ಮತ್ತೆ ಕಾಶ್ಮೀರಿ ಪಂಡಿತರ ಮೇಲೆ ಉಗ್ರರ ಕಣ್ಣು: ಮನೆಗಳಲ್ಲೇ ಇರುವಂತೆ ಸೂಚನೆ – Kannada News | Kashmir Pandits’ Security Alarm: Online Threats Force Govt Employees to Stay Home
ಶ್ರೀನಗರ, ಆ.12: ಕಾಶ್ಮೀರ ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತ್ ಸರ್ಕಾರಿ ಉದ್ಯೋಗಿಗಳಿಗೆ ಆನ್‌ಲೈನ್ ಮೂಲಕ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ, ಅವರನ್ನು ಮನೆಗಳಲ್ಲೇ ಇರಲು ಮತ್ತು ಜಾಗರೂಕರಾಗಿರಲು ಮೌಖಿಕವಾಗಿ ಸೂಚಿಸಲಾಗಿದೆ. ಬೆದರಿಕೆ ಪತ್ರದಲ್ಲಿ ಕೆಲ ಸರ್ಕಾರಿ ನೌಕರರ ಹೆಸರುಗಳನ್ನು ಉಲ್ಲೇಖಿಸಿ, “ನಿಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಿ” ಎಂದು ಎಚ್ಚರಿಕೆ ನೀಡಲಾಗಿದೆ. ‘ಯುನೈಟೆಡ್ ಲಿಬರೇಷನ್ ಕೌನ್ಸಿಲ್’ (United Liberation Council) ಹೆಸರಿನ ಸಂಘಟನೆಯೊಂದು ಈ ಬೆದರಿಕೆ ಪತ್ರವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ. ಈ ಸಂಘಟನೆಯು ಜುಲೈ ತಿಂಗಳಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್…