ಕಾಂಗ್ರೆಸ್​​ ‘ಪಟ್ಟದಾಟ’ಕ್ಕೆ ತೆರೆ ಯಾವಾಗ?: ಸಾಧ್ಯಾಸಾಧ್ಯತೆ ಬಗ್ಗೆ ‘ಕೈ; ಪಾಳಯದಲ್ಲೇ ಹೀಗೊಂದು ಚರ್ಚೆ – Kannada News | Congress High Command To Settle Karnataka ‘Power Struggle’: Siddaramaiah, DK Shivakumar Likely Summoned To Delhi

ಕಾಂಗ್ರೆಸ್​​ ‘ಪಟ್ಟದಾಟ’ಕ್ಕೆ ತೆರೆ ಯಾವಾಗ?Image Credit source: mathrubhumi.com

ಬೆಂಗಳೂರು, ಮೇ 21: ಅಧಿಕಾರ ಹಂಚಿಕೆ ವಿಚಾರ ಕಳೆದ ಕೆಲ ತಿಂಗಳುಗಳಿಂದ ರಾಜ್ಯದಲ್ಲಿ ಸದ್ದು ಮಾಡುತ್ತಲೇ ಬಂದಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಬಣ ಮತ್ತೊಂದೆಡೆ ಡಿ.ಕೆ. ಶಿವಕುಮಾರ್​​ ಬೆಂಬಲಿಗರು ಈ ಸಂಬಂಧ ಪರಸ್ಪರ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ. ಪಟ್ಟದಾಟದ ವಿಚಾರ ಸದ್ಯ ಎಐಸಿಸಿ ಅಂಗಳದಲ್ಲಿದೆ. ಹೀಗಾಗಿ ವರಿಷ್ಠರ ತೀರ್ಮಾನವೇ ಅಂತಿಮ ಎಂಬ ಮಾತುಗಳು ಕಾಂಗ್ರೆಸ್​​ ಪಾಳಯದಿಂದ ಕೇಳಿಬರತೊಡಗಿದೆ. ಪಂಚರಾಜ್ಯ ಚುನಾವಣೆ ಮುಗಿದ ಹಿನ್ನೆಲೆ ಈಗ ವರಿಷ್ಠರು ಕರ್ನಾಟಕದ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿದ್ದಾರೆ. ಹೀಗಾಗಿ ಮೇ ಅಂತ್ಯದ ವೇಳೆಗೆ ಈ ವಿಚಾರಕ್ಕೊಂದು ತೆರೆ ಬೀಳುವ ಬಗ್ಗೆ ಕಾಂಗ್ರೆಸ್​​ನಲ್ಲಿಯೇ ಚರ್ಚೆಗಳು ಶುರುವಾಗಿವೆ.

ಸಾಧ್ಯತೆ 1

ಮೇ ತಿಂಗಳ ಅಂತ್ಯಕ್ಕೆ ಸಿಎಂ-ಡಿಸಿಎಂಗೆ ದೆಹಲಿಗೆ ಹೈಕಮಾಂಡ್​​ ಬುಲಾವ್ ನೀಡಲಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆಗೆ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್​​ ಹಾಗೂ ರಾಹುಲ್ ಗಾಂಧಿ ಚರ್ಚೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಮುಂದುವರಿಕೆ ಅಥವಾ ಬದಲಾವಣೆ ಬಗ್ಗೆ ಮೊದಲು ಮಾತುಕತೆ ನಡಯಲಿದ್ದು, ಈ ವೇಳೆ ಸಚಿವ ಸಂಪುಟ ಪುನಾರಚನೆ ಸಂಬಂಧ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ವಿಷಯ ಕ್ಲೋಸ್ ಆದಂತೆ. ಆಗ ಈ ಮಾತುಕತೆ ಕೇವಲ ಸಂಪುಟ ಪುನಾರಚನೆಗೆ ಮಾತ್ರ ಸಂಬಂಧಿಸಲಿದೆ.

ಇದನ್ನೂ ಓದಿ: ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಆ ಒಂದು ಸಭೆ

ಸಾಧ್ಯತೆ 2

ಜೂನ್​​ 25ರ ಒಳಗಾಗಿ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಕಾರಣ ಅಲ್ಲಿಯ ತನಕ ಬದಲಾವಣೆ ಚರ್ಚೆ ಮುಂದೂಡಿಕೆ ಸಾಧ್ಯತೆ ಇದೆ. ಅದಕ್ಕಿಂತ ಮುಂಚೆ ಸಂಪುಟ ಪುನಾರಚನೆ ಮಾಡಿದರೆ ರಾಜ್ಯಸಭೆ ಎಲೆಕ್ಷನ್​​ ಮೇಲೆ ಅದು ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಕ್ರಾಸ್ ವೋಟ್​​ ಆತಂಕದಿಂದ ಸಂಪುಟ ಪುನಾರಚನೆ ಕೂಡ ಜೂನ್ ಅಂತ್ಯದವರೆಗೆ ಮುಂದೂಡಿಕೆ ಆಗಬಹುದು. ರಾಜ್ಯ ಸಭೆ ಚುನಾವಣೆ ಮುಗಿದ ತಕ್ಷಣವೇ ಎಂಎಲ್ಸಿ ಚುನಾವಣೆ ನಡೆಯಲಿರುವ ಕಾರಣ ಶಾಸಕರ ಪಾತ್ರ ಇಲ್ಲಿ ಪ್ರಮುಖವಾಗಿದೆ.

ಸಾಧ್ಯತೆ 3

‌ರಾಹುಲ್ ಗಾಂಧಿ ಚರ್ಚೆ ವೇಳೆ ಸಿದ್ದರಾಮಯ್ಯ ಡಿಕೆಶಿ ಇಬ್ಬರೂ ದಾಳ ಉರುಳಿಸುವ ಸಾಧ್ಯತೆ ಇದೆ. ಸಿಎಂ ಬದಲಾವಣೆ ಆಗುವುದೇ ಆದರೆ ಸಿದ್ದರಾಮಯ್ಯ ಪರಮೇಶ್ವರ್ ಹೆಸರು ಸೂಚಿಸುವ ಸಾಧ್ಯತೆ ಇದೆ. ರೀಶಫಲ್ ಮಾತ್ರ ಎನ್ನುವುದೇ ಆದರೆ ಬದಲಾವಣೆ ಆಗೋ ತನಕ ಅದು ಬೇಡ ಎಂದು ಡಿಕೆಶಿ ಪಟ್ಟು ಹಿಡಿಯಬಹುದು. ರಾಹುಲ್​​ ಗಾಂಧಿ ಸಮ್ಮುಖದಲ್ಲಿಯೇ ಚರ್ಚೆ ನಡೆಯುವ ಕಾರಣ ತೀರ್ಮಾನ ಏನುಬೇಕಾದರೂ ಆಗಬಹುದು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಕ್ಷಣೆಗೆ ಹೋದವರಿಗೇ ಕಾದಿತ್ತು ಆಪತ್ತು, ಅಮೆರಿಕದಲ್ಲಿ ಮೂವರನ್ನು ಬಲಿ ಪಡೆದ ನಿಗೂಢ ವಸ್ತು, ಸಿಬ್ಬಂದಿ ಅಸ್ವಸ್ಥ – Kannada News | Mysterious Substance Incident in New Mexico Leaves Three Dead, Responders Quarantined

ನ್ಯೂ ಮೆಕ್ಸಿಕೋ, ಮೇ 21: ಅಮೆರಿಕ(America)ದ ನ್ಯೂ ಮೆಕ್ಸಿಕೋ ರಾಜ್ಯದ ಅಲ್ಬುಕರ್ಕ್ ನಗರದ ಸಮೀಪವಿರುವ ಮೌಂಟೇನ್‌ಏರ್ ಎಂಬ ಗ್ರಾಮೀಣ ಪ್ರದೇಶದಲ್ಲಿ ಈ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದೆ. ಮನೆಯೊಂದರಲ್ಲಿ ಮಾದಕವಸ್ತು ಮಿತಿಮೀರಿದ ಸೇವನೆಯಿಂದ (Drug Overdose) ಜನರು ಪ್ರಜ್ಞಾಹೀನರಾಗಿದ್ದಾರೆ ಎಂಬ ಮಾಹಿತಿ ಪಡೆದು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು. ಆದರೆ, ಅಲ್ಲಿ ಅವರಿಗೆ ಕಾದಿದ್ದು ಮಾತ್ರ ದೊಡ್ಡ ಗಂಡಾಂತರ. ಪೊಲೀಸರು ಮತ್ತು ಪರಿಹಾರ ಕಾರ್ಯಕರ್ತರು ಸ್ಥಳಕ್ಕೆ ತಲುಪಿದಾಗ ಮನೆಯೊಳಗೆ ನಾಲ್ಕು ಜನರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಅವರಲ್ಲಿ ಮೂವರು ಈಗಾಗಲೇ ಸಾವನ್ನಪ್ಪಿದ್ದರು. ಮತ್ತೊಬ್ಬನನ್ನು ತಕ್ಷಣವೇ ಅಲ್ಬುಕರ್ಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ, ಅಸಲಿ ಆತಂಕ ಆರಂಭವಾಗಿದ್ದು ಇದರ ನಂತರವೇ.

ರಕ್ಷಣೆಗೆ ಹೋದವರಿಗೇ ತಟ್ಟಿದ ಕಂಟಕ
ಘಟನಾ ಸ್ಥಳದಲ್ಲಿದ್ದ ಯಾವುದೋ ಒಂದು ಅಪರಿಚಿತ ನಿಗೂಢ ವಸ್ತುವಿನ ಸಂಪರ್ಕಕ್ಕೆ ಬಂದ ತಕ್ಷಣವೇ, ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಕ್ಷಣಾ ಸಿಬ್ಬಂದಿಗೆ ವಾಕರಿಕೆ, ತಲೆತಿರುಗುವಿಕೆ ಮತ್ತು ದೌರ್ಬಲ್ಯದಂತಹ ಲಕ್ಷಣಗಳು ಕಾಣಿಸಿಕೊಂಡವು. ಸಿಬ್ಬಂದಿಯನ್ನು ತಕ್ಷಣವೇ ನ್ಯೂ ಮೆಕ್ಸಿಕೊ ವಿಶ್ವವಿದ್ಯಾಲಯದ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಲ್ಲಿ ಇಬ್ಬರು ರಕ್ಷಣಾ ಕಾರ್ಯಕರ್ತರ ಸ್ಥಿತಿ ಇಂದಿಗೂ ಅತ್ಯಂತ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿ ವಿಲ್ಸನ್ ಸಿಲ್ವರ್ ತಿಳಿಸಿದ್ದಾರೆ.

ರಸ್ತೆ ಬಂದ್, ಹ್ಯಾಜ್‌ಮ್ಯಾಟ್ ತಂಡದಿಂದ ತನಿಖೆ
ಪ್ರಾಥಮಿಕ ತನಿಖೆಯ ಪ್ರಕಾರ, ಈ ನಿಗೂಢ ಕಿಲ್ಲರ್ ವಸ್ತುವು ಗಾಳಿಯ ಮೂಲಕ ಹರಡುತ್ತಿಲ್ಲ, ಬದಲಿಗೆ ಸ್ಪರ್ಶ ಅಥವಾ ಸಂಪರ್ಕದ ಮೂಲಕ ಹರಡುತ್ತದೆ ಎಂಬುದು ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಆ ಮನೆಗೆ ಹೋಗುವ ರಸ್ತೆಯನ್ನು ಪೊಲೀಸರು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. ಆ ಅಪರಿಚಿತ ವಸ್ತು ಯಾವುದು ಎಂಬುದನ್ನು ಪತ್ತೆಹಚ್ಚಲು ಅಗ್ನಿಶಾಮಕ ದಳದ ಹ್ಯಾಜ್‌ಮ್ಯಾಟ್ (Hazmat – ಅಪಾಯಕಾರಿ ವಸ್ತುಗಳ ಪತ್ತೆ ಹಚ್ಚುವ ವಿಶೇಷ ತಂಡ) ತಂಡ ಸತತವಾಗಿ ಶ್ರಮಿಸುತ್ತಿದೆ.

ಮತ್ತಷ್ಟು ಓದಿ: ಕೊನೆ ಕ್ಷಣದಲ್ಲಿ ಇರಾನ್ ಮೇಲಿನ ಭೀಕರ ದಾಳಿ ಮುಂದೂಡಿದ ಅಮೆರಿಕ, ಗಲ್ಫ್ ರಾಷ್ಟ್ರಗಳ ಮನವಿಗೆ ಓಗೊಟ್ಟ ಟ್ರಂಪ್

ಆರಂಭಿಕ ಸಾಕ್ಷ್ಯಗಳ ಪ್ರಕಾರ, ಇದು ಅತ್ಯಂತ ಅಪಾಯಕಾರಿ ಮಾದಕ ವಸ್ತುವಿನಿಂದ (Drugs) ಸಂಭವಿಸಿರಬಹುದು ಎಂದು ಮೌಂಟೇನ್‌ಏರ್ ಮೇಯರ್ ಪೀಟರ್ ನೀಟೊ ತಿಳಿಸಿದ್ದಾರೆ. ಆದರೆ ಸಾರ್ವಜನಿಕರಿಗೆ ಯಾವುದೇ ತಕ್ಷಣದ ಬೆದರಿಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಘಟನೆ ಹೊರಬೀಳುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ತಮ್ಮ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ವ್ಯಸನದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾದಕ ದ್ರವ್ಯದ ಸಮಸ್ಯೆ ಇಡೀ ದೇಶಕ್ಕೆ ಗಂಭೀರ ಕಂಟಕವಾಗಿ ಪರಿಣಮಿಸಿದೆ, ಇದಕ್ಕೆ ಯಾವುದೇ ತ್ವರಿತ ಪರಿಹಾರವಿಲ್ಲಎಂದು ಮೇಯರ್ ಪೀಟರ್ ಕಳವಳ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಆ ನಿಗೂಢ ವಸ್ತು ಯಾವುದು ಎಂಬುದು ಇಡೀ ಅಮೆರಿಕದ ಪೊಲೀಸರಿಗೆ ದೊಡ್ಡ ರಹಸ್ಯವಾಗಿ ಉಳಿದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Tv9 Kannada News Live: ‘ಸುಪ್ರೀಂ’ನಲ್ಲಿ ಇಂದು ನಿರ್ಧಾರವಾಗುತ್ತಾ ಶೃಂಗೇರಿ ಮರು ಮತ ಎಣಿಕೆ ಭವಿಷ್ಯ?: ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Supreme Court to Hear Sringeri Recounting Case Today; Missing Hubballi Boy Found Dead

ಸುಪ್ರೀಂಕೋರ್ಟ್​​Image Credit source: rashtrabharat.com

ಬೆಂಗಳೂರು, ಮೇ 20: ಭಾರೀ ಕುತೂಹಲ ಮೂಡಿಸಿರುವ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವಿಚಾರ ಸಂಬಂಧ ಇಂದು ( ಮೇ 21) ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶ ರದ್ದು ಮಾಡಿ ತಡೆ ನೀಡಿದ್ದ ಸುಪ್ರೀಂಕೋರ್ಟ್, ಶಾಸರಾಗಿ ಟಿ.ಡಿ. ರಾಜೇಗೌಡ ಅವರನ್ನೇ ಮುಂದುವರಿಸಿತ್ತು. ಹೀಗಾಗಿ ಮತ ಮರು ಎಣಿಕೆ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ ಜೀವರಾಜ್​​ಗೆ ಹಿನ್ನಡೆ ಆಗಿತ್ತು.

ಹೆಚಿನ್ನ ಮಾಹಿತಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ

ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ

ಆಟ ಆಡಲು ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ. ಕೇಶ್ವಾಪುರದ ಆಜಾದ್ ನಗರ ನಿವಾಸಿ 9 ವರ್ಷದ ಬಾಲಾಜಿ ಮೃತ ದುರ್ದೈವಿಯಾಗಿದ್ದು, ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಾ ವಿಜಯನಗರಕ್ಕೆ ಬಂದಿದ್ದ ಎನ್ನಲಾಗಿದೆ. ಬಿದ್ದ ತೆಂಗಿನಕಾಯಿ ತೆಗೆದುಕೊಳ್ಳಲು ಕಾಂಪೌಂಡ್ ಒಳಗೆ ಹೋಗಿದ್ದ ಈತ ಪಿಲ್ಲರ್ ಹಾಕಲು ತೋಡಿದ್ದ ತಗ್ಗಿನಲ್ಲಿ ಬಿದ್ದಿದ್ದಾನೆ. ಈ ವೇಳೆ ಆತನೊಂದಿಗೆ ಬಂದ ಇಬ್ಬರು ಬಾಲಕರು ಹೆದರಿಕೊಂಡು ಪರಾರಿಯಾಗಿದ್ದು, ಗುಂಡಿಯಲ್ಲಿದ್ದ ನೀರಿನಲ್ಲಿ ಮುಳುಗಿ ಬಾಲಾಜಿ ಮೃತಪಟ್ಟಿದ್ದಾನೆ. ತಮ್ಮ ಮಗ ನಾಪತ್ತೆಯಾಗಿದ್ದಾನೆ ಎಂದು ಪೋಷಕರು ದೂರು ನೀಡಿದ್ದು, ಸಿಸಿ ಕ್ಯಾಮರಾ ದೃಶ್ಯಗಳನ್ನು ಆಧರಿಸಿ ಪೊಲೀಸರು ಶವ ಪತ್ತೆ ಹಚ್ಚಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಕುಳಿತು ಪಹಲ್ಗಾಮ್​ನಲ್ಲಿ ಲಷ್ಕರ್ ಉಗ್ರರು ಭಯೋತ್ಪಾದಕ ದಾಳಿ ನಡೆಸಿದ್ಹೇಗೆ? ಎನ್​ಐಎ ಚಾರ್ಜ್​ಶೀಟ್​​ನಲ್ಲೇನಿದೆ?

ಬೋನಿಗೆ ಬಿದ್ದ ಚಿರತೆ

ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ಬಳಿಯ ಗುಡ್ಡದಲ್ಲಿ ನಡೆದಿದೆ. ಹಲವು ದಿನಗಳಿಂದ ಈ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆ ಅದನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಬೋನ್ ಇಟ್ಟಿತ್ತು. ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಇಲಾಖೆಯ ಸಿಬ್ಬಂದಿ ರವಾನಿಸಿದ್ದಾರೆ.

ಮಂಗಳಮುಖಿಯರಿಂದ ಅಸಭ್ಯ ವರ್ತನೆ

ಐತಿಹಾಸಿಕ ಹುಲಗೆಮ್ಮ ದೇವಸ್ಥಾನದಲ್ಲಿ‌ ಮಂಗಳಮುಖಿಯರಿಂದ ಅಸಭ್ಯ ವರ್ತನೆ ಆರೋಪ ಕೇಳಿಬಂದಿದೆ.ದೇವಸ್ಥಾನಕ್ಕೆ ಬಂದ ಭಕ್ತನ್ನು ಹಣಕ್ಕಾಗಿ ಮಂಗಳಮುಖಿಯರು ಪೀಡಿಸುತ್ತಿದ್ದು, ಮಂಗಳಮುಖಿಯರ ಅಸಭ್ಯ ವರ್ತನೆ ವಿಡಿಯೋ ಸ್ಥಳೀಯರ ಮೊಬೈಲ್​​ನಲ್ಲಿ ಸೆರೆಯಾಗಿದೆ. ಅಸಭ್ಯ ವರ್ತನೆ ಮಾಡುತ್ತಿದ್ದ ‌ಮಂಗಳಮುಖಿಗೆ ಮಹಿಳಾ ಪೊಲೀಸ್ ಪೇದೆ ಕೆನ್ನೆಗೆ ಬಾರಿಸಿದ್ದು, ಹುಲಗೆಮ್ಮ ದೇವಸ್ಥಾನದಲ್ಲಿ ಮಂಗಳ ಇವರ ಕಾಟದಿಂದ ಭಕ್ತರು ರೋಸಿರುವ ಕಾರಣ ನಿಯಂತ್ರಣಕ್ಕೆ ಮನವಿ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 8:00 am, Thu, 21 May 26

Source link

ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್​​: ಅಟ್ಟಾಡಿಸಿ ಅಟ್ಯಾಕ್​

ಚಾಮರಾಜನಗರ, ಮೇ 21: ಜಿಲ್ಲೆಯ ತಮಿಳುನಾಡಿನ ಗಡಿ ತಾಳವಾಡಿಯ ಮರೂರು ಬಳಿ ಸಂಜೆಯಾದರೆ ಒಂಟಿ ಸಲಗ ರಸ್ತೆಗಿಳಿಯುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿಯೇ ದಿನ ದೂಡುವಂತಾಗಿದೆ. ವಾಹನಗಳು ಬಂದರೆ ಈ ಆನೆ ಅಟ್ಟಾಡಿಸುವ ಕಾರಣ ಸಂಜೆ ವೇಳೆ ರಸ್ತೆಯಲ್ಲಿ ಸಂಚರಿಸಲೂ ವಾಹನ ಸವಾರರು ಭಯಪಡಬೇಕಾದ ಸ್ಥಿತಿ ಉದ್ಭವಿಸಿದೆ. ಬೆಳಗಿನ ವೇಳೆ ಜಮೀನುಗಳತ್ತ ಲಗ್ಗೆ ಇಡುತ್ತಿದ್ದ ಕಾಡಾನೆಗಳು ಇದೀಗ ಗ್ರಾಮಗಳ ಸುತ್ತಮುತ್ತವೇ ಸಂಚಾರ ನಡೆಸುತ್ತಿರೋದು ಆತಂಕ ಹೆಚ್ಚಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ – Kannada News | Sonal Monteiro and Tarun Sudhir Enjoy Romantic Jungle Safari Post Wedding

ಸ್ಯಾಂಡಲ್‌ವುಡ್‌ನ ತಾರಾ ಜೋಡಿ ತರುಣ್ ಸುಧೀರ್ ಮತ್ತು ಸೋನಲ್ ಮೊಂತೆರೊ ವನ್ಯಜೀವಿಗಳ ವೀಕ್ಷಣೆಗಾಗಿ ಸಫಾರಿ ಪ್ರವಾಸ ಕೈಗೊಂಡಿದ್ದಾರೆ. ದಟ್ಟವಾದ ಕಾಡಿನ ಮಧ್ಯೆ ಜಿಪ್ಸಿ ಗಾಡಿಯಲ್ಲಿ ಪ್ರಯಾಣಿಸುತ್ತಾ, ಪ್ರಕೃತಿಯ ಸೌಂದರ್ಯವನ್ನು ಸವಿದಿದ್ದಾರೆ. ಪ್ರವಾಸದ ಉದ್ದಕ್ಕೂ ವನ್ಯಜೀವಿಗಳಾದ ಆನೆ, ಕೃಷ್ಣಮೃಗ ಮತ್ತು ಗಜಗಾಂಭೀರ್ಯದ ಪ್ರಾಣಿಗಳನ್ನು ಹತ್ತಿರದಿಂದ ವೀಕ್ಷಿಸಿ, ಆ ಸುಂದರ ನೆನಪುಗಳನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL​ ಆಡಲು ಮೊಹಮ್ಮದ್ ಅಮಿರ್​ಗೆ ‘ಗ್ರೀನ್ ಸಿಗ್ನಲ್’

Source link

Attract Wealth: ಪರ್ಸ್‌ನಲ್ಲಿ ಈ 5 ವಸ್ತು ಇಟ್ಟರೆ ಒಲಿದು ಬರುವಳು ಲಕ್ಷ್ಮಿ; ಆರ್ಥಿಕ ಸಂಕಷ್ಟಕ್ಕೆ ಇಲ್ಲಿದೆ ಮುಕ್ತಿ! – Kannada News | Vastu and Jyotish: 5 Auspicious Items for Your Purse to Attract Wealth

ಆರ್ಥಿಕ ಸಂಕಷ್ಟಕ್ಕೆ ಇಲ್ಲಿದೆ ಮುಕ್ತಿImage Credit source: Pinterest

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ, ಪರ್ಸ್ (ಕೈಚೀಲ) ಅನ್ನು ಕೇವಲ ಹಣ ಇಡುವ ಸ್ಥಳವೆಂದು ಪರಿಗಣಿಸುವುದಿಲ್ಲ. ಬದಲಿಗೆ, ಇದು ಒಬ್ಬ ವ್ಯಕ್ತಿಯ ಆರ್ಥಿಕ ಶಕ್ತಿ ಮತ್ತು ಭಾಗ್ಯದೊಂದಿಗೆ ನೇರ ಸಂಬಂಧ ಹೊಂದಿದೆ. ನಂಬಿಕೆಗಳ ಪ್ರಕಾರ, ಶುದ್ಧ ಮತ್ತು ಶುಭ ವಸ್ತುಗಳಿಂದ ತುಂಬಿದ ಪರ್ಸ್ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅದೇ ಸಮಯದಲ್ಲಿ, ಅನಗತ್ಯ ಅಥವಾ ನಕಾರಾತ್ಮಕ ವಸ್ತುಗಳಿಂದ ತುಂಬಿದ ಪರ್ಸ್ ತೀವ್ರ ಆರ್ಥಿಕ ತೊಂದರೆಗಳನ್ನು ತಂದೊಡ್ಡಬಹುದು.

ಜ್ಯೋತಿಷ್ಯ ತಜ್ಞರ ಪ್ರಕಾರ, ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸಲು ಮತ್ತು ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸಲು ನಿಮ್ಮ ಪರ್ಸ್‌ನಲ್ಲಿ ಇಟ್ಟುಕೊಳ್ಳಬೇಕಾದ ಆ 5 ಶುಭ ವಸ್ತುಗಳು ಇಲ್ಲಿವೆ:

ಅರಳಿ ಎಲೆ:

ವಾಸ್ತು ಮತ್ತು ಧಾರ್ಮಿಕ ದೃಷ್ಟಿಕೋನದಿಂದ ಅರಳಿ ಮರಕ್ಕೆ ಅತ್ಯುನ್ನತ ಸ್ಥಾನವಿದೆ. ಸಾಕ್ಷಾತ್ ವಿಷ್ಣು ಅರಳಿ ಮರದಲ್ಲಿ ವಾಸಿಸುತ್ತಾರೆ ಎಂದು ಹೇಳಲಾಗುತ್ತದೆ. ಒಂದು ಸ್ವಚ್ಛ ಮತ್ತು ತಾಜಾ ಅರಳಿ ಎಲೆಯನ್ನು ತಂದು, ಗಂಗಾ ನೀರಿನಿಂದ ತೊಳೆದು ಶುದ್ಧೀಕರಿಸಿ. ಅದರ ಮೇಲೆ ಶ್ರೀಗಂಧ ಅಥವಾ ಕೇಸರಿಯಿಂದ “ಶ್ರೀ” ಎಂದು ಬರೆದು, ಅದು ಒಣಗಿದ ನಂತರ ಪರ್ಸ್‌ನಲ್ಲಿ ಇಟ್ಟುಕೊಳ್ಳಿ. ಇದು ಸಂಪತ್ತನ್ನು ಆಕರ್ಷಿಸಲು ಮತ್ತು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು ನೆರವಾಗುತ್ತದೆ.

ದೈವಿಕ ಗೋಮತಿ ಚಕ್ರ:

ಗೋಮತಿ ಚಕ್ರವನ್ನು ಅತ್ಯಂತ ಶಕ್ತಿಶಾಲಿ ಮತ್ತು ಶುಭ ತರುವ ವಸ್ತು ಎಂದು ಪರಿಗಣಿಸಲಾಗುತ್ತದೆ. ವಾಸ್ತು ಪ್ರಕಾರ, ಗೋಮತಿ ಚಕ್ರವನ್ನು ಕೈಚೀಲದಲ್ಲಿ ಇಟ್ಟುಕೊಳ್ಳುವುದರಿಂದ ಆರ್ಥಿಕ ಅಡೆತಡೆಗಳು ತಕ್ಷಣವೇ ನಿವಾರಣೆಯಾಗುತ್ತವೆ. ಇದು ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ತಂದುಕೊಡುವುದಲ್ಲದೆ, ದೀರ್ಘಕಾಲದ ಸಾಲದ ಬಾಧೆಯಿಂದ ಮುಕ್ತಿ ಪಡೆಯಲು ಸಹಕಾರಿಯಾಗಿದೆ.

ಅಕ್ಷತೆ ಅಥವಾ ಅಕ್ಕಿ ಕಾಳುಗಳು:

ಹಿಂದೂ ಧರ್ಮದಲ್ಲಿ ಅಕ್ಕಿ ಕಾಳುಗಳನ್ನು ಸಮೃದ್ಧಿ ಮತ್ತು ಸಂತೋಷದ ಸಂಕೇತವೆಂದು ಪೂಜಿಸಲಾಗುತ್ತದೆ. 11 ಅಥವಾ 21 ಅಕ್ಕಿ ಕಾಳುಗಳನ್ನು ಒಂದು ಸಣ್ಣ ಬಿಳಿ ಬಟ್ಟೆ ಅಥವಾ ಕಾಗದದಲ್ಲಿ ಅಚ್ಚುಕಟ್ಟಾಗಿ ಕಟ್ಟಿ ಪರ್ಸ್‌ನಲ್ಲಿ ಇಡಿ. ಹೀಗೆ ಮಾಡುವುದರಿಂದ ಅನಗತ್ಯ ಖರ್ಚುಗಳು ನಿಯಂತ್ರಣಕ್ಕೆ ಬಂದು, ಸಂಪತ್ತು ದಿನದಿಂದ ದಿನಕ್ಕೆ ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

ಬಿಳಿ ಅಥವಾ ಹಳದಿ ಕವಡೆಗಳು:

ಬಿಳಿ ಅಥವಾ ಹಳದಿ ಬಣ್ಣದ ಕವಡೆಗಳನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಪೌರಾಣಿಕ ಕಥೆಗಳ ಪ್ರಕಾರ, ಸಮುದ್ರ ಮಂಥನದ ಸಮಯದಲ್ಲಿ ಲಕ್ಷ್ಮಿ ದೇವಿಯ ಜೊತೆಗೆ ಈ ಕವಡೆಗಳು ಸಹ ಉದ್ಭವಿಸಿದವು. ನಿಮ್ಮ ಕೈಚೀಲದಲ್ಲಿ ಒಂದು ಅಥವಾ ಮೂರು ಬಿಳಿ/ಹಳದಿ ಕವಡೆಗಳನ್ನು ಇಟ್ಟುಕೊಳ್ಳುವುದರಿಂದ ನಕಾರಾತ್ಮಕ ಶಕ್ತಿ ದೂರವಾಗಿ, ಆರ್ಥಿಕ ತೊಂದರೆಗಳು ಶೀಘ್ರದಲ್ಲೇ ದೂರವಾಗುತ್ತವೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ದೇವರ ಸಣ್ಣ ಚಿತ್ರ ಅಥವಾ ಶುಭ ಚಿಹ್ನೆಗಳು:

ಅನೇಕ ಜನರು ತಮ್ಮ ಪರ್ಸ್‌ನಲ್ಲಿ ತಮಗೆ ಇಷ್ಟವಾದ ದೇವರು, ಓಂ (Om) ಅಥವಾ ಸ್ವಸ್ತಿಕ ಚಿಹ್ನೆಯ ಸಣ್ಣ ಚಿತ್ರವನ್ನು ಇಟ್ಟುಕೊಳ್ಳುತ್ತಾರೆ. ವಾಸ್ತು ಪ್ರಕಾರ, ಇಂತಹ ಪವಿತ್ರ ವಸ್ತುಗಳು ನಿಮ್ಮನ್ನು ಆರ್ಥಿಕ ನಷ್ಟದಿಂದ ರಕ್ಷಿಸುತ್ತವೆ ಮತ್ತು ಯಾವುದೇ ನಕಾರಾತ್ಮಕ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ತಡೆಯುತ್ತವೆ. ಇದು ಮನಸ್ಸಿನಲ್ಲಿ ಸಕಾರಾತ್ಮಕತೆ ಮತ್ತು ಆತ್ಮವಿಶ್ವಾಸವನ್ನು ಸದಾ ಜಾಗೃತವಾಗಿಡುತ್ತದೆ.

ಪರ್ಸ್ ಬಳಸುವಾಗ ನೆನಪಿರಬೇಕಾದ ವಾಸ್ತು ನಿಯಮಗಳು:

ಕೇವಲ ಶುಭ ವಸ್ತುಗಳನ್ನು ಇಡುವುದಷ್ಟೇ ಅಲ್ಲ, ಪರ್ಸ್ ಅನ್ನು ಹೇಗೆ ನಿರ್ವಹಿಸುತ್ತೀರಿ ಎಂಬುದು ಕೂಡ ಅಷ್ಟೇ ಮುಖ್ಯ:

  • ಪರ್ಸ್ ಅನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಟ್ಟುಕೊಳ್ಳಬೇಕು.
  • ಹರಿದ ಕಾಗದಗಳು, ಹಳೆಯ ಬಿಲ್‌ಗಳು, ಅನಗತ್ಯ ರಸೀದಿಗಳು ಅಥವಾ ಮುರಿದ ವಸ್ತುಗಳನ್ನು ಪರ್ಸ್‌ನಲ್ಲಿ ಇಡಬೇಡಿ. ಇವು ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಿ ಹಣದ ನಷ್ಟಕ್ಕೆ ಕಾರಣವಾಗುತ್ತವೆ.

ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ನಂಬಿಕೆಗಳು ಮತ್ತು ಜ್ಯೋತಿಷ್ಯ ಶಾಸ್ತ್ರದ ಆಧಾರದ ಮೇಲೆ ನೀಡಲಾದ ಮಾಹಿತಿಯಾಗಿದೆ. ಹೆಚ್ಚಿನ ಮಾಹಿತಿಗೆ ತಜ್ಞರನ್ನು ಸಂಪರ್ಕಿಸಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬದಲಾಗದ ಸೋಲಿನ ಕಾರಣ: ಹಾರ್ದಿಕ್ ಪಾಂಡ್ಯ ಬೇಸರ – Kannada News | Hardik pandya Post Match interview after KKR vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು 147 ರನ್​ಗಳು ಮಾತ್ರ. ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 18.5 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ತಂಡವು ಎದುರಿಸಿದ ಹಿನ್ನಡೆಗೆ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ವಿಭಾಗದ ತಪ್ಪುಗಳೇ ಕಾರಣ ಎಂದು ಅವರು ಒಪ್ಪಿಕೊಂಡಿದ್ದಾರೆ.

ಬ್ಯಾಟಿಂಗ್ ವೈಫಲ್ಯ ಮತ್ತು ಪವರ್‌ಪ್ಲೇ ಕುಸಿತ:

ಈ ಪಂದ್ಯದಲ್ಲಿ ನಮ್ಮ ತಂಡವು ನಿರೀಕ್ಷಿತ ಮೊತ್ತಕ್ಕಿಂತ ಸುಮಾರು 20 ರನ್ ಕಡಿಮೆ ಗಳಿಸಿತು. ಮೊದಲ 6 ಓವರ್​ಗಳ ಅವಧಿಯಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿದ್ದು ತಂಡಕ್ಕೆ ದೊಡ್ಡ ಹೊಡೆತ ನೀಡಿತು. ಮಧ್ಯಮ ಕ್ರಮಾಂಕದಲ್ಲಿ ತಾವಾಗಲಿ ಅಥವಾ ತಿಲಕ್ ವರ್ಮಾ ಅವರಾಗಲಿ ದೀರ್ಘಾವಧಿ ಕ್ರೀಸ್‌ನಲ್ಲಿ ಉಳಿದು ದೊಡ್ಡ ಜೊತೆಯಾಟ ಆಡಿದ್ದರೆ, ಪಂದ್ಯವನ್ನು ಗೆಲ್ಲುವ ಉತ್ತಮ ಅವಕಾಶ ಇರುತ್ತಿತ್ತು ಎಂದು ಹಾರ್ದಿಕ್ ಪಾಂಡ್ಯ ಅಭಿಪ್ರಾಯಪಟ್ಟಿದ್ದಾರೆ.

ಬೌಲರ್‌ಗಳಿಗೆ ಸಹಕಾರಿಯಾದ ಪಿಚ್‌:

ಇತ್ತೀಚಿನ ಐಪಿಎಲ್ ಪಂದ್ಯಗಳು ಸಂಪೂರ್ಣವಾಗಿ ಬ್ಯಾಟರ್‌ಗಳ ಪರವಾಗಿರುತ್ತಿದ್ದು, ಬೌಲರ್‌ಗಳು ಅಸಹಾಯಕರಾಗುತ್ತಿದ್ದಾರೆ. ಆದರೆ, ಈ ಪಂದ್ಯದ ಪಿಚ್ ಬೌಲರ್‌ಗಳಿಗೂ ಸ್ವಲ್ಪ ಸಹಾಯ ಮಾಡಿತು. ಇಂತಹ ಸವಾಲಿನ ಪಿಚ್‌ಗಳಲ್ಲಿ ಆಡುವುದನ್ನು ತಾವು ಇಷ್ಟಪಡುವುದಾಗಿ ಹಾರ್ದಿಕ್ ಹೇಳಿದ್ದಾರೆ.

ಇದು ಬ್ಯಾಟರ್‌ಗಳು ಉತ್ತಮ ಕ್ರಿಕೆಟ್ ಆಡಿ ರನ್ ಗಳಿಸುವಂತೆ ಪ್ರೇರೇಪಿಸುತ್ತದೆ ಮತ್ತು ಪಂದ್ಯದಲ್ಲಿ ಸಮಬಲದ ಪೈಪೋಟಿ ತರುತ್ತದೆ ಎಂದು ಮುಂಬೈ ಇಂಡಿಯನ್ಸ್ ತಂಡದ ನಾಯಕ ಅಭಿಪ್ರಾಯಪಟ್ಟಿದ್ದಾರೆ.

ಕಳಪೆ ಫೀಲ್ಡಿಂಗ್:

ಈ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಫೀಲ್ಡಿಂಗ್ ಅತ್ಯಂತ ಕಳಪೆಯಾಗಿದೆ ಎಂದು ನಾಯಕ ಬೇಸರ ವ್ಯಕ್ತಪಡಿಸಿದ್ದಾರೆ. ಪಂದ್ಯವನ್ನು ಗೆಲ್ಲಬೇಕಾದರೆ ಸಿಗುವ  ಅವಕಾಶಗಳನ್ನೂ ಬಳಸಿಕೊಳ್ಳಬೇಕು. ಆದರೆ, ಈ ಪಂದ್ಯದಲ್ಲೂ ಪ್ರಮುಖ ಕ್ಯಾಚ್‌ಗಳನ್ನು ಕೈಬಿಟ್ಟಿದ್ದರಿಂದ, ಪಂದ್ಯದುದ್ದಕ್ಕೂ ಎದುರಾಳಿ ತಂಡವನ್ನು ಬೆನ್ನಟ್ಟುವ ಪರಿಸ್ಥಿತಿ ನಿರ್ಮಾಣವಾಯಿತು. ಫೀಲ್ಡಿಂಗ್ ತಪ್ಪುಗಳಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ.

ನಮ್ಮ ತಂಡ ಈ ಬಾರಿಯ ಹೆಚ್ಚಿನ ಪಂದ್ಯಗಳನ್ನು ಸೋತಿರುವುದು ಬ್ಯಾಟಿಂಗ್ ವೈಫಲ್ಯ ಮತ್ತು ಕಳಪೆ ಫೀಲ್ಡಿಂಗ್​ನಿಂದ. ಅದು ಈ ಪಂದ್ಯದಲ್ಲೂ ಮುಂದುವರೆದಿದೆ. ಅಂದರೆ ನಮ್ಮ ಸೋಲಿನ ಕಾರಣ ಬದಲಾಗಿಲ್ಲ.  ಇದನ್ನು ಒಪ್ಪಿಕೊಳ್ಳಲೇಬೇಕು ಎಂದು ಹಾರ್ದಿಕ್ ಪಾಂಡ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಕೊನೆಯ ಪಂದ್ಯ ಗೆಲ್ಲಲೇಬೇಕು:

ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಮ್ಯಾಚ್​ನಲ್ಲಿ ಗೆದ್ದು, ಗೆಲುವಿನೊಂ ಸೀಸನ್​ ಮುಗಿಸಲು ಬಯಸಿದೆ. ಮುಂದಿನ ಪಂದ್ಯವು’ESA – Education and Sports for All ಯೋಜನೆಯಡಿ ನಡೆಯಲಿದ್ದು, ಕ್ರೀಡಾಂಗಣಕ್ಕೆ ಬರಲಿರುವ 25,000 ಬಡ ಮತ್ತು ವಿಶೇಷ ಮಕ್ಕಳಿಗೆ ಉತ್ತಮ ಮನರಂಜನೆ ನೀಡುವುದು ನಮ್ಮ ಗುರಿಯಾಗಿದೆ. ಅವರ ಮುಖದಲ್ಲಿ ನಗು ಮೂಡಿಸಿ, ಅವರಿಗೊಂದು ಜೀವಮಾನದ ನೆನಪು ನೀಡುವುದಾಗಿ ಹಾರ್ದಿಕ್ ಪಾಂಡ್ಯ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಮನೀಶ್ ಪಾಂಡೆ

ಒಟ್ಟಾರೆಯಾಗಿ ಹೇಳುವುದಾದರೆ, ಮುಂಬೈ ಇಂಡಿಯನ್ಸ್ ತಂಡದ ಈ ಸೀಸನ್‌ನ ಪ್ರದರ್ಶನವು ನಿರೀಕ್ಷಿತ ಮಟ್ಟದಲ್ಲಿರಲಿಲ್ಲ ಎಂಬುದನ್ನು ನಾಯಕ ಹಾರ್ದಿಕ್ ಪಾಂಡ್ಯ ಅವರ ಮಾತುಗಳೇ ಸ್ಪಷ್ಟಪಡಿಸುತ್ತವೆ. ಪವರ್‌ಪ್ಲೇನಲ್ಲಿನ ವಿಕೆಟ್ ಕುಸಿತ, ನಿರಂತರ ಕ್ಯಾಚ್ ಕೈಚೆಲ್ಲುವಿಕೆ ಮತ್ತು ಪ್ರಮುಖ ಸಂದರ್ಭಗಳಲ್ಲಿ ಜೊತೆಯಾಟದ ಕೊರತೆಯೇ ತಂಡದ ಹಿನ್ನಡೆಗೆ ಮುಖ್ಯ ಕಾರಣಗಳಾಗಿವೆ.


ಅಲ್ಲದೆ ಈ ಹಿಂದಿನತಪ್ಪುಗಳಿಂದ ಪಾಠ ಕಲಿತು ಮುನ್ನಡೆಯುವ ಭರವಸೆ ಹೊಂದಿರುವ ಮುಂಬೈ ತಂಡ, ತನ್ನ ಮುಂದಿನ ಇಎಸ್‌ಎ (ESA) ಪಂದ್ಯದಲ್ಲಿ ಕ್ರೀಡಾಂಗಣಕ್ಕೆ ಬರಲಿರುವ ಸಾವಿರಾರು ಮಕ್ಕಳನ್ನು ರಂಜಿಸಿ, ಸೀಸನ್ ಅನ್ನು ಸಕಾರಾತ್ಮಕವಾಗಿ ಮತ್ತು ಗೆಲುವಿನೊಂದಿಗೆ ಮುಗಿಸುವ ತವಕದಲ್ಲಿದೆ.

Source link

‘ಮಗುವನ್ನು ಕಳೆದುಕೊಂಡಂತೆ ಅನಿಸುತ್ತಿದೆ’; ಖಿನ್ನತೆ ಸ್ಥಿತಿಗೆ ಹೋದ ಆಮಿರ್ ಖಾನ್ – Kannada News | Aamir Khan’s Heartbreak: ‘Ek Din’ Failure and His Emotional Battle with Film Flops

ಬಾಲಿವುಡ್‌ ಖ್ಯಾತ ನಟ ಆಮಿರ್ ಖಾನ್ ಸದ್ಯ ತೀವ್ರ ಹತಾಶೆಯಲ್ಲಿದ್ದಾರೆ. ತಮ್ಮ ಸಿನಿಮಾಗಳಿಗಾಗಿ ಅಪಾರ ಶ್ರಮ ಹಾಕುವ ಆಮಿರ್ ಖಾನ್, ಚಿತ್ರಗಳು ಸೋತಾಗ ಆ ದುಃಖದಿಂದ ಹೊರಬರಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಾರೆ. ಇತ್ತೀಚೆಗೆ ತಮ್ಮ ನಿರ್ಮಾಣದ, ಮಗ ಜುನೈದ್ ಖಾನ್ ನಟನೆಯ ‘ಏಕ್ ದಿನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿರುವುದು ಆಮಿರ್ ಖಾನ್ ಅವರಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

ಈ ಚಿತ್ರದ ಬಗ್ಗೆ ಆಮಿರ್ ಖಾನ್ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಮಗನ ಸಿನಿಮಾದ ಕಥೆ ಇಷ್ಟವಾಗಿ ತಾವೇ ಸ್ವತಃ ಭಾವನಾತ್ಮಕ ನಿರ್ಧಾರ ಕೈಗೊಂಡು ಚಿತ್ರವನ್ನು ನಿರ್ಮಿಸಿದ್ದರು. ಆದರೆ ಸಿನಿಮಾ ಅಂದುಕೊಂಡಂತೆ ಯಶಸ್ಸು ಕಾಣಲಿಲ್ಲ. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಆಮಿರ್, ಸಿನಿಮಾ ಸೋತಾಗ ತಾವು 2-3 ತಿಂಗಳುಗಳ ಕಾಲ ತೀವ್ರ ಬೇಸರ ಅಥವಾ ಖಿನ್ನತೆಯ ಸ್ಥಿತಿಗೆ ಜಾರುವುದಾಗಿ ಹೇಳಿಕೊಂಡಿದ್ದಾರೆ.

‘ನನ್ನ ಸಿನಿಮಾ ಸೋತಾಗ ಹೃದಯ ಒಡೆದಂತಾಗುತ್ತದೆ. ಚಿತ್ರ ಎಂಬುದು ನಮಗೆ ಸ್ವಂತ ಮಗುವಿನಂತೆ. ಅದು ವಿಫಲವಾದಾಗ ಅಥವಾ ಪ್ರೇಕ್ಷಕರಿಂದ ತಿರಸ್ಕೃತಗೊಂಡಾಗ ಅತಿಯಾದ ನೋವಾಗುತ್ತದೆ. ಆ ಸೋಲಿನ ದುಃಖವನ್ನು ಅನುಭವಿಸುವುದು ಕಷ್ಟ. ಅದು ಮಗುವನ್ನು ಕಳೆದುಕೊಂಡಷ್ಟೇ ನೋವು ನೀಡುತ್ತದೆ. ಅದನ್ನು ಸಂಪೂರ್ಣವಾಗಿ ಅತ್ತು ಹೊರಹಾಕಿದಾಗ ಮಾತ್ರ ನಮಗೆ ಮುಂದಿನ ಕೆಲಸದತ್ತ ಗಮನ ಹರಿಸಲು ಸಾಧ್ಯವಾಗುತ್ತದೆ’ ಎಂದು ಆಮಿರ್ ಖಾನ್ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು

ಇತ್ತ ಮಗ ಜುನೈದ್ ಖಾನ್ ಕೂಡ ತಂದೆಯ ಸ್ಥಿತಿಯ ಬಗ್ಗೆ ಮಾತನಾಡಿದ್ದು, ‘ಇಷ್ಟೆಲ್ಲಾ ವರ್ಷಗಳ ಅನುಭವದ ನಂತರವೂ ತಂದೆಗೆ ಸಿನಿಮಾದ ಸೋಲುಗಳು ಇಂದಿಗೂ ತುಂಬಾ ಕಾಡುತ್ತವೆ. ‘ಏಕ್ ದಿನ್’ ಚಿತ್ರದ ಕಥೆ ಕೇಳಿ ಭಾವುಕರಾಗಿದ್ದ ಅವರು, ನನಗಾಗಿ ತಾವೇ ನಿರ್ಮಾಣ ಮಾಡುವುದಾಗಿ ಹಠ ಹಿಡಿದಿದ್ದರು. ಆದರೆ ಸಿನಿಮಾ ಸೋತಿದೆ’ ಎಂದಿದ್ದಾರೆ. ಈ ಸೋಲಿನ ನಡುವೆಯೂ ಆಮಿರ್ ಖಾನ್ ಮುಂದಿನ ದಿನಗಳಲ್ಲಿ ಮತ್ತೆ ಯಶಸ್ಸು ಕಾಣುವ ಭರವಸೆಯಲ್ಲಿದ್ದಾರೆ. ಸದ್ಯ ಅವರು ನಟನೆಗಿಂತ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಕ್ಫ್ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ವ್ಯಕ್ತಿಯ ಮೇಲೆ ಸಿನಿಮೀಯ ರೀತಿಯಲ್ಲಿ ದಾಳಿ! – Kannada News | Raichur Attack: 30 Assailants Injure Man Who Exposed Waqf Board Fund Scam

ರಾಯಚೂರು, ಮೇ.21: ವಕ್ಫ್ ಬೋರ್ಡ್ ಅನುದಾನ ದುರ್ಬಳಕೆ ಬಗ್ಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂಬ ದ್ವೇಷಕ್ಕೆ ದೂರುದಾರ ಹಾಗೂ ಆತನ ಕಡೆಯವರ ಮೇಲೆ ಸುಮಾರು 30 ಜನ ಕಿರಾತಕರು ಸಿನಿಮೀಯ ಶೈಲಿಯಲ್ಲಿ ಚಾಕು, ಭರ್ಜಿ ಹಾಗೂ ಕಲ್ಲುಗಳಿಂದ ಭೀಕರ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ರಾಯಚೂರು ನಗರದ ತಹಶಿಲ್ದಾರ್ ಕಚೇರಿ ಬಳಿಯೇ ನಡೆದಿದೆ.

ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಮಸೀದಿ, ಖಬರಸ್ತಾನ ಹಾಗೂ ಈದ್ಗಾ ಮೈದಾನದ ಅಭಿವೃದ್ಧಿಗಾಗಿ 2017-19ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಬ್ ಹಾಗೂ ವಕ್ಫ್ ಮಂಡಳಿಯಿಂದ ಒಟ್ಟು 26 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿತ್ತು. ಆದರೆ ಈ ಕಾಮಗಾರಿಯಲ್ಲಿ ಭಾರಿ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿ ತಲಮಾರಿ ಗ್ರಾಮದ ಸನಾವುಲ್ಲಾ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇತ್ತೀಚೆಗಷ್ಟೇ ಲೋಕಾಯುಕ್ತ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿತ್ತು.

ತನಿಖೆ ನಡೆಸಿದ ಬೆನ್ನಲೇ, ಲೋಕಾಯುಕ್ತ ತನಿಖೆಯಿಂದ ತೀವ್ರ ಆಕ್ರೋಶಗೊಂಡಿದ್ದ ಎದುರಾಳಿಗಳು, ಪ್ರಕರಣವನ್ನು ಕಾಂಪ್ರಮೈಸ್ (ರಾಜಿ) ಮಾಡಿಕೊಳ್ಳುವ ನೆಪದಲ್ಲಿ ದೂರುದಾರ ಸನಾವುಲ್ಲಾನನ್ನು ರಾಯಚೂರಿನ ತಹಶಿಲ್ದಾರ್ ಕಚೇರಿ ಬಳಿ ಕರೆಸಿಕೊಂಡಿದ್ದಾರೆ. ಮಾತುಕತೆ ನಡೆಸುವಾಗಲೇ ಏಕಾಏಕಿ ಸಂಚು ರೂಪಿಸಿ ಬಂದಿದ್ದ ಸುಮಾರು 30 ಜನರ ಗುಂಪು ಚಾಕು, ಭರ್ಜಿ ಹಾಗೂ ಮಾರಕಾಸ್ತ್ರಗಳಿಂದ ಸನಾವುಲ್ಲಾ ಮತ್ತು ಆತನ ಸ್ನೇಹಿತರ ಮೇಲೆ ಮನಸ್ಸೋಇಚ್ಛೆ ದಾಳಿ ಮಾಡಿದ್ದಾರೆ. ನಡುರಸ್ತೆಯಲ್ಲೇ ನಡೆದ ಈ ರಕ್ತಪಾತದಿಂದಾಗಿ ಸನಾವುಲ್ಲಾ ಮೈತುಂಬಾ ಗಂಭೀರ ಗಾಯಗಳಾಗಿದ್ದು, ಬರೋಬ್ಬರಿ 24 ಸ್ಟಿಚ್‌ಗಳನ್ನು (ಹೊಲಿಗೆ) ಹಾಕಿದ್ದಾರೆ.

ಇದನ್ನೂ ಓದಿ: ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ

ಪ್ರಸ್ತುತ ಗಾಯಾಳು ಸನಾವುಲ್ಲಾಗೆ ರಾಯಚೂರಿನ ಓಪೆಕ್ (OPEC) ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಪೊಲೀಸ್ ಭದ್ರತೆಯೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಅಶುಪಟೇಲ್, ನಿಜಾಮ್ ಪಟೇಲ್, ಇರ್ಫಾನ್ ಸೇರಿದಂತೆ 15ಕ್ಕೂ ಹೆಚ್ಚು ಜನರ ವಿರುದ್ಧ ರಾಯಚೂರಿನ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಇತ್ತ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಕಡೆಯವರೂ ಸಹ ಗಾಯಾಳು ಸನಾವುಲ್ಲಾ ಮತ್ತು ಆತನ ಕಡೆಯವರ ವಿರುದ್ಧ ಕೌಂಟರ್ ಕೇಸ್ ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version