ರಕ್ಷಣಾ, ರೈಲ್ವೆ ವಲಯಕ್ಕೂ ತಟ್ಟಿದ ಯುದ್ಧದ ಬಿಸಿ: ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುವ ಆಟೋಮೊಬೈಲ್ ಇಂಡಸ್ಟ್ರಿ ಬಂದ್
ಬೆಂಗಳೂರು, ಮಾರ್ಚ್ 23: ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ (US-Israel-Iran War) ಪರಿಣಾಮ ಇದೀಗ ಕರ್ನಾಟಕ ರಾಜಧಾನಿ ಬೆಂಗಳೂರಿಗೂ (Bangalore) ತಟ್ಟಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಕಚ್ಚಾ ತೈಲ ಬೆಲೆ ಏರಿಕೆಯಷ್ಟೇ ಅಲ್ಲ, ನಗರದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮೇಲೂ ನೇರ ಪರಿಣಾಮ ಬೀಳುತ್ತಿದೆ. ಇದು ದೇಶದ ರಕ್ಷಣಾ ಕ್ಷೇತ್ರ ಮತ್ತು ರೈಲ್ವೆ ಇಲಾಖೆ ಮೇಲೂ ಪರಿಣಾಮ ಬೀರುತ್ತಿದೆ. ರಕ್ಷಣಾ ಇಲಾಖೆಯ ವಾಹನಗಳ ತಯಾರಿಕೆಗೆ ಹಾಗೂ ರೈಲ್ವೆ ಇಲಾಖೆಗೆ ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುತ್ತಿದ್ದ ಪೀಣ್ಯಾದಲ್ಲಿರುವ…