ರೋಜ್‌ಗಾರ್ ಮೇಳದಡಿ ನಾಳೆ ಪ್ರಧಾನಿ ಮೋದಿಯಿಂದ 51,000ಕ್ಕೂ ಅಧಿಕ ಯುವಕರಿಗೆ ನೇಮಕಾತಿ ದಾಖಲೆ ಹಸ್ತಾಂತರ – Kannada News | Under Rozgar Mela PM Modi To Virtually Distribute more than 51,000 Job Letters on May 23
ನವದೆಹಲಿ, ಮೇ 22: ದೇಶಾದ್ಯಂತ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ರೋಜ್‌ಗಾರ್ ಮೇಳ’ದ (Rozgar Mela) ಭಾಗವಾಗಿ, ಪ್ರಧಾನಿ ನರೇಂದ್ರ ಮೋದಿ (PM Modi) ಮೇ 23ರಂದು ದೇಶಾದ್ಯಂತ ಹೊಸದಾಗಿ ಆಯ್ಕೆಯಾದ 51,000ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ದಾಖಲೆಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಯುವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದುವರೆಗೂ ದೇಶಾದ್ಯಂತ ಆಯೋಜಿಸಲಾದ 18 ರೋಜ್‌ಗಾರ್ ಮೇಳಗಳ ಮೂಲಕ…