ಅಮೆರಿಕದಲ್ಲಿ ಬಂದೂಕುಧಾರಿಗಳಿಂದ ಎರಡು ಪ್ರತ್ಯೇಕ ಗುಂಡಿನ ದಾಳಿ, ಪೊಲೀಸರು ಸೇರಿ 25 ಮಂದಿ ಸಾವು – Kannada News | Multiple Gun Attacks in Honduras Leave Dozens Dead

ವಾಷಿಂಗ್ಟನ್, ಮೇ 22: ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಹಾಗೂ ಗ್ಯಾಂಗ್ ವಾರ್​ಗಳಿಂದ ಸದಾ ಸುದ್ದಿಯಲ್ಲಿರುವ ಹೊಂಡುರಾಸ್ ಕರಾವಳಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ 6 ಮಂದಿ ಪೊಲೀಸರು ಸೇರಿ 25 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಂಡುರಾಸ್ ಎಂಬುದು ಮಧ್ಯ ಅಮೆರಿಕ(America)ದಲ್ಲಿರುವ ಮತ್ತೊಂದು ದೇಶವಾಗಿದೆ.

ಮೊದಲ ಆಘಾತಕಾರಿ ಘಟನೆ ಉತ್ತರ ಹೊಂಡುರಾಸ್‌ನ ಟ್ರುಜಿಲ್ಲೊದಲ್ಲಿ ನಡೆದಿದೆ. ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಹಕ್ಕುಗಳಿಗಾಗಿ ದಶಕಗಳಿಂದ ಸಂಘರ್ಷ ನಡೆಯುತ್ತಿರುವ ಈ ಪ್ರದೇಶದಲ್ಲಿ, ಬಂದೂಕುಧಾರಿಗಳು ಏಕಾಏಕಿ ನುಗ್ಗಿ ಕನಿಷ್ಠ 19 ಕಾರ್ಮಿಕರನ್ನು ಅತ್ಯಂತ ಕ್ರೂರವಾಗಿ ಗುಂಡಿಕ್ಕಿ ಕೊಂದಿದ್ದಾರೆ. ಈ ಪ್ರದೇಶದಲ್ಲಿ ಪರಿಸರವಾದಿಗಳಿಗೆ ಹಾಗೂ ಕೃಷಿ ಕಾರ್ಮಿಕರಿಗೆ ನಿರಂತರವಾಗಿ ಜೀವಬೆದರಿಕೆ ಇತ್ತು. 2024 ರಲ್ಲೂ ಇಲ್ಲಿ ಪ್ರಮುಖ ಪರಿಸರ ನಾಯಕ ಜುವಾನ್ ಲೋಪೆಜ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು.

ಮೊದಲ ಘಟನೆಯ ಬೆನ್ನಲ್ಲೇ ಗ್ವಾಟೆಮಾಲಾ ಗಡಿಯ ಸಮೀಪವಿರುವ ಓಮೋವಾದಲ್ಲಿ ಎರಡನೇ ಭೀಕರ ದಾಳಿ ನಡೆದಿದೆ. ಗ್ಯಾಂಗ್ ವಿರೋಧಿ ವಿಶೇಷ ಕಾರ್ಯಾಚರಣೆಗೆ ನಿಯೋಜನೆಗೊಂಡು ರಾಜಧಾನಿಯಿಂದ ಪ್ರಯಾಣಿಸುತ್ತಿದ್ದ ಪೊಲೀಸ್ ವಾಹನದ ಮೇಲೆ ಅಪರಾಧಿಗಳು ಸಂಚು ರೂಪಿಸಿ ಗುಂಡಿನ ಮಳೆ ಕರೆದಿದ್ದಾರೆ. ಈ ಭೀಕರ ದಾಳಿಯಲ್ಲಿ ಒಬ್ಬ ಹಿರಿಯ ಅಧಿಕಾರಿ ಸೇರಿದಂತೆ ಆರು ಜನ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಕೊನೆ ಕ್ಷಣದಲ್ಲಿ ಇರಾನ್ ಮೇಲಿನ ಭೀಕರ ದಾಳಿ ಮುಂದೂಡಿದ ಅಮೆರಿಕ, ಗಲ್ಫ್ ರಾಷ್ಟ್ರಗಳ ಮನವಿಗೆ ಓಗೊಟ್ಟ ಟ್ರಂಪ್

ತನಿಖೆಗೆ ವಿಧಿವಿಜ್ಞಾನ ತಂಡಗಳ ರಚನೆ
ಟ್ರುಜಿಲ್ಲೊದಲ್ಲಿ ನಡೆದ ದಾಳಿಯಲ್ಲಿ ಸಾವಿನ ಸಂಖ್ಯೆಯನ್ನು ನಿಖರವಾಗಿ ಪತ್ತೆಹಚ್ಚುವುದು ಪೊಲೀಸರಿಗೆ ಕಷ್ಟವಾಗಿದೆ. ಏಕೆಂದರೆ ಘಟನೆ ನಡೆದ ತಕ್ಷಣ ಗಾಬರಿಗೊಂಡ ಸಂಬಂಧಿಕರು ತಮ್ಮ ಪ್ರೀತಿಪಾತ್ರರ ಶವಗಳನ್ನು ಸ್ಥಳದಿಂದ ತಾವೇ ತಗೆದುಕೊಂಡು ಹೋಗಿದ್ದಾರೆ. ಪ್ರಸ್ತುತ ಹೊಂಡುರಾಸ್‌ನ ಭದ್ರತಾ ಸಚಿವಾಲಯವು ರಾಷ್ಟ್ರೀಯ ಪೊಲೀಸ್ ಮತ್ತು ಸಶಸ್ತ್ರ ಪಡೆಗಳನ್ನು ಸ್ಥಳಕ್ಕೆ ರವಾನಿಸಿದ್ದು, ತನಿಖೆಗಾಗಿ ವಿಶೇಷ ವಿಧಿವಿಜ್ಞಾನ (Forensic) ತಜ್ಞರ ತಂಡಗಳನ್ನು ರಚಿಸಿದೆ.

2011 ಕ್ಕೆ ಹೋಲಿಸಿದರೆ ಈಗ ಕೊಲೆಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದ್ದರೂ, ಪರಿಸ್ಥಿತಿ ಮಾತ್ರ ಸುಧಾರಿಸಿಲ್ಲ. ಅಪರಾಧವನ್ನು ಅಡಗಿಸಲು ಅಲ್ಲಿನ ಸರ್ಕಾರ ಮಿಲಿಟರಿ ಶಕ್ತಿಯನ್ನು ಬಳಸುತ್ತಿರುವುದಕ್ಕೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಸರ್ಕಾರದ ಈ ಮಿಲಿಟರಿ ಶೈಲಿಯಿಂದಾಗಿ ಚಿತ್ರಹಿಂಸೆ ಮತ್ತು ಕಾನೂನುಬಾಹಿರ ಹತ್ಯೆಗಳು ಹೆಚ್ಚಾಗುತ್ತಿವೆ ಎಂದು ಅವು ಕಳವಳ ವ್ಯಕ್ತಪಡಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Karnataka Weather Forecast: ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ – Kannada News | Karnataka Weather Forecast: Heavy Rain and Thunderstorm Alert Till May 25

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ
Image Credit source: MediaForge AI

ಬೆಂಗಳೂರು, ಮೇ 22: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ (Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಭಾರೀ ಮಳೆ ಮುನ್ಸೂಚನೆ
  • ರಾಜ್ಯದ ಒಳನಾಡಿನಲ್ಲಿ ಬಿರುಗಾಳಿ ಮತ್ತು ತೀವ್ರ ಗುಡುಗು ಎಚ್ಚರಿಕೆ
  • ಕಟಾವು ಬೆಳೆಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲು ರೈತರಿಗೆ ಸೂಚನೆ.

ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಸೇರಿದಂತೆ ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಗಾಳಿಯ ವೇಗ ಹೆಚ್ಚಿರಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಗುಡುಗು ಸಿಡಿಲಿನ ಅಬ್ಬರ ಜೋರಾಗಿರಲಿದೆ. ಮೇ 22ರಿಂದ ಮೇ 25, 2026ರ ಅವಧಿಯಲ್ಲಿ ಇಡೀ ಒಳನಾಡು ಭಾಗದಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ತೀವ್ರ ಸ್ವರೂಪದ ಗುಡುಗು ಸಹಿತ ಮಳೆ ಸಂಭವಿಸುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಮೇ 21ರಿಂದ ಮೇ 25ರವರೆಗೆ ಸಿಡಿಲು ಹಾಗೂ ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರಲು ಕೋರಲಾಗಿದೆ.

ಸಾರ್ವಜನಿಕರಿಗೆ ಸೂಚನೆ

ಈ ತೀವ್ರ ಹವಾಮಾನದ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗಬಹುದು. ಬಲವಾದ ಗಾಳಿಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳುವ ಸಾಧ್ಯತೆಯಿರುವುದರಿಂದ ವಿದ್ಯುತ್ ಸರಬರಾಜಿಗೆ ತಾತ್ಕಾಲಿಕ ಅಡಚಣೆಯಾಗಬಹುದು. ಸಾರ್ವಜನಿಕರು ಮಳೆ-ಗಾಳಿಯ ಸಮಯದಲ್ಲಿ ಸುರಕ್ಷಿತವಾಗಿ ಮನೆಗಳ ಒಳಗೆ ಇರಲು, ಅನಗತ್ಯ ಪ್ರಯಾಣ ತಪ್ಪಿಸಲು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸೂಚಿಸಲಾಗಿದೆ. ತೆರೆದ ಪ್ರದೇಶಗಳಲ್ಲಿ ಸಂಗ್ರಹಿಸಿಟ್ಟಿರುವ ಕಟಾವು ಮಾಡಿದ ಬೆಳೆಗಳಿಗೆ ಹಾನಿಯಾಗುವ ಸಂಭವವಿರುವುದರಿಂದ, ರೈತರು ತಮ್ಮ ಉತ್ಪನ್ನಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ರವಾನಿಸಲು ಹವಾಮಾನ ಇಲಾಖೆ ಜಾಗೃತಿ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ – Kannada News | Karnataka Ranks 5th Among Most Corrupt States In India: Upalokayukta Justice B Veerappa Sounds Alarm

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ

ಮಂಡ್ಯ, ಮೇ 22: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಬದಲಾವಣೆ ಅಧಿಕಾರಿಗಳಿಂದಲೂ, ನಾಗರಿಕರಿಂದಲೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಾಂಶಗಳು

  • ರಾಜ್ಯದ ಪ್ರತಿ ಇಲಾಖೆಯಲ್ಲೂ ಮಿತಿ ಮೀರಿದ ಭ್ರಷ್ಟಾಚಾರ
  • ದೇಶದ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ
  • ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿಕೆ

ರಾಜ್ಯದ 16 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 1,281 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿರುವುದಾಗಿ ತಿಳಿಸಿರುವ ಅವರು, ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಿಡುಗಡೆ ಮಾಡಿರುವ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕವನ್ನು ಉಲ್ಲೇಖಿಸಿದ್ದಾರೆ. 180 ರಾಷ್ಟ್ರಗಳ ಪೈಕಿ ಭಾರತ 91ನೇ ಸ್ಥಾನದಲ್ಲಿದ್ದು, 100ರಲ್ಲಿ 39 ಅಂಕಗಳನ್ನು ಪಡೆದಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ವೀರಪ್ಪ, ಅಧಿಕಾರಿಗಳನ್ನು ಜನಸೇವೆಗೆ ನೇಮಿಸಲಾಗಿದೆ. ಅವರು ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗುಡುಗಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ನೆನಪಿಸಿದ್ದಾರೆ.

ಇದನ್ನೂ ಓದಿ: ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ; ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ

2024ರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಉಪಲೋಕಾಯುಕ್ತರಾಗಿ ನೇಮಕಗೊಂಡಿದ್ದ ನ್ಯಾಯಮೂರ್ತಿ ಬಿ. ವೀರಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದ ವೇಳೆ ಲೋಕ ಅದಾಲತ್‌ಗಳ ಮೂಲಕ ಒಂದು ಕೋಟಿಗೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ನಿರ್ಮಿಸಿದ್ದರು. ಇದೇ ವೇಳೆ ಟ್ರಾಫಿಕ್ ದಂಡಗಳಿಗೆ ಶೇ.50 ರಿಯಾಯಿತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ರೂಪಿಸುವಲ್ಲೂ ಅವರು ಪ್ರಮುಖ ಪಾತ್ರವಹಿಸಿದ್ದರು ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಪುನೀತ್ ಜೊತೆಯೇ ಆ ಕಥೆಯೂ ಹೋಯಿತು’; ಅಚ್ಚರಿಯ ವಿಷಯ ರಿವೀಲ್ ಮಾಡಿದ ಪ್ರಶಾಂತ್ ನೀಲ್ – Kannada News | Prashanth Neel’s Emotional Revelation: Puneeth Rajkumar’s Unmade Film Dream

ಪ್ರಶಾಂತ್ ನೀಲ್ ಅವರು (Prashanth Neel) ಆ್ಯಕ್ಷನ್ ಸಿನಿಮಾಗಳನ್ನು ನಿರ್ದೇಶನ ಮಾಡಿ ಗಮನ ಸೆಳೆದವರು. ಅವರನ್ನು ಎಲ್ಲಾ ಭಾಷೆಯವರು ಗುರುತಿಸೋದು ಹಾಗೆಯೇ. ‘ಕೆಜಿಎಫ್’ಗೂ ಮೊದಲು ಫ್ಯಾಮಿಲಿ ಡ್ರಾಮಾ ಕಥೆಯನ್ನು ಪ್ರಶಾಂತ್ ನೀಲ್ ರೆಡಿ ಮಾಡಿಟ್ಟುಕೊಂಡಿದ್ದರು. ಪುನೀತ್ ರಾಜ್​​ಕುಮಾರ್ ಅವರೇ ಈ ಸಿನಿಮಾದಲ್ಲಿ ನಟಿಸಬೇಕು ಎಂಬುದು ನೀಲ್ ಆಸೆ ಆಗಿತ್ತು. ಈ ಸಿನಿಮಾ ಬಗ್ಗೆ ಅವರು ಮಾತನಾಡಿದ್ದಾರೆ. ಪುನೀತ್ ಜೊತೆ ಆ ಕಥೆಯೂ ಹೋಯಿತು ಎಂದು ಅವರು ಹೇಳಿದ್ದಾರೆ.

ಪ್ರಶಾಂತ್ ನೀಲ್ ಅವರು ಅಪ್ಪುಗಾಗಿ ಒಂದು ಭರ್ಜರಿ ಕಥೆ ಸಿದ್ಧಪಡಿಸಿದ್ದರು. ಹೊಂಬಾಳೆ ಫಿಲ್ಮ್ಸ್ ಎದುರು ಇದನ್ನು ನೀಲ್ ಹೇಳಿದ್ದರು. ನಂತರ ‘ಕೆಜಿಎಫ್’ ಕಥೆ ಹೇಳಿದಾಗ ಹೊಂಬಾಳೆ ಅದನ್ನೇ ಆಯ್ಕೆ ಮಾಡಿತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಪುನೀತ್ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ, ಅಪ್ಪು ಅವರ ಹಠಾತ್ ಅಗಲಿಕೆ ಈ ಮಹಾನ್ ಕನಸನ್ನು ಅರ್ಧಕ್ಕೆ ನಿಲ್ಲಿಸಿತು.

ಈ ಬಗ್ಗೆ ಮಾತನಾಡಿರುವ ಪ್ರಶಾಂತ್ ನೀಲ್, ‘ಅದನ್ನು ನಾನು ಪುನೀತ್ ಅವರಿಗಾಗಿ ಮಾಡಿದ್ದೆ. ಅವರ ಜೊತೆಯೇ ಆ ಕಥೆಯೂ ಹೋಯಿತು’ ಎಂದು ಭಾವುಕರಾಗಿ ಮಾತನಾಡಿದ್ದಾರೆ. ಅಂದರೆ ಆ ಕಥೆಗೆ ಬೇರೆ ಯಾರೂ ಸೂಕ್ತರಲ್ಲ ಎಂಬುದು ನೀಲ್ ಅಭಿಪ್ರಾಯ.

ಇದನ್ನೂ ಓದಿ: ‘ಕೆಜಿಎಫ್ 3’ ಸದ್ಯಕ್ಕಿಲ್ಲ, ‘ಡ್ರ್ಯಾಗನ್’ ಬಳಿಕ ‘ಸಲಾರ್ 2’ ಕೆಲಸ ಶುರು; ಪ್ರಶಾಂತ್ ನೀಲ್ ಸ್ಪಷ್ಟನೆ

‘ನನ್ನ ಸಿನಿಮೀಯ ಬದುಕಿನ ಅತಿ ದೊಡ್ಡ ನಿರಾಶೆ ಎಂದರೆ ಅದು ಅಪ್ಪು ಸರ್ ಜೊತೆ ಸಿನಿಮಾ ಮಾಡಲು ಸಾಧ್ಯವಾಗದೇ ಇರುವುದು’ ಎಂದು ಪ್ರಶಾಂತ್ ನೀಲ್ ಹಲವು ಸಂದರ್ಶನಗಳಲ್ಲಿ ಭಾವುಕರಾಗಿ ಹೇಳಿಕೊಂಡಿದ್ದಾರೆ.
ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಸಿನಿಮಾದ ಗ್ಲಿಂಪ್ಸ್ ಇತ್ತೀಚೆಗೆ ರಿಲೀಸ್ ಆಗಿದೆ. ಇದರ ಅವಧಿ 4 ನಿಮಿಷ ಇತ್ತು. ಮುಂದಿನ ದಿನಗಳಲ್ಲಿ 9 ನಿಮಿಷಗಳ ಟ್ರೇಲರ್ ತರುವ ಆಲೋಚನೆಯಲ್ಲಿ ಪ್ರಶಾಂತ್ ನೀಲ್ ಅವರು ಇದ್ದಾರೆ. ಸಿನಿಮಾದಲ್ಲಿ ಏನಿರಲಿದೆ ಎಂಬುದನ್ನು ಅವರು ವಿವರವಾಗಿ ಹೇಳುವ ಆಲೋಚನೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today: ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 22, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಷಷ್ಠಿ, ಪುಷ್ಯ ನಕ್ಷತ್ರವನ್ನು ಒಳಗೊಂಡಿದೆ. ಸೂರ್ಯನು ವೃಷಭ ರಾಶಿಯಲ್ಲಿ ಮತ್ತು ಚಂದ್ರನು ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಸಮೃದ್ಧಿಗಾಗಿ ಹಾಗೂ ವೃದ್ಧಿಗಾಗಿ ಪ್ರಯತ್ನಿಸಲು ಇದು ಸೂಕ್ತ ಸಮಯ ಎಂದು ಗುರೂಜಿ ಹೇಳಿದ್ದಾರೆ. ಸೂರ್ಯನು ವೃಷಭ ರಾಶಿಯಲ್ಲಿ ಮತ್ತು ಚಂದ್ರನು ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿರುವುದು ಈ ದಿನದ ಪ್ರಮುಖ ಗ್ರಹ ಸ್ಥಿತಿಯಾಗಿದೆ. ರಾಹುಕಾಲವು ಬೆಳಿಗ್ಗೆ 10:40 ರಿಂದ ಮಧ್ಯಾಹ್ನ 12:10 ರವರೆಗೆ ಇದ್ದು, ಸರ್ವಸಿದ್ಧಿ ಕಾಲ ಮತ್ತು ಸಂಕಲ್ಪ ಕಾಲವು ಮಧ್ಯಾಹ್ನ 12:16 ರಿಂದ 1:56 ರವರೆಗೆ ಇರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Source link

Daily Devotional: ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಗೊತ್ತಾ? – Kannada News | Importance of Kuladeiva, Ishtadeiva, and Manedevaru in Hindu Worship

ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳಲ್ಲಿ ಕುಲದೈವ, ಇಷ್ಟದೈವ, ಮನೆದೇವರು ಮತ್ತು ಆರಾಧ್ಯದೈವಗಳಿಗೆ ವಿಶೇಷ ಪ್ರಾಶಸ್ತ್ಯವಿದೆ.ಕುಲದೈವವು ಏಳು ತಲೆಮಾರುಗಳಿಂದ ಕುಟುಂಬವನ್ನು ರಕ್ಷಿಸುವ ದೈವವಾಗಿದ್ದು, ಅನಾರೋಗ್ಯ, ಅಕಾಲಿಕ ಮರಣ, ಅಕಾಲಿಕ ಘಟನೆಗಳಿಂದ ವಂಶವನ್ನು ಕಾಪಾಡುತ್ತದೆ. ಪ್ರತಿದಿನ, ಕನಿಷ್ಠ ವಾರಕ್ಕೊಮ್ಮೆಯಾದರೂ ಕುಲದೈವವನ್ನು ಸ್ಮರಿಸುವುದು ಶುಭ.

ಇಷ್ಟದೈವವು ಮನಪೂರ್ವಕವಾಗಿ ಆರಾಧಿಸುವ ದೈವವಾಗಿದ್ದು, ಶೀಘ್ರ ಫಲ ಮತ್ತು ಇಷ್ಟಾರ್ಥಗಳನ್ನು ಈಡೇರಿಸುತ್ತದೆ. ಆರಾಧ್ಯದೈವವು ಜನ್ಮಜನ್ಮಾಂತರಗಳಿಂದ ಆರಾಧಿಸುವ ದೈವವಾಗಿದ್ದು, ಮನೆಯಲ್ಲಿನ ನಕಾರಾತ್ಮಕ ಶಕ್ತಿಗಳನ್ನು ದೂರ ಮಾಡುತ್ತದೆ. ಮನೆದೇವರು ಮೂರು ತಲೆಮಾರುಗಳಿಗೆ ಸೀಮಿತವಾದ ದೈವ. ಜಾತಕದ ಪಂಚಮ ಮತ್ತು ನವಮ ಸ್ಥಾನಗಳಿಗೆ ಅನುಗುಣವಾಗಿ ದೈವ ಆರಾಧನೆಯನ್ನು ಮಾಡುವುದರಿಂದ ಪೂರ್ವಜನ್ಮದ ಕರ್ಮಗಳ ಪ್ರಭಾವವನ್ನು ಅರ್ಥೈಸಿಕೊಳ್ಳಬಹುದು. ಎಲ್ಲಾ ನಂಬಿಕೆಯ ಆಧಾರದ ಮೇಲೆ ಸನ್ಮಂಗಳವನ್ನುಂಟುಮಾಡುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ

 

 

 

Source link

ಹೈಕೋರ್ಟ್‌ನಿಂದ ಜಾಮೀನು ಬೆನ್ನಲ್ಲೇ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​ – Kannada News | Murder Accused Wilson Garden Naga Released on Bail from Hindalga Jail

ಬೆಳಗಾವಿ, ಮೇ 22: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗನನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿದ್ದಾಗ, ನಟ ದರ್ಶನ್ ಜೊತೆ ಚಹಾ ಸೇವಿಸುತ್ತಿರುವ ನಾಗನ ಫೋಟೋ ವೈರಲ್ ಆಗಿತ್ತು. ಈ ಘಟನೆಯ ನಂತರ, ಜೈಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆ ಬಳಿಕ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ 2024ರ ಜುಲೈನಲ್ಲಿ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್‌ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ನಾಗ ಈಗ ಬಿಡುಗಡೆಯಾಗಿದ್ದಾನೆ. ಅನಾರೋಗ್ಯದ ಕಾರಣ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ನಾಗ, ಅಲ್ಲಿಂದ ಸ್ವಂತ ವಾಹನದಲ್ಲಿ ತೆರಳಿದ್ದಾನೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ದಿನ ಭವಿಷ್ಯ: ಇಂದು ಈ ರಾಶಿಯವರು ನಿಷ್ಠೆಯನ್ನು ಉಳಿಸಿಕೊಳ್ಳಲಾರರು – Kannada News | Horoscope May 22 Friday 2026; Dina Rashi Bhavishya Today, Checkout the details here

ಮೇಷ ರಾಶಿ :

ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ಕಛೇರಿಯಲ್ಲಿ ಸವಾಲಿನ ಪರಿಸ್ಥಿತಿ ಬರಬಹುದು, ಭಯ ಬೇಡ. ಒತ್ತಡದ ಕಾರಣ ವಿರಾಮವನ್ನೂ ಪಡೆಯಬಹುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು.‌ ನಿಮ್ಮ ಬಗ್ಗೆ ಇರುವ ಅಭಿಮಾನವನ್ನು ನೀವೇ ಕಳೆದುಕೊಳ್ಳಬಹುದು. ಕುಟುಂಬದ ಉಳಿದ ಸದಸ್ಯರೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಅವರ ಸಂಪೂರ್ಣ ಬೆಂಬಲವೂ ಸಿಗಲಿದೆ. ನಿಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಯಶಸ್ವಿಯಾಗುತ್ತವೆ.

ವೃಷಭ ರಾಶಿ :

ನಿಮ್ಮ ಗುರಿಯನ್ನು ಸಾಧಿಸುವ ಆತ್ಮವಿಶ್ವಾಸವಿರಲಿ. ದುರಭ್ಯಾಸವನ್ನು ಬಿಡುವ ಆಲೋಚನೆ ಮಾಡುವಿರಿ. ವ್ಯವಹಾರಕ್ಕೆ ಬೇಕಾದ ಪ್ರಮುಖ ದಾಖಲೆಗಳು ಕಣ್ಮರೆಯಾಗಬಹುದು. ಪರಿಸ್ಥಿತಿ ಶೀಘ್ರದಲ್ಲೇ ನಿಮ್ಮ ಪರವಾಗಿ ಬದಲಾಗುತ್ತದೆ. ಧೈರ್ಯ ಮತ್ತು ಮನಸ್ಸಿಗೆ ಶಾಂತಿ ದೊರಕಲಿದೆ. ಇಲ್ಲವಾದರೆ ಪರಿಸ್ಥಿತಿಯು ಮತ್ತೇನೋ ಆಗುವುದು. ಕಚೇರಿಯಲ್ಲಿನ ಸೂಕ್ಷ್ಮ ವ್ಯವಹಾರವನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು.

ಮಿಥುನ ರಾಶಿ :

ನಿಮಗೆ ಅತೃಪ್ತಿಯ ಭಾವವು ಕಾಡಲಿದೆ. ಪಕ್ಕದರ ಪರಿಚಯವು ಸ್ನೇಹವಾಲಿದೆ. ನಿಮ್ಮ ಅಪಕ್ವತೆಯನ್ನು ತೋರಿಸುವುದು ಬೇಡ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಅಥವಾ ಸ್ಥಾನಮಾನ ಅಲ್ಲಗಳೆಯುವಿರಿ. ನಿಮ್ಮ ಬಗ್ಗೆ ಯಾರಾದರೂ ಹಗುರವಾಗಿ ಮಾತನಾಡುವರು. ಮನೆಯಲ್ಲಿ ಧಾರ್ಮಿಕ ಕಾರ್ಯಗಳಿಂದ ಶಾಂತಿ ಲಭಿಸುವುದು. ಕಛೇರಿಯಲ್ಲಿ ಸಂತೋಷದ ವಾತಾವರಣ ಇದ್ದು ನಿಮಗೆ ಕೆಲಸವನ್ನು ಮಾಡಲು ಅನುಕೂಲವಾಗುವುದು.

ಕರ್ಕಾಟಕ ರಾಶಿ :

ನಿಮಗೆ ಪ್ರಿಯವಾದದ್ದನ್ನು ಯಾರಿಂದಲಾದರೂ ಪಡೆದುಕೊಳ್ಳುವಿರಿ. ಬಹಳ ಕಾಲದಿಂದ ಮಾಡುತ್ತಿರುವ ಕೆಲಸಕ್ಕೆ ಉತ್ತಮ ಫಲಿತಾಂಶ ದೊರೆಯಲಿದೆ. ಉದ್ವೇಗದಲ್ಲಿ ಇರುವಾಗ ಸುಮ್ಮನೆ‌ ಒಂದು ಕಡೆ ಕುಳಿತು ಶಾಂತರಾಗಿ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಗಳು ಕೂಡಲೇ ಫಲ ನೀಡಬಹುದು. ಪ್ರಭಾವಿ ವ್ಯಕ್ತಿಗಳ ಜೊತೆ ಗೌರವದಿಂದ ವರ್ತಿಸಿ. ನಿಮ್ಮ ಅವ್ಯಕ್ತ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು.

ಸಿಂಹ ರಾಶಿ :

ಸಂಶೋಧನೆ ಮಾಡುತ್ತಿರುವವರಿಗೆ ಪೂರಕ ಮಾಹಿತಿ. ಅನವಶ್ಯಕ ವೆಚ್ಚದಿಂದ ದೂರವಿರಿ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಸಂಭವಿಸಬಹುದು, ಸಂಯಮ ಅಗತ್ಯ. ಅಧ್ಯಾತ್ಮದ ಬಗ್ಗೆ ಪರಿಚಿತರ ಬಳಿ ಸಂವಾದ ಮಾಡುವಿರಿ. ನೆಮ್ಮದಿಗಾಗಿ ಚಡಪಡಿಸುವಿರಿ. ಸಂಗಾತಿಗೆ ಬೇಕಾದ ವಸ್ತುವನ್ನು ಕೊಡಿಸುವಿರಿ. ಯಾರಿಂದಲಾದರೂ ಮೋಸ ಹೋಗುವ ಸಾಧ್ಯತೆ ಇದೆ.

ಕನ್ಯಾ ರಾಶಿ:

ನಿಮ್ಮ ಉದ್ಯೋಗ ಅಭಿವೃದ್ಧಿಗೆ ಉತ್ತಮ ಆಲೋಚನೆಗಳು ತಾನಾಗಿಯೇ ಬರಲಿವೆ. ಹಿರಿಯ ಅಧಿಕಾರಿಗಳ ಸಲಹೆಯನ್ನು ಪಡಯುವಿರಿ. ಮನೆಯವರೊಂದಿಗೆ ಪ್ರವಾಸ ಹಾಗೂ ಬೇಕಾದ ವಸ್ತುಗಳ ಖರೀದಿಮಾಡುವಿರಿ. ಕಳಂಕರಹಿತ ವ್ಯವಹಾರವನ್ನು ಮಾಡುವಿರಿ. ಶಾಂತಿಯಿಂದ ಮುನ್ನಡೆಯಿರಿ. ನಿಮ್ಮ ಸಂಬಂಧವು ಮತ್ತಷ್ಟು ಆಪ್ತವಾಗಲು ಯೋಚಿಸುವಿರಿ. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ಕಛೇರಿಯ ವ್ಯವಹಾರವು ನಿಮಗೆ ಸರಿ ಕಾಣಿಸದೇ ಕಲಹವಾಗುವುದು.

ತುಲಾ ರಾಶಿ:

ಹೊಸ ಮನೆಯ ನಿರ್ಮಾಣದ ಬಗ್ಗೆ ಯೋಜನೆಯನ್ನು ಸಿದ್ಧಗೊಳಿಸಿಕೊಳ್ಳುವಿರಿ. ಶ್ರಮಕ್ಕೆ ಒಳ್ಳೆಯ ಫಲಿತಾಂಶ ಸಿಗುತ್ತದೆ. ಕಳೆದುಹೋದ ವಸ್ತುವಿನ ಮೌಲ್ಯವು ನಿಮಗೆ ಇಂದು ಗೊತ್ತಾಗದೇ ಹೋಗುವುದು. ಕಾರ್ಯಭಾರದಿಂದ ಕೆಲವೊಂದು ನಿರಾಶೆಗಳಾಗಬಹುದು, ಆದರೆ ದಿನದ ಕೊನೆಗೆ ಸಮಾಧಾನ ಸಿಗಲಿದೆ. ಆಸ್ತಿ ಸಂಬಂಧಿತ ವಿಚಾರದಲ್ಲಿ ಯಶಸ್ಸು ದೊರಕುವುದು. ಕೆಲವರನ್ನು ಹತ್ತಿರಕ್ಕಿಂತ‌ ದೂರದಲ್ಲಿದ್ದಾಗಲೇ ಚೆನ್ನಾಗಿ ತಿಳಿಯಬಹುದು.

ವೃಶ್ಚಿಕ ರಾಶಿ :

ಇಂದು ನಕಾರಾತ್ಮಕತೆಯ ವಿರುದ್ಧ ತೀವ್ರವಾದ ಹೋರಾಟ ಮಾಡುವಿರಿ. ನಿಮ್ಮ ಯೋಜನೆಯನ್ನು ಹೇಳಬಾರದ ಸ್ಥಿತಿಯಲ್ಲಿ ಹೇಳುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸುವಿರಿ. ಆರೋಗ್ಯದ ಸಮಸ್ಯೆಗಳು ಸುಲಭವಾಗಿ ಪರಿಹಾರವಾಗಬಹುದು. ಕೆಲಸವನ್ನು ಬದಲಾಯಿಸಲು ನೀವು ಯೋಚಿಸುತ್ತಿದ್ದರೆ ಒಳ್ಳೆಯ ಸ್ಥಾನ ಲಭ್ಯವಾಗಲಿದೆ. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವನ್ನು ಸತತ ಪ್ರಯತ್ನದಿಂದ ಪೂರ್ಣಮಾಡುವಿರಿ.

ಧನು ರಾಶಿ :

ಉದ್ಯೋಗದಲ್ಲಿ ಧೈರ್ಯದಿಂದ ಮುನ್ನಡೆಯಲು ಅನುಭವಿಗಳ ಸಲಹೆಯು ಅವಶ್ಯಕ. ನಿಮಗೆ ಆಗದಿರುವುದನ್ನು ಬೇರೆಯವರಿಂದ ಮಾಡಿಸುವಿರಿ. ನಿಮ್ಮ ಕಾರ್ಯಕ್ಕೆ ಹಿರಿಯರಿಂದ ಮೆಚ್ಚುಗೆ ಸಿಗಬಹುದು. ವ್ಯಾಪಾರದ ತೊಂದರೆಗಳು ನಿಧಾನವಾಗಿ ಪರಿಹಾರ ಕಾಣುತ್ತವೆ. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗಬಹುದು. ನಿಮಗೆ ಸಿಕ್ಕ ಆದರದಿಂದ ಉತ್ಸಾಹವು ಬರಲಿದೆ. ನಿಮ್ಮ ಸಾವಧಾನತೆಯು ಕಿರಿಕಿರಿಯನ್ನು ಇತರರಿಗೆ ಕೊಟ್ಟೀತು.

ಮಕರ ರಾಶಿ :

ಇಂದು ನಿಮ್ಮ ದೇಹವು ಹೆಚ್ಚು ವಿಶ್ರಾಂತಿಯನ್ನು ಕೇಳಬಹುದು. ಪ್ರವಾಸವನ್ನು ಮಾಡಿ ಆನಂದಿಸುವಿರಿ. ಸಕಾರಾತ್ಮಕ ಬದಲಾವಣೆಗಳು ಸಂಭವಿಸಬಹುದು. ನಿಮ್ಮನ್ನು ಅರಸಿಕೊಂಡ ಬರುವ ಗೌರವವೇ ನಿಜವಾದ ಸಮ್ಮಾನ. ಯಾರದೋ ಒತ್ತಡಕ್ಕೆ ಮಣಿದು ಅಧಿಕಾರಿಗಳು ತಮ್ಮ ಕಾರ್ಯವನ್ನು ಮಾಡಬೇಕಾಗುವುದು. ಮಕ್ಕಳ ಪ್ರಗತಿಯು ನಿಮಗೆ ಸಂತೋಷವನ್ನು ಕೊಡುವುದು. ಕಛೇರಿಯ ಕೆಲಸಗಳು ಒತ್ತಡದಿಂದ ಇರಲಿದೆ. ಯಾರದೋ ಅನುಭವವು ನಿಮ್ಮದಾಗದು.

ಕುಂಭ ರಾಶಿ :

ನಿಮ್ಮ ಮನಃಸ್ಥಿತಿಯಲ್ಲಿ ಬದಲಾವಣೆ ಇರಲಿದೆ. ಯಾವುದೇ ಪರಿವರ್ತನೆಗೆ ಸಮಯವೂ ಅವಶ್ಯಕ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಬರುವುದು. ಆಸ್ತಿ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಚ್ಚರಿಕೆಯಿಂದಿರಿ. ಮನಸ್ಸಿನಲ್ಲಿ ಕೆಲವು ಗೊಂದಲಗಳು ಬರುವ ಸಾಧ್ಯತೆ ಇದೆ. ಕುಟುಂಬ ಸದಸ್ಯರಿಂದ ಬೆಂಬಲ ಸಿಗಲಿದೆ. ಸಿಟ್ಟಿನ ಮೇಲೆ ನಿಯಂತ್ರಣ ಬೇಕಾಗುವುದು. ನಿಮ್ಮ ಮೇಲೆ‌ ಜವಾಬ್ದಾರಿಗಳು ಅಧಿಕವಾಗಲಿದ್ದು, ಚಿಂತೆಯು ಕಾಡಬಹುದು.

ಮೀನ ರಾಶಿ :

ಸಣ್ಣ ವಿಷಯಗಳನ್ನು ದೊಡ್ಡದಾಗಿ ಮಾಡಿಕೊಳ್ಳಲು ಹೋಗದೇ ಅಲ್ಲಿಯೇ ಮುಕ್ತಾಯಗೊಳಿಸಿ. ಎದುರು ಮಾತನಾಡದೇ ಸುಮ್ಮನಿರಲಾಗದು. ಭವಿಷ್ಯದ ತುಂಬಾ ಆಲೋಚನೆಗಳನ್ನು ಮಾಡುವ ಅವಶ್ಯತೆ ಇಲ್ಲ. ಉದ್ಯೋಗದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹದ ಸಂಭ್ರಮ ಮನೆಯಲ್ಲಿ ಇರುವುದು. ಗೌರವವನ್ನು ನಿರೀಕ್ಷಿಸದಿದ್ದರೂ ನಿಮಗೆ ಇಂದು ಲಭ್ಯವಾಗಲಿದೆ. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಗಂಡ, ಕರಣ : ಗರಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:45 – 12:21, ಯಮಗಂಡ ಕಾಲ 15:33 – 17:09, ಗುಳಿಕ ಕಾಲ 07:33 – 09:09

-ಲೋಹಿತ ಹೆಬ್ಬಾರ್-8762924271 (what’s app only)

Source link

GT vs CSK: ಸಿಎಸ್​ಕೆ ವಿರುದ್ಧ 89 ರನ್​ಗಳಿಂದ ಗೆದ್ದ ಗುಜರಾತ್‌; ಅಗ್ರಸ್ಥಾನದಲ್ಲಿ ಆರ್​ಸಿಬಿ ಸೇಫ್ – Kannada News | IPL 2026: GT Dominates CSK by 89 Runs, Secures 2nd Spot; Chennai Eliminated

ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿದ್ದವು. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಲೀಗ್ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು 89 ರನ್​ಗಳಿಂದ ಸೋಲಿಸಿದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಅಂದರೆ ಹಾಲಿ ಚಾಂಪಿಯನ್‌ ಆರ್​ಸಿಬಿ ಅಗ್ರಸ್ಥಾನದಲ್ಲೇ ಮುಂದುವರೆದಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಟೈಟಾನ್ಸ್ ಮೂವರ ಅರ್ಧಶತಕದ ನೆರವಿನಿಂದ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಎಸ್​ಕೆ 140 ರನ್​ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿತು.

ಗುಜರಾತ್ ಬ್ಯಾಟಿಂಗ್ ಅಬ್ಬರ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ನಾಯಕ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಮೊದಲ ವಿಕೆಟ್‌ಗೆ 12.2 ಓವರ್‌ಗಳಲ್ಲಿ 125 ರನ್ ಸೇರಿಸಿದರು. ಗಿಲ್ 37 ಎಸೆತಗಳಲ್ಲಿ 64 ರನ್ ಗಳಿಸಿದರೆ, ಸುದರ್ಶನ್ 53 ಎಸೆತಗಳಲ್ಲಿ 84 ರನ್ ಗಳಿಸಿ ಔಟಾದರು. ಇನ್ನಿಂಗ್ಸ್ ಅಂತ್ಯದ ವೇಳೆಗೆ, ಜೋಸ್ ಬಟ್ಲರ್ 27 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಒಳಗೊಂಡಂತೆ ಅಜೇಯ 57 ರನ್ ಗಳಿಸಿದರು. ಈ ಮೂವರ ಅರ್ಧಶತಕದಿಂದಾಗಿ ಗುಜರಾತ್ 20 ಓವರ್‌ಗಳಲ್ಲಿ 229 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿತು. ಸಿಎಸ್‌ಕೆ ಪರ ಸ್ಪೆನ್ಸರ್ ಜಾನ್ಸನ್, ಅನ್ಶುಲ್ ಕಾಂಬೋಜ್ ಮತ್ತು ಮುಖೇಶ್ ಚೌಧರಿ ತಲಾ 1 ವಿಕೆಟ್ ಪಡೆದರಾದರೂ ಯಾವುದೇ ಬೌಲರ್​ಗೆ ರನ್​ ವೇಗಕ್ಕೆ ಕಡಿವಾಣ ಹಾಕಲು ಸಾಧ್ಯವಾಗಲಿಲ್ಲ.

ಸಿಎಸ್​ಕೆ ಕಳಪೆ ಬ್ಯಾಟಿಂಗ್

230 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಆರಂಭ ಪಡೆಯಿತು. ಮೊದಲ ಓವರ್‌ನಲ್ಲೇ ಮೊಹಮ್ಮದ್ ಸಿರಾಜ್ ಸಂಜು ಸ್ಯಾಮ್ಸನ್ ಅವರನ್ನು 0 ರನ್‌ಗೆ ಔಟ್ ಮಾಡಿದರು. ನಂತರ, ರುತುರಾಜ್ ಗಾಯಕ್ವಾಡ್ ಮತ್ತು ಉರ್ವಿಲ್ ಪಟೇಲ್ ಕೂಡ ಸಿರಾಜ್ ಬೌಲಿಂಗ್‌ಗೆ ಬಲಿಯಾದರು. ಸಿರಾಜ್ ತನ್ನ ಮೊದಲ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿ ಸಿಎಸ್‌ಕೆ ಬೆನ್ನೆಲುಬನ್ನು ಮುರಿದರು. ಕಗಿಸೊ ರಬಾಡ ಮತ್ತು ರಶೀದ್ ಖಾನ್ ಕೂಡ ಅದ್ಭುತ ಬೌಲಿಂಗ್ ಮಾಡಿದರು. ರಬಾಡ ಮತ್ತು ರಶೀದ್ ಖಾನ್ ಕೂಡ ಮೂರು ವಿಕೆಟ್‌ಗಳನ್ನು ಪಡೆದರು.

GT vs CSK IPL 2026 Highlights: ಗುಜರಾತ್ ವಿರುದ್ಧ ಹೀನಾಯವಾಗಿ ಸೋತ ಸಿಎಸ್​ಕೆ

ಮತ್ತೊಂದೆಡೆ, ಶಿವಂ ದುಬೆ ಸಿಎಸ್​ಕೆ ಪರ ಏಕಾಂಗಿ ಹೋರಾಟ ನಡೆಸಿ 17 ಎಸೆತಗಳಲ್ಲಿ 47 ರನ್​ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಸಿಎಸ್​ಕೆ 13.4 ಓವರ್‌ಗಳಲ್ಲಿ 140 ರನ್‌ಗಳಿಗೆ ಆಲೌಟ್ ಆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:24 pm, Thu, 21 May 26

Source link

ದರ್ಶನ್ ಜೊತೆ ಟೀ ಕುಡಿದು ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್ – Kannada News | Rowdy sheeter Wilson garden naga who had tea with darshan released from Belagavi Jail

ಬೆಳಗಾವಿ, (ಮೇ 21):ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ (Darshan) ಜೊತೆ ಚಹಾ ಹೀರುತ್ತ ಧಮ್ ಹೊಡೆದು ಭಾರೀ ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ (Wilson garden naga) ಜೈಲಿನಿಂದ ಬಿಡುಗಡೆಯಾಗಿದ್ದಾನೆ. ದರ್ಶನ್ ಜೊತೆ ಕೂತ ಜೈಲಿನಲ್ಲಿ ಮೋಜು ಮಸ್ತಿ ಮಾಡಿದ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಹೀಗಾಗಿ ನಾಗನನ್ನು ಪರಪ್ಪನ ಅಗ್ರಹಾರ ಜೈಲಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಜಾಮೀನು ಪಡೆದಿರುವ ನಾಗ, ಜೈಲಿಂದ ರಿಲೀಸ್ ಆಗಿದ್ದಾನೆ. ಆದ್ರೆ, ದರ್ಶನ್ ಮಾತ್ರ ಇನ್ನೂ ಒಂದು ವರ್ಷ ಜೈಲಿನಲ್ಲೇ ಇರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version