ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ: ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ – Kannada News | Bengaluru Matrimonial Fraud: Man Defrauds Woman of 1.75 Cr, Introduces Wife as Sister
ಬೆಂಗಳೂರು, ಜನವರಿ 18: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಯುವತಿ ಮತ್ತು ಆಕೆಯ ಸಂಬಂಧಿಕರು, ಸ್ನೇಹಿತರಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಯುವತಿಗೆ 2024 ಮಾರ್ಚ್ನಲ್ಲಿ ಆರೋಪಿ ಪರಿಚಯವಾಗಿದ್ದ. ತಾನು ದೊಡ್ಡ ಉದ್ಯಮಿ, 715 ಕೋಟಿ ಆಸ್ತಿ ಇದೆ ಎಂದು ಹೇಳಿಕೊಂಡಿದ್ದ ಈತ ತಂದೆಯನ್ನ ನಿವೃತ್ತ ತಹಶೀಲ್ದಾರ್ ಎಂದು ಪರಿಚಯಿಸಿದ್ದ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಯುವತಿಗೆ ಹೇಳಿದ್ದಲ್ಲದೆ, ಕೆಂಗೇರಿ ಬಳಿ ಕರೆಸಿಕೊಂಡು ಮನೆಯವರಿಗೆ ಪರಿಚಯಿಸಿದ್ದ ಎನ್ನಲಾಗಿದೆ. ಬಳಿಕ…