ಹೈಕೋರ್ಟ್‌ನಿಂದ ಜಾಮೀನು ಬೆನ್ನಲ್ಲೇ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್ – Kannada News | Murder Accused Wilson Garden Naga Released on Bail from Hindalga Jail
ಬೆಳಗಾವಿ, ಮೇ 22: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗನನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿದ್ದಾಗ, ನಟ ದರ್ಶನ್ ಜೊತೆ ಚಹಾ ಸೇವಿಸುತ್ತಿರುವ ನಾಗನ ಫೋಟೋ ವೈರಲ್ ಆಗಿತ್ತು. ಈ ಘಟನೆಯ ನಂತರ, ಜೈಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆ ಬಳಿಕ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ 2024ರ ಜುಲೈನಲ್ಲಿ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್‌ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ವಿಲ್ಸನ್…