Video: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇಯಲ್ಲಿ ಬಸ್-ಟ್ಯಾಂಕರ್ ನಡುವೆ ಡಿಕ್ಕಿ, ಇಬ್ಬರು ಸಜೀವದಹನ, 15ಕ್ಕೂ ಅಧಿಕ ಮಂದಿಗೆ ಗಾಯ – Kannada News | Bus Tanker Collision on Agra Lucknow Expressway Leaves Two Dead
ಲಕ್ನೋ, ಮೇ 22: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗಿನ ಜಾವ ಬಸ್ಸೊಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಚಾಲಕ ಸೇರಿ ಇಬ್ಬರು ಸಜೀವದಹನವಾಗಿದ್ದಾರೆ. 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಾನ್ಪುರದಿಂದ ಗುರುಗ್ರಾಮಕ್ಕೆ ಹೋಗುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಬಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ವ್ಯಾಪಕ ಭೀತಿ ಉಂಟಾಗಿದೆ.ಮಾಹಿತಿ ತಿಳಿದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ನಿಯಂತ್ರಣಕ್ಕೆ…