1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್ ಪ್ಲೇಆಫ್ ಲೆಕ್ಕಾಚಾರ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್ಗೇರಿದರೆ, ಮೂರು ತಂಡಗಳು ಪ್ಲೇಆಫ್ ರೇಸ್ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನೇರ ಪೈಪೋಟಿ ಇದೆ. (PC: IPL) ಈ ಪೈಪೋಟಿಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಇಂದು (ಮೇ.23) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಪಡೆ ಒಟ್ಟು 15 ಅಂಕಗಳನ್ನು…