Headlines

ರಜನೀಕಾಂತ್ ಮತ್ತು ಗಿಲ್ಲಿ: ಒಂದು ಬಿರಿಯಾನಿಯ ಕತೆ – Kannada News | The connection between Gilli Biriyani and Rajinikanth here is the story

ಬಿಗ್​​ಬಾಸ್ (Bigg Boss) ಫಿನಾಲೆ ಹತ್ತಿರದಲ್ಲಿದೆ. ಮನೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದು, ಗಿಲ್ಲಿ ಗೆಲ್ಲುವ ಫೇವರೇಟ್ ಎನಿಸಿಕೊಂಡಿದ್ದಾರೆ. ಹೊರಗೆ ಗಿಲ್ಲಿಗೆ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ. ಗಿಲ್ಲಿ ಕುರಿತು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್​​ಗಳು, ಹಾಡುಗಳು ಸಹ ಹರಿದಾಡುತ್ತಿವೆ. ಗಿಲ್ಲಿ ಹೆಸರಲ್ಲಿ ಆಟೋ ಸೇವೆಯನ್ನು ಉಚಿತವಾಗಿ ಕೊಡುವುದಾಗಿ ಕೆಲ ಆಟೋ ಡ್ರೈವರ್​ಗಳು ಘೋಷಣೆ ಮಾಡಿದ್ದಾರೆ. ಒಟ್ಟಾರೆ ಗಿಲ್ಲಿ ಕ್ರೇಜ್ ಜೋರಾಗಿದೆ. ಅಂದಹಾಗೆ ಗಿಲ್ಲಿ ಹೆಸರಲ್ಲಿ ಬಿರಿಯಾನಿ ಸಹ ಇದೆಯೆಂಬುದು ನಿಮಗೆ ಗೊತ್ತೆ? ಆದರೆ ಈ ‘ಗಿಲ್ಲಿ ಬಿರಿಯಾನಿ’…

Read More

ಪ್ರಧಾನಿ ಮೋದಿ ಯುಎಇ ಭೇಟಿಯಲ್ಲಿ ಹಲವು ಒಪ್ಪಂದಗಳಿಗೆ ಸಹಿ – Kannada News | Narendra Modi UAE visit, Energy security, defence and other major pacts between 2 countries

ಯುಎಇ ಅಧ್ಯಕ್ಷ ಶೇಖ್ ಜೊತೆ ನರೇಂದ್ರ ಮೋದಿImage Credit source: PTI ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಯುಎಇಗೆ (UAE) ನೀಡಿರುವ ಭೇಟಿಯಿಂದ ಹಲವು ನಿರೀಕ್ಷೆಗಳಿವೆ. ಭಾರತದ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಪ್ರಧಾನಿ ಭೇಟಿಯ ಪ್ರಮುಖ ಕಾರ್ಯಸೂಚಿಯಾಗಿದೆ. ಇಂಧನ ಭದ್ರತೆ, ರಕ್ಷಣಾ ಕ್ಷೇತ್ರ ಹಾಗೂ ವ್ಯಾಪಾರದಲ್ಲಿ ಎರಡೂ ದೇಶಗಳ ಮಧ್ಯೆ ಪ್ರಮುಖ ಒಪ್ಪಂದ…

Read More

ಕ್ರಿಸ್​ ಗೇಲ್ ವಿಶ್ವ ದಾಖಲೆಯನ್ನೇ ಧೂಳೀಪಟ ಮಾಡಿದ ಕಿಂಗ್ ಕೊಹ್ಲಿ – Kannada News | IPL 2026: Virat Kohlii Breaks Chris Gayle’s Huge World Record

ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಮತ್ತೊಂದು ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ರಿಸ್ ಗೇಲ್ ಟಿ20 ಕ್ರಿಕೆಟ್​ನಲ್ಲಿ ಬರೆದಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) Source link

Read More

Personality Test: ಕಾಲ್ಬೆರಳುಗಳಲ್ಲಿ ಕೂದಲಿದ್ದರೆ ಏನರ್ಥ ಗೊತ್ತಾ? – Kannada News | Personality Test: Do you know what it means to have hair on your toes?

ವ್ಯಕ್ತಿತ್ವ ಪರೀಕ್ಷೆImage Credit source: Getty Images ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮೂಲಕ ಒಬ್ಬ ವ್ಯಕ್ತಿಯ ಭವಿಷ್ಯ, ವ್ಯಕ್ತಿತ್ವವನ್ನು (Personality) ತಿಳಿದುಕೊಳ್ಳುವಂತೆ ದೇಹ ರಚನೆ ಮತ್ತು ದೇಹಾಕಾರದ ಮೂಲಕವೂ ವ್ಯಕ್ತಿಯ  ಭವಿಷ್ಯ,  ಆತನ ವೈಯಕ್ತಿಕ ಮತ್ತು ವೃತ್ತಿಪರ ಜೀವನ ಹೇಗಿರುತ್ತದೆ ಎಂಬುದನ್ನು ತಿಳಿಯಬಹುದು. ಹೌದು ಕಾಲ್ಬೆರಳುಗಳ ಆಕಾರದಿಂದ ಹಿಡಿದು ದೇಹದ ಮೇಲೆ ಇರುವಂತಹ ಮಚ್ಚೆಯ ವರೆಗೆ, ದೇಹದ ಸಣ್ಣ ವಿವರಗಳು ಸಹ ನಮ್ಮ ವ್ಯಕ್ತಿತ್ವದ ಹಲವು ಅಂಶಗಳನ್ನು ಬಹಿರಂಗಪಡಿಸುತ್ತವೆ. ನೀವು ಕೂಡ ಹಣೆಯ ಆಕಾರ, ಕಣ್ಣುಗಳ ಬಣ್ಣ, ಮೂಗು,…

Read More

Video: ಅಂತರ ಕಾಯ್ದುಕೊಳ್ಳಿ, ಇಎಂಐ ಬಾಕಿ ಇದೆ; ಕಾರಿನ ಹಿಂಬದಿಯ ಬರಹ ವೈರಲ್ – Kannada News | Keep your distance, EMI is pending; Man warns other motorists

ಮಂಗಳೂರು, ಡಿಸೆಂಬರ್ 24: ಆಟೋ, ಬೈಕ್ (bike) ಸೇರಿದಂತೆ ಕಾರಿನ ಹಿಂಭಾಗದಲ್ಲಿ ಪ್ರೀತಿ ಪಾತ್ರದ ಹೆಸರು, ಕೆಲವರು ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ನೆನಪಿನಲ್ಲಿ ಕೆಲ ಸಾಲುಗಳನ್ನು ಬರೆದಿರುವುದನ್ನು ನೋಡಿರುತ್ತಿರುತ್ತೀರಿ. ಇಂತಹ ಸಾಲುಗಳನ್ನು ನೋಡಿದಾಗ ತುಟಿಯಂಚಿನಲ್ಲಿ ಸದ್ದಿಲ್ಲದೇ ನಗು ಮೂಡುತ್ತದೆ. ಇದೀಗ ಇಂತಹದ್ದೇ ಕಾರಿನ ಹಿಂಭಾಗದಲ್ಲಿ ಬರೆದ ಸಾಲುಗಳು ನೆಟ್ಟಿಗರ ಗಮನ ಸೆಳೆಯುತ್ತಿದೆ. ಮಂಗಳೂರಿನ (Manglore) ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಚಲಿಸುತ್ತಿರುವ ಮಾರುತಿ ಸುಜುಕಿ ಆಲ್ಟೋ ಕಾರ್‌ನ ಹಿಂಭಾಗದಲ್ಲಿ ಬರೆದ ಸಾಲುಗಳು ಉಳಿದ ವಾಹನ ಸವಾರರಿಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಶತ್ರುತ್ವ ದುರಂತದಲ್ಲಿ ಕೊನೆ – Kannada News | Horoscope 13 February 2026; Dina Rashi Bhavishya Today, Checkout the details here

ಮೇಷ ರಾಶಿ: ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ಕೆಲವು ಗೆಲುವಿಗಾಗಿ ಸೋಲಬೇಕಾಗುತ್ತದೆ. ಹಿತಶತ್ರುಗಳನ್ನು ಅರಿಯುವಲ್ಲಿ ನಿಮಗೆ ಸೋಲಾಗುವುದು. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶವು ಸಿಗಲಿದೆ. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ವಿವಾಹಜೀವನವು ಅತ್ಯಂತ ಸುಖದಂತೆ ತೋರುವುದು. ಕೆಲವು ಅಭ್ಯಾಸವನ್ನು ನೀವು ಬಿಡಬೇಕೆಂದರೂ ಬಿಡಲಾಗದು. ವೃಷಭ ರಾಶಿ: ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ನಿಮ್ಮ ವ್ಯವಹಾರದಲ್ಲಿ ಅನ್ಯರ ಹಸ್ತಕ್ಷೇಪವನ್ನು ಸಹಿಸಲಾರಿರಿ. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಬಂಧುವನ್ನೇ ಪಾಲುದಾರರನ್ನಾಗಿ ಆಯ್ಕೆ ಮಾಡಿಕೊಳ್ಳುವಿರಿ….

Read More

ಬೆಂಗಳೂರು: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ನಿಂದ ಕೋಟಿ ಕೋಟಿ ವಂಚನೆ ಆರೋಪ, 18 ಜನರ ವಿರುದ್ಧ ಪ್ರಕರಣ

ಬೆಂಗಳೂರು, ಮಾರ್ಚ್ 20: ಬೆಂಗಳೂರು (Bangalore) ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನಲ್ಲಿ ಅಸೋಸಿಯೇಷನ್ ಸದಸ್ಯರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಎಂಬವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್…

Read More

ಬೆಂಗಳೂರು: ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಹೂವು-ಹಣ್ಣಿನ ದರ ಏರಿಕೆ

ಬೆಂಗಳೂರು, ಮಾರ್ಚ್ 18: ಮಾರ್ಚ್ 19 ರಂದು ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ (Bangalore) ಹೃದಯಭಾಗವಾದ ಕೆಆರ್ ಮಾರುಕಟ್ಟೆಯಲ್ಲಿ (KR Market) ಬುಧವಾರ ಬೆಳ್ಳಂಬೆಳಿಗ್ಗೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಗರವೇ ಹರಿದುಬಂದಿದೆ. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ದರ ಕೊಂಚ ಏರಿಕೆ ಕಂಡಿದೆ. ವಿಶೇಷವಾಗಿ ಮಲ್ಲಿಗೆ ಹೂವು ಸಾಮಾನ್ಯ…

Read More

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್ – Kannada News | Ram Charan and Upasana Welcome Twins, Delight Fans with Sweet Surprise

ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್​​ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್…

Read More

ಜಯಭೇರಿ ಬಾರಿಸಿದ ಟಿವಿಕೆ: ದಳಪತಿ ವಿಜಯ್ ಮನೆ ಎದುರು ಪೊಲೀಸ್ ಬಿಗಿ ಭದ್ರತೆ – Kannada News | TVK wins Tamil Nadu Assembly Election 2026 Security Tightened in front of Thalapathy Vijay house

ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದಲ್ಲಿ ಗೆಲುವು ಸಾಧಿಸಿದ್ದಾರೆ. ತಾವೇ ಸ್ಥಾಪಿಸಿದ ಟಿವಿಕೆ (TVK) ಪಕ್ಷದ ಮೂಲಕ ಅವರು ಮೊದಲ ಚುನಾವಣೆಯಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸಿನಿಮಾದಲ್ಲಿ ಯಶಸ್ಸು ಸಿಕ್ಕ ರೀತಿಯೇ ರಾಜಕೀಯದಲ್ಲೂ ವಿಜಯ್ ಅವರು ಸಾಧನೆ ಮಾಡಿದ್ದಾರೆ. ಅವರ ಮನೆ ಎದುರು ಭದ್ರತೆ ಹೆಚ್ಚಿಸಲಾಗಿದೆ. ಸಿನಿಮಾ ಹಿನ್ನೆಲೆಯಿಂದ ಬಂದ ಅಭ್ಯರ್ಥಿ ಎಂಬ ಕಾರಣಕ್ಕೆ ವಿಜಯ್ ಅವರನ್ನು ಲೇವಡಿ ಮಾಡಲಾಗಿತ್ತು. ಆದರೆ ಟೀಕಿಸುವವರಿಗೆ ವಿಜಯ್ ಅವರು…

Read More