ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್ – Kannada News | Tumakuru Metro Link: Decades Long Dream Nears Reality, PPP Model for RS.20,000 Cr Project
ಬೆಂಗಳೂರು, ಮೇ 23: ತುಮಕೂರು ಮತ್ತು ಬೆಂಗಳೂರು ನಡುವೆ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರ ದಶಕಗಳ ಕನಸು ಕೊನೆಗೂ ನನಸಾಗುವತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಮಾದಾವರದಿಂದ ತುಮಕೂರು ನಗರದವರೆಗೆ ‘ನಮ್ಮ ಮೆಟ್ರೋ’ (Namma Metro) ರೈಲು ಯೋಜನೆಯನ್ನು ವಿಸ್ತರಿಸುವ ಕುರಿತು ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದ್ದು, ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ತುಮಕೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸಬೇಕೆಂದು ಬಹಳ ದಿನಗಳಿಂದ…