಖ ಹಾಗೂ ಕ್ರಾಂತಿಕಾರಕ ನಿಯಮ ಬದಲಾವಣೆಯೊಂದನ್ನು ತರಲು ಗಂಭೀರ ಆಲೋಚನೆ ನಡೆಸಿದೆ. ಪಂದ್ಯದ ಮಧ್ಯದಲ್ಲಿ ತಂತ್ರಗಳನ್ನು ರೂಪಿಸಲು ಮತ್ತು ಆಟಗಾರರಿಗೆ ನೇರ ಮಾರ್ಗದರ್ಶನ ನೀಡಲು, ಇನ್ಮುಂದೆ ‘ಡ್ರಿಂಕ್ಸ್ ಬ್ರೇಕ್’ (ಪಾನೀಯ ವಿರಾಮ) ಸಮಯದಲ್ಲಿ ತಂಡದ ಮುಖ್ಯ ತರಬೇತುದಾರರು ನೇರವಾಗಿ ಮೈದಾನದೊಳಗೆ ಪ್ರವೇಶಿಸಲು ಅನುಮತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.

ಐಸಿಸಿ ಮುಖ್ಯ ಕಾರ್ಯನಿರ್ವಾಹಕರ ಸಮಿತಿ (CEC) ಸಭೆಯಲ್ಲಿ ಈ ವಿಷಯ ಈಗಾಗಲೇ ಚರ್ಚೆಯಾಗಿದ್ದು, 2026ರ ಮೇ 30 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಐಸಿಸಿ ಮಂಡಳಿ ಸಭೆಯಲ್ಲಿ ಇದಕ್ಕೆ ಅಂತಿಮ ಅನುಮೋದನೆ ಸಿಗುವ ಸಾಧ್ಯತೆಯಿದೆ.

ಪ್ರಸ್ತಾವಿತ ನಿಯಮದ ಪ್ರಮುಖ ಅಂಶಗಳು:

  • ನೇರ ಸಂವಹನ: ಪ್ರಸ್ತುತ ನಿಯಮಗಳ ಪ್ರಕಾರ, ಹೆಚ್ಚುವರಿ ಆಟಗಾರರು (Substitutes) ಮಾತ್ರ ಮೈದಾನಕ್ಕೆ ನೀರು ಮತ್ತು ಕಿಟ್‌ಗಳನ್ನು ಕೊಂಡೊಯ್ಯಬಹುದು. ಹೊಸ ನಿಯಮ ಜಾರಿಗೆ ಬಂದರೆ, ಕೋಚ್‌ಗಳು ನೇರವಾಗಿ ಪಿಚ್ ಬಳಿ ಬಂದು ನಾಯಕ ಮತ್ತು ಆಟಗಾರರೊಂದಿಗೆ ಮುಖಾಮುಖಿ ಚರ್ಚೆ ನಡೆಸಬಹುದು.
  • ಒಡಿಐನಲ್ಲಿ ಎರಡು ಬಾರಿ ಅವಕಾಶ: ಏಕದಿನ ಪಂದ್ಯಗಳ ಪ್ರತಿ ಇನ್ನಿಂಗ್ಸ್‌ನಲ್ಲಿ ತಲಾ 2 ಡ್ರಿಂಕ್ಸ್ ಬ್ರೇಕ್‌ಗಳನ್ನು ನೀಡಲಾಗುತ್ತದೆ. ಕೋಚ್‌ಗಳಿಗೆ ಈ ಎರಡೂ ವಿರಾಮಗಳಲ್ಲಿ ಮೈದಾನಕ್ಕಿಳಿಯುವ ಅವಕಾಶ ಸಿಗಲಿದೆ.
  •  ಟಿ20 ಪ್ರೇರಿತ ಬದಲಾವಣೆ: ಈಗಾಗಲೇ ಟಿ20 ಅಂತರರಾಷ್ಟ್ರೀಯ ಪಂದ್ಯಗಳು ಹಾಗೂ ಐಪಿಎಲ್‌ನಂತಹ ಲೀಗ್‌ಗಳಲ್ಲಿ ‘ಸ್ಟ್ರಾಟೆಜಿಕ್ ಟೈಮ್‌ಔಟ್’ ವೇಳೆ ಕೋಚ್‌ಗಳು ಮೈದಾನಕ್ಕೆ ಬರುವ ನಿಯಮವಿದೆ. ಇದನ್ನು ಈಗ 50 ಓವರ್‌ಗಳ ಕ್ರಿಕೆಟ್‌ಗೂ ವಿಸ್ತರಿಸಲಾಗುತ್ತಿದೆ.
  • ಅನುಷ್ಠಾನದ ಸಮಯ: ಮೇ 30ರ ಸಭೆಯಲ್ಲಿ ಮಂಡಳಿಯು ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದರೆ, ಈ ಹೊಸ ನಿಯಮವು ಅಕ್ಟೋಬರ್ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಚರ್ಚೆಯಲ್ಲಿರುವ ಇತರ ಪ್ರಮುಖ ನಿಯಮಗಳು:

ಹೆಡ್ ಕೋಚ್ ಪ್ರವೇಶದ ಜೊತೆಗೆ, ಕ್ರಿಕೆಟ್‌ನ ಸ್ವರೂಪವನ್ನೇ ಬದಲಿಸಬಲ್ಲ ಇನ್ನೂ ಕೆಲವು ಪ್ರಮುಖ ಪ್ರಸ್ತಾಪಗಳು ಐಸಿಸಿ ಮುಂದಿವೆ:

  • ಟೆಸ್ಟ್ ಪಂದ್ಯದಲ್ಲಿ ಪಿಂಕ್ ಬಾಲ್ ಬಳಕೆ: ಹವಾಮಾನ ವೈಪರೀತ್ಯ ಅಥವಾ ಮಂದ ಬೆಳಕಿನಿಂದಾಗಿ ಟೆಸ್ಟ್ ಪಂದ್ಯಗಳು ರದ್ದಾಗುವುದನ್ನು ತಪ್ಪಿಸಲು, ಸಾಂಪ್ರದಾಯಿಕ ಕೆಂಪು ಚೆಂಡಿನ ಬದಲಿಗೆ ಫ್ಲಡ್‌ಲೈಟ್‌ಗಳ ಅಡಿಯಲ್ಲಿ ‘ಪಿಂಕ್ ಬಾಲ್’ ಬಳಸಿ ಪಂದ್ಯ ಮುಂದುವರಿಸಲು ಉಭಯ ತಂಡಗಳ ಒಪ್ಪಿಗೆಯೊಂದಿಗೆ ಅವಕಾಶ ನೀಡುವ ಚಿಂತನೆ ಇದೆ.
  •  ಟಿ20 ಇನ್ನಿಂಗ್ಸ್ ವಿರಾಮ ಕಡಿತ: ಟಿ20 ಪಂದ್ಯಗಳ ವೇಗವನ್ನು ಹೆಚ್ಚಿಸಲು ಎರಡು ಇನ್ನಿಂಗ್ಸ್‌ಗಳ ನಡುವಿನ ವಿರಾಮದ ಸಮಯವನ್ನು 20 ನಿಮಿಷಗಳಿಂದ 15 ನಿಮಿಷಗಳಿಗೆ ಇಳಿಸಲು ಉದ್ದೇಶಿಸಲಾಗಿದೆ.
  • ಅಕ್ರಮ ಬೌಲಿಂಗ್ ಆಕ್ಷನ್‌ಗೆ ಹಾಕ್-ಐ: ಮೈದಾನದಲ್ಲಿರುವ ಅಂಪೈರ್‌ಗಳಿಗೆ ಇನ್ಮುಂದೆ ರಿಯಲ್-ಟೈಮ್ ಹಾಕ್-ಐ ತಂತ್ರಜ್ಞಾನದ ಪ್ರವೇಶ ಸಿಗಲಿದೆ. ಇದರಿಂದ ಬೌಲರ್‌ಗಳ ಶಂಕಾಸ್ಪದ ಅಥವಾ ಅಕ್ರಮ ಬೌಲಿಂಗ್ ಆಕ್ಷನ್ ಅನ್ನು ಪಂದ್ಯದ ಮಧ್ಯದಲ್ಲೇ ಗುರುತಿಸಿ ಕ್ರಮ ಕೈಗೊಳ್ಳಬಹುದು.

ಇದನ್ನೂ ಓದಿ: 27 ಕ್ರೀಡೆಗಳು: ಕರ್ನಾಟಕದ ಹೊಸ ಕ್ರಿಕೆಟ್ ಸ್ಟೇಡಿಯಂ ವಿಶೇಷತೆಗಳೇನು ಗೊತ್ತಾ?

ಒಟ್ಟಾರೆಯಾಗಿ ಹೇಳುವುದಾದರೆ, ಐಸಿಸಿಯ ಈ ಪ್ರಸ್ತಾಪಗಳು ಜಾರಿಗೆ ಬಂದರೆ ಕ್ರಿಕೆಟ್‌ನ ಸ್ವರೂಪವೇ ಬದಲಾಗಲಿದೆ. ಕೇವಲ ಡ್ರೆಸ್ಸಿಂಗ್ ರೂಮ್‌ಗೆ ಸೀಮಿತವಾಗಿದ್ದ ತರಬೇತುದಾರರು, ಇನ್ಮುಂದೆ ಲೈವ್ ಪಂದ್ಯದ ಗತಿಯನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಫುಟ್‌ಬಾಲ್‌ನಂತೆ ಕ್ರಿಕೆಟ್‌ನಲ್ಲೂ ತಂತ್ರಜ್ಞಾನ ಮತ್ತು ತರಬೇತುದಾರರ ನೇರ ಹಸ್ತಕ್ಷೇಪ ಹೆಚ್ಚಾಗುತ್ತಿರುವುದು ಆಟವನ್ನು ಮತ್ತಷ್ಟು ರೋಚಕಗೊಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ.

Source link

Tv9 Kannada News Live: GBA ಚುನಾವಣೆಗೆ ಜೆಡಿಎಸ್​​ ಪ್ರತ್ಯೇಕ ಸ್ಪರ್ಧೆ, ಪಾಕ್​​ನಲ್ಲಿ ಬಾಂಬ್ ಸ್ಫೋಟಕ್ಕೆ 23 ಮಂದಿ ಬಲಿ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: JDS to Discuss Solo GBA Poll Strategy Today; 23 Killed in Pakistan Blast

ಬೆಂಗಳೂರು, ಮೇ 24: ಬಿಜೆಪಿ ಜೊತೆಗಿನ ಮೈತ್ರಿ ನಡುವೆಯೂ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಪ್ರತ್ಯೇಕವಾಗಿ ಸ್ಫರ್ಧಿಸಲು ಜೆಡಿಎಸ್​​ ಪ್ಲ್ಯಾನ್​​ ಮಾಡಿದೆ. ಇದರ ನಡುವೆ ಕೇಂದ್ರ ಸಚಿವ ಮತ್ತು ಜೆಡಿಎಸ್​​ ನಾಯಕ ಹೆಚ್​​.ಡಿ. ಕುಮಾರಸ್ವಾಮಿ ಜಿಬಿಎ ಜಿಬಿಎ ಚುನಾವಣೆ ಸಂಬಂಧ ಇಂದು (ಮೇ 24) ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ JDS ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬೆಂಗಳೂರು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಮಾಜಿ ಸದಸ್ಯರು ಭಾಗಿಯಾಗಲಿದ್ದಾರೆ. ಈ ವೇಳೆ ಅಭ್ಯರ್ಥಿಗಳ ಆಯ್ಕೆ ಹಾಗೂ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ನಡೆಯಲಿದೆ ಎನ್ನಲಾಗಿದೆ.

ರಸ್ತೆ ಗುಂಡಿಗಳನ್ನು ಮುಚ್ಚಿದ ಪೊಲೀಸರು

ವಿಜಯನಗರ ಜಿಲ್ಲೆ ಹೂವಿನ ಹಡಗಲಿಯ ತಾಲೂಕಿನ ಇಟಗಿ ಮೂಲಕ ಹಾದು ಹೋಗುವ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ ಗುಂಡಿಗಳಿಂದಲೇ ತುಂಬಿದ್ದು, ಮೇಲಿಂದ ಮೇಲೆ ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಹಿನ್ನೆಲೆ ವಿಷಯವನ್ನು PWD ಗಮನಕ್ಕೆ ತಂದರೂ ಪ್ರಯೋಜನವಾಗದ ಕಾರಣ ಸ್ಥಳೀಯರ ಸಹಾಯದಿಂದ ರಸ್ತೆ ಗುಂಡಿಗಳನ್ನು ಪೊಲೀಸರೇ ಮುಚ್ಚಿರುವ ಪ್ರಸಂಗ ನಡೆದಿದೆ. ಇಟಗಿ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಮುಖ್ಯಾಂಶಗಳು

ಪ್ರಾಮಾಣಿಕತೆ ಮೆರೆದ ಸಾರಿಗೆ ಸಿಬ್ಬಂದಿ

ಬಸ್‌ನಲ್ಲಿ ಪ್ರಯಾಣಿಕ ಮರೆತು ಹೋಗಿದ್ದ ಬ್ಯಾಗ್ ಮರಳಿಸಿ ಬೀದರ್​​ನ ಸಾರಿಗೆ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಬಸವಕಲ್ಯಾಣದಿಂದ ನಲಂಡಿ ಗ್ರಾಮಕ್ಕೆ ಹೋಗುವಾಗ ಚಾವನ್ ಹಿಪ್ಪರ್ಗಾ ಗ್ರಾಮದ ಮಸೀದ್ ಅಲ್ಲಾವುದ್ದೀನ್ ಶೇಕ್ ಎಂಬವರು ಬಸ್​​ನಲ್ಲಿಯೇ ನಗದು ಮತ್ತು ಲಕ್ಷಾಂತರ ಮೌಲ್ಯದ ಆಭರಣಗಳಿದ್ದ ಬ್ಯಾಗ್ ಮರೆತು ತೆರಳಿದ್ದರು. ಇದು ಗಮನಕ್ಕೆ ಬರುತ್ತಿದ್ದಂತೆ ಗ್ರಾಮದಲ್ಲಿ ಪ್ರಯಾಣಿಕನನ್ನು ಹುಡುಕಿರುವ ಸಾರಿಗೆ ಸಿಬ್ಬಂದಿ ಭಜರಂಗ ಮತ್ತು ನಿರ್ವಾಹಕ ವೀರಪ್ಪ ಕಾಳೆ ಬ್ಯಾಗ್​​ನ ಹಿಂತಿರುಗಿಸಿದ್ದಾರೆ. ಸಾರಿಗೆ ಸಿಬ್ಬಂದಿಯ ಈ ಮಾನವೀಯ ಕಾರ್ಯ ಕಂಡು ಗ್ರಾಮಸ್ಥರು ಹೂವಿನ ಹಾರ ಹಾಕಿ ಅವರನ್ನು ಸನ್ಮಾನಿಸಿದ್ದಾರೆ.

ಇದನ್ನೂ ಓದಿ: ಕಾರ್ಮಿಕರ ವೇತನ ಹೆಚ್ಚಳ, ತೆಲಂಗಾಣದಲ್ಲಿ ಉಷ್ಣ ಅಲೆ ಮತ್ತು ಚೇತನ್ ಅಹಿಂಸಾ ಹೇಳಿಕೆ ವಿವಾದ! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು

ಬಾಂಬ್ ಸ್ಫೋಟಕ್ಕೆ 23 ಮಂದಿ ಬಲಿ

ಪಾಕಿಸ್ತಾನದ ಕ್ವೆಟ್ಟಾ ನಗರದ ರೈಲ್ವೆ ಟ್ರ್ಯಾಕ್​ ಬಳಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ 23 ಜನರು ದಾರುಣವಾಗಿ ಮೃತಪಟ್ಟಿದ್ದಾರೆ. ಸ್ಫೋಟದಲ್ಲಿ 47 ಜನರಿಗೆ ಗಂಭೀರ ಗಾಯಗಳಾಗಿದ್ದರೆ, ಬ್ಲಾಸ್ಟ್​​ ತೀವ್ರತೆಗೆ ರೈಲ್ವೆ ಹಳಿ ಬಳಿಯಿದ್ದ 10 ವಾಹನಗಳು ಸುಟ್ಟು ಭಸ್ಮವಾಗಿವೆ. ಘಟನೆ ಬೆನ್ನಲ್ಲೇ ಪಾಕ್​ನ ಕ್ವೆಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ಎಮರ್ಜೆನ್ಸಿ ಘೋಷಣೆ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್​​: ಸ್ಫೋಟಕ ಹೇಳಿಕೆ ಕೊಟ್ಟ ಉಪಾಧ್ಯಕ್ಷೆ

ಬೆಂಗಳೂರು, ಮೇ 24: ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ವಿಚಾರ ಸಂಬಂಧ ದೀಪಿಕಾ ರೆಡ್ಡಿ ಮಾಡಿರುವ ಆರೋಪ ಸುಳ್ಳು ಎಂದು ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ ಹೇಳಿದ್ದಾರೆ. ಸಭೆ ಶುರುವಾದಾಗ ಗಲಾಟೆ ಮಾಡಬೇಕಂತಲೇ ಬಂದು ಕೆಲವರು ಸುಳ್ಳು ಆರೋಪ ಮಾಡಿದ್ದಾರೆ. ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ ಎಂಬುದನ್ನು ನಾವು ಒಪ್ಪಲ್ಲ. ದೀಪಿಕಾ ರೆಡ್ಡಿ 12 ಲಕ್ಷ ಮತ​ ತೆಗೆದುಕೊಂಡಿದ್ದೇನೆ ಅಂತಾರೆ. JDSಗೆ ಹೋಗಿದ್ದ ದೀಪಿಕಾ ರೆಡ್ಡಿ ಮತ್ತೆ ಕಾಂಗ್ರೆಸ್​ಗೆ ಬಂದಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರು ಚೆನ್ನಾಗಿ ಕೆಲಸ ಮಾಡ್ತಿದ್ದಾರೆ ಎಂದು ದಿವ್ಯಾ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೋರ್ಟ್ ವಿಚಾರಣೆ – Kannada News | Darshan Case Court hearing of Renukaswamy murder case to speed up

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲು ಆಗಿರುವ ನಟ ದರ್ಶನ್ (Darshan) ಅವರಿಗೆ ಸಾಕಷ್ಟು ಆತಂಕ ಇದೆ. ಒಂದು ವರ್ಷದ ಒಳಗೆ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 2 ಬಾರಿ ವಿಚಾರಣೆ ನಡೆಸಲು ಸ್ಥಳೀಯ ಕೋರ್ಟ್ ಮುಂದಾಗಿದೆ. ದರ್ಶನ್ ಅವರು ಜೈಲು ಸೇರಿ ಹಲವು ತಿಂಗಳು ಕಳೆದಿದೆ. ಇನ್ನೊಂದು ವರ್ಷ ಜಾಮೀನು (Bail) ಸಿಗಲ್ಲ ಎಂಬ ವಿಚಾರದಿಂದ ಅವರಿಗೆ ಚಿಂತೆ ಶುರುವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ಅರ್ಜಿ ವಜಾಗೊಂಡಿದ್ದರಿಂದ ಅವರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಒಂದು ವರ್ಷದ ಒಳಗೆ ವಿಚಾರಣೆ ಮುಗಿಸಬೇಕು ಎಂಬ ಸುಪ್ರೀಂ ಕೋರ್ಟ್ (Supreme Court) ಆದೇಶದ ಪ್ರತಿಯನ್ನು ವಕೀಲರು ಸೆಷನ್ಸ್ ಕೋರ್ಟ್​ಗೆ ಸಲ್ಲಿಸಿದ್ದಾರೆ. ಪ್ರತಿ ದಿನ ಅಥವಾ ವಾರದಲ್ಲಿ 4 ದಿನ ವಿಚಾರಣೆ ನಡೆಸುವ ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ – Kannada News | 24 killed 70 injured as car with explosives rams train carrying pakistan soldiers in quetta

ಇಸ್ಲಮಾಬಾದ್, ಮೇ 24: ಪಾಕಿಸ್ತಾನದ (Pakistan) ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿಯಾದ ಕ್ವೆಟ್ಟಾ ನಗರದ ರೈಲ್ವೆ ಹಳಿ ಬಳಿ ಇಂದು ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಭೀಕರ ದುರಂತದಲ್ಲಿ 24 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಪಡೆಗಳ ಮೂಲಗಳು ಖಚಿತಪಡಿಸಿವೆ. ಕ್ವೆಟ್ಟಾದ ಚಮನ್ ಫಾಟಕ್ (Chaman Phatak) ರೈಲ್ವೆ ನಿಲ್ದಾಣದ ಬಳಿ ಈ ಸ್ಫೋಟ ಸಂಭವಿಸಿದೆ.

ಭದ್ರತಾ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಒಬ್ಬನೇ ಬಂದಿದ್ದ ಆತ್ಮಾಹುತಿ ಬಾಂಬರ್ ಸ್ಫೋಟಕಗಳನ್ನು ತುಂಬಿದ್ದ ವಾಹನವನ್ನು ಸೀದಾ ಮಿಲಿಟರಿ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆಸಿದ್ದಾನೆ ಎನ್ನಲಾಗಿದೆ. ಈ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ರೈಲಿನ 2 ಬೋಗಿಗಳು ಸಂಪೂರ್ಣವಾಗಿ ಜಖಂಗೊಂಡು ರಸ್ತೆಗೆ ಉರುಳಿಬಿದ್ದಿದೆ. ಆಗ ಅದಕ್ಕೆ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ: ಬಲೂಚಿಸ್ತಾನದ ಗಣಿಯಲ್ಲಿ ಉಗ್ರರ ದಾಳಿ; ಟರ್ಕಿಶ್ ಪ್ರಜೆ ಸೇರಿದಂತೆ 10 ಜನ ಸಾವು

ಸುತ್ತಮುತ್ತಲಿನ ಹಲವು ಕಿಲೋಮೀಟರ್ ದೂರದವರೆಗೆ ಸ್ಫೋಟದ ಭೀಕರ ಸೌಂಡ್ ಕೇಳಿಸಿದೆ. ಬಲೂಚಿಸ್ತಾನ್ ಪ್ರಾಂತ್ಯದ ರಕ್ಷಣಾ ತಂಡಗಳು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಗಾಯಗೊಂಡವರನ್ನು ತಕ್ಷಣವೇ ಕ್ವೆಟ್ಟಾದ ಮಿಲಿಟರಿ ಆಸ್ಪತ್ರೆ ಮತ್ತು ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ರಕ್ತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಈ ಬಾಂಬ್ ಸ್ಫೋಟದ ತೀವ್ರತೆಗೆ ರೈಲ್ವೆ ಹಳಿಯ ಪಕ್ಕದಲ್ಲಿದ್ದ 10ಕ್ಕೂ ಹೆಚ್ಚು ವಾಹನಗಳು ಮತ್ತು ಹಲವು ನಾಗರಿಕರ ಮನೆಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಆತಂಕವಿದೆ. ಬಲೂಚಿಸ್ತಾನ್ ಗೃಹ ಸಚಿವಾಲಯದ ವಕ್ತಾರ ಬಾಬರ್ ಯೂಸುಫ್‌ಜಾಯ್ ಅವರು, ಪ್ರಸ್ತುತ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಎಲ್ಲಾ ಇಲಾಖೆಗಳನ್ನು ಹೈ ಅಲರ್ಟ್‌ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರಾಚಿ ವಿಶ್ವವಿದ್ಯಾಲಯದಲ್ಲಿನ ಸ್ಫೋಟದ ಹೊಣೆ ಹೊತ್ತ ಬಲೂಚಿಸ್ತಾನ್​​ ಲಿಬರೇಶನ್​​ ಆರ್ಮಿ; ಕೃತ್ಯವೆಸಗಿದ್ದು ಮಹಿಳಾ ಬಾಂಬರ್​​

ನಿಷೇಧಿತ ಉಗ್ರಗಾಮಿ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಸ್ಥಳೀಯ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಈ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ರೈಲಿನಲ್ಲಿದ್ದ ಪಾಕಿಸ್ತಾನಿ ಸೇನಾ ಸಿಬ್ಬಂದಿಯನ್ನೇ ಗುರಿಯಾಗಿಸಿಕೊಂಡು ತಮ್ಮ ಸಂಘಟನೆಯ ಆತ್ಮಾಹುತಿ ದಳದ ಸದಸ್ಯ ಈ ದಾಳಿ ನಡೆಸಿದ್ದಾನೆ ಎಂದು ಬಿಎಲ್‌ಎ ಹೇಳಿಕೊಂಡಿದೆ. ಸ್ಫೋಟದ ಬೆನ್ನಲ್ಲೇ ಆ ಪ್ರದೇಶದಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದೆ ಎಂದೂ ವರದಿಯಾಗಿದೆ.

ಖನಿಜ ಸಂಪತ್ತಿನಿಂದ ಸಮೃದ್ಧವಾಗಿರುವ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪಾಕಿಸ್ತಾನ ಸರ್ಕಾರ ಮತ್ತು ಚೀನಾದ ಒಡೆತನದ ‘ಚೀನಾ-ಪಾಕಿಸ್ತಾನ್ ಆರ್ಥಿಕ ಕಾರಿಡಾರ್’ (CPEC) ಯೋಜನೆಗಳ ವಿರುದ್ಧ ದೀರ್ಘಕಾಲದಿಂದ ಪ್ರತ್ಯೇಕತಾವಾದಿ ಬಂಡುಕೋರರು ಮತ್ತು ಉಗ್ರಗಾಮಿ ಸಂಘಟನೆಗಳು ನಿರಂತರವಾಗಿ ಇಂತಹ ಭೀಕರ ದಾಳಿಗಳನ್ನು ನಡೆಸುತ್ತಾ ಬಂದಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Exit mobile version