ಮೆಲೋಡಿಯೆಂದೇ ಟ್ರೆಂಡ್ ಆಗಿರುವ ಮೆಲೋನಿಯ ಆಸ್ತಿ ಎಷ್ಟು? ಇಟಲಿ ಪ್ರಧಾನಿ ಕುರಿತ ರೋಚಕ ಸಂಗತಿಗಳಿವು – Kannada News | Giorgia meloni Net Worth and Family Interesting Facts about Italy PM

ನವದೆಹಲಿ, ಮೇ 21: ಇಟಲಿಯ ಮೊದಲ ಮಹಿಳಾ ಪ್ರಧಾನ ಮಂತ್ರಿ ಮತ್ತು ಜಾಗತಿಕ ರಾಜಕಾರಣದ ಅತ್ಯಂತ ಪ್ರಭಾವಶಾಲಿ ನಾಯಕಿಯರಲ್ಲಿ ಒಬ್ಬರಾದ ಜಾರ್ಜಿಯಾ ಮೆಲೋನಿ (Giorgia Meloni) ಅವರ ಜೀವನದ ರೋಚಕ ಕಥೆ ಮತ್ತು ಅವರ ಆಸ್ತಿ ವಿವರಗಳ ಮಾಹಿತಿ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಸ್ನೇಹಿತೆ ಎಂದೇ ಬಿಂಬಿಸಲ್ಪಟ್ಟಿರುವ ಮೆಲೋನಿ ಇಟಲಿಯ ಪ್ರಧಾನಿ. ಮೋದಿ ಹಾಗೂ ಮೆಲೋನಿಯವರ ಭೇಟಿಯ ಫೋಟೋಗಳು, ವಿಡಿಯೋಗಳು, ಸೆಲ್ಫಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಇವರಿಬ್ಬರ ಅಭಿಮಾನಿಗಳು ಈ ಜೋಡಿಗೆ ಮೆಲೋಡಿ ಎಂದು ಹೆಸರಿಟ್ಟಿದ್ದಾರೆ.

ಜಾರ್ಜಿಯಾ ಮೆಲೋನಿ 1977ರ ಜನವರಿ 15ರಂದು ಇಟಲಿಯ ರೋಮ್ ನಗರದಲ್ಲಿ ಜನಿಸಿದರು. ಇವರ ಬಾಲ್ಯ ಅಷ್ಟು ಸುಲಭವಾಗಿರಲಿಲ್ಲ. ಇವರಿಗೆ ಕೇವಲ ಒಂದೂವರೆ ವರ್ಷ ವಯಸ್ಸಾಗಿದ್ದಾಗ ಇವರ ತಂದೆ ಫ್ರಾನ್ಸೆಸ್ಕೊ ಮೆಲೋನಿ ಹೆಂಡತಿ ಮತ್ತು ಮಕ್ಕಳನ್ನು ಬಿಟ್ಟು ಸ್ಪೇನ್‌ಗೆ ಓಡಿಹೋದರು. ತಾಯಿಯೇ ಇವರನ್ನು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಸಾಕಿ ಬೆಳೆಸಿದರು. ಮೆಲೋನಿ ಅವರು ರೋಮ್‌ನ ಅತ್ಯಂತ ಬಡ ಮತ್ತು ಕಾರ್ಮಿಕ ವರ್ಗದವರು ವಾಸಿಸುವ ‘ಗರ್ಬಟೆಲ್ಲಾ’ ಎಂಬ ಪ್ರದೇಶದಲ್ಲಿ ಬೆಳೆದರು.

Pm Modi With Meloni

ಮೆಲೋನಿ ಅವರು ಭಾಷಾಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಕುಟುಂಬಕ್ಕೆ ಆಸರೆಯಾಗಲು ಅವರು ರೆಸ್ಟೋರೆಂಟ್​ಗಳಲ್ಲಿ ಬಾರ್‌ಮೇಡ್ ಆಗಿ, ಮನೆಗಳಲ್ಲಿ ಬೇಬಿಸಿಟ್ಟರ್ ಆಗಿ ಮತ್ತು ರೋಮ್‌ನ ಪ್ರಸಿದ್ಧ ನೈಟ್ ಕ್ಲಬ್‌ಗಳಲ್ಲಿ ಕೆಲಸ ಮಾಡಿದ್ದರು. ಮೆಲೋನಿ ಅವರು ತಮ್ಮ 15ನೇ ವಯಸ್ಸಿನಲ್ಲೇ ರಾಜಕೀಯಕ್ಕೆ ಪ್ರವೇಶಿಸಿದರು. ಇಟಲಿಯ ಕಮ್ಯುನಿಸ್ಟ್ ವಿರೋಧಿ ಮತ್ತು ರಾಷ್ಟ್ರೀಯತಾವಾದಿ ‘ಯೂತ್ ಫ್ರಂಟ್’ ಸೇರಿದರು. ಚುರುಕಾದ ಮಾತುಗಾರಿಕೆ ಮತ್ತು ಧೈರ್ಯದಿಂದಾಗಿ ಅವರು ವಿದ್ಯಾರ್ಥಿ ನಾಯಕಿಯಾಗಿ ಬೆಳೆದರು.

ಇದನ್ನೂ ಓದಿ: ಮೆಲೋನಿಗೆ ಮೋದಿಯಿಂದ ಚಾಕೊಲೇಟ್ ಗಿಫ್ಟ್; ಆದರೆ, ಷೇರುಬೆಲೆ ಹೆಚ್ಚಿದ್ದು ರಿಯಲ್ ಎಸ್ಟೇಟ್ ಕಂಪನಿಯದ್ದು; ಯಾಕೆ?

ತಮ್ಮ 29ನೇ ವಯಸ್ಸಿನಲ್ಲಿ ಇಟಲಿಯ ಸಂಸತ್ ಸದಸ್ಯೆಯಾಗಿ ಆಯ್ಕೆಯಾದರು. ಇಟಲಿಯ ಅಂದಿನ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ ಅವರ ಸರ್ಕಾರದಲ್ಲಿ ‘ಯುವಜನ ಕಲ್ಯಾಣ ಸಚಿವೆ’ ಆಗಿ ನೇಮಕಗೊಂಡರು. ಇದರೊಂದಿಗೆ ಇಟಲಿಯ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿನ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 2012ರಲ್ಲಿ ಮೆಲೋನಿ ತಮ್ಮದೇ ಆದ ‘ಬ್ರದರ್ಸ್ ಆಫ್ ಇಟಲಿ’ (Brothers of Italy) ಎಂಬ ಬಲಪಂಥೀಯ ರಾಜಕೀಯ ಪಕ್ಷವನ್ನು ಸ್ಥಾಪಿಸಿದರು. 2022ರ ಸಾರ್ವತ್ರಿಕ ಚುನಾವಣೆಯಲ್ಲಿ ಇವರ ಪಕ್ಷವು ಭರ್ಜರಿ ಜಯ ಗಳಿಸಿತು. ಅಕ್ಟೋಬರ್ 2022ರಲ್ಲಿ ಜಾರ್ಜಿಯಾ ಮೆಲೋನಿ ಇಟಲಿಯ ಮೊಟ್ಟಮೊದಲ ಮಹಿಳಾ ಪ್ರಧಾನಿಯಾಗಿ ಇತಿಹಾಸ ಸೃಷ್ಟಿಸಿದರು.

Pm Modi With Meloni

ಜಾರ್ಜಿಯಾ ಮೆಲೋನಿ ಅವರಿಗೆ ‘ಜಿನೆವ್ರಾ’ ಎಂಬ ಮಗಳಿದ್ದಾಳೆ. ತಮ್ಮ ದೀರ್ಘಕಾಲದ ಸಂಗಾತಿಯಾಗಿದ್ದ ಪತ್ರಕರ್ತ ಆಂಡ್ರಿಯಾ ಗಿಯಾಂಬ್ರುನೋ ಅವರೊಂದಿಗೆ ಉಂಟಾದ ಭಿನ್ನಾಭಿಪ್ರಾಯದ ಕಾರಣ ಅವರು 2023ರಲ್ಲಿ ವಿಚ್ಛೇದನ ಪಡೆದಿದ್ದರು. ಈಗ ಅವರು ತಮ್ಮ ಮಗಳೊಂದಿಗೆ ವಾಸವಾಗಿದ್ದಾರೆ.


ಅನೇಕ ಪಾಶ್ಚಿಮಾತ್ಯ ದೇಶಗಳ ನಾಯಕರಿಗೆ ಹೋಲಿಸಿದರೆ ಜಾರ್ಜಿಯಾ ಮೆಲೋನಿ ತೀರಾ ಶ್ರೀಮಂತ ಹಿನ್ನೆಲೆಯಿಂದ ಬಂದವರಲ್ಲ. ಇಟಲಿಯ ಅಧಿಕೃತ ಆಸ್ತಿ ಘೋಷಣೆಗಳ ಪ್ರಕಾರ ಅವರ ಆಸ್ತಿ ವಿವರ ಹೀಗಿದೆ. ಮೆಲೋನಿ ಅವರ ಒಟ್ಟು ಆಸ್ತಿಯ ಮೌಲ್ಯ ಸರಿಸುಮಾರು 2 ಮಿಲಿಯನ್ ಯೂರೋಗಳಿಂದ 2.5 ಮಿಲಿಯನ್ ಯೂರೋಗಳು (ಭಾರತೀಯ ರೂ.ಗಳಲ್ಲಿ ಸುಮಾರು 18ರಿಂದ 22 ಕೋಟಿ).

ಇದನ್ನೂ ಓದಿ: ವೆಲ್​ಕಮ್ ಟು ರೋಮ್, ಮೈ ಫ್ರೆಂಡ್, ರೋಮ್​ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ

ರೋಮ್ ನಗರದಲ್ಲಿ ಅವರು ತಮ್ಮ ಮಗಳೊಂದಿಗೆ ವಾಸಿಸಲು ಇತ್ತೀಚೆಗೆ ದೊಡ್ಡದೊಂದು ಸುಸಜ್ಜಿತ ಮನೆಯನ್ನು ಖರೀದಿಸಿದ್ದಾರೆ. ಇದರ ಮೌಲ್ಯ ಸುಮಾರು 1 ಮಿಲಿಯನ್ ಯೂರೋಗಳಿಗಿಂತ ಅಧಿಕ ಎನ್ನಲಾಗಿದೆ. ಇಟಲಿಯ ಪ್ರಧಾನ ಮಂತ್ರಿಯಾಗಿ ಅವರಿಗೆ ವಾರ್ಷಿಕವಾಗಿ ಸುಮಾರು 80,000ದಿಂದ 1 ಲಕ್ಷ ಯೂರೋಗಳ (ಸುಮಾರು 70ರಿಂದ 90 ಲಕ್ಷ ರೂ.) ಸಂಬಳ ಸಿಗುತ್ತದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಇವರ ರಾಜತಾಂತ್ರಿಕ ಸ್ನೇಹ ಮತ್ತು “ಮೆಲೋಡಿ” (#Melodi) ಎಂಬ ಸಾಮಾಜಿಕ ಮಾಧ್ಯಮಗಳ ಟ್ರೆಂಡ್ ಭಾರತದಲ್ಲೂ ಇವರನ್ನು ಅತ್ಯಂತ ಜನಪ್ರಿಯಗೊಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 8:08 pm, Thu, 21 May 26

Source link

GT vs CSK: ಕೊನೆಯ ಲೀಗ್ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ – Kannada News | MS Dhoni Misses Entire IPL 2026 League Stage; CSK Fans Disappointed by Injury

ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಅಂದರೆ ಲೀಗ್ ಹಂತದಲ್ಲಿ ಈ ಎರಡು ತಂಡಗಳಿಗೆ ಯಾವುದೇ ಪಂದ್ಯ ಬಾಕಿ ಉಳಿದಿಲ್ಲ. ಇದರಲ್ಲಿ ಗುಜರಾತ್ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಆದರೆ ಸಿಎಸ್​ಕೆಗೆ ಪ್ಲೇಆಫ್‌ ಹಾದಿ ಭಾಗಶಃ ಮುಚ್ಚಿದೆ. ಇದರರ್ಥ ಸಿಎಸ್​ಕೆಗೆ ಈ ಸೀಸನ್​ನಲ್ಲಿ ಇದೇ ಕೊನೆಯ ಪಂದ್ಯ. ಹೀಗಾಗಿ ಈ ಪಂದ್ಯದಲ್ಲಾದರೂ ಎಂಎಸ್ ಧೋನಿ (MS Dhoni) ಆಡುವುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಧೋನಿ ಈ ಪಂದ್ಯದಲ್ಲೂ ಕಣಕ್ಕಿಳಿಯಲಿಲ್ಲ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಮಾಡುವುದಾಗಿ ಹೇಳಿದರು. ಇದಾದ ಬಳಿಕ ತಂಡದ ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ ರುತುರಾಜ್ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ ಎಂದರು. ಇದನ್ನು ಕೇಳಿದ ಫ್ಯಾನ್ಸ್ ಧೋನಿ ಈ ಪಂದ್ಯದಲ್ಲಿ ಆಡಬಹುದು ಎಂದುಕೊಂಡಿದ್ದರು. ಆದರೆ ಆ ಎರಡು ಬದಲಾವಣೆಗಳಲ್ಲಿ ಧೋನಿ ಹೆಸರು ಇರಲಿಲ್ಲ. ಹೀಗಾಗಿ ಈ ಸೀಸನ್​ನಲ್ಲಿ ಧೋನಿ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ. ಐಪಿಎಲ್ ಇತಿಹಾಸದಲ್ಲಿ ಧೋನಿ ಒಂದೇ ಒಂದು ಲೀಗ್ ಪಂದ್ಯವನ್ನು ಆಡದಿರುವುದು ಇದೇ ಮೊದಲು.

ಸೀಸನ್​ ಆರಂಭದಲ್ಲಿ ಗಾಯಗೊಂಡ ಧೋನಿ

ಸೀಸನ್ ಆರಂಭಕ್ಕೂ ಮುನ್ನವೇ ಧೋನಿ ಕಾಲಿನ ಗಾಯಕ್ಕೆ ಒಳಗಾದರು. ಆರಂಭದಲ್ಲಿ ಅವರು ಎರಡು ವಾರಗಳ ನಂತರ ತಂಡಕ್ಕೆ ಮರಳುತ್ತಾರೆ ಎಂದು ತಂಡದ ಆಡಳಿತ ಮಂಡಳಿ ಹೇಳಿತ್ತು. ಆದರೆ ಅದು ಸಾಧ್ಯವಾಗಲೇ ಇಲ್ಲ. ಸತತ ಪ್ರಯತ್ನದ ಬಳಿಕವೂ ಧೋನಿ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರ ಜೊತೆಗೆ ಲೀಗ್ ಹಂತ ಮುಗಿಯುವ ಹಂತದಲ್ಲಿದ್ದಾಗ ಧೋನಿ ಮತ್ತೆ ಗಾಯಕ್ಕೆ ಒಳಗಾದರು. ಹೀಗಾಗಿ ಧೋನಿ ಕೊನೆಯ ಲೀಗ್ ಪಂದ್ಯಕ್ಕೂ ಮುನ್ನ ತಂಡವನ್ನು ತೊರೆದು ರಾಂಚಿಗೆ ಮರಳಿದ್ದಾರೆ ಎಂದು ವರದಿಯಾಗಿತ್ತು. ಇಂದಿನ ಪಂದ್ಯದಲ್ಲಿ ಧೋನಿ ಆಡದಿರುವುದನ್ನು ನೋಡಿದರೆ ಅವರು ರಾಂಚಿಗೆ ಮರಳಿರುವುದು ಖಚಿತವೆನ್ನಲಾಗುತ್ತಿದೆ.

ಅಂಪೈರ್ ವೈಡ್ ನೀಡಿ; ಸಾಕ್ಷಿ ಧೋನಿ ರಿಯಾಕ್ಷನ್ ವೈರಲ್

ಒಂದು ಪಂದ್ಯವನ್ನು ಆಡಲಿಲ್ಲ

ಎಂಎಸ್ ಧೋನಿ ಐಪಿಎಲ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರಲ್ಲಿ ಒಬ್ಬರು. ಧೋನಿ ಪ್ರತಿ ಐಪಿಎಲ್ ಆವೃತ್ತಿಯಲ್ಲಿ 10 ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದಾರೆ. ಆದರೆ ಧೋನಿ ಒಂದೇ ಒಂದು ಲೀಗ್ ಪಂದ್ಯವನ್ನು ಆಡದೆ ಕೊನೆಗೊಂಡಿರುವುದು ಇದೇ ಮೊದಲು. ಧೋನಿ ಇದುವರೆಗೆ ಐಪಿಎಲ್‌ನಲ್ಲಿ 278 ಪಂದ್ಯಗಳನ್ನು ಆಡಿದ್ದು, 5439 ರನ್ ಗಳಿಸಿದ್ದಾರೆ. ಅವರು ತಮ್ಮ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಐದು ಬಾರಿ ಚಾಂಪಿಯನ್‌ ಪಟ್ಟಕ್ಕೇರಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೆಚ್ಚುತ್ತಿರುವ ಬಿಸಿಲು ಮತ್ತು ಉಷ್ಣಾಂಶದಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತಾ? ಏನ್ ಹೇಳ್ತಾರೆ ತಜ್ಞರು – Kannada News | Summer Heat And Your Heart: Why Cardiac Events Spike During Heatwaves

ದೇಶದ ಹಲವು ಭಾಗಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತೀವ್ರ ಬಿಸಿಲು ಮತ್ತು ಬಿಸಿಗಾಳಿ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆಸ್ಪತ್ರೆಗಳಲ್ಲಿ ಡಿಹೈಡ್ರೇಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ, ಹೆಚ್ಚುತ್ತಿರುವ ಬಿಸಿಲಿನಿಂದ ಹೃದಯಾಘಾತದ ಅಪಾಯವೂ ಹೆಚ್ಚುತ್ತದೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ದೆಹಲಿ ರಾಜೀವ್ ಗಾಂಧಿ ಆಸ್ಪತ್ರೆಯ ಹೃದಯರೋಗ ತಜ್ಞ ಡಾ. ಅಜಿತ್ ಜೈನ್ ಅವರ ಪ್ರಕಾರ, ಬಿಸಿಲು ನೇರವಾಗಿ ಹೃದಯಾಘಾತಕ್ಕೆ (Heart Attack) ಕಾರಣವಾಗುವುದಿಲ್ಲ. ಆದರೆ ಅತಿಯಾದ ಉಷ್ಣಾಂಶ ಹೃದಯದ ಮೇಲೆ ಹೆಚ್ಚುವರಿ ಒತ್ತಡ ಉಂಟುಮಾಡಬಹುದು. ವಿಶೇಷವಾಗಿ ಈಗಾಗಲೇ ಹೃದಯ ಸಂಬಂಧಿತ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ. ಹಾಗಾದರೆ ಬಿಸಿಲು ಮತ್ತು ಹೃದಯದ ಆರೋಗ್ಯಕ್ಕೂ ಇರುವ ಸಂಬಂಧವೇನು, ಈ ಅಪಾಯ ಯಾರಲ್ಲಿ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬಿಸಿಲು ಮತ್ತು ಹೃದಯದ ಆರೋಗ್ಯದ ನಡುವಿನ ಸಂಬಂಧವೇನು?

ತಾಪಮಾನ ಹೆಚ್ಚಾದಾಗ ದೇಹವನ್ನು ತಂಪಾಗಿಡಲು ದೇಹ ಹೆಚ್ಚು ಶ್ರಮಿಸುತ್ತದೆ. ಈ ಸಮಯದಲ್ಲಿ ಹೃದಯವು ರಕ್ತ ಸಂಚಾರವನ್ನು ವೇಗವಾಗಿ ನಡೆಸಬೇಕಾಗುತ್ತದೆ. ಹೆಚ್ಚು ಬೆವರು ಬರುತ್ತಿರುವುದರಿಂದ ದೇಹದಲ್ಲಿ ನೀರು ಮತ್ತು ಅಗತ್ಯ ಖನಿಜಗಳ ಕೊರತೆ ಉಂಟಾಗಬಹುದು. ಇದರಿಂದ ರಕ್ತದೊತ್ತಡ ಮತ್ತು ಹೃದಯ ಬಡಿತದಲ್ಲಿ ಬದಲಾವಣೆ ಸಂಭವಿಸಬಹುದು. ತಜ್ಞರ ಪ್ರಕಾರ, ದೀರ್ಘಕಾಲ ಡಿಹೈಡ್ರೇಶನ್ ಇದ್ದರೆ ರಕ್ತ ಗಟ್ಟಿಯಾಗುವ ಸಾಧ್ಯತೆ ಹೆಚ್ಚುತ್ತದೆ. ಕೆಲ ಸಂದರ್ಭಗಳಲ್ಲಿ ಇದರಿಂದ ರಕ್ತನಾಳಗಳಲ್ಲಿ ರಕ್ತದ ಗುಡ್ಡೆ (Blood Clot) ಉಂಟಾಗಿ ಹೃದಯಾಘಾತಕ್ಕೂ ಕಾರಣವಾಗಬಹುದು.

ಯಾರಲ್ಲಿ ಈ ಅಪಾಯ ಹೆಚ್ಚಾಗಿ ಕಂಡುಬರುತ್ತದೆ?

  • ಹೈ ಬಿಪಿ ಇರುವವರಲ್ಲಿ
  • ಹೃದಯರೋಗಿಗಳಲ್ಲಿ
  • ವೃದ್ಧರಲ್ಲಿ
  • ಹೆಚ್ಚು ಸಮಯ ಬಿಸಿಲಿನಲ್ಲಿ ಕೆಲಸ ಮಾಡುವವರಲ್ಲಿ
  • ಡಿಹೈಡ್ರೇಶನ್ ಸಮಸ್ಯೆ ಇರುವವರಲ್ಲಿ ಈ ಅಪಾಯ ಹೆಚ್ಚು

ಇದನ್ನೂ ಓದಿ: ಹೃದಯಾಘಾತ ಆಗುವ 30 ದಿನಗಳ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಂಡುಬರುತ್ತದೆ

ಗಮನಿಸಬೇಕಾದ ಲಕ್ಷಣಗಳು:

  • ಅಚಾನಕ್ ಹೆಚ್ಚು ಬೆವರು ಬರುವುದು
  • ಹೃದಯ ಬಡಿತ ವೇಗವಾಗುವುದು
  • ಎದೆನೋವು
  • ಉಸಿರಾಟದ ತೊಂದರೆ
  • ದೌರ್ಬಲ್ಯ ಮತ್ತು ತಲೆಸುತ್ತು

ಬಿಸಿಲಿನ ಸಮಯದಲ್ಲಿ ಹೇಗೆ ಜಾಗರೂಕರಾಗಬೇಕು?

ತಜ್ಞರ ಸಲಹೆಯಂತೆ, ದಿನಪೂರ್ತಿ ಸಾಕಷ್ಟು ನೀರು ಕುಡಿಯಬೇಕು. ಮಧ್ಯಾಹ್ನದ ತೀವ್ರ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ತೆಳುವಾದ ಹಾಗೂ ಹಗುರವಾದ ಬಟ್ಟೆ ಧರಿಸುವುದು ಉತ್ತಮ. ಹೃದಯ ಸಂಬಂಧಿತ ಕಾಯಿಲೆ ಇರುವವರು ತಮ್ಮ ಔಷಧಿಗಳನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು. ಜೊತೆಗೆ ಹೆಚ್ಚುತ್ತಿರುವ ಬಿಸಿಲಿನ ಪರಿಣಾಮವನ್ನು ಲಘುವಾಗಿ ತೆಗೆದುಕೊಳ್ಳದೆ, ದೇಹದಲ್ಲಿ ಕಂಡುಬರುವ ಯಾವುದೇ ಅಸಹಜ ಲಕ್ಷಣಗಳನ್ನು ತಕ್ಷಣ ವೈದ್ಯರಿಗೆ ತೋರಿಸುವುದು ಅತ್ಯಂತ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮರಗಳು ಧರೆಗೆ, ನೀರು ರಸ್ತೆಗೆ: ಬೆಂಗಳೂರಿನಲ್ಲಿ ಮಳೆಯ ಅವಾಂತರಗಳು ಒಂದೆರಡಲ್ಲ – Kannada News | Bengaluru Rains: Wreak Havoc; Trees Uprooted, Roads Flooded Across City

ಗಾಳಿ ಮಳೆಯಿಂದಾಗಿ ಅವಾಂತರImage Credit source: tv9 kannada

ಬೆಂಗಳೂರು, ಮೇ 21: ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ವಾತಾವರಣ ಬದಲಾಗಿದ್ದು, ಮಹಾನಗರದ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿದಿದೆ. ಕರಾವಳಿ ಮತ್ತು ಒಳನಾಡಿನಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿರುವ ಬೆನ್ನಲ್ಲೇ ಇತ್ತ ಸಿಟಿ ಜನರಿಗೆ ವರುಣ ತಂಪೆರೆದಿದ್ದಾನೆ. ಇನ್ನು ದಿಢೀರ್ ಮಳೆಯಿಂದಾಗಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಾರ್ವಜನಿಕರು ಮತ್ತು ಸವಾರರು ತೀವ್ರ ಪರದಾಡುವಂತಾಗಿದೆ.

ಏಲ್ಲೆಲ್ಲಿ ಮಳೆ?

ವಿಜಯನಗರ, ಶಾಂತಿನಗರ, ಲಾಲ್​ಬಾಗ್, ಕಬ್ಬನ್​ಪಾರ್ಕ್​, ಕೆ.ಆರ್.ಮಾರ್ಕೆಟ್, ಜಯನಗರ, ರಾಜಾಜಿನಗರ, ವಸಂತನಗರ, ವಿಧಾನಸೌಧ, ಮೈಸೂರು ರಸ್ತೆ, ಮಾಗಡಿ ರಸ್ತೆ, ಬಸವೇಶ್ವರನಗರ, ಮಲ್ಲೇಶ್ವರಂ, ಮೆಜೆಸ್ಟಿಕ್, ವಿಲ್ಸನ್​ಗಾರ್ಡನ್, ಮೆಜೆಸ್ಟಿಕ್​ ಸುತ್ತಮುತ್ತ, ಮೈಸೂರು ಬ್ಯಾಂಕ್ ವೃತ್ತ, ಕನ್ನಿಂಗ್​ಹ್ಯಾಮ್ ರಸ್ತೆಯಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ.

ಬಸ್ ನಿಲ್ದಾಣ, ಸ್ಕೈವಾಕ್‌ಗಳೇ ಆಶ್ರಯ

ಧಾರಾಕಾರ ಮಳೆ ಹಿನ್ನೆಲೆ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಗಿದೆ. ಕನ್ನಿಂಗ್‌ಹ್ಯಾಮ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ಬದಿಯಲ್ಲಿ ಬೈಕ್‌ಗಳನ್ನು ನಿಲ್ಲಿಸಿದ ಸವಾರರು, ಮಳೆ ನಿಲ್ಲುವವರೆಗೂ ಬಸ್ ನಿಲ್ದಾಣಗಳ ಕೆಳಗೆ ಆಶ್ರಯ ಪಡೆದರು. ಇನ್ನು ಮಾರುಕಟ್ಟೆಗೆ ಬಂದಿದ್ದ ಸಾರ್ವಜನಿಕರು ಮತ್ತು ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದವರು ಅಂಗಡಿ ಮುಂಗಟ್ಟುಗಳ ಮುಂದೆ ಹಾಗೂ ಸ್ಕೈವಾಕ್‌ಗಳ ಕೆಳಗೆ ನಿಂತು ಮಳೆಯಿಂದ ಆಶ್ರಯ ಪಡೆದರು.

ಭಾರೀ ಮಳೆಗೆ ಅಂಡರ್​ ಪಾಸ್​ ಬಂದ್​

ಇನ್ನು ಕೆ.ಆರ್. ಸರ್ಕಲ್ ಬಳಿಯ ಅಂಡರ್‌ಪಾಸ್ ಸಂಪೂರ್ಣ ಬಂದ್ ಆಗಿದ್ದು, ವಾಹನ ಸವಾರರು ಟ್ರಾಫಿಕ್ ಜಾಮ್‌ ಸಿಲುಕಿದ್ದಾರೆ. ಕೇವಲ ಅರ್ಧ ಗಂಟೆ ಸುರಿದ ಮಳೆಗೇ ನಗರದ ಹೃದಯಭಾಗ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಧಾನಸೌಧ, ವಿಕಾಸಸೌಧ, ಎಂ.ಎಸ್. ಬಿಲ್ಡಿಂಗ್ ರಸ್ತೆ, ನೃಪತುಂಗ ರಸ್ತೆ, ಮೈಸೂರು ಬ್ಯಾಂಕ್ ಸರ್ಕಲ್ ಮತ್ತು ಕಬ್ಬನ್ ಪಾರ್ಕ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕಿ.ಮೀಟರ್‌ಗಟ್ಟಲೆ ವಾಹನ ದಟ್ಟಣೆ ಉಂಟಾಗಿದೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Source link

Chanakya Niti: ಪುರುಷರೇ…. ನಿಮ್ಮ ಹೆಂಡ್ತಿಯ ಈ ಸಂಗತಿಯನ್ನು ಯಾರ ಬಳಿಯೂ ಹೇಳಬೇಡಿ – Kannada News | Chanakya Niti: Chanakya says that husband should not tell these secrets of his wife to anyone

ಗಂಡ ಹೆಂಡತಿ ನಡುವಿನ ಸಂಬಂಧ ತುಂಬಾನೇ ಸುಂದರವಾದದ್ದು. ಈ ಸಂಬಂಧ ಶಾಶ್ವತವಾಗಿ ಸುಂದರವಾಗಿರಬೇಕೆಂದರೆ  ಗಂಡ ಹೆಂಡತಿ (husband-wife) ತಮ್ಮ ನಡುವಿನ ಸಂಬಂಧದ ಬಗ್ಗೆ ಯಾರೊಂದಿಗೂ ಚರ್ಚಿಸಬಾರದು. ಕೆಲವೊಂದು ರಹಸ್ಯಗಳನ್ನು ಯಾರಿಗೂ ಶೇರ್‌ ಮಾಡಬಾರದು. ಇಬ್ಬರ ನಡುವೆ ಮೂರನೇ ವ್ಯಕ್ತಿ ಬರಲು ಬಿಡಲೇಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹೀಗೆ ಗಂಡ ಹೆಂಡತಿ ನಡುವೆ ಮೂರನೇ ವ್ಯಕ್ತಿ ಬಂದರೆ ಸಂಬಂಧವೇ ಹಾಳಾಗುತ್ತದೆ. ಜೊತೆಗೆ ಗಂಡನಾದವನು ತನ್ನ ಹೆಂಡತಿಯ ಕೆಲವೊಂದು ವಿಚಾರಗಳನ್ನು ಇತರರ ಬಳಿ ಹಂಚಿಕೊಳ್ಳುವುದರಿಂದಲೂ ಸಂಬಂಧ ಹಾಳಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪತಿ ತನ್ನ ಪತ್ನಿಯ ಈ ವಿಚಾರಗಳನ್ನು ಯಾರಿಗೂ ಹೇಳಬಾರದು ಅದನ್ನು ಆದಷ್ಟು ಖಾಸಗಿಯಾಗಿರಿಸಬೇಕು ಎಂದು ಚಾಣಕ್ಯರು ಸಲಹೆ ನೀಡಿದ್ದಾರೆ. ಆ ವಿಚಾರಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಗಂಡ ತನ್ನ ಹೆಂಡತಿಯ ಈ ವಿಷಯಗಳನ್ನು ಯಾರಿಗೂ ಹೇಳಬಾರದು:

ಮನಸ್ತಾಪ, ಜಗಳ: ಪ್ರತಿಯೊಂದು ಮನೆಯಲ್ಲೂ ಜಗಳಗಳು ನಡೆಯುತ್ತವೆ. ಅದರಲ್ಲೂ ಗಂಡ ಹೆಂಡತಿಯ ನಡುವೆ ಸಣ್ಣಪುಟ್ಟ ಮನಸ್ತಾಪ, ಜಗಳ ನಡೆಯುವುದು ಸಾಮಾನ್ಯ. ಕೆಲವು ಜನರು ತಮ್ಮ ಕುಟುಂಬ ವಿವಾದಗಳನ್ನು ಇತರರ ಮುಂದೆ ಹಂಚಿಕೊಳ್ಳುತ್ತಾರೆ. ಇದು  ಕೆಟ್ಟ ಅಭ್ಯಾಸ ಎಂದು ಚಾಣಕ್ಯ ಹೇಳುತ್ತಾರೆ. ಗಂಡನೇ ಆಗಿರಲಿ ಅಥವಾ ಹೆಂಡತಿಯೇ ಆಗಿರಲಿ ತಮ್ಮ ದಾಂಪತ್ಯ ಜೀವನದಲ್ಲಿ ನಡೆದ ಮನಸ್ತಾಪಗಳನ್ನು ಇತರರ ಬಳಿ ಹೇಳಿದಾಗ ಕೆಲವರು ಗೇಲಿ ಮಾಡುತ್ತಾರೆ, ನಿಮ್ಮ ಜಗಳದ ಲಾಭವನ್ನು ಪಡೆದು ಪತಿ ಪತ್ನಿಯ ನಡುವಿನ ಸುಂದರ ಬಂಧವನ್ನು ಹಾಳು ಮಾಡುತ್ತಾರೆ. ಹಾಗಾಗಿ ಗಂಡ ಹೆಂಡತಿ ತಮ್ಮ ನಡುವೆ ಜಗಳ ಏರ್ಪಟ್ಟರೆ ಅದನ್ನು ಯಾರ ಬಳಿಯೂ ಹೇಳಬಾರದು ಎನ್ನುತ್ತಾರೆ ಚಾಣಕ್ಯ.

ಪ್ರೀತಿ ವಿಚಾರ: ನಿಮ್ಮ ಹೆಂಡತಿ ನಿಮ್ಮನ್ನು ಎಷ್ಟು ಪ್ರೀತಿಸುತ್ತಿದ್ದಾಳೆ ಎಂಬುದನ್ನು ಯಾರಬಳಿಯೂ ಹಂಚಿಕೊಳ್ಳಲು ಹೋಗಬೇಡಿ. ಅಂತಹ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳುವುದರಿಂದ ಸಂಬಂಧ ಹಾಳಾಗುವ ಅಪಾಯ ಹೆಚ್ಚಿರುತ್ತದೆ ಎನ್ನುತ್ತಾರೆ ಚಾಣಕ್ಯ.

ಹೆಂಡತಿಯ ನ್ಯೂನತೆಗಳನ್ನು ಯಾರಿಗೂ ಹೇಳಬೇಡಿ: ನಿಮ್ಮ ಹೆಂಡತಿಗೆ ಕೆಟ್ಟ ಅಭ್ಯಾಸವಿದ್ದರೆ ಅಥವಾ ಸಣ್ಣಪುಟ್ಟ ವಿಷಯಕ್ಕೂ ಕೋಪಮಾಡಿಕೊಳ್ಳುವಂತಹ ನ್ಯೂನತೆಗಳಿದ್ದರೆ  ನೀವು ಅದನ್ನು ಎಂದಿಗೂ ಇತರರೊಂದಿಗೆ ಹೇಳಬಾರದು. ನಿಮ್ಮ ಹೆಂಡತಿಯ ನ್ಯೂನತೆಗಳು ಅಥವಾ ಕೆಟ್ಟ ಅಭ್ಯಾಸಗಳ ಬಗ್ಗೆ ಉಲ್ಲೇಖಿಸುವುದು ನಿಮ್ಮ ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗುತ್ತದೆ. ಅಲ್ಲದೆ ನಿಮ್ಮ ಸಂಬಂಧದ ಬಗ್ಗೆ ಇತರರು ಗೇಲಿ ಮಾಡುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಗುಣಗಳಿದ್ದರೆ ಜನ ನಿಮ್ಮನ್ನು ಸುಲಭವಾಗಿ ಅವರ ತಾಳಕ್ಕೆ ತಕ್ಕಂತೆ ಕುಣಿಸುತ್ತಾರೆ ಎಚ್ಚರ…!

ಹೆಂಡತಿಯ ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳು: ನಿಮ್ಮ ಹೆಂಡತಿ ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ದೈಹಿಕವಾಗಿ ಅಸ್ವಸ್ಥರಾಗಿದ್ದರೆ, ನೀವು ಅದನ್ನು ಯಾರಿಗೂ ಹೇಳಬಾರದು. ಇದು ಹೆಂಡತಿಯ ಮನಸ್ಸನ್ನು ಘಾಸಿಗೊಳಿಸುತ್ತದೆ ಜೊತೆಗೆ ಮೂರನೇ ವ್ಯಕ್ತಿ ಇಲ್ಲಸಲ್ಲದ ಮಾತುಗಳನ್ನಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ನಿಮ್ಮ ಹೆಂಡತಿಗೆ ಆರೋಗ್ಯಕ ಸಮಸ್ಯೆಗಳಿದ್ದರೆ ನೀವು ಅವಳಿಗೆ ಬೆಂಬಲವಾಗಿ ನಿಲ್ಲಬೇಕು, ಆಕೆಯ ದೌರ್ಬಲ್ಯಗಳನ್ನು ಜಗತ್ತಿಗೆ ಬಹಿರಂಗಪಡಿಸಬಾರದು.

ಹೆಂಡತಿಯ ಹಿಂದಿನ ವಿಷಯಗಳ ಬಗ್ಗೆ ಮಾತನಾಡಬಾರದು: ಪ್ರತಿಯೊಬ್ಬರಿಗೂ ಪಾಸ್ಟ್‌ ಇದ್ದೇ ಇರುತ್ತದೆ. ನಿಮ್ಮ ಹೆಂಡತಿ ಮದುವೆಗೂ ಮುನ್ನ ಯಾರನ್ನೋ ಪ್ರೀತಿಸುತ್ತಿದ್ದರೆ ಅಥವಾ ಆಕೆಯ ಮನಸ್ಸಿಗೆ ಏನಾದ್ರೂ ನೋವಾಗಿದ್ದರೆ ಹೆಂಡತಿಯ ಈ ಭೂತಕಾಲದ ಸಂಗತಿಗಳನ್ನು ಗಂಡ ಯಾರ ಬಳಿಯೂ ಹಂಚಿಕೊಳ್ಳಬಾರದು. ಇದರಿಂದ ಹೆಂಡತಿ ಅಸಮಾಧಾನಗೊಳ್ಳಬಹುದು ಮತ್ತು ಇದರಿಂದ ಸಂಬಂಧದಲ್ಲಿ ಬಿರುಕು ಮೂಡುವ ಸಾಧ್ಯತೆ ಇರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವುದಕ್ಕೆ ಕಾರಣವೇನು? – Kannada News | Ervebo Vaccine Success vs Ebola Reality: What’s Missing In Outbreak Control?

ಎಬೋಲಾ (Ebola) ವೈರಸ್ ಮತ್ತೆ ಜಗತ್ತಿನ ಆತಂಕಕ್ಕೆ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಈ ವೈರಸ್ ಅನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯಾಗಿ ಘೋಷಿಸಿದೆ. ಈಗಾಗಲೇ ಈ ಸೋಂಕಿನಿಂದ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ವಿಶೇಷವಾಗಿ ಆಫ್ರಿಕಾದ ಕೆಲವು ಭಾಗಗಳಲ್ಲಿ ವೈರಸ್ ವೇಗವಾಗಿ ಹರಡುತ್ತಿರುವುದು ಆರೋಗ್ಯ ತಜ್ಞರ ಚಿಂತೆಗೆ ಕಾರಣವಾಗಿದೆ. ಆದರೆ ಈ ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಅಪಾಯ ಏಕೆ ಕಡಿಮೆಯಾಗಿಲ್ಲ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ಹಾಗಾದರೆ ಎಬೋಲಾ ವೈರಸ್ ಎಂದರೇನು, ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಲಸಿಕೆ ಇದ್ದರೂ ಈ ಮಹಾಮಾರಿಗೆ ಕಡಿವಾಣ ಹಾಕಲು ಆಗದಿರುವುದಕ್ಕೆ ಕಾರಣವೇನು ಎಂಬುದನ್ನು ಈ ಸ್ಟೋರಿಯಲ್ಲಿ ತಿಳಿದುಕೊಳ್ಳಿ.

ಎಬೋಲಾ ವೈರಸ್ ಎಂದರೇನು?

ಸಾಮಾನ್ಯವಾಗಿ ಎಬೋಲಾ ಒಂದು ಗಂಭೀರ ವೈರಲ್ ಸೋಂಕು. ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಇದು ಹರಡುತ್ತದೆ. 1976ರಲ್ಲಿ ಕಾಂಗೋದಲ್ಲಿ ಮೊದಲ ಬಾರಿ ಈ ವೈರಸ್ ಪತ್ತೆಯಾಯಿತು. ಬಳಿಕ ಉಪ- ಸಹಾರಾ ಆಫ್ರಿಕಾದ ಹಲವು ಪ್ರದೇಶಗಳಲ್ಲಿ ಪ್ರಕರಣಗಳು ವರದಿಯಾಗಿವೆ. ತಜ್ಞರ ಪ್ರಕಾರ, ಎಬೋಲಾ ಸೋಂಕಿನ ಮರಣ ಪ್ರಮಾಣ ತುಂಬಾ ಹೆಚ್ಚು. ಕೆಲ ಸಂದರ್ಭಗಳಲ್ಲಿ ಸೋಂಕಿತ ವ್ಯಕ್ತಿಯ ದೇಹದ ಒಳಭಾಗದಲ್ಲಿ ರಕ್ತಸ್ರಾವ ಉಂಟಾಗಿ ಜೀವಕ್ಕೆ ಅಪಾಯವಾಗಬಹುದು. ಕೆಲವು ಅಧ್ಯಯನಗಳ ಪ್ರಕಾರ, ಈ ವೈರಸ್‌ನ ಮರಣ ಪ್ರಮಾಣ 80ರಿಂದ 90 ಶೇಕಡಾವರೆಗೆ ಇರಬಹುದು. ಹಾಗಾಗಿ ಎಚ್ಚರಿಕೆ ಅನುಸರಿಸುವುದು ಬಹಳ ಅನಿವಾರ್ಯವಾಗಿದೆ.

ಲಸಿಕೆ ಇದ್ದರೂ ಅಪಾಯಕಾರಿ ಏಕೆ?

ಮಹಾಮಾರಿ ತಜ್ಞ ಡಾ. ಜುಗಲ್ ಕಿಶೋರ್ ಅವರ ಪ್ರಕಾರ, ಇದಕ್ಕೆ ಪ್ರಮುಖ ಕಾರಣ ವೈರಸ್‌ನ ವಿಭಿನ್ನ ಸ್ಟ್ರೇನ್‌ಗಳು. ಎಬೋಲಾ ವೈರಸ್‌ ಹಲವು ರೂಪಗಳಲ್ಲಿ ಕಂಡುಬರುತ್ತದೆ. ಕೆಲವು ಸ್ಟ್ರೇನ್‌ಗಳ ವಿರುದ್ಧ ಲಸಿಕೆ ಪರಿಣಾಮಕಾರಿಯಾಗಿದ್ದರೂ, ಎಲ್ಲ ರೂಪಗಳ ಮೇಲೂ ಅದು ಸಮಾನವಾಗಿ ಕೆಲಸ ಮಾಡುವುದಿಲ್ಲ. ಅದೇರೀತಿ ಎಬೋಲಾದ ಬುಂಡಿಬುಗ್ಯೊ (Bundibugyo) ಎಂಬ ಅಪಾಯಕಾರಿ ಸ್ಟ್ರೇನ್ ಈಗ ಹೆಚ್ಚು ಪ್ರಕರಣಗಳಿಗೆ ಕಾರಣವಾಗುತ್ತಿದೆ. ಈ ಸ್ಟ್ರೇನ್ ವಿರುದ್ಧ ಪರಿಣಾಮಕಾರಿ ಮತ್ತು ಪ್ರಮಾಣಿತ ಲಸಿಕೆ ಇನ್ನೂ ಲಭ್ಯವಿಲ್ಲ. ಇದೇ ಕಾರಣದಿಂದ ಸೋಂಕಿನ ಭೀತಿ ಹೆಚ್ಚುತ್ತಿದೆ. ಇದಕ್ಕೂ ಹೊರತು, ಆಫ್ರಿಕಾದ ದೂರದ ಪ್ರದೇಶಗಳಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ, ಸಮಯಕ್ಕೆ ಚಿಕಿತ್ಸೆ ಸಿಗದಿರುವುದು ಹಾಗೂ ಲಸಿಕೆ ತಲುಪಿಸುವಲ್ಲಿ ಆಗುತ್ತಿರುವ ತೊಂದರೆಗಳು ಪರಿಸ್ಥಿತಿಯನ್ನು ಗಂಭೀರಗೊಳಿಸುತ್ತಿವೆ.

ಇದನ್ನೂ ಓದಿ: ಕಿಡ್ನಿ ವೈಫಲ್ಯಕ್ಕೆ ಟ್ರಾನ್ಸ್‌ಪ್ಲಾಂಟ್ ಯಾವಾಗ ಅಗತ್ಯ ಎಂಬುದನ್ನು ಡಾ. ರವಿಶಂಕರ್ ಅವರಿಂದ ತಿಳಿದುಕೊಳ್ಳಿ

ಎಬೋಲಾ ವೈರಸ್‌ನ ಲಕ್ಷಣಗಳು:

  • ತೀವ್ರ ಜ್ವರ
  • ದೇಹ ನೋವು ಮತ್ತು ದೌರ್ಬಲ್ಯ
  • ವಾಂತಿ
  • ತಲೆನೋವು
  • ದೇಹದ ಒಳ ಹಾಗೂ ಹೊರ ರಕ್ತಸ್ರಾವ

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

ತಜ್ಞರು ಹೇಳುವಂತೆ, ಸೋಂಕು ಹೆಚ್ಚಿರುವ ಪ್ರದೇಶಗಳಿಗೆ ಅನಗತ್ಯ ಪ್ರಯಾಣ ತಪ್ಪಿಸುವುದು ಉತ್ತಮ. ಸೋಂಕಿತ ವ್ಯಕ್ತಿಗಳ ಸಂಪರ್ಕದಿಂದ ದೂರವಿರಬೇಕು. ಕೈಗಳ ಸ್ವಚ್ಛತೆ ಮತ್ತು ಆರೋಗ್ಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅತಿಯಾದ ಕೋಪ ದೇಹದ ಎಷ್ಟೆಲ್ಲಾ ದುಷ್ಪರಿಣಾಮಗಳನ್ನು ಬೀರುತ್ತವೆ ಗೊತ್ತಾ? – Kannada News | Do you know how many negative effects anger has?

ನಗು, ಅಳುವಿನಿಂದ ಕೋಪ (anger) ಕೂಡ ಒಂದು ಭಾವನೆ. ದುಃಖಿತರಾದಾಗ, ಕಿರಿಕಿರಿ ಉಂಟಾದಾಗ ನಾವೆಲ್ಲರೂ ಕೋಪ ಮಾಡಿಕೊಳ್ಳುತ್ತೇವೆ. ಕೋಪ ಮನುಷ್ಯನ ಸಹಜ ಗುಣವಾಗಿದ್ದು, ಎಲ್ಲರಿಗೂ ಕೋಪ ಬಂದೇ ಬರುತ್ತದೆ. ಅದರಲ್ಲೂ ಕೆಲವರಂತೂ ಸಣ್ಣಪುಟ್ಟ ವಿಚಾರಗಳಿಗೂ ಸಿಕ್ಕಾಪಟ್ಟೆ ಕೋಪ ಮಾಡಿಕೊಳ್ಳುತ್ತಾರೆ. ಇದು ಮಾತು ಮತ್ತು ಕಾರ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಿ ಸಂಬಂಧವನ್ನೇ ಹಾಳು ಮಾಡುತ್ತದೆ. ಅಷ್ಟೇ ಅಲ್ಲದೆ ಈ ಕೋಪ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಕೋಪವು ಮನುಷ್ಯನ ಮೇಲೆ ಏನೆಲ್ಲಾ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ನೋಡೋಣ ಬನ್ನಿ.

ಕೋಪ ಮಾಡಿಕೊಳ್ಳುವುದರಿಂದ ಆಗುವ ಪರಿಣಾಮಗಳೇನು ಗೊತ್ತಾ?

ಹೃದಯಕ್ಕೆ ಹಾನಿಕಾರಕ: ಒಬ್ಬ ವ್ಯಕ್ತಿಯು ಅತಿಯಾಗಿ ಕೋಪಗೊಂಡಾಗ, ಅದು ಆತನ ಹೃದಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜರ್ನಲ್ ಆಫ್ ದಿ ಅಮೇರಿಕನ್ ಹಾರ್ಟ್ ಅಸೋಸಿಯೇಷನ್‌ನಲ್ಲಿ ಪ್ರಕಟವಾದ ಅಧ್ಯಯನವು ಕೋಪ, ದುಃಖ ಮತ್ತು ಆತಂಕದಂತಹ ದೈನಂದಿನ ನಕಾರಾತ್ಮಕ ಭಾವನೆಗಳು ಹೃದಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸಬಹುದು ಎಂದು ಹೇಳಿದೆ. ಅತಿಯಾದ ಕೋಪವು ಎಂಡೋಥೀಲಿಯಲ್ ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ, ಇದು ರಕ್ತದೊತ್ತಡ ಹೆಚ್ಚಾಗುವಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ.

 ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ: ಅತಿಯಾದ ಕೋಪವು ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಇದು ಜೀರ್ಣಾಂಗದಲ್ಲಿ ಉರಿಯೂತವನ್ನು ಹೆಚ್ಚಿಸುತ್ತದೆ. ಒತ್ತಡವು ಹೆಚ್ಚಾಗಿ ಹೊಟ್ಟೆ ನೋವು, ಹಸಿವಿನ ಕೊರತೆ ಮತ್ತು ಇತರ ಸಮಸ್ಯೆಗಳನ್ನು ಉಂಟುಮಾಡುತ್ತದೆ, ಇದು ಪೌಷ್ಟಿಕಾಂಶದ ಕೊರತೆಗೆ ಕಾರಣವಾಗಬಹುದು.

ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ: ಕೋಪವು ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಅಧ್ಯಯನಗಳು ಕೋಪವು ಹೆಚ್ಚಾಗಿ ಆತಂಕ ಮತ್ತು ಖಿನ್ನತೆಯಂತಹ ಭಾವನಾತ್ಮಕ ಅಸ್ವಸ್ಥತೆಗಳನ್ನು ಹೆಚ್ಚಿಸುತ್ತದೆ. ಕೋಪದ ಸ್ಥಿತಿಯಲ್ಲಿ ಮೆದುಳಿನ ತಾರ್ಕಿಕ ಶಕ್ತಿ ಕಡಿಮೆಯಾಗುತ್ತದೆ, ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕಷ್ಟವಾಗುತ್ತದೆ. ಅತಿಯಾದ ಕೋಪವು ನಿಮ್ಮ ಒತ್ತಡದ ಮಟ್ಟವನ್ನು ಹೆಚ್ಚಿಸುತ್ತದೆ, ಇದು ಮಾನಸಿಕ ಆಯಾಸ ಮತ್ತು ಕಿರಿಕಿರಿಯನ್ನು ಹೆಚ್ಚಿಸುತ್ತದೆ.

ರಕ್ತದೊತ್ತಡ ಅಪಾಯವನ್ನು ಹೆಚ್ಚಿಸುತ್ತದೆ:  ಒಬ್ಬ ವ್ಯಕ್ತಿಯು ಕೋಪಗೊಂಡಾಗ, ದೇಹದಲ್ಲಿ ಅಡ್ರಿನಾಲಿನ್ ಮತ್ತು ನೊರಾಡ್ರಿನಾಲಿನ್ ಎಂಬ ಹಾರ್ಮೋನುಗಳು ವೇಗವಾಗಿ ಬಿಡುಗಡೆಯಾಗುತ್ತವೆ. ಇದು ಹೃದಯ ಬಡಿತವನ್ನು ವೇಗಗೊಳಿಸಲು ಮತ್ತು ರಕ್ತದೊತ್ತಡವನ್ನು ಹಠಾತ್ತನೆ ಹೆಚ್ಚಿಸಲು ಕಾರಣವಾಗಬಹುದು. ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ​​ಪ್ರಕಾರ, ಆಗಾಗ್ಗೆ ಕೋಪಗೊಳ್ಳುವುದರಿಂದ ಅಧಿಕ ರಕ್ತದೊತ್ತಡ ಮತ್ತು ಹೃದಯ ಕಾಯಿಲೆಯ ಅಪಾಯ ಹೆಚ್ಚಾಗುತ್ತದೆ.

ನಿದ್ರೆಯ ಗುಣಮಟ್ಟ ಕಡಿಮೆಯಾಗುತ್ತದೆ: ಅತಿಯಾದ ಕೋಪವು ನಿದ್ರಾಹೀನತೆಗೆ ಕಾರಣವಾಗಬಹುದು. ನೀವು ಕೋಪಗೊಂಡಾಗ, ನಿಮ್ಮ ಮನಸ್ಸು ಹೆಚ್ಚು ಸಕ್ರಿಯ ಮತ್ತು ಪ್ರಕ್ಷುಬ್ಧವಾಗುತ್ತದೆ. ಇದು ನಿದ್ದೆಗೆ ಅಡ್ಡಿಯನ್ನು ಉಂಟು ಮಾಡುತ್ತವೆ. ಅಲ್ಲದೆ ಅತಿಯಾದ ಕೋಪ ಮತ್ತು ನಿರಂತರ ಒತ್ತಡವು ದೇಹದಲ್ಲಿ ಕಾರ್ಟಿಸೋಲ್ ಹಾರ್ಮೋನ್ ಅನ್ನು ಹೆಚ್ಚಿಸುತ್ತದೆ, ಇದು ದೇಹದ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ?

ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ: ನಿರಂತರ ಕೋಪವು ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ, ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ.

ಸ್ನಾಯು ಸೆಳೆತ: ನಿರಂತರವಾಗಿ ಕೋಪಗೊಳ್ಳುವುದರಿಂದ ಸ್ನಾಯು ನೋವು ಉಂಟಾಗುತ್ತದೆ. ಈ ಒತ್ತಡವು ಹೆಚ್ಚಾಗಿ ತಲೆನೋವು, ಬೆನ್ನು ನೋವು ಮತ್ತು ಇತರ ಸ್ನಾಯು ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಕೋಪವನ್ನು ಹೇಗೆ ನಿಯಂತ್ರಿಸುವುದು?

  • ನಿಮಗೆ ತುಂಬಾ ಕೋಪ ಬಂದಾಗ, ಒಂದು ಲೋಟ ತಣ್ಣೀರು ಕುಡಿಯಿರಿ. ಆಳವಾದ ಉಸಿರನ್ನು ತೆಗೆದುಕೊಳ್ಳಿ, ಒಂದು ಕ್ಷಣ ಕಣ್ಣು ಮುಚ್ಚಿ, ವಿಶ್ರಾಂತಿ ಪಡೆಯಲು ಪ್ರಯತ್ನಿಸಿ.
  • ನಿಮಗೆ ಅತಿಯಾದ ಕೋಪದ ಸಮಸ್ಯೆ ಇದ್ದರೆ, ಪ್ರತಿದಿನ ಧ್ಯಾನ, ಯೋಗ ಮತ್ತು ಪ್ರಾಣಾಯಾಮವನ್ನು ಅಭ್ಯಾಸ ಮಾಡಿ.
  • ನೀವು ಕೋಪಗೊಂಡಾಗ, ನಿಮ್ಮ ಕಣ್ಣುಗಳನ್ನು ಮುಚ್ಚಿ, ಆಳವಾದ ಉಸಿರನ್ನು ತೆಗೆದುಕೊಂಡು ಎಲ್ಲವೂ ಸರಿಯಾಗಿದೆ ಎಂದು ಭಾವಿಸಿ.
  • ನೀವು ಕೋಪಗೊಂಡಾಗ ಆ ಸ್ಥಳದಿಂದ ತಕ್ಷಣ ಎದ್ದು ಹೋಗಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:56 pm, Thu, 21 May 26

Source link

ಯುರೇನಿಯಂ ಇರಾನ್‌ನಲ್ಲಿಯೇ ಉಳಿಯಬೇಕು; ಅಮೆರಿಕದ ಪ್ರಮುಖ ಬೇಡಿಕೆ ತಿರಸ್ಕರಿಸಿದ ಮೊಜ್ತಾಬಾ ಖಮೇನಿ – Kannada News | Enriched uranium must remain in Iran Supreme Leader Mojtaba Khamenei rejects key US demand

ಟೆಹ್ರಾನ್, ಮೇ 21: ಇರಾನ್ ಮತ್ತು ಅಮೆರಿಕದ ನಡುವೆ ನಡೆಯುತ್ತಿರುವ ಸೂಕ್ಷ್ಮ ಕದನ ವಿರಾಮದ ಮಾತುಕತೆಗಳ ಮಧ್ಯೆ ಇರಾನ್‌ನ ಸುಪ್ರೀಂ ನಾಯಕ ಮೊಜ್ತಾಬಾ ಖಮೇನಿ (Mojtaba Khamenei) ಅವರು ಅಮೆರಿಕದ ಪ್ರಮುಖ ಬೇಡಿಕೆಯೊಂದನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಎನ್​ರಿಚ್ಡ್​ ಯುರೇನಿಯಂ ಇರಾನ್ ದೇಶದ ಒಳಗೇ ಇರಬೇಕು ಎಂದು ಮೊಜ್ತಬಾ ಖಮೇನಿ ಹೇಳಿದ್ದಾರೆ. ಇರಾನ್ ತನ್ನ ಪರಮಾಣು ದಾಸ್ತಾನನ್ನು ವಿದೇಶಕ್ಕೆ ಸಾಗಿಸಬೇಕು ಎಂಬ ಅಮೆರಿಕದ ಷರತ್ತನ್ನು ನಾವು ಒಪ್ಪಲು ಸಿದ್ಧರಿಲ್ಲ ಎಂದು ಅವರು ಹೇಳಿದ್ದಾರೆ.

ಇರಾನ್ ಅಣುಬಾಂಬ್ ತಯಾರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಇರಾನ್ ಹೊಂದಿರುವ ಉನ್ನತ ಮಟ್ಟದ ಸಮೃದ್ಧ ಯುರೇನಿಯಂ ದಾಸ್ತಾನನ್ನು ದೇಶದಿಂದ ಹೊರಗೆ ಕಳುಹಿಸಬೇಕು ಎಂದು ಅಮೆರಿಕ ಕದನ ವಿರಾಮಕ್ಕೆ ಮುಖ್ಯ ಷರತ್ತನ್ನು ವಿಧಿಸಿತ್ತು.

ಇದನ್ನೂ ಓದಿ: ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್? ಹೊರ್ಮುಜ್ ಆಳದಲ್ಲಿರುವ ಅಂತರ್ಜಾಲ ಕೇಬಲ್​ಗೂ ಆಪತ್ತು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ಜೊತೆಗಿನ ಯುದ್ಧವನ್ನು ಕೊನೆಗಾಣಿಸಲು ಪ್ರಮುಖ ಷರತ್ತೊಂದನ್ನು ವಿಧಿಸಿದ್ದರು. ಇರಾನ್ ಅಣುಬಾಂಬ್ ತಯಾರಿಸುವುದನ್ನು ತಡೆಯಲು, ಅದು ಹೊಂದಿರುವ ಶೇ. 60ರಷ್ಟು ಶುದ್ಧತೆಯ ಇಂಧನ-ದರ್ಜೆಯ ಸಮೃದ್ಧ ಯುರೇನಿಯಂ ದಾಸ್ತಾನನ್ನು ಇರಾನ್‌ನಿಂದ ಹೊರಗೆ ಹಾಕಬೇಕು ಮತ್ತು ಬೇರೆ ದೇಶಕ್ಕೆ ವರ್ಗಾಯಿಸಬೇಕು ಎಂಬುದು ಅಮೆರಿಕದ ಮುಖ್ಯ ಬೇಡಿಕೆಯಾಗಿತ್ತು. ಈ ಷರತ್ತನ್ನು ಈಡೇರಿಸುವವರೆಗೂ ಯುದ್ಧ ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು.

ಆದರೆ, ಇದಕ್ಕೆ ಇರಾನ್ ಒಪ್ಪಿಗೆ ನೀಡಿಲ್ಲ. ಈ ಬೇಡಿಕೆಯನ್ನು ಒಪ್ಪಿಕೊಂಡರೆ ಇರಾನ್ ಜಾಗತಿಕವಾಗಿ ದುರ್ಬಲವಾಗುತ್ತದೆ. ಅಮೆರಿಕ ಅಥವಾ ಇಸ್ರೇಲ್ ಭವಿಷ್ಯದಲ್ಲಿ ಮತ್ತೆ ದಾಳಿ ನಡೆಸಲು ಇದು ದಾರಿ ಮಾಡಿಕೊಡುತ್ತದೆ ಎಂಬುದು ಇರಾನ್ ಆತಂಕ. ಪ್ರಸ್ತುತ ನಡೆಯುತ್ತಿರುವ ಕದನ ವಿರಾಮ ಮಾತುಕತೆಗಳು ಕೇವಲ ಅಮೆರಿಕದ ಒಂದು ‘ರಾಜತಾಂತ್ರಿಕ ತಂತ್ರ’ ಇರಬಹುದು ಎಂದು ಇರಾನ್ ಅನುಮಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬರ್ಬರ ಹತ್ಯೆ

ಇದೆಲ್ಲದರ ನಡುವೆ, ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಉಭಯ ದೇಶಗಳ ನಡುವೆ ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿವೆಯಾದರೂ ಇರಾನ್‌ನ ಈ ಕಠಿಣ ನಿಲುವಿನಿಂದಾಗಿ ಕದನ ವಿರಾಮದ ಮಾತುಕತೆಗಳು ಮತ್ತಷ್ಟು ಜಟಿಲಗೊಂಡಿವೆ. ಅಮೆರಿಕ ಕೂಡ ಎಲ್ಲ ರೀತಿಯಿಂದಲೂ ಕದನವಿರಾಮಕ್ಕೆ ಪ್ರಯತ್ನ ಮಾಡುತ್ತಿದೆ.

ಅಂತಾರಾಷ್ಟ್ರೀಯ ಸಂಸ್ಥೆಗಳ ಅಂದಾಜಿನ ಪ್ರಕಾರ, ಇರಾನ್ ಪ್ರಸ್ತುತ ಸುಮಾರು 440 ಕೆ.ಜಿ ಗಿಂತಲೂ ಹೆಚ್ಚು ಸಮೃದ್ಧ ಯುರೇನಿಯಂ ದಾಸ್ತಾನನ್ನು ಹೊಂದಿದೆ. ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್‌ನ ಇಸ್ಫಹಾನ್ ಮತ್ತು ನಟಾಂಜ್ ಪರಮಾಣು ನೆಲೆಗಳ ಮೇಲೆ ನಡೆಸಿದ ಭೀಕರ ದಾಳಿಗಳ ನಂತರವೂ ಈ ದಾಸ್ತಾನುಗಳನ್ನು ಸುರಕ್ಷಿತ ಸುರಂಗಗಳಲ್ಲಿ ಸಂಗ್ರಹಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಗೃಹಲಕ್ಷ್ಮಿ ಹಣ ಬಾಕಿ: ಮಹಿಳೆಯರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಮಹತ್ವದ ಆದೇಶ – Kannada News | Grihalakshmi Pending Payments: High Court Issues Key Order on Women’s Petition

ಗೃಹಲಕ್ಷ್ಮಿ, ಹೈಕೋರ್ಟ್ Image Credit source: google

ಬೆಂಗಳೂರು, ಮೇ 21: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಗುರುವಾರ ನೋಟಿಸ್ ಜಾರಿ ಮಾಡಿದೆ.

ಮುಖ್ಯಾಂಶಗಳು

  • ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ಕೋರಿ ಪಿಐಎಲ್​
  • 2 ತಿಂಗಳ ಬಾಕಿ ಗೃಹಲಕ್ಷ್ಮಿ ಹಣ ಪಾವತಿಗೆ ನಿರ್ದೇಶನ ಕೋರಿಕೆ
  • ಪಿಐಎಲ್ ಸಂಬಂಧ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಅರ್ಜಿದಾರರು ಯಾರು?

ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ನಿರ್ದೇಶನ ಕೋರುವಂತೆ ಬೆಂಗಳೂರಿನ ಕಮಲಾನಗರದ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಎಂಬುವರು ಹೈಕೋರ್ಟ್‌ ಮೊರೆಹೋಗಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ಏನಿದೆ?

ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಈ ಬಾಕಿ ಇರುವ ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ತಕ್ಷಣವೇ ಪಾವತಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಹಣಕಾಸು, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಗೆ ನೋಟಿಸ್

ಇನ್ನು ನ್ಯಾಯಮೂರ್ತಿಗಳಾದ ಡಾ. ಕೆ ಮನ್ಮಥ ರಾವ್‌ ಮತ್ತು ಸೂರಜ್ ಗೋವಿಂದರಾಜ್​​ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ಮಾಡಿದ್ದು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತುರ್ತು ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದು ವಿಚಾರಣೆಯನ್ನು ಮುಂದೂಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಮ್‌ ಹುಯಿಲಗೋಳ ವಾದ ಮಂಡಿಸಿದರು.

ಇದನ್ನೂ ಓದಿ: ಗೃಹಲಕ್ಷ್ಮಿ ಬೇಡಯ್ಯ ಗೃಹವನ್ನ ನೀಡಯ್ಯ: ಹಾಡಿನ ಮೂಲಕ ಸಿಎಂಗೆ ಮುಸ್ಲಿಂ ಮಹಿಳೆ ಮನವಿ

2024ರ ಏಪ್ರಿಲ್‌ನಿಂದ 2025ರ ಜನವರಿವರೆಗೆ ಯಾವುದೇ ಅಡೆತಡೆಯಿಲ್ಲದೆ ಸಾಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಧನಸಹಾಯ ವಿತರಣೆ, ಫೆಬ್ರವರಿಯಲ್ಲಿ ದಿಢೀರ್ ಹಳಿ ತಪ್ಪಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಸ್ತುವಾರಿಯಲ್ಲಿದ್ದ ಈ ಪ್ರಕ್ರಿಯೆಯನ್ನು, ತಾಲೂಕು ಪಂಚಾಯಿತಿಗಳ ಮೂಲಕ ನಿರ್ವಹಿಸಲು ಸರ್ಕಾರ ಹೊಸ ನೀತಿ ರೂಪಿಸಿತ್ತು. ಆದರೆ, ಈ ತಾಂತ್ರಿಕ ಹಸ್ತಾಂತರದ ಗೊಂದಲದಿಂದಾಗಿ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಕಂತುಗಳ ಹಣ ಫಲಾನುಭವಿಗಳ ಕೈಸೇರದೆ ಬಾಕಿ ಉಳಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

GT vs CSK IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ – Kannada News | Gujarat Titans vs Chennai Super Kings IPL 2026 Live Cricket Score GT vs CSK Match on 21st May latest news in Kannada

ಐಪಿಎಲ್ 2026 ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರಸ್ಪರ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಈ ಸೀಸನ್​ನಲ್ಲಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಗುಜರಾತ್ ಪ್ಲೇಆಫ್ ಟಿಕೆಟ್ ಪಡೆದುಕೊಂಡಿದೆ. ಇತ್ತ ಸಿಎಸ್​ಕೆಗೆ ಪ್ಲೇಆಫ್‌ ಹಾದಿ ಭಾಗಶಃ ಮುಚ್ಚಿದ್ದರೂ ಅವಕಾಶವೆಂತು ಇದೆ.

Source link

Exit mobile version