ಅಭಿವೃದ್ಧಿ ಹೆಸರಲ್ಲಿ ಹಸಿರು ಬಲಿ?: ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮಕ್ಕೆ ಮುಂದಾದ ಬಿಡಿಎ
ಬೆಂಗಳೂರು, ಮೇ.21: ರಾಜಧಾನಿ ಬೆಂಗಳೂರಿನಲ್ಲಿ ಅಸ್ತಿತ್ವದಲ್ಲಿರುವ ಗಿಡಮರಗಳನ್ನು ಉಳಿಸಿಕೊಳ್ಳುವುದು ಒಂದು ಸವಾಲಾಗಿ ಪರಿಣಮಿಸಿದೆ. ಇದೀಗ ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ನಲ್ಲಿರುವ ಬಿ.ಡಿ.ಎ. ವಾಣಿಜ್ಯ ಸಂಕೀರ್ಣದ ಸುತ್ತಲೂ ಇರುವ 180 ಮರಗಳಿಗೆ ಕುತ್ತು ಎದುರಾಗಿದೆ. ಶಿಥಿಲಾವಸ್ಥೆಯಲ್ಲಿದ್ದ ಹಳೆಯ ವಾಣಿಜ್ಯ ಸಂಕೀರ್ಣವನ್ನು ಕೆಡವಿ ಹೊಸದಾಗಿ ನಿರ್ಮಿಸಲು ಬಿ.ಡಿ.ಎ. ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ, ಸಂಕೀರ್ಣದ ಆವರಣದಲ್ಲಿರುವ ಸುಮಾರು 180 ವಿವಿಧ ಜಾತಿಯ ಮರಗಳನ್ನು ಕಡಿಯಲು ಅನುಮತಿ ಕೋರಿ ಬಿ.ಡಿ.ಎ. ಅಧಿಕಾರಿಗಳು ಜಿ.ಬಿ.ಎ. ಅರಣ್ಯ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಮರಗಳನ್ನು ಕಡಿಯುವ ಈ ಪ್ರಸ್ತಾವನೆಗೆ…