ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯುವ ಸುಳಿವು ನೀಡಿದ ಟ್ರಂಪ್
ವಾಷಿಂಗ್ಟನ್, ಮೇ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಶಾಂತಿ ಒಪ್ಪಂದ ಹಾಗೂ ಜಾಗತಿಕ ಇಂಧನ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ ಹಾಗೂ ಇತರ ಸಂಬಂಧಿತ ದೇಶಗಳೊಂದಿಗೆ ಶಾಂತಿಗೆ ಸಂಬಂಧಿಸಿದ ‘ತಿಳಿವಳಿಕೆ ಪತ್ರ’ (MoU) ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಒಪ್ಪಂದದ…