ಬೆಂಗಳೂರಿನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಸ್ಟೇಡಿಯಂ: ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು – Kannada News | One More international cricket stadium In bengaluru, Team India ex cricketers attend In Bhoomi pooja Held On May 23

ಬೆಂಗಳೂರು, (ಮೇ 20): M ಚಿನ್ನಸ್ವಾಮಿ ಸ್ಟೇಡಿಯಂ ರೀತಿ ಬೆಂಗಳೂರು (Bengaluru) ಹೊರವಲಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್  ಕ್ರೀಡಾಂಗಣ (international stadium) ನಿರ್ಮಾಣವಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಇದೇ ಮೇ 23ರಂದು ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ಮಾಡಲಿದ್ದಾರೆ. ಹೀಗಾಗಿ ಸಚಿವ ಜಮೀರ್​ ಅಹ್ಮದ್​ ಖಾನ್ , ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲನೆ ನಡೆಸಿದರು.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿಯಲ್ಲಿ 100 ಎಕರೆ ಜಾಗದಲ್ಲಿ ಸುಮಾರು 900 ಕೋಟಿ ವೆಚ್ಚದಲ್ಲಿ 80 ಸಾವಿರ ಆಸನ ಸಾಮರ್ಥ್ಯದ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದೆ. ಇನ್ನು ಈ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಕ್ರಿಕೆಟ್ ದಿಗ್ಗಜರು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಟೀಂ ಇಂಡಿಯಾ ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಜಾವಗಲ್ ಶ್ರೀನಾಥ್ ಹಾಗೂ ವೆಂಕಟೇಶ್ ಪ್ರಸಾದ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಕ್ರಿಕೆಟ್ ದೇವರು ಎಂದೇ ಕರೆಯಿಸಿಕೊಂಡಿರುವ ಸಚಿವ ತೆಂಡೂಲ್ಕರ್​ ಅವರಿಗೂ ಸಹ ಆಹ್ವಾನ ನೀಡಲಾಗಿದ್ದು, ಅವರ ಆಗಮನ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಸ್ವತಃ ಜಮೀರ್ ಅಹ್ಮದ್ ಖಾನ್ ಈಗಾಗಲೇ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ – Kannada News | RCB vs SRH: Playoffs Battle for Top 2, Virat Kohli Fans Celebrate His Arrival in Hyderabad

ಐಪಿಎಲ್ 2026 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಉಭಯ ತಂಡಗಳು ಈಗಾಗಲೇ ಪ್ಲೇಆಫ್‌ಗೆ ಟಿಕೆಟ್ ಪಡೆದುಕೊಂಡಿವೆ. ಆದರೆ ಟಾಪ್ 2 ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಟಾಪ್ 2 ರಲ್ಲಿ ಸ್ಥಾನ ಪಡೆಯಬೇಕಾದರೆ, ಈ ಪಂದ್ಯದ ಗೆಲುವು ಉಭಯ ತಂಡಗಳಿಗೂ ಅತ್ಯವಶ್ಯಕವಾಗಿದೆ. ಇದರ ಜೊತೆಗೆ ಎರಡೂ ತಂಡಗಳು ತಮ್ಮ ಕೊನೆಯ ಲೀಗ್ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವುದರಿಂದ ಆತ್ಮವಿಶ್ವಾಸದ ಬೀಗುತ್ತಿವೆ.

ಇದೀಗ ಉಭಯ ತಂಡಗಳ ಕೊನೆಯ ಲೀಗ್ ಪಂದ್ಯ ಸನ್‌ರೈಸರ್ಸ್ ತಂಡದ ತವರು ನೆಲವಾದ ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ಹೈದರಾಬಾದ್​ಗೆ ಪ್ರಯಾಣ ಬೆಳೆಸಲಿದೆ. ತನ್ನ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿ ಪಂದ್ಯವನ್ನಾಡಲು ಹೈದರಾಬಾದ್​ಗೆ ಬರುತ್ತಿರುವುದು ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ಹೀಗಾಗಿ ಕೊಹ್ಲಿ ಅಭಿಮಾನಿಗಳು ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಕೊಹ್ಲಿಗೆ ಭವ್ಯ ಸ್ವಾಗತ ಕೋರಿದ್ದಾರೆ. ಇದೀಗ ಅದರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ – Kannada News | Reduce Bloating And Acidity Naturally: Ayurvedic Home Remedies To Try Every Morning

ಇತ್ತೀಚಿನ ದಿನಗಳಲ್ಲಿ ಅಸಮರ್ಪಕ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಗ್ಯಾಸ್ಟ್ರಿಕ್, ಅಸಿಡಿಟಿ (Acidity), ಹೊಟ್ಟೆ ಉಬ್ಬರ ಮತ್ತು ಅಜೀರ್ಣ ಸಮಸ್ಯೆಗಳು ಸಾಮಾನ್ಯವಾಗಿವೆ. ಬೆಳಿಗ್ಗೆ ಎದ್ದ ಕ್ಷಣದಿಂದಲೇ ಹೊಟ್ಟೆಯಲ್ಲಿ ಉರಿಯೂತ, ಗ್ಯಾಸ್ ಮತ್ತು ಹೊಟ್ಟೆ ಭಾರವಾದ ಅನುಭವದಿಂದ ಹಲವರು ದಿನವಿಡೀ ಅಸ್ವಸ್ಥರಾಗಿರುತ್ತಾರೆ. ಇದರಿಂದ ಕೆಲಸದಲ್ಲಿ ಏಕಾಗ್ರತೆ ಕಡಿಮೆಯಾಗುವುದು ಮಾತ್ರವಲ್ಲದೆ, ಆಹಾರ ಸೇವಿಸುವ ಆಸಕ್ತಿಯೂ ಕುಗ್ಗುತ್ತದೆ. ಆಯುರ್ವೇದ ತಜ್ಞೆ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಬೆಳಿಗ್ಗೆ ಕೆಲವು ಸರಳ ಆರೋಗ್ಯಕರ ಅಭ್ಯಾಸಗಳನ್ನು ಪಾಲಿಸಿದರೆ ಗ್ಯಾಸ್ಟ್ರಿಕ್ ಮತ್ತು ಆಸಿಡಿಟಿ ಸಮಸ್ಯೆಯನ್ನು ನಿಯಂತ್ರಿಸಬಹುದು. ವಿಶೇಷವಾಗಿ ದಿನದ ಆರಂಭವೇ ಆರೋಗ್ಯಕರವಾಗಿದ್ದರೆ ಜೀರ್ಣಕ್ರಿಯೆಯೂ ಉತ್ತಮವಾಗಿರುತ್ತದೆ. ಹಾಗಾದರೆ ಹಾಗಾದರೆ ಗ್ಯಾಸ್, ಅಸಿಡಿಟಿಯಿಂದ ಮುಕ್ತಿ ಪಡೆಯಲು ಬೆಳಿಗ್ಗೆ ಎದ್ದು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬೆಳಿಗ್ಗೆ ಎದ್ದು ಏನು ಮಾಡಬೇಕು?

ಬೆಚ್ಚಗಿನ ನೀರು ಕುಡಿಯಿರಿ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ಬೆಚ್ಚಗಿನ ನೀರು ಕುಡಿಯುವುದರಿಂದ ದೇಹದಲ್ಲಿನ ವಿಷಕಾರಿ ಅಂಶಗಳು ಹೊರಹೋಗಲು ಸಹಾಯವಾಗುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ಅಸಿಡಿಟಿ ಕಡಿಮೆ ಮಾಡಲು ಸಹಕಾರಿಯಾಗುತ್ತದೆ.

ಯೋಗಾಭ್ಯಾಸ ಮಾಡಿ

ವಜ್ರಾಸನ, ಪವನಮುಖ್ತಾಸನ ಮತ್ತು ಬಾಲಾಸನದಂತಹ ಯೋಗಾಸನಗಳು ಹೊಟ್ಟೆಯ ಗ್ಯಾಸ್ ಸಮಸ್ಯೆಯನ್ನು ಕಡಿಮೆ ಮಾಡುತ್ತವೆ. ಜೊತೆಗೆ ದೇಹ ಮತ್ತು ಮನಸ್ಸಿಗೂ ಶಾಂತಿ ನೀಡುತ್ತವೆ.

ಇದನ್ನೂ ಓದಿ: ಊಟ ಕಡಿಮೆ ಮಾಡಿದ್ರೂ ಅಸಿಡಿಟಿಯಾಗುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ?

ಹರ್ಬಲ್ ಪಾನೀಯಗಳನ್ನು ಸೇವಿಸಿ

ಜೀರಿಗೆ ನೀರು, ಅಜ್ವೈನ್ ಚಹಾ ಮತ್ತು ಧನಿಯಾ ನೀರಿನಂತಹ ಹರ್ಬಲ್ ಡ್ರಿಂಕ್ಸ್ ಜೀರ್ಣಕ್ರಿಯೆಗೆ ತುಂಬಾ ಉಪಯುಕ್ತ. ಇವು ಹೊಟ್ಟೆಯ ಉರಿಯೂತ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ತಗ್ಗಿಸಲು ಸಹಾಯ ಮಾಡುತ್ತವೆ. ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿ ಸೇವಿಸುವುದನ್ನು ತಪ್ಪಿಸುವುದು ಉತ್ತಮ.

ಜೀರ್ಣಕ್ರಿಯೆ ಸುಧಾರಿಸಲು ಏನು ಮಾಡಬೇಕು?

ತಜ್ಞರ ಪ್ರಕಾರ, ನಿಯಮಿತ ಸಮಯಕ್ಕೆ ಸಮತೋಲನಯುತ ಆಹಾರ ಸೇವನೆ, ಸಾಕಷ್ಟು ನೀರು ಕುಡಿಯುವುದು, ದಿನನಿತ್ಯ ವ್ಯಾಯಾಮ ಮತ್ತು 8 ಗಂಟೆಗಳ ಸಮರ್ಪಕ ನಿದ್ರೆ ಜೀರ್ಣಕ್ರಿಯೆ ಉತ್ತಮವಾಗಿಡಲು ಮುಖ್ಯವಾಗಿದೆ. ಗ್ಯಾಸ್ಟ್ರಿಕ್ ಅಥವಾ ಆಸಿಡಿಟಿ ಸಮಸ್ಯೆ ನಿರಂತರವಾಗಿ ಕಾಣಿಸಿಕೊಂಡರೆ ಸ್ವಯಂ ಚಿಕಿತ್ಸೆ ಮಾಡದೆ ವೈದ್ಯರ ಸಲಹೆ ಪಡೆಯುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೇರ್‌ ಫಾಲ್‌ ಸಮಸ್ಯೆಯಿಂದ ಮುಕ್ತಿ ಪಡೆಯಲು ತಲೆಸ್ನಾನಕ್ಕೂ ಮುನ್ನ ಕೂದಲಿಗೆ ಈ ಒಂದು ವಸ್ತುವನ್ನು ಹಚ್ಚಿ – Kannada News | To get rid of hair fall, apply curd to your hair before showering

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆ (hair fall), ತಲೆಹೊಟ್ಟು, ದುರ್ಬಲ ಕೂದಲಿನ  ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಒತ್ತಡ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿ, ಧೂಳು, ಮಾಲಿನ್ಯ, ಕೂದಲಿಗೆ ಅತಿಯಾದ ರಾಸಾಯನಿಕ ಉತ್ಪನ್ನಗಳ ಬಳಕೆ ಇವೆಲ್ಲವೂ ಕೂದಲು ಉದುರಲು ಪ್ರಮುಖಖ ಕಾರಣವಾಗಿದೆ. ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಅನೇಕರು ದುಬಾರಿ ಶಾಂಪೂ, ಚಿಕಿತ್ಸೆಗಳ ಮೊರೆ ಹೋಗ್ತಾರೆ. ಇವುಗಳ ಬದಲು ಆರೋಗ್ಯಕ ಆಹಾರವನ್ನು ಸೇವನೆ ಮಾಡುವ ಮೂಲಕ ಹಾಗೂ ರಾಸಾಯನಿಕ ಉತ್ಪನ್ನಗಳ ಬದಲು ಸ್ನಾನಕ್ಕೂ ಮುನ್ನ ಕೂದಲಿಗೆ ಮೊಸರನ್ನು ಹಚ್ಚುವ ಮೂಲಕ ಕೂದಲು ಉದುರುವಿಕೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದು ಕೂದಲನ್ನು ಪೋಷಿಸುವುದು ಮಾತ್ರವಲ್ಲದೆ ಆರೋಗ್ಯಕರ ನೆತ್ತಿಯನ್ನು ಕಾಪಾಡಿಕೊಳ್ಳಲು, ಕೂದಲನ್ನು ಮೃದು ಮತ್ತು ಬಲವಾಗಿಸಲು ಸಹಾಯ ಮಾಡುತ್ತದೆ. ಕೂದಲಿಗೆ ಮೊಸರು ಹಚ್ಚುವುರಿಂದಾಗುವ ಪ್ರಯೋಜನಗಳು ಮತ್ತು ಅದನ್ನು ಬಳಸುವ ಸರಿಯಾದ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಕೂದಲಿಗೆ ಮೊಸರು ಹಚ್ಚುವುರಿಂದ ಏನಾಗುತ್ತದೆ?

ಮೊಸರಿನಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್ ಬಿ 5 ಮತ್ತು ಪ್ರಯೋಜನಕಾರಿ ಬ್ಯಾಕ್ಟೀರಿಯಾಗಳು ಇದ್ದು, ಇವು ನೆತ್ತಿ ಮತ್ತು ಕೂದಲಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ನೆತ್ತಿಯನ್ನು ತೇವಗೊಳಿಸಲು, ಶುಷ್ಕತೆ ಮತ್ತು ತಲೆಹೊಟ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಸರು ಕೂದಲನ್ನು ನೈಸರ್ಗಿಕವಾಗಿ ಮೃದು ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಮೊಸರು ನೆತ್ತಿಯಿಂದ ಕೊಳಕು ಮತ್ತು ಹೆಚ್ಚುವರಿ ಎಣ್ಣೆಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಮೊಸರು ನೆತ್ತಿಯನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ, ಕೂದಲಿನ ಬೇರುಗಳು ಬಲವಾಗಿಸುತ್ತದೆ.  ಈ ಮನೆಮದ್ದು ಕೂದಲು ಉದುರುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಸಾಯನಿಕ ಶಾಂಪೂಗಳ ಬಳಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೆಲವೊಮ್ಮೆ ಹಾರ್ಮೋನುಗಳ ಬದಲಾವಣೆಗಳು, ಒತ್ತಡ, ಪೌಷ್ಟಿಕಾಂಶದ ಕೊರತೆಗಳು ಮತ್ತು ವೈದ್ಯಕೀಯ ಕಾರಣಗಳಿಂದಲೂ ಕೂದಲು ಉದುರುತ್ತವೆ. ಆದ್ದರಿಂದ, ಕೂದಲು ಉದುರುವಿಕೆ ಅತಿಯಾಗಿದ್ದರೆ, ವೈದ್ಯರನ್ನು ಸಂಪರ್ಕಿಸುವುದು ಮುಖ್ಯ.

ಕೂದಲಿಗೆ ಮೊಸರು ಹಚ್ಚುವುದರಿಂದ ಏನು ಪ್ರಯೋಜನ?

ನೆತ್ತಿಯನ್ನು ಸ್ವಚ್ಛಗೊಳಿಸುತ್ತದೆ: ಮೊಸರಿನಲ್ಲಿ ಲ್ಯಾಕ್ಟಿಕ್ ಆಮ್ಲವಿದ್ದು, ಇದು ನೆತ್ತಿಯಿಂದ ಕೊಳಕು, ಬೆವರು ಮತ್ತು ಹೆಚ್ಚುವರಿ ಎಣ್ಣೆಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದು ರಂಧ್ರಗಳನ್ನು ತೆರೆಯುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ. ಸ್ವಚ್ಛವಾದ ನೆತ್ತಿಯು ಕೂದಲಿನ ಬೇರುಗಳನ್ನು ಬಲಪಡಿಸುತ್ತದೆ.

ಕೂದಲನ್ನು ಬಲಪಡಿಸುತ್ತದೆ ಮತ್ತು ದಪ್ಪವಾಗಿಸುತ್ತದೆ: ಮೊಸರಿನಲ್ಲಿರುವ ಪ್ರೋಟೀನ್‌ಗಳು ಮತ್ತು ವಿಟಮಿನ್‌ಗಳು ಕೂದಲಿನ ಬೇರುಗಳನ್ನು ಪೋಷಿಸುತ್ತವೆ. ಇದು ಕೂದಲು ಒಡೆಯುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಇದರಲ್ಲಿರುವ ಬಯೋಟಿನ್, ಸತು ಕೂದಲನ್ನು ಬೇರುಗಳಿಂದ ಬಲಪಡಿಸುತ್ತದೆ, ಇದರಿಂದಾಗಿ ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಪ್ರತಿದಿನ ದೇವಸ್ಥಾನಕ್ಕೆ ಹೋಗೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ

ತಲೆಹೊಟ್ಟು ಮತ್ತು ತುರಿಕೆಯನ್ನು ನಿವಾರಿಸುತ್ತದೆ: ನೀವು ದೀರ್ಘಕಾಲದವರೆಗೆ ತಲೆಹೊಟ್ಟು ಮತ್ತು ತುರಿಕೆಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಸ್ನಾನಕ್ಕೂ ಮುನ್ನ ನೆತ್ತಿಗೆ ಕೆಲ ಹೊತ್ತು ಮೊಸರನ್ನು ಹಚ್ಚಿ. ಇದರ ಉರಿಯೂತ ನಿವಾರಕ ಗುಣಗಳು ನೆತ್ತಿಯ ಕಿರಿಕಿರಿಯನ್ನು ಶಮನಗೊಳಿಸಲು ಮತ್ತು ತಲೆಹೊಟ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ನೈಸರ್ಗಿಕ ಕಂಡಿಷನರ್: ಕೂದಲಿಗೆ ಮೊಸರು ಹಚ್ಚುವುದರಿಂದ  ಮೃದು ಮತ್ತು  ಹೊಳೆಯುವ ಹೊಳೆಯುವ ಕೂದಲನ್ನು ನೀವು ಪಡೆಯಬಹುದು. ಇದರ ನಿಯಮಿತ ಬಳಕೆಯು ಕೂದಲಿನ ವಿನ್ಯಾಸವನ್ನು ಸುಧಾರಿಸುತ್ತದೆ ಮತ್ತು ಆರೋಗ್ಯಕರವಾಗಿ ಕಾಣುವಂತೆ ಮಾಡುತ್ತದೆ.

ಕೂದಲಿಗೆ ಮೊಸರನ್ನು ಹಚ್ಚುವ ಸರಿಯಾದ ಮಾರ್ಗ ಯಾವುದು?

ಮೊದಲು, ಒಂದು ಬಟ್ಟಲಿನಲ್ಲಿ ತಾಜಾ ಮೊಸರನ್ನು ತೆಗೆದುಕೊಳ್ಳಿ. ನೀವು ಅದಕ್ಕೆ ಸ್ವಲ್ಪ ಅಲೋವೆರಾ ಜೆಲ್ ಅಥವಾ ಮೆಂತ್ಯ ಪುಡಿಯನ್ನು ಕೂಡ ಸೇರಿಸಬಹುದು. ಈ ಮಿಶ್ರಣವನ್ನು ನೆತ್ತಿ ಮತ್ತು ಕೂದಲಿಗೆ ಹಚ್ಚಿ ಸುಮಾರು 20 ರಿಂದ 30 ನಿಮಿಷಗಳ ಕಾಲ ಹಾಗೆಯೇ ಬಿಡಿ, ನಂತರ ಉಗುರು ಬೆಚ್ಚಗಿನ ನೀರಿನಿಂದ ಕೂದಲನ್ನು ತೊಳೆಯಿರಿ. ಅಗತ್ಯವಿದ್ದರೆ, ಸೌಮ್ಯವಾದ ಶಾಂಪೂ ಬಳಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಉತ್ತರ ಜಿಲ್ಲೆಯಾಗುವುದೇ ತುಮಕೂರು? ಮತ್ತೆ ಮುನ್ನೆಲೆಗೆ ಬರಲು ಕಾರಣವೇನು? – Kannada News | Will Tumakuru Become Bengaluru North? Why the Debate Has Resurfaced

ತುಮಕೂರು, ಮೇ 20: ಜಿಲ್ಲೆಯ ಹೆಸರು ಬದಲಾಗುತ್ತದೆಯೇ, ಬೆಂಗಳೂರು ಉತ್ತರಕ್ಕೆ ಸೇರ್ಪಡೆಗೊಂಡು ಅದರ ಅಸ್ತಿತ್ವ ಕಣ್ಮರೆಯಾಗುತ್ತದೆಯೇ ಎಂಬ ಚರ್ಚೆ ಇದೀಗ ಜಿಲ್ಲೆಯಲ್ಲಿ ಜೋರಾಗಿದೆ. ತುಮಕೂರು (tumakuru) ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr. G Parameshwara) , ತುಮಕೂರನ್ನು ಬೆಂಗಳೂರು ಉತ್ತರವಾಗಿ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು. ತುಮಕೂರು ಬೆಂಗಳೂರಿಗೆ ಸಮೀಪವಿದ್ದು, ಅಭಿವೃದ್ಧಿಗಾಗಿ ದೆಹಲಿ ಎನ್‌ಸಿಆರ್ ಮಾದರಿ ಕಾನ್ಸೆಪ್ಟ್ ಅಗತ್ಯ ಎಂದು ಅವರು ಹೇಳಿದರು. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಾಂಶಗಳು

  • ಕಾಂಗ್ರೆಸ್​ ಸಾಧನಾ ಸಮಾವೇಶದ ವೇದಿಕೆಯಲ್ಲಿ ಸೃಷ್ಟಿಯಾಯ್ತು ಹೊಸ ಚರ್ಚೆ!
  • ಅಭಿವೃದ್ಧಿ ಕಾನ್ಸೆಪ್ಟ್ ಬೆನ್ನಲ್ಲೇ ಎದ್ದಿತು ವಿರೋಧದ ಬಿರುಗಾಳಿ
  • ಗೃಹ ಸಚಿವರ ಪ್ರಸ್ತಾಪಕ್ಕೆ ಆರ್ ಅಶೋಕ್ ವ್ಯಂಗ್ಯ

ತುಮಕೂರು ಬೆಂಗಳೂರಿಗೆ ಸಮೀಪವಿದೆ. ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ಹೀಗಾಗಿ ತುಮಕೂರನ್ನು ಬೆಂಗಳೂರು ಉತ್ತರವಾಗಿ ಸೇರ್ಪಡೆ ಮಾಡಿಕೊಳ್ಳಬೇಕೆಂದು ಗೃಹ ಸಚಿವ ಹಾಗೂ ತುಮಕೂರು ಉಸ್ತುವಾರಿ ಸಚಿವ ಜಿ. ಪರಮೇಶ್ವರ್​​ ಒತ್ತಾಯಿಸಿದ್ದಾರೆ. ಇದು ಇದೀಗ ಭಾರಿ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಯಾವುದೇ ಕಾರಣಕ್ಕೂ ತುಮಕೂರು ಹೆಸರು ಬದಲಾಯಿಸುವುದಿಲ್ಲ: ಜಿ. ಪರಮೇಶ್ವರ್

ಅಸಲಿಗೆ ಗೃಹ ಸಚಿವರು ತುಮಕೂರನ್ನು ಬೆಂಗಳೂರು ಉತ್ತರ ಮಾಡುವ ಮಾತು ಇದೇ ಮೊದಲಲ್ಲ. ಈ ಹಿಂದೆ ಅಂದರೆ 2025ರ ಜೂನ್​​ನಲ್ಲಿ ಸಹ ಪ್ರಸ್ತಾಪಿಸಿದ್ದರು. ಆ ವೇಳೆ ತುಮಕೂರು ಜಿಲ್ಲೆಯ ಹೆಸರೇ ಬೆಂಗಳೂರು ಉತ್ತರ ಎಂದು ಮರುನಾಮಕರಣ ಆಗಲಿದೆ ಎನ್ನುವ ಮಾತು ಆರಂಭವಾಗಿತ್ತು. ಇದಕ್ಕೆ ವೇದಿಕೆ ಕಾರ್ಯಕ್ರಮವೊಂದರಲ್ಲಿ ಸ್ಪಷ್ಟೀಕರಣ ನೀಡುವ ಮೂಲಕ ಜಿ. ಪರಮೇಶ್ವರ್, ಗೊಂದಲಕ್ಕೆ ತೆರೆ ಎಳೆದಿದ್ದರು. ಆದರೆ ಇದೀಗ ಮತ್ತೆ ಬೆಂಗಳೂರು ಉತ್ತರ ವಿಚಾರ ಪ್ರಸ್ತಾಪಿಸಿದ್ದು, ತುಮಕೂರು ಅಭಿವೃದ್ಧಿಗಾಗಿ ದೆಹಲಿಯ ಎನ್​ಸಿಆರ್ ಮಾದರಿ ಬೆಂಗಳೂರಿಗೆ ಸೇರ್ಪಡೆ ಮಾಡುವ ಪರಿಕಲ್ಪನೆ ಇದಾಗಿದ್ದು, ಯಾವುದೇ ಕಾರಣಕ್ಕೂ ತುಮಕೂರು ಹೆಸರು ಬದಲಾಯಿಸುವುದಿಲ್ಲ ಎಂದಿದ್ದಾರೆ.

ಇಡೀ ಕರ್ನಾಟಕಕ್ಕೆ ನೀವು ಬೆಂಗಳೂರು ಎಂದು ಹೆಸರಿಟ್ಟು ಬಿಡಿ: ಆರ್​​ ಅಶೋಕ್

ತುಮಕೂರನ್ನು ಬೆಂಗಳೂರು ಉತ್ತರವಾಗಿ ಸೇರ್ಪಡೆ ಮಾಡುವ ಈ ವಿಚಾರಕ್ಕೆ ಬಿಜೆಪಿ ಸಹ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್​​ ಅಶೋಕ್ ಪ್ರತಿಕ್ರಿಯಿಸಿದ್ದು, ಬೆಂಗಳೂರು ಹೆಸರು ಸೇರಿಸಿಕೊಳ್ಳುವುದು ಈಗ ಸ್ಪರ್ಧೆಯಾಗಿ ಬಿಟ್ಟಿದೆ. ಇಡೀ ಕರ್ನಾಟಕಕ್ಕೆ ನೀವು ಬೆಂಗಳೂರು ಎಂದು ಹೆಸರಿಟ್ಟು ಬಿಡಿ. ಬೆಂಗಳೂರು ಹೆಸರನ್ನು ಬೇರೆ ಕಡೆ ಹಂಚಿದರೆ ಬೆಂಗಳೂರು ಜನ ನಿಮಗೆ ಶಾಪ ಹಾಕುತ್ತಾರೆ. ಅಷ್ಟೇ ಅಲ್ಲ ಮುಂದಿನ ಪಾಲಿಕೆ ಚುನಾವಣೆಯಲ್ಲಿ ಸೋತು ಹೋಗುತ್ತೀರಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರಿಗೆ ಬೆಂಗಳೂರು ಉತ್ತರ ಅಂತ ಮರುನಾಮಕರಣಕ್ಕೆ ಭಾರಿ ವಿರೋಧ

ಇನ್ನು ತುಮಕೂರನ್ನು ಬೆಂಗಳೂರು ಉತ್ತರವಾಗಿ ಸೇರ್ಪಡೆ ಮಾಡುವ ವಿಚಾರದಲ್ಲಿ ತುಮಕೂರು ಜನರ ವಿರೋಧವಿದ್ದು, ಅಭಿವೃದ್ಧಿ ನೆಪದಲ್ಲಿ ಬೆಂಗಳೂರಿಗೆ ಸೇರಿಸುವುದು ಸರಿಯಲ್ಲ. ತುಮಕೂರನ್ನು ತುಮಕೂರಾಗಿಯೇ ಅಭಿವೃದ್ಧಿ ಮಾಡಿ ಎಂದು ಒತ್ತಾಯಿಸುವುದರ ಜೊತೆಗೆ ಬೆಂಗಳೂರು ಉತ್ತರ ಎಂಬ ಚಿಂತನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲೇ ತುಮಕೂರನ್ನು ಬೆಂಗಳೂರು ನಾರ್ಥ್ ಘೋಷಣೆಗೆ ಒತ್ತಾಯಿಸುವ ಮೂಲಕ ಹೊಸ ಚರ್ಚೆಗೆ ದಾರಿ ಮಾಡಿದ್ದು, ಇದು ಮುಂದೆ ಯಾವ ಬೆಳವಣಿಗೆಗೆ ಕಾರಣವಾಗತ್ತೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೋದಿ, ಬಿಜೆಪಿ, ಆರ್​ಎಸ್​ಎಸ್ ದೇಶದ್ರೋಹಿಗಳು ಎಂದ ರಾಹುಲ್​​ಗೆ ಜೋಶಿ ತಿರುಗೇಟು – Kannada News | Pralhad Joshi Hits back at Congress Leader Rahul Gandhi Over Traitor Remark Against PM Modi And amit shah

ನವದೆಹಲಿ, (ಮೇ 20): ಪ್ರಧಾನಿ ನರೇಂದ್ರ ಮೋದಿ (Narendra Modi) , ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಸಂಘಟನೆಯನ್ನು ರಾಹುಲ್ ಗಾಂಧಿ ಅವರು “ದೇಶದ್ರೋಹಿಗಳು” ಎಂದು ಕರೆದಿರುವುದು ಕೇವಲ ನಾಚಿಕೆಗೇಡಿನ ಸಂಗತಿಯಲ್ಲ. ಇದು ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವದಿಂದ ಭಾರತ ಮಾತೆಯ ಸೇವೆ ಮಾಡುವ ಪ್ರತಿಯೊಬ್ಬ ರಾಷ್ಟ್ರವಾದಿಗೂ ಮಾಡಿದ ಅವಮಾನವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ (Pralhad Joshi ) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ಮೋದಿ,  ಶಾ, ಬಿಜೆಪಿ, ಆರ್‌ಎಸ್‌ಎಸ್‌ ದೇಶದ್ರೋಹಿ ಎಂದ ರಾಹುಲ್ ಗಾಂಧಿ
  • ಲೋಕಸಭಾ ವಿಪಕ್ಷ ನಾಯಕ ರಾಹುಲ್ ಹೇಳಿಕೆಗೆ ಕೇಂದ್ರ ಸಚಿವ ಜೋಶಿ ತಿರುಗೇಟು
  • ಮೋದಿ ಸರ್ಕಾರದ ಬಲಿಷ್ಠ ಆಡಳಿತದಿಂದ ರಾಹುಲ್ ಗಾಂಧಿಗೆ ಹತಾಶೆ

ರಾಹುಲ್ ಗಾಂಧಿ ಹೇಳಿಗೆ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿರುವ ಜೋಶಿ, ತುರ್ತು ಪರಿಸ್ಥಿತಿಯನ್ನು ಹೇರಿ, ಪ್ರಜಾಪ್ರಭುತ್ವವನ್ನು ಹತ್ತಿಕ್ಕಿದ ಅದೇ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಈಗ ಪ್ರಜಾಪ್ರಭುತ್ವವನ್ನು ಉಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಮಾಧ್ಯಮಗಳನ್ನು ಬಾಯಿ ಮುಚ್ಚಿಸಿ , ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳಿ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಿದ್ದು ಇದೇ ಕಾಂಗ್ರೆಸ್. ಈಗ ಇತರರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಪಾಠ ಹೇಳುತ್ತಿದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದ ಹಿತಾಸಕ್ತಿಯ ರಕ್ಷಕನಂತೆ ನಟಿಸುತ್ತಿದೆ

ಚೀನಾವನ್ನು ನಿಭಾಯಿಸಲು ವಿಫಲವಾಗಿ 1962ರ ಯುದ್ಧಕ್ಕೆ ಕಾರಣವಾದ ತಪ್ಪುಗಳಿಂದ ಹಿಡಿದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ಭಾರತಕ್ಕೆ ಸಿಗಬೇಕಿದ್ದ ಖಾಯಂ ಸ್ಥಾನದ ಆಯಕಟ್ಟಿನ ಅವಕಾಶಗಳನ್ನು ಬಿಟ್ಟುಕೊಡುವವರೆಗೆ, ಭಾರತದ ಜಾಗತಿಕ ಸ್ಥಾನಮಾನವನ್ನು ದುರ್ಬಲಗೊಳಿಸಿದ್ದು ಕಾಂಗ್ರೆಸ್. ಈಗ ದೇಶದ ಹಿತಾಸಕ್ತಿಯ ರಕ್ಷಕನಂತೆ ನಟಿಸುತ್ತಿದೆ. 2008ರಲ್ಲಿ ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ರಹಸ್ಯವಾಗಿ ಒಪ್ಪಂದಕ್ಕೆ (MoU) ಸಹಿ ಹಾಕಿ ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟರು. ಹಾಗೇ ಭಾರತವನ್ನು ಬಲಪಡಿಸಲು ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟ ಜನರನ್ನು ದೇಶದ್ರೋಹಿ ಎಂದು ಕರೆಯುವ ಮೂಲಕ ಆಯಕಟ್ಟಿನ ಹಿತಾಸಕ್ತಿಗಳೊಂದಿಗೆ ಪದೇ ಪದೇ ರಾಜಿ ಮಾಡಿಕೊಂಡದ್ದು ಇದೇ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿಗೆ ಹತಾಶೆ

ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ಹಿಂದೆಂದಿಗಿಂತಲೂ ಹೆಚ್ಚು ಬಲಿಷ್ಠ, ಸುರಕ್ಷಿತ, ಆರ್ಥಿಕವಾಗಿ ಶಕ್ತಿಯುತ ಮತ್ತು ಜಾಗತಿಕವಾಗಿ ಗೌರವಾನ್ವಿತ ದೇಶವಾಗಿ ಬೆಳೆಯುತ್ತಿರುವುದರಿಂದ ರಾಹುಲ್ ಗಾಂಧಿಗೆ ಹತಾಶೆ ಹೆಚ್ಚಾಗುತ್ತಿದೆ. ರಾಷ್ಟ್ರವಾದಿ ಶಕ್ತಿಗಳನ್ನು ದೇಶದ್ರೋಹಿಗಳು ಎಂದು ಕರೆಯುವುದರಿಂದ ಕಾಂಗ್ರೆಸ್ ತನ್ನದೇ ಆದ ದ್ರೋಹ, ಬೂಟಾಟಿಕೆ ಹಾಗೂ ಸರಣಿ ದಾಳಿಗಳ ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವಿಲ್ಲ. ದೇಶದ ಪರವಾಗಿ ಯಾರು ನಿಂತಿದ್ದರು? ಮತ್ತು ಕೇವಲ ಒಂದು ಕುಟುಂಬಕ್ಕಾಗಿ ಯಾರು ನಿಂತಿದ್ದರು ಎಂಬುವುದು ಈ ದೇಶದ ಜನರಿಗೆ ಚೆನ್ನಾಗಿ ಗೊತ್ತಿದೆ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿ ಹೇಳಿದ್ದೇನು?

ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ, ಆರ್‌ಎಸ್‌ಎಸ್‌ ದೇಶದ್ರೋಹಿಗಳಾಗಿದ್ದು, ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನದ ಮೇಲೆ ದಾಳಿ ಮಾಡಿದೆ. ಪಂಚ ರಾಜ್ಯಗಳ ಚುನಾವಣೆ ಮೊದಲು ಇಂಧನ ಕೊರತೆ ಇಲ್ಲ ಅಂದಿದ್ರಿ. ಪೆಟ್ರೋಲ್‌, ಡೀಸೆಲ್ ದರ ಹೆಚ್ಚಳವಾಗಲ್ಲ ಅಂತಾ ಹೇಳಿದ್ರಿ. ಆದರೆ ಈಗ ದೇಶದಲ್ಲಿ ಪೆಟ್ರೋಲ್‌, ಡೀಸೆಲ್ ದರ ಹೆಚ್ಚಳವಾಗುತ್ತಿದೆ. ಅಂಬಾನಿ ರಷ್ಯಾದಿಂದ ಪೆಟ್ರೋಲ್ ಖರೀದಿಸಿ ಹೊರಗೆ ಮಾರಾಟ ಮಾಡ್ತಾರೆ. ಇದರಿಂದ ಆ ಹಣದಿಂದ ಪ್ರಧಾನಿ ನರೇಂದ್ರ ಮೋದಿಗೆ ಹಣಕಾಸು ಒದಗಿಸುತ್ತಾರೆ ಎಂದು ಹೇಳಿದ್ದರು.

Source link

‘ಧುರಂಧರ್’ ಚಿತ್ರದಲ್ಲಿ ದೇಶದ ಭದ್ರತೆಯ ರಹಸ್ಯ ಮಾಹಿತಿ ಸೋರಿಕೆ ಆರೋಪ; ಹೈಕೋರ್ಟ್ ಮಹತ್ವದ ಆದೇಶ – Kannada News | Ranveer Singh Dhurandhar The Revenge legal trouble Delhi High Court CBFC

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಸಶಸ್ತ್ರ ಪಡೆಗಳ ಸೂಕ್ಷ್ಮ ಕಾರ್ಯಾಚರಣೆಯ ವಿವರಗಳನ್ನು ಈ ಚಿತ್ರದಲ್ಲಿ ಬಹಿರಂಗಪಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗೆ (CBFC) ದೆಹಲಿ ಹೈಕೋರ್ಟ್ ಬುಧವಾರ (ಮೇ 20) ನಿರ್ದೇಶನ ನೀಡಿದೆ. ಸಶಸ್ತ್ರ ಸೀಮಾ ಬಲ (SSB) ಹೆಡ್ ಕಾನ್ಸ್‌ಟೇಬಲ್ ದೀಪಕ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ಹೊರಡಿಸಿದೆ.

ಅರ್ಜಿದಾರರ ಪ್ರಕಾರ, ಈ ಸಿನಿಮಾದಿಂದ Official Secrets Act ಉಲ್ಲಂಘನೆ ಆಗಿದೆ. ಚಿತ್ರದಲ್ಲಿ ದೇಶದ ಭದ್ರತೆಗೆ ಧಕ್ಕೆ ತರುವಂತಹ ಹಲವು ಅಂಶಗಳಿವೆ ಎಂದು ಅವರು ವಾದಿಸಿದ್ದಾರೆ. DRDO ರಹಸ್ಯವಾಗಿ ತಯಾರಿಸುತ್ತಿರುವ ಔಷಧಗಳ ಕುರಿತಾದ ವಿವರಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ. ಭಾರತೀಯ ಸೇನೆಯ ಸೂಕ್ಷ್ಮ ಕಾರ್ಯಾಚರಣೆಯ ಸ್ಥಳಗಳು ಮತ್ತು ಮಿಲಿಟರಿ ತಂತ್ರಗಳನ್ನು ಸಿನಿಮಾದಲ್ಲಿ ಬಹಿರಂಗಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಮೃತ ಯೋಧರು ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳಿಂದ ಪ್ರೇರಿತವಾದ ಪಾತ್ರಗಳನ್ನು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಬಿಂಬಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ‘ಸಿನಿಮಾವು ಕೇವಲ ಕಾಲ್ಪನಿಕ ಮತ್ತು ಮನರಂಜನೆಗಾಗಿ ಮಾಡಲ್ಪಟ್ಟಿದ್ದರೂ ಸಹ, ಸಮಾಜ ಮತ್ತು ದೇಶದ ಭದ್ರತೆಯ ಮೇಲೆ ಅದರ ಪ್ರಭಾವವನ್ನು ಅಲ್ಲಗಳೆಯುವಂತಿಲ್ಲ’ ಎಂದು ವಿಚಾರಣೆ ವೇಳೆ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

‘ರಕ್ಷಣಾ ಇಲಾಖೆಯ ಕಾರ್ಯಾಚರಣೆಯ ವಿವರಗಳು ಮತ್ತು ಮಿಲಿಟರಿ ತಂತ್ರಗಳನ್ನು ಬಹಿರಂಗಪಡಿಸುವ ವಿಷಯಗಳ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆ. ಈ ಬಗ್ಗೆ ಸೆನ್ಸಾರ್ ಮಂಡಳಿ ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊಂದಿರಬೇಕು. ಸದ್ಯಕ್ಕೆ ನಾವು ಈ ಅರ್ಜಿಯನ್ನು ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುತ್ತಿದ್ದೇವೆ’ ಎಂದು ಪೀಠವು ಹೇಳಿದೆ.

ಇದನ್ನೂ ಓದಿ: ಧುರಂಧರ್ ಗೆಲುವಿನ ಎಫೆಕ್ಟ್: ನೋರಾ ಫತೇಹಿ ಜೊತೆ ಡ್ಯಾನ್ಸ್ ಮಾಡಿದ ರಾಕೇಶ್ ಬೇಡಿ

ನ್ಯಾಯಾಲಯವು ಚಿತ್ರದ ಪ್ರದರ್ಶನಕ್ಕೆ ನೇರ ನಿಷೇಧ ಹೇರದೆ, ಅರ್ಜಿದಾರರ ಅರ್ಜಿಯನ್ನೇ ಅಧಿಕೃತ ಮನವಿ ಎಂದು ಪರಿಗಣಿಸಿ, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಸೆನ್ಸಾರ್ ಮಂಡಳಿಗೆ ಸೂಚಿಸಿ ಅರ್ಜಿಯನ್ನು ವಿಲೇವಾರಿ ಮಾಡಿದೆ. ನೈಜ ಘಟನೆಗಳಿಂದ ಪ್ರೇರಿತರಾಗಿ ಸಿನಿಮಾ ಮಾಡುವಾಗ ಸೃಜನಶೀಲ ಸ್ವಾತಂತ್ರ್ಯ ಎಷ್ಟು ಮುಖ್ಯವೋ, ದೇಶದ ಭದ್ರತೆಯೂ ಅಷ್ಟೇ ಮುಖ್ಯ ಎಂಬ ಚರ್ಚೆ ಈಗ ಚಿತ್ರರಂಗದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಒಂದೇ ಒಂದು ಪಂದ್ಯವನ್ನಾಡದೆ ರಾಂಚಿಗೆ ವಾಪಸ್ಸಾದ ಧೋನಿ

Source link

ಕಿಡ್ನಿ ವೈಫಲ್ಯಕ್ಕೆ ಟ್ರಾನ್ಸ್‌ಪ್ಲಾಂಟ್ ಯಾವಾಗ ಅಗತ್ಯ ಎಂಬುದನ್ನು ಡಾ. ರವಿಶಂಕರ್ ಅವರಿಂದ ತಿಳಿದುಕೊಳ್ಳಿ – Kannada News | End Stage Renal Disease Treatment: Signs You May Need A Kidney Transplant

ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಅನೇಕರಿಗೆ ಡಯಾಲಿಸಿಸ್ ಅನಿವಾರ್ಯವಾಗುತ್ತದೆ. ಇದು ಹಾನಿಗೊಳಗಾದ ಕಿಡ್ನಿ (Kidney) ಮಾಡಲಾಗದ ಕೆಲಸವನ್ನು ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ಮತ್ತು ದ್ರವಗಳ ಸಮತೋಲನ, ಹಾಗೂ ಆರೋಗ್ಯವನ್ನು ಕಾಪಾಡಲು ಇದು ಸಹಕಾರಿ. ಆದರೆ, ಡಯಾಲಿಸಿಸ್ ಕೇವಲ ಚಿಕಿತ್ಸೆಯಲ್ಲ, ಇದು ವ್ಯಕ್ತಿಯ ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನೇ ಬದಲಾಯಿಸುತ್ತದೆ. ವೈದ್ಯರ ಪ್ರಕಾರ, ಡಯಾಲಿಸಿಸ್ ಅಂತಿಮ ಹಂತ ಎಂದು ಪರಿಗಣಿಸುವುದು ಸರಿಯಲ್ಲ, ಬದಲಿಗೆ ರೋಗಿಗಳಿಗೆ ಹೊಸ ಜೀವನದ ದಾರಿ ಎಂದು ಪರಿಗಣಿಸಬೇಕು. ಆದರೆ ಹಲವು ರೋಗಿಗಳಲ್ಲಿ ದೀರ್ಘಕಾಲದ ಪರಿಹಾರಕ್ಕಾಗಿ ಕಿಡ್ನಿ ಕಸಿ ಉತ್ತಮ ಆಯ್ಕೆಯಾಗಿರುತ್ತದೆ. ಹಾಗಾದರೆ ಜೀವಂತ ದಾನಿಗಳಿಂದ ಕಿಡ್ನಿ ಕಸಿ ಏಕೆ ಮುಖ್ಯವಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಎಚ್ಚರಿಕೆಯ ಲಕ್ಷಣಗಳು:

  • ನಿರಂತರ ಆಯಾಸ ಮತ್ತು ಸುಸ್ತು.
  • ಮುಖ ಮತ್ತು ಪಾದಗಳಲ್ಲಿ ಊತ.
  • ಹಸಿವು ಕಡಿಮೆಯಾಗುವುದು ಮತ್ತು ವಾಕರಿಕೆ.
  • ರಕ್ತದೊತ್ತಡ ನಿಯಂತ್ರಣಕ್ಕೆ ಬಾರದಿರುವುದು.
  • ಮೂತ್ರ ವಿಸರ್ಜನೆಯ ಕ್ರಮದಲ್ಲಿ ಬದಲಾವಣೆ.

ಸೂಚನೆ ನೀಡದೇ ಆವರಿಸುತ್ತದೆ ಕಿಡ್ನಿ ಸಮಸ್ಯೆ;

ಕನಕಪುರ ರೋಡ್ ಮಣಿಪಾಲ್ ಆಸ್ಪತ್ರೆಯ ಯುರಾಲಜಿ, ಆಂಡ್ರಾಲಜಿ, ರೋಬೋಟಿಕ್ ಮತ್ತು ರೀನಲ್ ಟ್ರಾನ್ಸ್‌ಪ್ಲಾಂಟ್ ಸರ್ಜರಿಯ ಕನ್ಸಲ್ಟಂಟ್ ಡಾ. ರವಿಶಂಕರ್ ಜೆ.ಸಿ. ಅವರು ತಿಳಿಸಿರುವ ಮಾಹಿತಿ ಅನುಸಾರ, ಮೂತ್ರಪಿಂಡದ ಹಾನಿಯು ಸಾಮಾನ್ಯವಾಗಿ ಸೂಚನೇ ನೀಡದೇ ಆವರಿಸುತ್ತದೆ. ವಿಶೇಷವಾಗಿ ದೀರ್ಘಕಾಲದ ಮಧುಮೇಹ ಮತ್ತು ರಕ್ತದೊತ್ತಡ ಸಮಸ್ಯೆ ಇರುವವರಲ್ಲಿ. ರೋಗ ಲಕ್ಷಣಗಳು ಗೋಚರಗವಾಗುವ ಹಂತದಲ್ಲಿ, ಮೂತ್ರಪಿಂಡದ ಕಾರ್ಯದಲ್ಲಿ ಸಾಕಷ್ಟು ಸಮಸ್ಯೆ ಎದುರಾಗಿರುತ್ತದೆ. ಈ ರೀತಿ ಮೂತ್ರಪಿಂಡದ ವೈಫಲ್ಯವು ತೀವ್ರ ಹಂತಕ್ಕೆ ತಲುಪಿದಾಗ ಡಯಾಲಿಸಿಸ್ ಅನಿವಾರ್ಯವಾಗುತ್ತದೆ. ಆದರೆ ಹಲವು ರೋಗಿಗಳಲ್ಲಿ ದೀರ್ಘಕಾಲದ ಪರಿಹಾರಕ್ಕಾಗಿ ಕಿಡ್ನಿ ಕಸಿ ಉತ್ತಮ ಆಯ್ಕೆಯಾಗಿರುತ್ತದೆ. ಇದಕ್ಕೊಂದು ಉದಾಹರಣೆಯೆಂದರೆ ಒಬ್ಬ 54 ವರ್ಷದ ವ್ಯಕ್ತಿಗೆ ಮಧುಮೇಹ ಮತ್ತು ರಕ್ತದೊತ್ತಡದಿಂದಾಗಿ ಮೂತ್ರಪಿಂಡದ ವೈಫಲ್ಯ ಉಂಟಾಗಿತ್ತು. ಆರು ತಿಂಗಳ ಕಾಲ ಡಯಾಲಿಸಿಸ್ ಪಡೆಯುತ್ತಿದ್ದರು. ಈ ಹಂತದಲ್ಲಿ, ಅವರ ಕುಟುಂಬವು ಶಾಶ್ವತ ಪರಿಹಾರಕ್ಕಾಗಿ ಕಿಡ್ನಿ ಕಸಿಯ ಬಗ್ಗೆ ಯೋಚಿಸಿತು. ವ್ಯಕ್ತಿಯ ಪತ್ನಿ ತಮ್ಮ ಒಂದು ಕಿಡ್ನಿಯನ್ನು ದಾನ ಮಾಡಲು ಮುಂದೆ ಬಂದರು. ವೈದ್ಯಕೀಯ ತಪಾಸಣೆ ಮತ್ತು ನೈತಿಕ ಅನುಮತಿಗಳ ನಂತರ, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ!

ಜೀವಂತ ದಾನಿಗಳಿಂದ ಕಿಡ್ನಿ ಕಸಿ ಏಕೆ ಮುಖ್ಯ?

ಡಾ. ರವಿಶಂಕರ್ ಜೆ.ಸಿ. ಅವರ ಪ್ರಕಾರ, ಯಶಸ್ವಿ ಕಿಡ್ನಿ ಕಸಿಯು ರೋಗಿಗೆ ಸ್ವಾತಂತ್ರ್ಯ ಮತ್ತು ಗುಣಮಟ್ಟದ ಜೀವನವನ್ನು ಮರಳಿ ನೀಡುತ್ತದೆ. ಜೀವಂತ ದಾನಿಗಳಿಂದ ಕಿಡ್ನಿ ಪಡೆದಾಗ ಚಿಕಿತ್ಸೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಮತ್ತು ಯಶಸ್ಸಿನ ಪ್ರಮಾಣವೂ ಹೆಚ್ಚಿರುತ್ತದೆ.

ಕಿಡ್ನಿ ಕಸಿಯ ಪ್ರಯೋಜನಗಳು:

  • ಡಯಾಲಿಸಿಸ್‌ನಿಂದ ಮುಕ್ತಿ
  • ಉತ್ತಮ ಗುಣಮಟ್ಟದ ಜೀವನಶೈಲಿ
  • ಹಸಿವು ಮತ್ತು ಶಕ್ತಿಯ ಮಟ್ಟದಲ್ಲಿ ಸುಧಾರಣೆ
  • ವೃತ್ತಿ ಜೀವನಕ್ಕೆ ಶೀಘ್ರವಾಗಿ ಮರಳುವ ಅವಕಾಶ
  • ದೀರ್ಘಕಾಲದ ಉತ್ತಮ ಆರೋಗ್ಯ ಫಲಿತಾಂಶಗಳು

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಮುಳುಗಿದ ರೈಲ್ವೇ ಅಂಡರ್​​ ಪಾಸ್​​, ಹೊಳೆಯಂತಾದ ರಸ್ತೆಗಳು

ಚಿಕ್ಕಮಗಳೂರು, ಮೇ 20: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ನಡೆದಿವೆ.  ಕಡೂರು, ಬೀರೂರು ಭಾಗದಲ್ಲಿ ಭಾರಿ ಮಳೆಗೆ ರಸ್ತೆಗಳು ಹಾಗೂ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಡೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ರಸ್ತೆ ಸಂಪೂರ್ಣ ಮುಳುಗಿದ್ದರೆ, ಬಸವೇಶ್ವರ ಸರ್ಕಲ್ ಕೆರೆಯಂತಾಗಿದೆ. ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173ರ ರೈಲ್ವೆ ಅಂಡರ್​ಪಾಸ್‌ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version