ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್ – Kannada News | Punjab Man Accused of Sharing Military Movement Footage Across Border
ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…