No Smoking Day 2026: ಧೂಮಪಾನ ತ್ಯಜಿಸಿ, ಆರೋಗ್ಯಕರ ಜೀವನವನ್ನು ನಡೆಸಿ
ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ, ಲಕ್ಷಾಂತರ ಮಂದಿ ಈ ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಅದೆಷ್ಟೋ ಮಂದಿ ನಿರಂತರ ಸ್ಮೋಕಿಂಗ್ ಮಾಡಿ ಶ್ವಾಸಕೋಶದ ಕಾಯಿಲೆ, ಹೃದ್ರೋಗ, ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಸುಂದರ ಜೀವನವನ್ನೇ ಹಾಳುಮಾಡಿಕೊಂಡಿದ್ದಾರೆ. ಧೂಮಪಾನದ ಈ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು, ಧೂಮಪಾನವನ್ನು ತ್ಯಜಿಸಲು ಜನರನ್ನು ಪ್ರೇರೇಪಿಸಲು ಪ್ರತಿವರ್ಷ ಮಾರ್ಚ್ ತಿಂಗಳ ಎರಡನೇ ಬುಧವಾರದಂದು ಧೂಮಪಾನ ನಿಷೇಧ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು ಎಂಬುದರ…